ಬೆಂಗಳೂರು: 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ( 6 ರಿಂದ 8 ನೇ ತರಗತಿ) ನೇಮಕಕ್ಕೆ (Teacher Recruitment 2022) ಸಂಬಂಧಿಸಿದಂತೆ 1:2 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುತ್ತದೆ.
ಈ ವಿಷಯವನ್ನು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ಪ್ರತಿ ಹುದ್ದೆಗೆ ಇಬ್ಬರು ಅಭ್ಯರ್ಥಿಗಳ ಆಯ್ಕೆಯಂತೆ ಸದ್ಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ. ನಂತರ ಒಂದು ಹುದ್ದೆಗೆ ಒಬ್ಬರಂತೆ ಅರ್ಹರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಆದಷ್ಟು ಬೇಗ ಹೊಸ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿ, ಶಾಲೆಗಳಿಗೆ ನಿಯೋಜಿಸಲು ಕ್ರತ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಈ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ ಮೇ 21 ಮತ್ತು 22 ರಂದು ಲಿಖಿತ ಪರೀಕ್ಷೆ ನಡೆಸಿದ್ದು, ಆಗಸ್ಟ್ 17 ರಂದು ಫಲಿತಾಂಶ ಪ್ರಕಟಿಸಲಾಗಿತ್ತು.
ಫಲಿತಾಂಶ ನೋಡಲು ವೆಬ್ : https://sts.karnataka.gov.in/GPSTRNHK/Relogin.aspx
15 ಸಾವಿರ ಹುದ್ದೆಗಳಿಗೆ ನಡೆದ ಈ ಪರೀಕ್ಷೆ ಬರೆಯಲು 1,06,083 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಶಿಕ್ಷಕ ಹುದ್ದೆಗೆ ಪರಿಗಣನೆಯಾಗಿರುವ ಅರ್ಜಿಗಳ ಸಂಖ್ಯೆ 74,116 ಮಾತ್ರ. ಪರೀಕ್ಷೆಗೆ ಶೇ.7ರಷ್ಟು ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. ಹೀಗಾಗಿ ಈಗ 69,159 ಅಭ್ಯರ್ಥಿಗಳ ಫಲಿತಾಂಶ ಪ್ರಕಟಗೊಂಡಿದೆ. ಇನ್ನು ಅಂತಿಮ ಆಯ್ಕೆ ಪಟ್ಟಿ ಸಿದ್ಧವಾಗಬೇಕಿದೆ.
ಇದನ್ನೂ ಓದಿ| 2,500 ಪ್ರೌಢಶಾಲಾ ಶಿಕ್ಷಕರ ನೇಮಕ | ಸದ್ಯವೇ ಅಧಿಸೂಚನೆ; ಡಿಸೆಂಬರ್‌ನಲ್ಲಿ ಪರೀಕ್ಷೆ