Site icon Vistara News

Teacher Recruitment 2022 : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕ; ಹೊಸ ಆಯ್ಕೆ ಪಟ್ಟಿ ಪ್ರಕಟ; 13,351 ಅಭ್ಯರ್ಥಿಗಳು ಆಯ್ಕೆ

teacher recruitment selection list

ಶಿಕ್ಷಕರ ನೇಮಕ

ಬೆಂಗಳೂರು: 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8 ನೇ ತರಗತಿ) ನೇಮಕಕ್ಕೆ (Teacher Recruitment 2022) ಸಂಬಂಧಿಸಿದಂತೆ ಕೊನೆಗೂ ಶಿಕ್ಷಣ ಇಲಾಖೆ 1:1 ಅನುಪಾತದಲ್ಲಿ ಹೊಸದಾಗಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ. ಈ ಬಾರಿ ಒಟ್ಟು 13,351 ಅಭ್ಯರ್ಥಿಗಳು ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 1,6೪೯ ಹುದ್ದೆಗಳು ನೇಮಕವಾಗದೇ ಖಾಲಿ ಉಳಿದಿವೆ.

ಕಳೆದ ನವೆಂಬರ್‌ 18 ರಂದು ಶಿಕ್ಷಣ ಇಲಾಖೆಯು ಮೊದಲಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ಇದನ್ನು ರಾಜ್ಯ ಹೈಕೋರ್ಟ್‌ ರದ್ದು ಪಡಿಸಿದ ಹಿನ್ನೆಲೆಯಲ್ಲಿ ಹೊಸದಾಗಿ ಆಯ್ಕೆ ಪಟ್ಟಿ ಸಿದ್ಧಪಡಿಸಿ ಪ್ರಕಟಿಸಲಾಗಿದೆ. ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ ಸೈಟ್‌ನಲ್ಲಿ ವಿಭಾಗವಾರು ಒದಗಿಸಲಾಗಿದೆ.

ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಆಸಕ್ತರು ಮಾರ್ಚ್‌ 1 ರಿಂದ ಮಾರ್ಚ್‌ 04 ರವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳನ್ನು ಸಂಬಂಧ ಪಟ್ಟ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರದದ ಕಚೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ನಂತರ ಬರುವ ಆಕ್ಷೇಪಣೆಯನ್ನು ಪರಿಗಣಿಸಲಾಗುವುದಿಲ್ಲ ಎಂದು ಇಲಾಖೆಯು ಸ್ಪಷ್ಟಪಡಿಸಿದೆ.

ಕಲ್ಯಾಣ ಕರ್ನಾಟಕದ 5 ಸಾವಿರ ಹುದ್ದೆಗಳಲ್ಲಿ 4,194ಗಳಿಗೆ ನೇಮಕವಾಗಿದ್ದಾರೆ. ಉಳಿದ 9,157 ಅಭ್ಯರ್ಥಿಗಳು ರಾಜ್ಯದ ಇತರ ಜಿಲ್ಲೆಗಳಿಗೆ ನೇಮಕಗೊಂಡಿದ್ದಾರೆ. ತೃತೀಯ ಲಿಂಗಿಗಳಿಗೆ ಮೀಸಲಾಗಿದ್ದ 10 ಹುದ್ದೆಗಳ ಪೈಕಿ ಮೂರು ಹುದ್ದೆಗಳಿಗೆ ನೇಮಕಗೊಂಡಿದ್ದಾರೆ. ಜೀವ ವಿಜ್ಞಾನ ಹುದ್ದೆಗೆ ಸಂಬಂಧಿಸಿದಂತೆ ಉಳಿಯುವ ಅಂಗವಿಕಲರ ಬ್ಯಾಕ್‌ಲಾಗ್‌ ಹುದ್ದೆಗಳ ಸಂಖ್ಯೆ 122.

ಆಯ್ಕೆಯಾದ ಶಿಕ್ಷಕರ ವಿವರ ಇಲ್ಲಿದೆ

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಈ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ ಮೇ 21 ಮತ್ತು 22 ರಂದು ಲಿಖಿತ ಪರೀಕ್ಷೆ ನಡೆಸಿದ್ದು, ಆಗಸ್ಟ್‌ 17 ರಂದು ಫಲಿತಾಂಶ ಪ್ರಕಟಿಸಲಾಗಿತ್ತು. 15 ಸಾವಿರ ಹುದ್ದೆಗಳಿಗೆ ನಡೆದ ಈ ಪರೀಕ್ಷೆ ಬರೆಯಲು 1,16,223. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಶಿಕ್ಷಕ ಹುದ್ದೆಗೆ ಪರಿಗಣನೆಯಾಗಿರುವ ಅರ್ಜಿಗಳ ಸಂಖ್ಯೆ 68,849 ಮಾತ್ರ. ಪರೀಕ್ಷೆಗೆ ಶೇ.7ರಷ್ಟು ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. 51,098 ಪರೀಕ್ಷೆ ಬರೆದು ಅರ್ಹತೆ ಪಡೆದಿದ್ದರು.

ಸೆಪ್ಟೆಂಬರ್‌ನಲ್ಲಿ 1:2 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟಿಸಲಾಗಿತ್ತು. ಈ ಪಟ್ಟಿಯಲ್ಲಿ 22,432 ಅಭ್ಯರ್ಥಿಗಳು ಸ್ಥಾನ ಪಡೆದಿದ್ದರು. ಅಕ್ಟೋಬರ್‌ನಲ್ಲಿ ಇವರ ದಾಖಲೆ ಪರಿಶೀಲನೆ ನಡೆಸಲಾಗಿತ್ತು. ಇದೀಗ ಅಂತಿಮವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. 13,363 ಅಭ್ಯರ್ಥಿಗಳು ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ : https://www.schooleducation.kar.nic.in

ಸಹಾಯವಾಣಿ ಸಂಖ್ಯೆ: 080-22483140,080- 2222 8805, 080-22483145

ಇದನ್ನೂ ಓದಿ : KMF SHIMUL Recruitment 2023 : ಹಾಲು ಒಕ್ಕೂಟದಲ್ಲಿ 194 ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Exit mobile version