ಬೆಂಗಳೂರು: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ, ಇಲಾಖೆ, ಸಂಸ್ಥೆ, ಅರೆಸೇನಾಪಡೆಗಳಲ್ಲಿನ ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ನೇಮಕ ಮಾಡುವ ‘ಸಿಬ್ಬಂದಿ ನೇಮಕಾತಿ ಆಯೋಗ’ (Staff Selection Commission-SSC) 2023-2024ನೇ ಸಾಲಿನಲ್ಲಿ ನಡೆಸಲಿರುವ ವಿವಿಧ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ (SSC Exam Calendar 2023) ಪ್ರಕಟಿಸಿದೆ.
ಸಚಿವಾಲಯ, ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅರ್ಜಿ ಆಹ್ವಾನಿಸುವ ಎಸ್‌ಎಸ್‌ಸಿಯು, ವಿವಿಧ ಹಂತದ ಪರೀಕ್ಷೆ ಸೇರಿದಂತೆ ನೇಮಕ ಪ್ರಕ್ರಿಯೆ ನಡೆಸುತ್ತದೆ. ನಿಗದಿತವಾಗಿ ಕೆಲವು ಹುದ್ದೆಗಳಿಗೆ ಪ್ರತಿ ವರ್ಷ ಪರೀಕ್ಷೆ ನಡೆಸಿಕೊಂಡು ಬರಲಾಗುತ್ತಿದೆ.
ವಿವಿಧ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ;
ವಾರ್ಷಿಕ ಸುಮಾರು 15 ರಿಂದ 20 ಪರೀಕ್ಷೆಗಳನ್ನು ಸಾಮಾನ್ಯವಾಗಿ ಎಸ್‌ಎಸ್‌ಸಿ ನಡೆಸಿಕೊಂಡು ಬಂದಿದೆ. ಕೇಂದ್ರ ಲೋಕಸೇವಾ ಆಯೋಗ (UPSC)ದಂತೆ ಎಸ್‌ಎಸ್‌ಸಿ(SSC)ಯು ಪ್ರತಿ ವರ್ಷ ಪರೀಕ್ಷೆಗಳ ವೇಳಾಪಟ್ಟಿಯನ್ನು ಮೊದಲೇ ಪ್ರಕಟಿಸುತ್ತದೆ. ಇದರಿಂದ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲು ಅನುಕೂಲವಾಗಲಿದೆ.
ಮುಂದಿನ 18 ತಿಂಗಳಿನಲ್ಲಿ ಕೇಂದ್ರ ಸರ್ಕಾರದ 10 ಲಕ್ಷ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಕಳೆದ ಸೆಪ್ಟೆಂಬರ್‌ನಲ್ಲಿ ಪ್ರಕಟಿಸಿದ್ದರು. ಈ ಹಿನ್ನೆಲೆಯಲ್ಲಿ ಹೊಸ ವರ್ಷದಲ್ಲಿ ಎಸ್‌ಎಸ್‌ಸಿಯ ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದು ಬಹಳ ಮಹತ್ವ ಪಡೆದಿದೆ.
ಈ ವೇಳಾಪಟ್ಟಿಯಲ್ಲಿ ನೀವು ಗಮನಿಸಬೇಕಾದ ಪ್ರಮುಖ ದಿನಾಂಕಗಳಿವು;
- ಜೂನಿಯರ್ ಎಂಜಿನಿಯರ್ (ಸಿವಿಲ್, ಮೆಕಾನಿಕಲ್, ಎಲೆಕ್ಟ್ರಿಕಲ್ ಇತ್ಯಾದಿ) ಪರೀಕ್ಷೆಗೆ ಜುಲೈ26 ರಂದು ಅರ್ಜಿ ಆಹ್ವಾನಿಸಲಾಗುತ್ತದೆ. ಅಕ್ಟೋಬರ್ನಲ್ಲಿ ಪರೀಕ್ಷೆ ನಡೆಯಲಿದೆ.
- ಕಂಬೈನ್ಡ್ ಗ್ರಾಜ್ಯುಯೇಟ್ ಪ್ರಿಲಿಮಿನರಿ ಎಗ್ಸಾಮ್ಗೆ ಪರೀಕ್ಷೆಗೆ ಏಪ್ರಿಲ್ 1 ರಂದು ಅರ್ಜಿ ಆಹ್ವಾನಿಸಲಾಗುತ್ತದೆ. ಜೂನ್-ಜುಲೈನಲ್ಲಿ ಮೊದಲ ಹಂತದ ಪರೀಕ್ಷೆ ನಡೆಯಲಿದೆ.
- ಕಂಬೈನ್ಡ್ ಹೈಯರ್ ಸೆಕೆಂಡರಿ ಪರೀಕ್ಷೆಗೆ ಮೇ 9 ರಂದು ಅಧಿಸೂಚನೆ ಪ್ರಕಟಿಸಲಾಗುತ್ತದೆ. ಜುಲೈ- ಆಗಸ್ಟ್ನಲ್ಲಿ ಪರೀಕ್ಷೆ ನಡೆಯಲಿದೆ.
- ಮಲ್ಟಿ ಟಾಸ್ಕಿಂಗ್ ಸ್ಟಾಫ್ ಎಗ್ಸಾಮ್ ಜನವರಿ 17 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಏಪ್ರಿಲ್ನಲ್ಲಿ ಮೊದಲ ಹಂತದ ಪರೀಕ್ಷೆ ನಡೆಸಲಾಗುತ್ತದೆ. ಮಲ್ಟಿ ಟಾಸ್ಕಿಂಗ್ ಸ್ಟಾಫ್ (ತಾಂತ್ರಿಕೇತರ) ಹುದ್ದೆಗಳಿಗೆ ಜೂನ್ 14ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಆಗಸ್ಟ್ ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ವೆಬ್: https://ssc.nic.in
ಇದನ್ನೂ ಓದಿ | Job News | ಕೇಂದ್ರ ಸರ್ಕಾರಿ ನೌಕರಿಗೆ SSC ಪರೀಕ್ಷೆ ಬರೆಯಿರಿ