ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) 2022ನೇ ಸಾಲಿನ “ಎಂಜಿನಿಯರಿಂಗ್ ಸರ್ವೀಸಸ್ ಎಕ್ಸಾಮಿನೇಷನ್”ಗೆ (UPSC ESE 2023) ಅಧಿಸೂಚನೆ ಹೊರಡಿಸಿದೆ. ಯುಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ಪ್ರಕಟಿಸಲಾಗಿದ್ದು, ಆನ್‌ಲೈನ್‌ನಲ್ಲಿಯೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಭಾರತೀಯ ರೈಲ್ವೆ, ಕೇಂದ್ರ ಎಂಜಿನಿಯರಿಂಗ್ ಸೇವೆ, ಭಾರತೀಯ ಸರ್ವೇಕ್ಷಣ ಇಲಾಖೆ, ಭಾರತೀಯ ಕೌಶಲಾಭಿವೃದ್ಧಿ ಸೇವೆ, ಕೇಂದ್ರ ಜಲ ಎಂಜಿನಿಯರಿಂಗ್ ಸೇವೆ, ದೂರಸಂಪರ್ಕ ಇಲಾಖೆ, ರಕ್ಷಣಾ ಇಲಾಖೆ ಸೇರಿದಂತೆ ಕೇಂದ್ರಸರಕಾರದ ವಿವಿಧ ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಈ ಪರೀಕ್ಷೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸಲು ಲಿಂಕ್: https://upsconline.nic.in/upsc/OTRP/
ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿಕಮ್ಯುನಿಕೇಷನ್ ಎಂಜಿನಿಯರಿಂಗ್ ಪದವೀಧರರು ಈ ಪರೀಕ್ಷೆ ಬರೆಯಬಹುದಾಗಿದೆ. ಈ ಬಾರಿ ಅಂದಾಜು 327 ಹುದ್ದೆಗಳನ್ನು ಈ ಪರೀಕ್ಷೆಯ ಮೂಲಕ ಭರ್ತಿ ಮಾಡುವುದಾಗಿ ಆಯೋಗವು ಅಧಿಸೂಚನೆಯಲ್ಲಿ ತಿಳಿಸಿದೆ.
ಅಕ್ಟೋಬರ್ 04 (6:00pm) ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸಲೂ ಇದೇ ದಿನ ಕೊನೆಯ ದಿನವಾಗಿರುತ್ತದೆ. ೨೦೨3ರ ಫೆಬ್ರವರಿ 19ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಮುಖ್ಯ ಪರೀಕ್ಷೆಯ ದಿನಾಂಕವನ್ನು ಮುಂದೆ ಪ್ರಕಟಿಸಲಾಗುತ್ತದೆ. ಸಲ್ಲಿಸಿರುವ ಅರ್ಜಿಯನ್ನು ಹಿಂದಕ್ಕೆ ಪಡೆಯಲು 12.10.2022 ರಿಂದ 18.10.2022ರ ವರೆಗೆ ಅವಕಾಶ ನೀಡಲಾಗುತ್ತದೆ.
ನೇಮಕಾತಿಯ ಅಧಿಸೂಚನೆಯನ್ನು ಓದಲು ಲಿಂಕ್: https://www.upsc.gov.in/exams-related-info/exam-notification
ವಯೋಮಿತಿ ಎಷ್ಟು?
21 ರಿಂದ 30 ವರ್ಷದೊಳಗಿನ ಎಂಜಿನಿಯರಿಂಗ್ ಪದವೀಧರರು ಎಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಗರಿಷ್ಠ ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗುತ್ತದೆ.
ದೇಶಾದ್ಯಂತ 44 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ರಾಜ್ಯದ ಬೆಂಗಳೂರು ಮತ್ತು ಧಾರವಾಡದಲ್ಲಿ ಪರೀಕ್ಷಾ ಕೇಂದ್ರ ಇರಲಿದೆ. ಮುಖ್ಯ ಪರೀಕ್ಷೆಗೆ ರಾಜ್ಯದಲ್ಲಿ ಬೆಂಗಳೂರಿನಲ್ಲಿ ಮಾತ್ರ ಪರೀಕ್ಷಾ ಕೇಂದ್ರ ಇರಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 14-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-10-2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04-10-2022
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 011-23381125/011-23385271/011-23098543.
ಯುಪಿಎಸ್‌ಸಿ ವೆಬ್ ವಿಳಾಸ: https://www.upsc.gov.in
ಅರ್ಜಿ ಶುಲ್ಕ ಎಷ್ಟು?
ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು 200 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಮಹಿಳೆಯರು, ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕದಿಂದ ಸಂಪೂರ್ಣ ವಿನಾಯ್ತಿ ನೀಡಲಾಗಿದೆ. ಅರ್ಜಿ ಶುಲ್ಕವನ್ನು ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾದ ಮೂಲಕ ಪಾವತಿಸುವುದಾದರೆ 03.10.2022ರ ಒಳಗೆ ಸಲ್ಲಿಸಬೇಕಿದೆ. ಆನ್‌ಲೈನ್
ನಲ್ಲಿಯೂ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿರುತ್ತದೆ. ಇದಕ್ಕೆ 04.10.2022 ಕೊನೆಯ ದಿನವಾಗಿರುತ್ತದೆ.
ಪರೀಕ್ಷೆ ಹೇಗಿರುತ್ತದೆ?
ಎಂಜಿನಿಯರಿಂಗ್ ಸರ್ವೀಸ್ ಪರೀಕ್ಷೆ ಎರಡು ಹಂತದಲ್ಲಿ ನಡೆಯಲಿದೆ. ಪೂರ್ವಭಾವಿ ಪರೀಕ್ಷೆಯು ಅಬ್ಜೆಕ್ಟೀವ್
ಮಾದರಿಯಲ್ಲಿ ಒಟ್ಟು 500 ಅಂಕಗಳಿಗೆ (2 ಪತ್ರಿಕೆ) ನಡೆಯಲಿದೆ. ಮುಖ್ಯ ಪರೀಕ್ಷೆಯು 600 ಅಂಕಗಳಿಗೆ (2 ಪತ್ರಿಕೆ) ನಡೆಯಲಿದೆ. ಪೂರ್ವ ಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆದವರು ಮಾತ್ರ ಮುಖ್ಯ ಪರೀಕ್ಷೆ ಬರೆಯಬಹುದಾಗಿದೆ. ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ವೈಯಕ್ತಿಕ ಪರೀಕ್ಷೆ ನಡೆಸಲಾಗುತ್ತದೆ. ಇದಕ್ಕೆ ಕೂಡ 200 ಅಂಕ ನಿಗದಿಯಾಗಿರುತ್ತದೆ. ಪರೀಕ್ಷೆಯ ಪಠ್ಯಕ್ರಮ, ಸಮಯ ಮತ್ತಿತರ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.
ಇದನ್ನೂ ಓದಿ | KPSC Recruitment 2022 | ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ