ಬೆಂಗಳೂರು: ಜಲಸಂಪನ್ಮೂಲ ಇಲಾಖೆಯಲ್ಲಿನ ಗ್ರೂಪ್ -ಸಿ ವೃಂದದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕ ಪ್ರಕ್ರಿಯೆ ಈಗ ನಡೆಯುತ್ತಿದ್ದು ( SDA Recruitment 2022), ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.
ಕಳೆದ ಜುಲೈನಲ್ಲಿ ಪ್ರಕಟಿಸಿದ್ದ ಅಧಿಸೂಚನೆಯಲ್ಲಿ ಒಟ್ಟು 155 ಪರಿಶಿಷ್ಟ ಜಾತಿಯ ಬ್ಯಾಕ್‌ಲಾಗ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಕಟಿಸಲಾಗಿತ್ತು. ಈಗ ತಿದ್ದುಪಡಿ ಅಧಿಸೂಚನೆ ಪ್ರಕಟಿಸಿದ್ದು, 182 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
ಕಳೆದ ಜುಲೈನಲ್ಲಿಯೇ ಈ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ನವೆಂಬರ್ 26 ರಿಂದ ಅಕ್ಟೋಬರ್ 25ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ನೇಮಕ ಹೇಗೆ?
ಇದು ಬ್ಯಾಕ್‌ಲಾಗ್ ಹುದ್ದೆಗಳ ವಿಶೇಷ ನೇಮಕಾತಿಯಾಗಿದ್ದು, ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ. ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳು ಹಾಗೂ ವಯೋಮಿತಿ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ವೇತನ ಎಷ್ಟಿರುತ್ತದೆ?
ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್‌ಲಾಗ್ ಹುದ್ದೆಗಳು ಗ್ರೂಪ್ ಸಿ ಹುದ್ದೆಗಳೆಂದು ಪರಿಗಣಿಸಲ್ಪಟ್ಟಿವೆ. ವೇತನ ಶ್ರೇಣಿ ಇಂತಿದೆ; 21,400-500-24,400-550-24,600-600-27,000-650-29,600-750-32,600-850-36,000-950-39,800-1,100-42,000 ರೂ. ಇದಲ್ಲದೆ ನಿಯಮಾನುಸಾರ ಕಾಲಕಾಲಕ್ಕೆ ಅನ್ವಯವಾಗುವ ಇತರ ಭತ್ಯೆಗಳನ್ನೂ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ವೆಬ್| https://waterresources.karnataka.gov.in/
ಇದನ್ನೂ ಓದಿ | KSP Recruitment 2022 | 3,484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಈ 15 ವಿಷಯ ಗಮನಿಸಿ