Site icon Vistara News

Teacher Recruitment 2023 : 33 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಒಪ್ಪಿಗೆ; ಎಲ್ಲ ಜಿಲ್ಲೆಗಳಲ್ಲಿಯೂ ಖಾಲಿ ಇವೆ ಹುದ್ದೆ

Teacher Recruitment 2023 karnataka education department to recruit 33 thousand honorary teachers

graduate teacher promotion

ಬೆಂಗಳೂರು: ನೂತನ ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭವಾಗಿರುವಾಗಲೇ ಶಾಲಾ ಶಿಕ್ಷಣ ಇಲಾಖೆಯು ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ (Teacher Recruitment 2023) ಮಾಡಿಕೊಳ್ಳಲು ಅನುಮತಿ ನೀಡಿದೆ. ಒಟ್ಟು 33 ಸಾವಿರ ಅತಿಥಿ ಶಿಕ್ಷಕರನ್ನು (education news) ನೇಮಕ ಮಾಡಿಕೊಳ್ಳಲಾಗುತ್ತದೆ.

ಪ್ರಾಥಮಿಕ ಶಾಲೆಗಳಲ್ಲಿ ಪಾಠಮಾಡಲು ಒಟ್ಟು 27 ಸಾವಿರ ಹಾಗೂ ಪ್ರೌಢಶಾಲೆಗಳಲ್ಲಿ ಪಾಠ ಮಾಡಲು ಒಟ್ಟು 6 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಯು ಸೂಚಿಸಿದೆ. ನೇಮಕಗೊಳ್ಳುವ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಮಾಸಿಕ 10,000 ರೂ. ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 10,500 ರೂ. ಗೌರವಧನ ನೀಡಲಾಗುತ್ತದೆ. ಶಿಕ್ಷಕರಾಗುವ ಅರ್ಹತೆ ಇದ್ದೂ ನಿರುದ್ಯೋಗಿಗಳಾಗಿರುವವರಿಗೆ ಇದರಿಂದ ಉದ್ಯೋಗಾವಕಾಶ ಲಭ್ಯವಾಗಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಹುದ್ದೆಗಳಿವೆ.

ಶಾಲಾ ಶಿಕ್ಷಣ ಇಲಾಖೆಯ ಆದೇಶ.

ಸದ್ಯ 27 ಸಾವಿರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ನೇಮಕಕ್ಕೆ ಅನುಮತಿ ನೀಡಲಾಗಿದ್ದರೂ, ನೇಮಕಾತಿ ನಡೆಯುತ್ತಿರುವ 15,000 ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8 ನೇ ತರಗತಿ) ನೇಮಕಾತಿಯ ಎಲ್ಲಾ ಅಂತಿಮ ಪ್ರಕ್ರಿಯೆಗಳು ಮುಕ್ತಾಯಗೊಂಡು 2023-24 ನೇ ಸಾಲಿನಲ್ಲಿ ಹಾಜರಾಗುವ ಒಟ್ಟು ಶಿಕ್ಷಕರುಗಳ ಸಂಖ್ಯೆಗೆ ಅನುಗುಣವಾಗಿ ಹುದ್ದೆಗಳನ್ನು ಕಡಿತಗೊಳಿಸುವ ಷರತ್ತನ್ನು ವಿಧಿಸಲಾಗಿದೆ. ಈ 15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಯು ಮುಂದಿನ ಮೂರು ತಿಂಗಳಿನಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಆದ್ಯತೆ ಮೇರೆಗೆ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ಜಿಲ್ಲಾ ಉಪ ನಿರ್ದೇಶಕರು ತಾಲ್ಲೂಕುವಾರು ಹುದ್ದೆಗಳ ಮರು ಹಂಚಿಕೆಯನ್ನು ದಿನಾಂಕ 26-05-2023 ರ ಒಳಗಾಗಿ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಸಂಬಂಧಿಸಿದಂತೆ ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರಿಗೆ ನೀಡಲಾಗಿದೆ.

ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಾಗ ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ ಹುದ್ದೆಗಳಿಗೆ ಹಾಗೂ ಶಿಕ್ಷಕರಿರದ ಶಾಲೆಗಳಿಗೆ/ಹೆಚ್ಚು ವಿದ್ಯಾರ್ಥಿಗಳಿರುವ ಖಾಲಿ ಹುದ್ದೆಗಳಿಗೆ ಮೊದಲ ಆದ್ಯತೆ ನೀಡಬೇಕು. ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್‌ ಆಧಾರದಲ್ಲಿ ಆಯ್ಕೆ ಮಾಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಗುರುವಾರ ಹೊರಡಿಸಿದ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

ರಾಜ್ಯದಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಪ್ರಸ್ತುತ 9,257 ಬೋಧಕ ವೃಂದದ ಸಹ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಈ
ಹುದ್ದೆಗಳಿಗೆ ಬದಲಾಗಿ ಒಟ್ಟು 6000 ಅತಿಥಿ ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಮಾಡಲು ಸರ್ಕಾರವು ಅನುಮೋದನೆ ನೀಡಿದೆ. ಅಂದರೆ ಖಾಲಿ ಹುದ್ದೆಗಳ ಒಟ್ಟು ಸಂಖ್ಯೆಯ ಶೇ. 65 ರಷ್ಟು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿಗೆ ನೇಮಕ?

ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರು;

ಪ್ರೌಢ ಶಾಲೆಗಳಿಗೆ ಅತಿಥಿ ಶಿಕ್ಷಕರು;

ಇದನ್ನೂ ಓದಿ : ಅತಿಥಿ ಶಿಕ್ಷಕರ ಗೌರವಧನ 2,500 ರೂ. ಹೆಚ್ಚಳ; ಇನ್ನೂ 5 ಸಾವಿರ ಹುದ್ದೆ ನೇಮಕಕ್ಕೆ ಒಪ್ಪಿಗೆ

Exit mobile version