Site icon Vistara News

SSB Recruitment 2023: ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

ssb

ssb

ನವ ದೆಹಲಿ: ಸಶಸ್ತ್ರ ಸೀಮಾ ಬಲ್‌ (Sashastra Seema Bal) ಖಾಲಿ ಇರುವ 272 ಕಾನ್‌ಸ್ಟೇಬಲ್‌ ಹುದ್ದೆ (ಜನರಲ್‌ ಡ್ಯೂಟಿ)ಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSB Recruitment 2023). ನೇಪಾಳ ಮತ್ತು ಭೂತಾನ್ ಗಡಿಗಳಲ್ಲಿ ನಿಯೋಜಿಸಲಾದ ಭಾರತದ ಗಡಿ ಕಾವಲು ಪಡೆ ಈ ಸಶಸ್ತ್ರ ಸೀಮಾ ಬಲ್‌. ಇದು ಗೃಹ ಸಚಿವಾಲಯ(Ministry of Home Affairs-MHA)ದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಏಳು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಒಂದು. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಈ ಅವಕಾಶವನ್ನು ಸದುಪಯೋಗಿಸಿಪಡೆದುಕೊಳ್ಳಬಹುದು. ಆನ್‌ಲೈನ್‌ ಮೂಲಕ ನವೆಂಬರ್‌ 20ರೊಳಗೆ ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಹತೆ ಮತ್ತು ವಯೋಮಿತಿ

ಎಸ್‌ಎಸ್‌ಬಿ ಅಧಿಕೃತ ಅಧಿಸೂಚನೆ ಪ್ರಕಾರ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ 23 ವರ್ಷ. ಮೀಸಲಾತಿಗೆ ಅನುಗುಣವಾಗಿ ರಿಯಾಯಿತಿ ಲಭ್ಯವಿದೆ. ಯುಆರ್‌ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 8 ವರ್ಷ ಮತ್ತು ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ ಎಸ್‌ಟಿ/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಯುಆರ್‌/ ಇಡಬ್ಲ್ಯುಎಸ್‌/ ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಇದನ್ನು ಆನ್‌ಲೈನ್‌ ಮೂಲಕವೇ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ವೇತನ

ಹಲವು ಹಂತಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸ್ಟೇಜ್‌-I, ಸ್ಟೇಜ್‌-II, ಡಾಕ್ಯುಮೆಂಟ್‌ ಪರಿಶೀಲನೆ, ಸ್ಕಿಲ್‌ ಟೆಸ್ಟ್‌/ ಫೀಲ್ಡ್‌ ಟ್ರಯಲ್‌, ಫಿಸಿಕಲ್‌ ಸ್ಟಾಂಡರ್ಡ್‌ ಟೆಸ್ಟ್‌ (PST) ಮತ್ತು ವೈದ್ಯಕೀಯ ಪರೀಕ್ಷಾ ವಿಧಾನಗಳನ್ನು ಆಯ್ಕೆಗಾಗಿ ಪರಿಗಣಿಸಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 21,700-69,100 ರೂ. ವೇತನ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Fair: ಮೈಸೂರಿನಲ್ಲಿ ನ. 19ರಂದು ಅನ್ನದಾತರ ಮಕ್ಕಳಿಗೆ ಉದ್ಯೋಗ ಮೇಳ

Exit mobile version