Site icon Vistara News

Transfer Guidelines: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ರಾಜ್ಯ ಸರ್ಕಾರ ಒಪ್ಪಿಗೆ; ಜೂನ್‌ 1ರಿಂದ ಪ್ರಕ್ರಿಯೆ

vidhana SOUDHA

ಬೆಂಗಳೂರು: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದ್ದು, ವರ್ಗಾವಣೆಗೆ ಸಂಬಂಧಿಸಿದಂತೆ ವಿಸ್ತೃತ ಮಾರ್ಗಸೂಚಿ (Transfer Guidelines) ಪ್ರಕಟಿಸಿದೆ. ಜೂನ್‌ 1ರಿಂದ 15ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಜಿ. ಹೇಮಲತಾಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ | DA Hike News : ರಾಜ್ಯ ಸರ್ಕಾರಿ ನೌಕರರಿಗೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಆರ್ಥಿಕ ಇಲಾಖೆಯಿಂದ ಆದೇಶ

ಈ ಮಾರ್ಗಸೂಚಿ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಸದರಿ ಮಾರ್ಗಸೂಚಿಗಳಲ್ಲಿರುವ ಪರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ. ಅದರಂತೆ 2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ. 6 ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ.

Exit mobile version