Site icon Vistara News

Yuva Nidhi Scheme: ಯುವ ನಿಧಿ ಹಣ ಬೇಕಿದ್ದರೆ ಪ್ರತಿ ತಿಂಗಳು ಸೆಲ್ಫ್‌ ಡಿಕ್ಲರೇಷನ್‌ ಕಡ್ಡಾಯ!

Self declaration is mandatory every month for Yuva Nidhi Scheme

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ (Congress Guarantee) ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿ (Yuva Nidhi Scheme) ಚಾಲನೆಯಾಗಿದ್ದು, ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಹೀಗಾಗಿ ಮಾರ್ಚ್ ಅಂತ್ಯದೊಳಗೆ 4 ಲಕ್ಷ ನೋಂದಣಿ ಮಾಡಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ಇನ್ನು ಅಭ್ಯರ್ಥಿಗಳು ಈ ಯೋಜನೆಯನ್ವಯ ಪ್ರತಿ ತಿಂಗಳು ಹಣ ಪಡೆಯಬೇಕಾದರೆ ಪ್ರತಿ ತಿಂಗಳಲ್ಲೂ ತಮಗೆ ಕೆಲಸ ಸಿಕ್ಕಿಲ್ಲ, ಉನ್ನತ ಶಿಕ್ಷಣಕ್ಕೆ ದಾಖಲಾಗಿಲ್ಲ ಎಂದು ಸ್ವಯಂ ಘೋಷಿತ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡಬೇಕಿದೆ.

ಈ ಸಂಬಂಧ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಒಂದು ವೇಳೆ ಮಾಹಿತಿಯನ್ನು ಅಪ್ಲೋಡ್‌ ಮಾಡದೇ ಇದ್ದರೆ ಅಂಥವರಿಗೆ ಆ ತಿಂಗಳ ಹಣ ಜಮೆ ಆಗುವುದಿಲ್ಲ. ಹೀಗಾಗಿ ಪ್ರತಿ ತಿಂಗಳು ಅಪ್ಡೇಟ್‌ ಮಾಡುವುದು ಕಡ್ಡಾಯವಾಗಿದೆ. ಸುಳ್ಳು ಮಾಹಿತಿ ನೀಡಿದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುವುದಲ್ಲದೆ ಪಡೆದ ಹಣವನ್ನು ವಸೂಲಿ ಮಾಡುವುದಾಗಿಯೂ ಸರ್ಕಾರ ಹೇಳಿದೆ.

ಸರ್ಕಾರ ಎಲ್ಲಿಂದ ಮಾಹಿತಿ ಪಡೆಯಲಿದೆ?

ನ್ಯಾಷನಲ್ ಅಕಾಡೆಮಿಕ್ ಡಿಪಾಸಿಟರಿಯಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಪದವೀಧರರ ಪ್ರಮಾಣ ಪತ್ರಗಳಿದ್ದು, ಅಲ್ಲಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ದಾಖಲೆಗಳು ಹೊಂದಾಣಿಕೆಯಾಗಿ ಫಲಿತಾಂಶ ಬಂದು ಆರು ತಿಂಗಳು ಆದ ಅಭ್ಯರ್ಥಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಇಷ್ಟಿದ್ದರೂ ಅಭ್ಯರ್ಥಿಗಳು ಪ್ರತಿ ತಿಂಗಳು ಕೆಲಸ ಸಿಕ್ಕಿಲ್ಲ, ಉನ್ನತ ಶಿಕ್ಷಣಕ್ಕೆ ಹೋಗಿಲ್ಲ ಎಂದು ಸ್ವಯಂ ಘೋಷಿತ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡಬೇಕಿದೆ.

ಯುವ ನಿಧಿ ನೋಂದಣಿ ಹೇಗೆ? ಇಲ್ಲಿದೆ ವಿಡಿಯೋ

ಅರ್ಹತೆ ಏನು?

ಯಾರು ಫಲಾನುಭವಿಗಳು?

ಯಾರು ಅನರ್ಹರು?

ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?

ಇದನ್ನೂ ಓದಿ: Housing Scheme: ರಾಜೀವ್ ವಸತಿ ಯೋಜನೆಗೆ ನೋಂದಣಿ ಶುರು; ಸ್ವಂತ ಸೂರು ನಿಮ್ಮದಾಗಲು ಹೀಗೆ ಮಾಡಿ

ಯುವ ನಿಧಿ ಅರ್ಜಿ ಎಲ್ಲಿ ಸಲ್ಲಿಸಬೇಕು?

ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು.

Exit mobile version