ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಬಹುನಿರೀಕ್ಷಿತ ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಎಚ್‌ಎಸ್‌ಎಲ್) (10+2) ಪರೀಕ್ಷೆಗೆ (SSC CHSL 2022 ) ಅರ್ಜಿ ಆಹ್ವಾನಿಸಿದೆ. ಈ ಪರೀಕ್ಷೆ ಮೂಲಕ ಕೇಂದ್ರದ ವಿವಿಧ ಇಲಾಖೆ, ಸಚಿವಾಲಯಗಳಲ್ಲಿ ಖಾಲಿ ಇರುವ, ಗ್ರೂಪ್ “ಸಿʼʼಯ ಲೋವರ್ ಡಿವಿಷನ್ ಕ್ಲರ್ಕ್, ಜೂನಿಯರ್ ಸೆಕ್ರೆಟೇರಿಯಟ್ ಅಸಿಸ್ಟೆಂಟ್, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಈ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.
ಈ ಪರೀಕ್ಷೆಯನ್ನು ” Combined Higher Secondary (10+2) Level Examination, 2022ʼʼ ಎಂದು ಕರೆಯಲಾಗತ್ತದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು 04-01-2023 (ರಾತ್ರಿ 11:00 ಗಂಟೆಯವರೆಗೆ) ಕೊನೆಯ ದಿನವಾಗಿರುತ್ತದೆ. ಅರ್ಜಿ ಶುಲ್ಕ ಪಾವತಿಸಲು 05-01-2023 ಕೊನೆಯ ದಿನವೆಂದು ಪ್ರಕಟಿಸಲಾಗಿದೆ.
ನೇಮಕಾತಿಯ ವೇಳಾಪಟ್ಟಿ
ಸದ್ಯ ಒಟ್ಟಾರೆ 4,500 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಈ ಹುದ್ದೆಗಳ ಸಂಖ್ಯೆಯು ಹೆಚ್ಚಾಗುವ ನಿರೀಕ್ಷೆ ಇದ್ದು, ಈ ಬಗ್ಗೆ ಎಸ್‌ಎಸ್‌ಸಿಯ ವೆಬ್‌ಸೈಟ್‌ನಲ್ಲಿ (https://ssc.nic.in/Portal/TentativeVacancy) ಮುಂದೆ ಮಾಹಿತಿ ನೀಡಲಾಗುವುದು ಎಂದು ಪ್ರಕಟಿಸಲಾಗಿದೆ.
ವಿದ್ಯಾರ್ಹತೆ ಏನು?
ದ್ವಿತೀಯ ಪಿಯುಸಿಯಲ್ಲಿ ಅಥವಾ 12ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ದಾಖಲೆ ಪರಿಶೀಲನೆಯ ಸಂದರ್ಭದಲ್ಲಿ 04-01-2023 ಗೂ ಮುನ್ನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದಕ್ಕೆ ದಾಖಲೆಗಳನ್ನು ಹಾಜರು ಪಡಿಸಬೇಕಿರುತ್ತದೆ.
ವಯೋಮಿತಿ ಎಷ್ಟು?
18-27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಂದರೆ ಅಭ್ಯರ್ಥಿಗಳು 02-01-1995ರ ನಂತರ 01-01-2004ಕ್ಕಿಂತ ಮೊದಲು ಜನಿಸಿರಬೇಕು. ವಯೋಮಿತಿಯಲ್ಲಿ ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ ಎಷ್ಟು ಕಟ್ಟಬೇಕು?
ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಮಹಿಳಾ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿರುತ್ತದೆ. ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬಹುದಾಗಿರುತ್ತದೆ. ಆನ್‌ಲೈನ್‌ನಲ್ಲಿ ಸಾಧ್ಯವಾಗದೇ ಇರುವವರು ಎಸ್‌ಬಿಐ ಬ್ಯಾಂಕ್‌ನಲ್ಲಿ ಚಲನ್ ಮೂಲಕ ಪಾವತಿಸಲು ಅವಕಾಶ ನೀಡಲಾಗಿದೆ.
ನೇಮಕ ಹೇಗೆ?
ಮೊದಲಿಗೆ ಕಂಪ್ಯೂಟರ್ ಆಧಾರಿತ ಎರಡು ಹಂತದ ಪರೀಕ್ಷೆ (Tier-I, Tier-II) ನಡೆಸಲಾಗುತ್ತದೆ. Tier-Iರ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ Tier-II ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. Tier-II ಪರೀಕ್ಷೆಯ ಎಲ್ಲ ವಿಭಾಗಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸ್ಕಿಲ್ ಟೆಸ್ಟ್ ನಡೆಸಲಾಗುತ್ತದೆ. ನಂತರ ದಾಖಲೆ ಪರಿಶೀಲನೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಪರೀಕ್ಷೆಗಳು ಹೇಗಿರುತ್ತವೆ, ಯಾವೆಲ್ಲಾ ವಿಷಯಗಳನ್ನು ಒಳಗೊಂಡಿರುತ್ತದೆ ಎಂಬ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ವೆಬ್‌ಸೈಟ್ ವಿಳಾಸ : https://ssc.nic.in/Portal/Apply
ರಾಜ್ಯದಲ್ಲಿ ಎಲ್ಲೆಲ್ಲಿ ಪರೀಕ್ಷೆ ನಡೆಯುತ್ತದೆ?
ರಾಜ್ಯದ ಒಟ್ಟು ಎಂಟು ಜಿಲ್ಲಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಸಲಾಗುತ್ತೆ. ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ ಪರೀಕ್ಷಾ ಕೇಂದ್ರ ಇರಲಿದೆ.
ವೇತನ ಎಷ್ಟಿರುತ್ತದೆ?
ಲೋವರ್ ಡಿವಿಷನ್ ಕ್ಲರ್ಕ್, ಜೂನಿಯರ್ ಸೆಕ್ರೆಟೇರಿಯಟ್ ಅಸಿಸ್ಟೆಂಟ್ : Pay Level-2 (Rs.19,900-63,200)
ಡೇಟಾ ಎಂಟ್ರಿ ಆಪರೇಟರ್ (ಡಿಇಒ): Pay Level-4(Rs. 25,500-81,100) and Level-5(Rs.
29,200-92,300)
ಡೇಟಾ ಎಂಟ್ರಿ ಆಪರೇಟರ್ ಗ್ರೇಡ್ “ಎ”: Pay Level-4(Rs. 25,500-81,100).
ನೇಮಕದ ಕುರಿತ ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: https://ssc.nic.in/
ಬೆಂಗಳೂರು ಎಸ್‌ಎಸ್‌ಸಿ ಸಹಾಯವಾಣಿ ಸಂಖ್ಯೆ: 080-25502520, 09483862020
ಇದನ್ನೂ ಓದಿ | KPSC Recruitment 2022 | ಕೆಪಿಎಸ್‌ಸಿಯಿಂದ ವಿವಿಧ 23 ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ