Site icon Vistara News

Govt Jobs: ಸರ್ಕಾರಿ ಕೆಲಸದ ಆಕಾಂಕ್ಷಿಗಳಿಗೆ ಶುಭ ಸುದ್ದಿ: 3000 ಹುದ್ದೆಗಳಿಗೆ ಕೆಪಿಎಸ್‌ಸಿಯಿಂದ ನೇಮಕ

kpsc

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ – KPSC) 30 ಇಲಾಖೆಗಳ 3000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗೆ ಮುಂದಾಗಿದೆ. 2024ರ ಆರಂಭದಲ್ಲೇ 3 ಸಾವಿರಕ್ಕೂ ಅಧಿಕ ಹುದ್ದೆಗೆ ನೇಮಕಾತಿ ಪ್ರಕ್ರಿಯೆ (Govt Jobs) ಕೈಗೊಳ್ಳುವ ಸಂಬಂಧ ಅಂದಾಜು ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ.

ಕೆಪಿಎಸ್‌ಸಿಯಿಂದ ಖಾಲಿ ಇರುವ ಸರ್ಕಾರಿ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದ್ದು, ರಾಜ್ಯದ 30 ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹಂತದ 3 ಸಾವಿರ ಹುದ್ದೆಗಳ ಭರ್ತಿ ನಡೆಯಲಿದೆ. ವಿವಿಧ ಹಂತದ ಹುದ್ದೆಗಳಿಗೆ ನೇಮಕಾತಿ ಮಾಡಿಕೊಡಲು 30 ಇಲಾಖೆಗಳಿಂದ ಪ್ರಸ್ತಾವನೆ ಬಂದಿವೆ.

ಈ ಹುದ್ದೆಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಪ್ರಸಕ್ತ ವರ್ಷಾಂತ್ಯಕ್ಕೆ ಮುಂದಿನ ವರ್ಷದಲ್ಲಿ ನಡೆಸಬೇಕಾಗಿರುವ ನೇಮಕಾತಿ ವೇಳಾಪಟ್ಟಿ ಸಿದ್ಧ ಪಡಿಸಲಾಗುತ್ತಿದೆ. ನೇಮಕಾತಿ ಬಗ್ಗೆ ಮಾಹಿತಿ ಸಿಕ್ಕರೆ ವಿದ್ಯಾರ್ಹತೆ ಅನುಸಾರ ಅಭ್ಯರ್ಥಿಗಳು ಸಿದ್ಧತೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಕೆ.ಪಿ.ಎಸ್.ಸಿ. ಕೂಡ ಅರ್ಜಿ ಆಹ್ವಾನ, ಪರೀಕ್ಷೆ, ಫಲಿತಾಂಶ, ಆಯ್ಕೆ ಪಟ್ಟಿ ಚಟುವಟಿಕೆಗಳನ್ನು ನಿಗದಿಯಂತೆ ಕಾಲಮಿತಿಯಲ್ಲಿ ಮುಗಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೆ.ಪಿ.ಎಸ್.ಸಿ. ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ತಿಳಿಸಿದ್ದಾರೆ.

ಇದನ್ನೂ ಓದಿ: PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Exit mobile version