ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ (ಗ್ರೇಡ್-1) ನೇಮಕಕ್ಕೆ (Principal Recruitment) ಸಂಬಂಧಿಸಿದಂತೆ ನಡೆಸಲಾಗುವ ಲಿಖಿತ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದೆ.
ಫೆಬ್ರವರಿ 28ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ ಎಂದು ಪ್ರಾಧಿಕಾರವು ತಿಳಿಸಿದೆ. ಆದರೆ ಈ ಕುರಿತು ಹೆಚ್ಚಿನ ಮಾಹಿತಿ ನೀಡಿಲ್ಲ.
ರಾಜ್ಯವ್ಯಾಪಿ ಮಿಕ್ಕುಳಿದ ವೃಂದದ 265 ಮತ್ತು ಕಲ್ಯಾಣ ಕರ್ನಾಟಕದ 45 ಸೇರಿದಂತೆ ಒಟ್ಟು 310 ಹುದ್ದೆಗಳಿಗೆ ನೇಮಕ ನಡೆಯತ್ತಿದೆ.
ಪರೀಕ್ಷೇ ಹೇಗಿರುತ್ತದೆ?
ಈ ಲಿಖಿತ ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ನೂರು ಪ್ರಶ್ನೆಗಳನ್ನು ಕೇಳಲಾಗುತ್ತದೆ. ಎರಡು ಗಂಟೆ ಪರೀಕ್ಷೆ ಬರೆಯಲು ಸಮಯಾವಕಾಶ ನೀಡಲಾಗುತ್ತದೆ. ವಸ್ತುನಿಷ್ಠ ಬಹು ಆಯ್ಕೆಯ ಮಾದರಿಯಲ್ಲಿ ಈ ಪರೀಕ್ಷೆ ನಡೆಯಲಿದೆ. ಇದರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ವೆಬ್ಸೈಟ್ ವಿಳಾಸ: http://kea.kar.nic.in
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here ) ಮಾಡಿ.