Site icon Vistara News

SBI PO Recruitment 2022 | ಪ್ರೊಬೇಷನರಿ ಆಫೀಸರ್‌ ಹುದ್ದೆಗಳಿಗೆ ಪ್ರಿಲಿಮ್ಸ್‌; ಪ್ರವೇಶ ಪತ್ರ ಬಿಡುಗಡೆ

SBI

SBI hikes FD interest rates by up to 50 bps; check latest fixed deposit rates here

ದೇಶದ ಅತಿದೊಡ್ಡ ರಾಷ್ಟ್ರೀಕೃತ ಬ್ಯಾಂಕ್‌ ಆದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಪ್ರೊಬೇಷನರಿ ಆಫೀಸರ್‌ (PO) ಹುದ್ದೆಗಳ ನೇಮಕಕ್ಕೆ (SBI PO Recruitment 2022 ) ಡಿಸೆಂಬರ್‌ 17, 18, 19 ಮತ್ತು 20 ರಂದು ಪೂರ್ವಭಾವಿ ಪರೀಕ್ಷೆ (ಪ್ರಿಲಿಮ್ಸ್‌) ನಡೆಸಲಿದೆ.

ಕಳೆದ ಅಕ್ಟೋಬರ್‌ನಲ್ಲಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ನಿತ್ಯ ನಾಲ್ಕು ಶಿಫ್ಟ್‌ಗಳಲ್ಲಿ ಆನ್‌ಲೈನ್‌ನಲ್ಲಿ ಈ ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಬ್ಯಾಂಕ್‌ನ ವೆಬ್‌ ಸೈಟ್‌ನಲ್ಲಿ ಒದಗಿಸಲಾಗಿದ್ದು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ರಿಜಿಸ್ಟೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ನೊಂದಿಗೆ ಲಾಗಿನ್‌ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ರಾಜ್ಯದ ಬೆಳಗಾವಿ, ಬೆಂಗಳೂರು, ಬೀದರ್‌, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪರೀಕ್ಷಾ ಕೇಂದ್ರ ಇರಲಿದೆ. ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಈ ಪರೀಕ್ಷೆಯು 100 ಅಂಕಗಳಿಗೆ ನಡೆಯಲಿದ್ದು, ಪರೀಕ್ಷೆ ಬರೆಯಲು ಒಂದು ಗಂಟೆ ಕಾಲಾವಕಾಶ ನೀಡಲಾಗುತ್ತದೆ.

ಪ್ರವೇಶ ಪತ್ರ ಡೌನ್‌ ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್‌ ಮಾಡಿ.

ಪ್ರವೇಶ ಪತ್ರದ ಜತೆಯಲ್ಲಿ ಪರೀಕ್ಷೆ ಹೇಗಿರುತ್ತದೆ? ಎಷ್ಟು ಅಂಕಗಳಿಗೆ ನಡೆಯಲಿದೆ ಎಂಬ ಮಾಹಿತಿ ಒದಗಿಸುವ ಮತ್ತು ಪರೀಕ್ಷೆಗೆ ಸಂಬಂಧಿಸಿದ ಸೂಚನೆಗಳಿರುವ ಬುಕ್‌ ಲೆಟ್‌ ಅನ್ನು ಒದಗಿಸಲಾಗಿದ್ದು, ಅಭ್ಯರ್ಥಿಗಳು ಇದನ್ನು ಓದಿಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ಈ ಮಾಹಿತಿಯು ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ಲಭ್ಯವಿದೆ.

ಪರೀಕ್ಷಾ ಮಾಹಿತಿಯ ಬುಕ್‌ಲೆಟ್‌ ಪಡೆಯಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ | SBI PO Recruitment 2022 | ಪ್ರೊಬೇಷನರಿ ಆಫೀಸರ್‌ ಹುದ್ದೆಗೆ ಪರೀಕ್ಷೆ; ಬದಲಾವಣೆ ಏನೇನು?

ಈ ಬಾರಿ ಒಟ್ಟು 1,673 ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಈ ಹುದ್ದೆಗಳಲ್ಲಿ ಎಸ್‌ಸಿ ಅಭ್ಯರ್ಥಿಗಳಿಗೆ 270, ಎಸ್‌ಟಿ ಅಭ್ಯರ್ಥಿಗಳಿಗೆ 131, ಒಬಿಸಿ ಅಭ್ಯರ್ಥಿಗಳಿಗೆ 464 ಹಾಗೂ ಇಡಬ್ಲ್ಯುಎಸ್‌ ಅಭ್ಯರ್ಥಿಗಳಿಗೆ 160 ಹುದ್ದೆಗಳನ್ನು ಮೀಸಲಿಡಲಾಗಿದೆ. ಉಳಿದ 648 ಹುದ್ದೆಗಳು ಸಾಮಾನ್ಯ ಅಭ್ಯರ್ಥಿಗಳಿಗೆ ದೊರೆಯಲಿವೆ.

ಇದು ಅರ್ಹತಾ ಪರೀಕ್ಷೆ
ಮೂರು ಹಂತದ ನೇಮಕ ಪ್ರಕ್ರಿಯೆ ಮೂಲಕ ಪಿಒ ಹುದ್ದೆಗಳಿಗೆ ನೇಮಕ ನಡೆಯಲಿದೆ. ಮೊದಲಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತಿದೆ, ಇದರಲ್ಲಿ ಅರ್ಹತೆ ಪಡೆದವರಿಗೆ ಮಾತ್ರ ಮೂಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಮೂರನೇ ಹಂತದಲ್ಲಿ ನಡೆಯಲಿರುವ ಗುಂಪು ಚರ್ಚೆ ಮತ್ತು ಸಂದರ್ಶನಕ್ಕೆ ಅಭ್ಯರ್ಥಿಗಳನ್ನು ಆಹ್ವಾನಿಸಲಾಗುತ್ತದೆ. ಮುಖ್ಯ ಪರೀಕ್ಷೆ ಮತ್ತು ಗುಂಪು ಚರ್ಚೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಬ್ಯಾಂಕ್‌ನ ನೇಮಕಾತಿ ವೆಬ್‌ಸೈಟ್‌ ನೋಡಿ : https://sbi.co.in/web/careers/current-openings

Exit mobile version