Teacher Recruitment 2022 | 1:2 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟ - Vistara News

ಉದ್ಯೋಗ

Teacher Recruitment 2022 | 1:2 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟ

ಶಿಕ್ಷಣ ಇಲಾಖೆಯು 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ (Teacher Recruitment 2022) ಗೆ ಸಂಬಂಧಿಸಿದಂತೆ 1:2 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಿದೆ.

VISTARANEWS.COM


on

teacher recruitment selection list
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ( 6 ರಿಂದ 8 ನೇ ತರಗತಿ) ನೇಮಕಕ್ಕೆ (Teacher Recruitment 2022) ಸಂಬಂಧಿಸಿದಂತೆ 1:2 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ವಿಭಾಗವಾರು ಇಂದಿನಿಂದ (ಸೆ.27) ಪ್ರಕಟವಾಗಲಿದೆ.

ಮೊದಲಿಗೆ ಬೆಂಗಳೂರು ವಿಭಾಗದ ಪಟ್ಟಿ ಪ್ರಕಟವಾಗಿದೆ. ಬೆಳಗಾವಿ, ಮೈಸೂರು ಮತ್ತು ಕಲಬುರಗಿ ವಿಭಾಗದ ಪಟ್ಟಿಯನ್ನು ಕ್ರಮವಾಗಿ ಬುಧವಾರ ಮತ್ತು ಗುರುವಾರ (ಸೆ.28 ಮತ್ತು 29) ಸಂಜೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಈ ವಿಷಯವನ್ನು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್‌ ಟ್ವೀಟ್‌ ಮಾಡಿ ತಿಳಿಸಿದ್ದಾರೆ.

ಪ್ರತಿ ಹುದ್ದೆಗೆ ಇಬ್ಬರು ಅಭ್ಯರ್ಥಿಗಳ ಆಯ್ಕೆಯಂತೆ ಸದ್ಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ. ಇವರ ದಾಖಲೆ ಪರಿಶೀಲನೆ ನಡೆಯುತ್ತದೆ. ನಂತರ ಒಂದು ಹುದ್ದೆಗೆ ಒಬ್ಬರಂತೆ ಅರ್ಹರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

1:2 ತಾತ್ಕಾಲಿಕ ಪರಿಶೀಲನಾ ಪಟ್ಟಿಯಲ್ಲಿನ ಅಭ್ಯರ್ಥಿಗಳು ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರ (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರದ ಕಚೇರಿಯಲ್ಲಿ ತಮ್ಮ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ಈ ಸಂಬಂದ ವೇಳಾಪಟ್ಟಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಸೆಪ್ಟೆಂಬರ್‌ 30 ರಂದು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಉತ್ತರ ಪತ್ರಿಕೆಗಳಲ್ಲಿ ತಮ್ಮ ವೈಯುಕ್ತಿಕ ಗುರುತುಗಳನ್ನು ಬಹಿರಂಗಪಡಿಸಿ ಪರೀಕ್ಷಾ ನಿಯಮಗಳನ್ನು ಉಲ್ಲಂಘಿಸಿದ ಹಾಗೂ ಇನ್ನಿತರ ಕಾರಣಗಳಿಂದಾಗಿ 60 ಅಭ್ಯರ್ಥಿಗಳನ್ನು 1:2 ಅನುಪಾತದ ಪಟ್ಟಿಗೆ ಪರಿಗಣಿಸದೇ ಕೈ ಬಿಡಲಾಗಿದೆ ಎಂದು ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಲಿಂಕ್‌ : https://schooleducation.kar.nic.in/cacellpdfs/pdffiles/Prakatane_27092022.pdf

ಈ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ ಮೇ 21 ಮತ್ತು 22 ರಂದು ಲಿಖಿತ ಪರೀಕ್ಷೆ ನಡೆಸಿದ್ದು, ಆಗಸ್ಟ್‌ 17 ರಂದು ಫಲಿತಾಂಶ ಪ್ರಕಟಿಸಲಾಗಿತ್ತು. 15 ಸಾವಿರ ಹುದ್ದೆಗಳಿಗೆ ನಡೆದ ಈ ಪರೀಕ್ಷೆ ಬರೆಯಲು 1,06,083 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಶಿಕ್ಷಕ ಹುದ್ದೆಗೆ ಪರಿಗಣನೆಯಾಗಿರುವ ಅರ್ಜಿಗಳ ಸಂಖ್ಯೆ 74,116 ಮಾತ್ರ. ಪರೀಕ್ಷೆಗೆ ಶೇ.7ರಷ್ಟು ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. ಹೀಗಾಗಿ ಈಗ 69,159 ಅಭ್ಯರ್ಥಿಗಳ ಫಲಿತಾಂಶ ಪ್ರಕಟಗೊಂಡಿತ್ತು.

ಇದನ್ನೂ ಓದಿ| 2,500 ಪ್ರೌಢಶಾಲಾ ಶಿಕ್ಷಕರ ನೇಮಕ | ಸದ್ಯವೇ ಅಧಿಸೂಚನೆ; ಡಿಸೆಂಬರ್‌ನಲ್ಲಿ ಪರೀಕ್ಷೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

Tech Mahindra: ಐಟಿ ಸೇವೆಗಳಿಗೆ ಹೆಸರುವಾಸಿಯಾಗಿರುವ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದದಲ್ಲಿ 661 ಕೋಟಿ ರೂ.ಗೆ ಇಳಿಕೆಯಾಗಿದೆ. ಇದರ ಮಧ್ಯೆಯೇ, 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಟೆಕ್‌ ಮಹೀಂದ್ರಾ ತೀರ್ಮಾನಿಸಿದೆ. ಇದು ಫ್ರೆಶರ್‌ಗಳಿಗೆ ಭಾರಿ ಅನುಕೂಲವಾಗಲಿದೆ.

VISTARANEWS.COM


on

Tech Mahindra
Koo

ನವದೆಹಲಿ: ಮಾಹಿತಿ ತಂತ್ರಜ್ಞಾನದ ಸೇವೆಗಳ (IT Service) ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದ ಕೊನೆಯ ಅಥವಾ ನಾಲ್ಕನೇ ತ್ರೈಮಾಸಿಕದಲ್ಲಿ ಶೇ.40.9ರಷ್ಟು ಕುಸಿದಿದೆ. ಅಂದರೆ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 661 ಕೋಟಿ ರೂ.ಗೆ ಇಳಿಕೆಯಾಗಿದೆ. ಆದರೂ, ಟೆಕ್‌ ಮಹೀಂದ್ರಾ ಕಂಪನಿಯು 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಇದರಿಂದಾಗಿ, ಈಗಷ್ಟೇ ಪದವಿ ಮುಗಿಸಿದವರಿಗೆ ಉದ್ಯೋಗ ಸಿಗಲಿದೆ.

“ಟೆಲಿಕಾಮ್‌, ಕಮ್ಯುನಿಕೇಷನ್ಸ್‌, ಮೀಡಿಯಾ ಹಾಗೂ ಎಂಟರ್‌ಟೇನ್‌ಮೆಂಟ್‌ ವಿಭಾಗದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭದ ಪ್ರಮಾಣವು ಕುಸಿದೆ. ಆದರೆ, 2024-25ನೇ ಸಾಲಿನಲ್ಲಿ ಲಾಭದ ಪ್ರಮಾಣ ಜಾಸ್ತಿಯಾಗುವ ನಿರೀಕ್ಷೆ ಇದೆ” ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೋಹಿತ್‌ ಜೋಶಿ ಮಾಹಿತಿ ನೀಡಿದ್ದಾರೆ. ನಾಲ್ಕನೇ ತ್ರೈಮಾಸಿಕದಲ್ಲಿ ಟೆಕ್‌ ಮಹೀಂದ್ರಾ ನಿವ್ವಳ ಲಾಭದ ಪ್ರಮಾಣವು 709.47 ಕೋಟಿ ರೂ. ಇರಲಿದೆ ಎಂಬುದಾಗಿ ಮನಿಕಂಟ್ರೋಲ್‌ (Moneycontrol) ಅಂದಾಜಿಸಿತ್ತು.

6 ಸಾವಿರ ಫ್ರೆಶರ್‌ಗಳ ನೇಮಕ

“ಉದ್ಯಮದ ವಿಸ್ತರಣೆ, ಟ್ರೆಂಡ್‌ನಲ್ಲಿ ಬದಲಾವಣೆ, ಏಳಿಗೆಯನ್ನು ದೃಷ್ಟಿಯಲ್ಲಿಕೊಂಡು 2024-25ನೇ ಹಣಕಾಸು ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಕಂಪನಿ ತೀರ್ಮಾನಿಸಿದೆ. ಪ್ರತಿಯೊಂದು ತ್ರೈಮಾಸಿಕದಲ್ಲೂ 1,500 ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಾಂಸ್ಥಿಕ ಏಳಿಗೆ, ಕಾರ್ಯಾಚರಣೆ ಹಾಗೂ ಕಾರ್ಯನಿರ್ವಹಣೆಯಲ್ಲಿ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಕಂಪನಿಯನ್ನು ಇನ್ನಷ್ಟು ಲಾಭದತ್ತ ಕೊಂಡೊಯ್ಯಲಾಗುವುದು” ಎಂಬುದಾಗಿ ಮಾಹಿತಿ ನೀಡಿದ್ದಾರೆ.

50 ಸಾವಿರ ನೌಕರರಿಗೆ ಎಐ ತರಬೇತಿ

“ಕಂಪನಿಯ 50 ಸಾವಿರ ಉದ್ಯೋಗಿಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ ಕುರಿತು ತರಬೇತಿ ನೀಡಲಾಗುವುದು. ಆಧುನಿಕ ತಂತ್ರಜ್ಞಾನದ ಮೂಲಕ ಉದ್ಯಮವನ್ನು ಏಳಿಗೆಯತ್ತ ಕೊಂಡೊಯ್ಯುವ ದಿಸೆಯಲ್ಲಿ ಈ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ. ಇನ್ನು, ಟೆಕ್‌ ಟೆಕ್‌ ಮಹೀಂದ್ರಾ ಕಂಪನಿಯ ವಾರ್ಷಿಕ ಲಾಭವೂ ಶೇ.6.2ರಷ್ಟು ಅಂದರೆ, 12,871 ಕೋಟಿ ರೂ.ಗೆ ಇಳಿಕೆಯಾಗಿದೆ. ಇದರ ಮಧ್ಯೆಯೂ ಉದ್ಯೋಗ ಸೃಷ್ಟಿ ಸೇರಿ ಹಲವು ಯೋಜನೆಗಳಿಗೆ ಟೆಕ್‌ ಮಹೀಂದ್ರಾ ಚಾಲನೆ ನೀಡುತ್ತಿದೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

Continue Reading

ಉದ್ಯೋಗ

Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Job Alert: ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ನಿಮ್ಮನ್ನು ಹುಡುಕಿಕೊಂಡು ಬಂದಿದೆ ಸುವರ್ಣಾವಕಾಶ. ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 3. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಇನ್ಯಾಕೆ ತಡ? ಈಗಲೇ ಅಪ್ಲೈ ಮಾಡಿ.

VISTARANEWS.COM


on

Job Alert
Koo

ಬೆಂಗಳೂರು: ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿ (Hutti Gold Mines Company Limited)ಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (HGML Recruitment 2024). ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 3 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟೆಂಟ್ ಫಾರ್‌ಮನ್‌ (ಗಣಿ)- 16 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಟಲರ್ಜಿ)- 7 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಲ್ಯಾಬ್ ಅಸಿಸ್ಟೆಂಟ್- 1 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಜಿಯಾಲಜಿ)- 3 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಡೈಮಂಡ್ ಡ್ರಿಲ್ಲಿಂಗ್ / ಅಂಡರ್ ಗ್ರೌಂಡ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಕ್ಯಾನಿಕಲ್)- 19 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಐಟಿಐ ಫಿಟ್ಟರ್ (ಗಣಿಗಾರಿಕೆ)- 56 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಫಿಟ್ಟರ್ (ಮೆಟಲ್)- 26 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಎಲೆಕ್ಟ್ರಿಕಲ್- 4 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಎಲೆಕ್ಟ್ರಿಕಲ್
ಅಸಿಸ್ಟೆಂಟ್ ಫಾರ್‌ಮನ್‌ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಎಲೆಕ್ಟ್ರಿಕಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಸೆಕ್ಯುರಿಟಿ ಇನ್ಸ್‌ಪೆಕ್ಟರ್‌- 6 ಹುದ್ದೆ, ವಿದ್ಯಾರ್ಹತೆ: ಪದವಿ
ಐಟಿಐ ಫಿಟ್ಟರ್ (ಸರ್ವೆ)- 2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಸೆಕ್ಯುರಿಟಿ ಗಾರ್ಡ್- 24 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ- 1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಮತ್ತು ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕರು / ಪಿಡಬ್ಲ್ಯುಡಿ ಅಭ್ಯರ್ಥಿಗಳು 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 20,920 ರೂ. – 48,020 ರೂ. ಮಾಸಿಕ ವೇತನ ಸಿಗಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (ಉಳಿಕೆ ಮೂಲ / ಸ್ಥಳೀಯೇತರ ವೃಂದ).

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದ).

ಅರ್ಜಿ ಸಲ್ಲಿಸಲು ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಫೋನ್‌ ನಂಬರ್‌, ಇಮೇಲ್‌ ವಿಳಾಸ ನೀಡಿ ಹೆಸರು ನೋಂದಾಯಿಸಿ.
  • HGML Assistant Foreman, ITI Fitter Apply Online ಲಿಂಕ್‌ ಕ್ಲಿಕ್‌ ಮಾಡಿ
  • ಅಗತ್ಯ ಮಾಹಿತಿಗಳನ್ನು ಎಚ್ಚರಿಕೆಯಿಂದ ತುಂಬಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲವೂ ಸರಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ಖಚಿತ ಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯು ಪಾಸಾದವರು ಅಪ್ಲೈ ಮಾಡಿ

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋವರ್‌ ಡಿವಿಷನ್‌ ಕ್ಲರ್ಕ್‌, ಡೇಟಾ ಎಂಟ್ರಿ ಆಪರೇಟರ್‌ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ. ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7. ಕರ್ನಾಟಕದಲ್ಲಿ ಪರೀಕ್ಷೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ನಡೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಉತ್ತಮ ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋವರ್‌ ಡಿವಿಷನ್‌ ಕ್ಲರ್ಕ್‌, ಡೇಟಾ ಎಂಟ್ರಿ ಆಪರೇಟರ್‌ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ (SSC CHSL Recruitment 2024). ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಲೋವರ್‌ ಡಿವಿಷನ್‌ ಕ್ಲರ್ಕ್‌ (LDC) / ಜೂನಿಯರ್‌ ಸೆಕ್ರೆಟೆರಿಯೇಟ್‌ ಅಸಿಸ್ಟಂಟ್‌ (JSA), ಡೇಟಾ ಎಂಟ್ರಿ ಆಪರೇಟರ್‌ (DEO) ಮತ್ತು ಡೇಟಾ ಎಂಟ್ರಿ ಆಪರೇಟರ್‌ ಗ್ರೇಡ್‌ ʼA’ ಹುದ್ದೆಗಳಿವೆ. ಎಲ್‌ಡಿಸಿ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 12ನೇ ತರಗತಿಯಲ್ಲಿ ವಿಜ್ಞಾನ ಮತ್ತು ಗಣಿತ ವಿಷಯವನ್ನು ಓದಿದವರು ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ತತ್ಸಮಾನ ವಿದ್ಯಾರ್ಹತೆ ಹೊಂದಿದವರೂ ಅಪ್ಲೈ ಮಾಡಬಹುದು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳೆ / ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು. ಎರಡು ಹಂತದ ಲಿಖಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌ / ಟೈಪಿಂಗ್‌ ಟೆಸ್ಟ್‌, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮೊದಲ ಹಂತದ ಪರೀಕ್ಷೆ ಜುಲೈ 1,2,3,4,5,8,9,10,11,12ರಂದು ನಡೆಯಲಿದೆ. ಕರ್ನಾಟಕದಲ್ಲಿ ಪರೀಕ್ಷೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ವೈಯಕ್ತಿಕ ಮಾಹಿತಿ ನೀಡುವ ಮೂಲಕ ಹೆಸರು ನೋಂದಾಯಿಸಿ.
  • ನಿಮಗೆ ಬಂದಿರುವ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಾಣಿಸುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಸೂಚಿಸಿರುವ ಅಳತೆಯಲ್ಲಿ ದಾಖಲೆಗಳನ್ನು ಮತ್ತು ಫೋಟೊ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾದ ಬಳಿಕ ಈ ಬಗ್ಗೆ ಇಮೇಲ್‌, ಎಸ್‌ಎಂಎಸ್‌ ಮೂಲಕ ಸಂದೇಶ ಬರಲಿದೆ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 4ರೊಳಗೆ ಅಪ್ಲೈ ಮಾಡಿ

Job Alert: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆ ಗುಡ್‌ ನ್ಯೂಸ್‌ ನೀಡಿದೆ. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 4. ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆ (Revenue Department) ಗುಡ್‌ ನ್ಯೂಸ್‌ ನೀಡಿದೆ. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 4 (Job Alert).

ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018ರ ಅನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
  • ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
  • ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
  • ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಒ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ.
  • ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಒ.ಸಿ/ಜೆ.ಒ.ಡಿ.ಸಿ/ಜೆ.ಎಲ್.ಡಿ.ಸಿ)

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ / ಪಂಗಡ, ಪ್ರವರ್ಗ -1, ಮಾಜಿ ಸೈನಿಕರು ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ಹೇಗೆ?

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ತಿ ಮಾಡಲಿದೆ. ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-23460460.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನು ಗಮನಿಸಿ

  • ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
  • ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳ ಪೈಕಿ ಕನಿಷ್ಠ ಶೇ. 35ರಷ್ಟು ಅಂಕ ಗಳಿಸುವುದು ಕಡ್ಡಾಯ.
  • ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು ಅಂಕ ಕಳೆಯಲಾಗುತ್ತದೆ. ಹೀಗಾಗಿ ಉತ್ತರ ಬರೆಯುವಾಗ ಎಚ್ಚರಿಕೆ ವಹಿಸಿ.
  • ಪ್ರಶ್ನೆಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ.
  • ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಅರ್ಜಿ ಫಾರಂನ ಒಂದು ಪ್ರತಿಯ ಪ್ರಿಂಟ್‌ ಔಟ್‌ ಮತ್ತು ಶುಲ್ಕ ಪಾವತಿಯ ಚಲನ್‌ ಅನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು.

ಇದನ್ನೂ ಓದಿ: Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading
Advertisement
ಕರ್ನಾಟಕ7 mins ago

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Mohammad Shami
ಪ್ರಮುಖ ಸುದ್ದಿ54 mins ago

Mohammad Shami : ಸರ್ಜರಿ ಗಾಯದ ನಡುವೆಯೂ ಮತದಾನ ಮಾಡಿದ ಮೊಹಮ್ಮದ್​ ಶಮಿ

Narendra modi
ಪ್ರಮುಖ ಸುದ್ದಿ1 hour ago

Lok Sabha Election : ಎನ್​ಡಿಎಗೆ ಶುಭ ಶಕುನ : 2ನೇ ಹಂತದ ಮತದಾನದ ಬಳಿಕ ಪ್ರಧಾನಿ ಮೋದಿ ಹೀಗಿತ್ತು

Udupi Sri Krishna Temple
ಕರ್ನಾಟಕ2 hours ago

Udupi Sri Krishna Temple: ಮತದಾನದ ದಿನ ಕಮಲಾರೂಢನಾದ ಉಡುಪಿ ಕೃಷ್ಣ! ಇಲ್ಲಿದೆ ಫೋಟೊ ಝಲಕ್‌

IPL 2024
ಕ್ರೀಡೆ2 hours ago

IPL 2024 : ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ್​ಗೆ ಸವಾಲೊಡ್ಡುವುದೇ ಲಕ್ನೊ ಸೂಪರ್​ ಜೈಂಟ್ಸ್​​

Lok Sabha Election 2024 2 villagers who boycotted voting cast their votes in evening
ಕರ್ನಾಟಕ2 hours ago

Lok Sabha Election 2024: ಮತದಾನ ಬಹಿಷ್ಕರಿಸಿದ್ದ 2 ಗ್ರಾಮದ ಜನ, ಸಂಜೆಗೆ ಮನವೊಲಿಕೆ; 7 ಗಂಟೆ ದಾಟಿದರೂ ಮುಗಿಯದ ಮತದಾನ

Modi in Karnataka stay in Belagavi tomorrow and Huge gatherings at five places
Lok Sabha Election 20243 hours ago

Modi in Karnataka: ನಾಳೆ ರಾಜ್ಯಕ್ಕೆ ಮೋದಿ, ಬೆಳಗಾವಿಯಲ್ಲಿ ವಾಸ್ತವ್ಯ; 2 ದಿನ ಪ್ರವಾಸ, 5 ಕಡೆ ಬೃಹತ್‌ ಸಮಾವೇಶ

BJP National President JP Nadda Election campaign in Surapura
ಕರ್ನಾಟಕ3 hours ago

Lok Sabha Election 2024: ದೇಶದ ರಕ್ಷಣೆಗಾಗಿ ಮತ್ತೆ ಬಿಜೆಪಿಯನ್ನು ಬೆಂಬಲಿಸಿ: ಜೆ.ಪಿ.ನಡ್ಡಾ

deepfake
ತಂತ್ರಜ್ಞಾನ3 hours ago

Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

Lok Sabha Election 2024 Bjp workers clash in Chikmagalur
Lok Sabha Election 20243 hours ago

Lok Sabha Election 2024: ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ10 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202411 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202411 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ17 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌