Site icon Vistara News

UAS Dharwad Recruitment : 9 ಬೋಧಕ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

UAS Dharwad Recruitment application invited for backlog posts

ಧಾರವಾಡ ವಿವಿ

ಧಾರವಾಡ: ಇಲ್ಲಿಯ ಕೃಷಿ ವಿಶ್ವವಿದ್ಯಾಲಯವು, ಅಸಿಸ್ಟೆಂಟ್‌ ಪ್ರೊಫೆಸರ್‌, ಅಸೋಸಿಯೇಟ್‌ ಪ್ರೊಫೆಸರ್‌ ಹಾಗೂ ಪ್ರೊಫೆಸರ್‌ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಕ್ಕೆ (UAS Dharwad Recruitment) ಅರ್ಜಿ ಆಹ್ವಾನಿಸಿದೆ.

ಈ ವಿಶ್ವವಿದ್ಯಾಲಯವು 5 ಕಾಲೇಜುಗಳನ್ನು, 27 ಸಂಶೋಧನಾ ಕೇಂದ್ರಗಳನ್ನು, 6 ವಿಸ್ತರಣಾ ಘಟಕಗಳನ್ನು, 6 ಕೃಷಿ ವಿಜ್ಞಾನ ಕೇಂದ್ರಗಳನ್ನು ಮತ್ತು ಕೃಷಿ ತಂತ್ರಜ್ಞಾನ ಮಾಹಿತಿ ಕೇಂದ್ರ ಹೊಂದಿದೆ. ಉತ್ತರ ಕರ್ನಾಟಕದ 7 ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಧಾರವಾಡ, ಗದಗ, ಹಾವೇರಿ, ಮತ್ತು ಉತ್ತರ ಕನ್ನಡ ಇವುಗಳಲ್ಲಿ ಇದರ ಕಾರ್ಯವ್ಯಾಪ್ತಿ ಹೊಂದಿದೆ.

ಒಟ್ಟು ಮೂರು ಪ್ರೊಫೆಸರ್‌, ಎರಡು ಅಸೋಸಿಯೇಟ್‌ ಪ್ರೊಫೆಸರ್‌ ಮತ್ತು ನಾಲ್ಕ ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಆಸಕ್ತರು ಏಪ್ರಿಲ್‌ 4ರ ಒಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆಯಲ್ಲಿಯೇ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ನಮೂನೆಯನ್ನು ವಿವಿಯ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ.

ಎಲ್ಲವೂ ಬ್ಯಾಕ್‌ಲಾಗ್‌ ಹುದ್ದೆಗಳಾಗಿದ್ದು, ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಮೀಸಲಾಗಿವೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರೊಫೆಸರ್‌ ಮತ್ತು ಅಸೋಸಿಯೇಟ್‌ ಪ್ರೊಫೆಸರ್‌ ಹುದ್ದೆಗಳಿಗೆ ಪಿಎಚ್‌ಡಿ ಮಾಡಿದವರು, ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಹತೆಯ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಯಾವೆಲ್ಲಾ ಹುದ್ದೆಗಳಿಗೆ ನೇಮಕ?

I. PROFESSOR CADRE
1. Professor of Agricultural Engineering -1
2. Professor of Agricultural Entomology – 1
3. Professor of Agricultural Economics – 1

Il. ASSOCIATE PROFESSOR CADRE
1. Associate Professor of Agricultural Microbiology – 1
2. Associate Professor of Home Management- 1

Ill. ASSISTANT PROFESSOR CADRE

  1. Assistant Professor of Meteorology -1
  2. Instrumentation Engineer- 1
  3. Assistant Professor of Agricultural Statistics – 1
  4. Assistant Professor of Food Engineering- 1

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ವೇತನ ಎಷ್ಟಿರುತ್ತದೆ?

ಪ್ರೊಫೆಸರ್‌ : Rs.1,44,200 – 2,18,200
ಅಸೋಸಿಯೇಟ್‌ ಪ್ರೊಫೆಸರ್‌: Rs. 1,31,400 – 2,17,100
ಅಸಿಸ್ಟೆಂಟ್‌ ಪ್ರೊಫೆಸರ್‌ : Rs. 57,700-1,82,400

ಆಸಕ್ತರು ಅರ್ಜಿಯನ್ನು ಐನೂರು ರೂ. ಅರ್ಜಿ ಶುಲ್ಕದೊಂದಿಗೆ ( ಶುಲ್ಕವನ್ನು ಡಿಡಿಯ ಮಾಲಕ ಮಾತ್ರ ಪಾವತಿಸಲು ಅವಕಾಶ ನೀಡಲಾಗಿದೆ.) ಏಪ್ರಿಲ್‌ 4 ರಂಜೆ 5 ಗಂಟೆಯ ಒಳಗೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ವಿಳಾಸ ಇಂತಿದೆ; Registrar, University of Agricultural Sciences, Krishinagar, Dharwad — 580 005 (Karnataka)..

ಹೆಚ್ಚಿನ ಮಾಹಿತಿಯನ್ನು ಪಡೆಯಲು ವಿವಿಯ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಇದನ್ನೂ ಓದಿ : DCC Bank Recruitment 2023 : ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ 36 ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Exit mobile version