Site icon Vistara News

Teacher Recruitment 2022 | 15 ಸಾವಿರ ಶಿಕ್ಷಕರ ನೇಮಕ; ಇಂದು ಸಂಜೆ ಫಲಿತಾಂಶ ಪ್ರಕಟ

ಶಿಕ್ಷಕರ ನೇಮಕ

ಬೆಂಗಳೂರು: 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ( 6 ರಿಂದ 8 ನೇ ತರಗತಿ) ನೇಮಕಕ್ಕೆ (Teacher Recruitment 2022) ಕಳೆದ ಮೇ ತಿಂಗಳಲ್ಲಿ ನಡೆಸಲಾಗಿದ್ದ ಪರೀಕ್ಷೆಯ ಫಲಿತಾಂಶವನ್ನು ಇಂದು (ಆ.೧೭)ರ ಸಂಜೆ 6 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ತಿಳಿಸಿದ್ದಾರೆ.

ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಇತ್ತೀಚೆಗೆ ಆಗಸ್ಟ್‌ ತಿಂಗಳ ಅಂತ್ಯದೊಳಗೆ ಈ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿಕೆ ನೀಡಿದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಪರೀಕ್ಷೆಯ ಕೀ ಉತ್ತರಗಳನ್ನು ಮೇ ನಲ್ಲಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿತ್ತು. ಹೀಗಾಗಿ ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದರು.

ಫಲಿತಾಂಶ ನೋಡಲು ವೆಬ್‌ : https://www.schooleducation.kar.nic.in

15 ಸಾವಿರ ಹುದ್ದೆಗಳಿಗೆ ಕಳೆದ ಮೇ 21ಮತ್ತು 22 ರಂದು ನಡೆದ ಈ ಪರೀಕ್ಷೆ ಬರೆಯಲು 1,06,083 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಶಿಕ್ಷಕ ಹುದ್ದೆಗೆ ಪರಿಗಣನೆಯಾಗಿರುವ ಅರ್ಜಿಗಳ ಸಂಖ್ಯೆ 74,116 ಮಾತ್ರ. ಆದರೆ ಪರೀಕ್ಷೆಗೆ ಶೇ.7ರಷ್ಟು ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. ಹೀಗಾಗಿ ಈಗ 69,159 ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಇದರಿಂದ ಪರೀಕ್ಷೆ ಬರೆದ ಐವರಲ್ಲಿ ಒಬ್ಬರಿಗೆ ಈ ಹುದ್ದೆ ದೊರೆಯಬಹುದು ಎಂದು ಲೆಕ್ಕಾಚಾರ ಹಾಕಲಾಗುತ್ತಿದೆ. ಫಲಿತಾಂಶ ಪ್ರಕಟವಾದ ಮೇಲೆ ಎಷ್ಟು ಮಂದಿ ಆಯ್ಕೆಯಾಗಲಿದ್ದಾರೆ ಎಂಬುದು ಸ್ಪಷ್ಟವಾಗಲಿದೆ.

ಇದನ್ನೂ ಓದಿ|Education News | ಭಾವಿ ಶಿಕ್ಷಕರಿಗೆ ಸಿಹಿ ಸುದ್ದಿ; 5 ವರ್ಷ ವಯೋಮಿತಿ ಹೆಚ್ಚಿಸಿದ ರಾಜ್ಯ ಸರ್ಕಾರ

Exit mobile version