Site icon Vistara News

Teacher Jobs: ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ದಿನಾಂಕ ಪ್ರಕಟ

Teacher jobs

ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ (Teacher Jobs) ಶಿಕ್ಷಣ ಇಲಾಖೆ (School Education department) ಸಿಹಿ ಸುದ್ದಿ ನೀಡಿದ್ದು, ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ದಿನಾಂಕ (Counselling date) ಪ್ರಕಟವಾಗಿದೆ.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6ರಿಂದ 8ನೇ ತರಗತಿ) ನೇಮಕಾತಿ-2022ರ ಸಂಬಂಧ 2023ರ ಮಾರ್ಚ್ 9ರಂದು ಪ್ರಕಟಿತ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಅರ್ಹ ಅಭ್ಯರ್ಥಿಗಳಿಗೆ ಅಕ್ಟೋಬರ್ 21ರಂದು ಕೌನ್ಸೆಲಿಂಗ್ ನಡೆಯಲಿದೆ.

ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳನ್ನು ಹೊರತುಪಡಿಸಿ, ಬಿಬಿಎಂಪಿ ವ್ಯಾಪ್ತಿಯ ಶೇ.8 ಹುದ್ದೆಗಳಿಗೆ ಸಂಬಂಧಿಸಿದ ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳನ್ನ ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಯಲಿದೆ. ಅ.21ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳಲ್ಲಿ ಕೌನ್ಸೆಲಿಂಗ್ ಆಯೋಜಿಸಲಾಗಿದೆ.

ಅರ್ಹ ಅಭ್ಯರ್ಥಿಗಳ ವಿವರಗಳನ್ನು ಅ.19ರಂದು ಇಲಾಖೆ ವೆಬ್‌ಸೈಟ್ http://schooleducation.karnataka.gov.in ನಲ್ಲಿ ಪ್ರಕಟಿಸಲಾಗುತ್ತದೆ.

ಹಿಂದೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಲಾಗಿತ್ತು. 2022ರ ಮೇ ತಿಂಗಳಲ್ಲಿ ಪರೀಕ್ಷೆ ನಡೆಸಿ, ನ.18ರಂದು ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಹೈಕೋರ್ಟ್ ನಿರ್ದೇಶನದಂತೆ ಮಾ.9ರಂದು 2ನೇ ಬಾರಿಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಈ ವೇಳೆ 13,352 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಸದ್ಯ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಲಾಗುತ್ತಿದೆ.

ಇದನ್ನೂ ಓದಿ: Railway Jobs: ರೈಲ್ವೆ ಇಲಾಖೆಯಲ್ಲಿ 2.74 ಲಕ್ಷ ಉದ್ಯೋಗ ಖಾಲಿ, ಹುದ್ದೆಗಳ ಭರ್ತಿಗೆ ಸಿಕ್ಕಿದೆ ಮಹತ್ವದ ಸುಳಿವು

Exit mobile version