ನವ ದೆಹಲಿ: ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಕೇಂದ್ರದ ವಿವಿಧ ಸಚಿವಾಲಯ, ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಗ್ರೂಪ್ ʼಸಿʼಯ ‘ಮಲ್ಟಿ ಟಾಸ್ಕಿಂಗ್ ಸ್ಟಾಫ್’ (ಎಂಟಿಎಸ್) (SSC MTS Recruitment 2022) ಮತ್ತು ಹವಾಲ್ದಾರ್ ಹುದ್ದೆಗಳ (CBIC & CBN) ನೇಮಕಕ್ಕೆ ನಡೆಸಲಿರುವ ಮೊದಲ ಹಂತದ ಪರೀಕ್ಷೆ (Tier-I) ಪ್ರವೇಶ ಪತ್ರವನ್ನು (ssc exam admit card 2023) ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಪರೀಕ್ಷೆಯು ಮೇ 2 ರಿಂದ ಆರಂಭವಾಗಲಿದ್ದು, ಇದು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿರುತ್ತದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ರಿಜಿಸ್ಟೇಷನ್ ನಂಬರ್ ಹಾಗೂ ಜನ್ಮದಿನಾಂಕದೊಂದಿಗೆ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ (Click Here) ಕ್ಲಿಕ್ ಮಾಡಿ.
ಪ್ರವೇಶ ಪತ್ರದೊಂದಿಗೆ ಪರೀಕ್ಷೆ ನಡೆಯುವ ದಿನಾಂಕ, ಸಮಯ ಮತ್ತು ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಒದಗಿಸಲಾಗಿರುತ್ತದೆ. ಇದರನ್ನು ನೋಡಿಕೊಂಡು ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಪ್ರವೇಶ ಪತ್ರದೊಂದಿಗೆ ಪರೀಕ್ಷೆಗೆ ಹಾಜರಾಗಬೇಕೆಂದು ಆಯೋಗವು ಸೂಚಿಸಿದೆ.
ಎಸ್‌ಎಸ್‌ಸಿಯ ಸದ್ಯವೇ ನಡೆಸಲಿರುವ ವಿವಿಧ ಪರೀಕ್ಷೆಗಳ ವೇಳಾಪಟ್ಟಿ;
ರಾಜ್ಯದ ಒಟ್ಟು ಎಂಟು ಜಿಲ್ಲಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಸಲಾಗುತ್ತೆ. ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ ಪರೀಕ್ಷಾ ಕೇಂದ್ರ ಇರಲಿದೆ.
ಮೊದಲಿಗೆ ಕಂಪ್ಯೂಟರ್ ಆಧಾರಿತ ಎರಡು ಹಂತದ ಪರೀಕ್ಷೆ (2 ಸೆಷನ್‌ನಲ್ಲಿ ನಡೆಯಲಿದೆ) ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ, ಅಗತ್ಯ ಇದ್ದರೆ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ. ಅಗತ್ಯ ವಿಲ್ಲದ ಹುದ್ದೆಗಳಿಗೆ ನೇರವಾಗಿ ದಾಖಲೆ ಪರಿಶೀಲನೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಪರೀಕ್ಷೆಗಳು ಹೇಗಿರುತ್ತವೆ, ಯಾವೆಲ್ಲಾ ವಿಷಯಗಳನ್ನು ಒಳಗೊಂಡಿರುತ್ತದೆ ಎಂಬ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.
ಹೆಚ್ಚಿನ ಮಾಹಿತಿಗೆ ವೆಬ್ ವಿಳಾಸ: https://www.ssckkr.kar.nic.in/
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ.
ಇದನ್ನೂ ಓದಿ : CRPF Recruitment 2023 : ಸಿಆರ್‌ಪಿಎಫ್‌ನಲ್ಲಿ ನಡೆಯಲಿದೆ ಭರ್ಜರಿ ನೇಮಕ; 1.30 ಲಕ್ಷ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅಧಿಸೂಚನೆ