ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ನೇಮಕಾತಿ ಹಾಗೂ ಹುದ್ದೆಗಳಲ್ಲಿ ಮೀಸಲಾತಿ (SC ST Reservation) ಹೆಚ್ಚಳ ಮಾಡಿ ಕಳೆದ ಅಕ್ಟೋಬರ್‌ನಲ್ಲಿ ಸುಗ್ರೀವಾಜ್ಞೆ ಹೊರಡಿಸಿದ್ದ ರಾಜ್ಯ ಸರ್ಕಾರ ಈಗ ನಿಗದಿಪಡಿಸಲಾದ ಹೆಚ್ಚಿನ ಮೀಸಲಾತಿ ಪ್ರಮಾಣಕ್ಕೆ ಅನುಗುಣವಾಗಿ ನೇರ ನೇಮಕಾತಿ ಮುಖಾಂತರ ಭರ್ತಿಮಾಡಬೇಕಾದ ರಿಕ್ತಸ್ಥಾನಗಳಿಗೆ ಬಿಂದುಗಳನ್ನು ಗುರುತಿಸಿ ಆದೇಶ ಹೊರಡಿಸಿದೆ.
ಈ ಸಂಬಂಧ ಡಿಸೆಂಬರ್ 28 ರಂದು ಅಧಿಕೃತ ಆದೇಶ ಹೊರಡಿಸಲಾಗಿದೆ. ಅಕ್ಟೋಬರ್‌ನಲ್ಲಿ ಎಸ್‌ಸಿ ಮೀಸಲಾತಿ ಶೇ. 15 ರಿಂದ 17ಕ್ಕೆ, ಎಸ್‌ಟಿ ಮೀಸಲಾತಿ ಶೇ.3ರಿಂದ 7ಕ್ಕೆ ಏರಿಸಿ, ಸಂವಿಧಾನದ 9ನೇ ಪರಿಚ್ಛೇದದ ಅಡಿಯಲ್ಲಿ ರಕ್ಷಣೆ ಪಡೆದು ಮೀಸಲಾತಿ ಘೋಷಣೆಗೆ ಸಂಬಂಧಪಟ್ಟಂತೆ ರಾಜ್ಯ ಪತ್ರ ಹೊರಡಿಸಲಾಗಿತ್ತು. ಈ ಸಂಬಂಧ ಮಸೂದೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಅಂಗೀಕಾರ ಪಡೆದಿದೆ.
ಉಳಿದಂತೆ ಈ ಹಿಂದಿನ ನೇಮಕಾತಿ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಈಗಾಗಲೇ ಯಾವುದೇ ವೃಂದದ ಹುದ್ದೆಗಳಿಗೆ ಈಗಾಗಲೇ ನೇರ ನೇಮಕಾತಿ ಪ್ರಕ್ರಿಯೆಯು ಪ್ರಾರಂಭಗೊಂಡಿದ್ದು, ಆ ನೇಮಕಾತಿ ಪ್ರಕ್ರಿಯೆಯು ಇನ್ನೂ ಬಾಕಿ ಇದ್ದಲ್ಲಿ ಅಂತಹ ನೇರ ನೇಮಕಾತಿ ಪ್ರಕ್ರಿಯೆಯನ್ನು ಈ ಹೊಸ ರೋಸ್ಟರ್ ಪ್ರಕಾರವೇ ಅನುಸರಿಸಿ ನೇಮಕಾತಿ ಪೂರ್ಣಗೊಳಿಸಬೇಕೆಂದು ಆದೇಶದಲ್ಲಿ ಸೂಚಿಸಲಾಗಿದೆ.
ಈ ರೋಸ್ಟರ್ ಪ್ರಕಟವಾಗದೇ ಇದ್ದುದ್ದರಿಂದ ಅನೇಕ ನೇಮಕ ಪ್ರಕ್ರಿಯೆಗಳು ಸ್ಥಗಿತಗೊಂಡಿದ್ದವು. ಅವುಗಳನ್ನು ಆರಂಭಿಸಲು ಈಗ ದಾರಿ ಸುಗಮವಾದಂತಾಗಿದೆ.
ಹೊಸ ರೋಸ್ಟರ್ ಹೀಗಿದೆ
ಈಗ ಯಾವ ಜಾತಿಗೆ ಎಷ್ಟು ಮೀಸಲಾತಿ?
ಇದನ್ನೂ ಓದಿ| SC ST Reservation | ಮುಂಬಡ್ತಿಯಲ್ಲಿಯೂ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ; ಸರ್ಕಾರದಿಂದ ಆದೇಶ