ಉದ್ಯೋಗ
UPSC Prelims 2023: ಮೇ 28ರಂದು ಬೆಂಗಳೂರಿನಲ್ಲಿ ಬೆಳಗ್ಗೆ 6ರಿಂದಲೇ ಮೆಟ್ರೋ ಸಂಚಾರ ಆರಂಭ
UPSC Prelims 2023: ಮೇ 28ರಂದು ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ನಮ್ಮ ಮೆಟ್ರೋ ರೈಲು ಸೇವೆ ಬೆಳಗ್ಗೆ 6ರಿಂದಲೇ ಆರಂಭಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.
ಬೆಂಗಳೂರು: ಕೇಂದ್ರ ಲೋಕಾ ಸೇವಾ ಆಯೋಗದ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆ ಮೇ 28ರಂದು ನಡೆಯಲಿದೆ. ಹೀಗಾಗಿ ಪರೀಕ್ಷೆಗೆ (UPSC Prelims 2023) ಹಾಜರಾಗುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ನಗರದಲ್ಲಿ ಮೆಟ್ರೋ ರೈಲು ಸೇವೆ ಆರಂಭಿಸಲಾಗುತ್ತದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.
ನಗರದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳಲ್ಲಿ ಬೆಳಗ್ಗೆ 7 ಗಂಟೆಗೆ ಬದಲಾಗಿ 6 ಗಂಟೆಗೆ ರೈಲು ಸೇವೆ ಆರಂಭವಾಗಲಿದೆ. ಇದನ್ನು ಪೂರ್ಣ ಪುಮಾಣದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮನವಿ ಮಾಡಿದೆ.
ಇದನ್ನೂ ಓದಿ | Jobs News : ಕೇಂದ್ರ ಸರ್ಕಾರದ ಉದ್ಯೋಗ ಬೇಕೇ? ಯುಪಿಎಸ್‌ಸಿ, ಎಸ್‌ಎಸ್‌ಸಿಯ ಈ ವೇಳಾಪಟ್ಟಿ ನೋಡಿ!
ಉದ್ಯೋಗ
KSP Recruitment : 3,484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕ; ಜುಲೈನಲ್ಲಿ ಪರೀಕ್ಷೆ
ಸಬ್‌ಇನ್ಸ್ ಪೆಕ್ಟರ್ ನೇಮಕಾತಿ ಹಗರಣದಿಂದಾಗಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನೇಮಕ ಪ್ರಕ್ರಿಯೆ (KSP Recruitment) ಸ್ಥಗಿತಗೊಂಡಿತ್ತು. ಈಗ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಜುಲೈನಲ್ಲಿ ಲಿಖಿತ ಪರೀಕ್ಷೆ ನಡೆಸಲು ಇಲಾಖೆ ಸಿದ್ಧತೆ ನಡೆಸಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯು 3,484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ (KSP Recruitment) ನೇಮಕಕ್ಕೆ ಜುಲೈ 9 ಅಥವಾ 16 ಅಥವಾ 23 ರಂದು ಲಿಖಿತ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ.
ಕಳೆದ ಮಾರ್ಚ್‌ನಲ್ಲಿಯೇ ಪೊಲೀಸ್ ಮಹಾ ನಿರ್ದೇಶಕರು ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದಂತೆಯೇ ಇಲಾಖೆಯು ಈ ಪರೀಕ್ಷೆ ನಡೆಸಲು ಮುಂದಾಗಿದ್ದು, ಪರೀಕ್ಷಾ ಕೇಂದ್ರಗಳನ್ನು ಗುರುತಿಸುವ ಕೆಲಸವನ್ನು ಮಾಡುತ್ತಿದೆ. ಒಟ್ಟು 75 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆ ಬರೆಯುವ ಸಾಧ್ಯತೆಗಳಿದ್ದು, 800 ಮಂದಿ ಕುಳಿತು ಪರೀಕ್ಷೆ ಬರೆಯಬಹುದಾದಂತ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲು ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಪ್ರತಿ ವಿಭಾಗದಲ್ಲಿಯೂ 8000 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲು ಉದ್ದೇಶಿಸಲಾಗಿದೆ.
2022ರ ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಪೊಲೀಸ್ ಕಾನ್ಸ್‌ಟೇಬಲ್ ನೇಮಕ ಪ್ರಕ್ರಿಯೆಯಲ್ಲಿ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು 1:5 ರ ಅನುಪಾತದಲ್ಲಿ ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಈ ಎರಡೂ ಪರೀಕ್ಷೆ ನಡೆದ ನಂತರ ವೈದ್ಯಕೀಯ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.
ಆದರೆ ಅಧಿಸೂಚನೆ ಪ್ರಕಟವಾಗಿ ಎಂಟು ತಿಂಗಳು ಕಳೆದರೂ ಮೊದಲಿಗೆ ನಡೆಯಬೇಕಾಗಿದ್ದ ಲಿಖಿತ ನಡೆಸಲಾಗಿರಲಿಲ್ಲ. ಈ ಬಗ್ಗೆ ಸ್ಪಷ್ಟ ಮಾಹಿತಿಯನ್ನೂ ಇಲಾಖೆ ನೀಡುತ್ತಿರಲಿಲ್ಲ. ಹೀಗಾಗಿ ಅಭ್ಯರ್ಥಿಗಳು ನಿರಾಸೆ ಅನುಭವಿಸುತ್ತಿದ್ದರು. ಕಳೆದ ಮಾರ್ಚ್‌ನಲ್ಲಿ ಟ್ವಿಟ್ಟರ್‌ನಲ್ಲಿ ಅಭ್ಯರ್ಥಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಆಗಿನ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಇಲಾಖೆಯಲ್ಲಿನ 1,591 ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಹಾಗೂ 3,484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ರಾಜ್ಯ ವಿಧಾನಸಭಾ ಚುನಾವಣೆ ಮುಗಿದ ನಂತರ ಅಂದರೆ ಮುಂದಿನ ಜುಲೈನಲ್ಲಿ ಲಿಖಿತ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಬಹುತೇಕವಾಗಿ ಜುಲೈ 2, 9, 16 ಮತ್ತು 23 ರಂದು ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದರು. ಇದನ್ನು ಬಿಟ್ಟರೆ ಇಲಾಖೆಯ ಕಡೆಯಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರ ಬಿದ್ದಿರಲಿಲ್ಲ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ.
ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿದ್ದರಿಂದ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೇ ಈ ಹಗರಣದಲ್ಲಿ ಭಾಗಿಯಾಗಿದ್ದರಿಂದ ಪೊಲೀಸ್ ಇಲಾಖೆಯ ನೇಮಕ ಪ್ರಕ್ರಿಯೆಯ ಮೇಲೆ ಕಾರ್ಮೋಡ ಕವಿದಿದೆ. ಹೀಗಾಗಿ ಪೊಲೀಸ್ ಇಲಾಖೆ ಸೇರಬೇಕೆಂದು ಕನಸು ಹೊತ್ತಿದ್ದ ರಾಜ್ಯದ ಲಕ್ಷಾಂತರ ಅಭ್ಯರ್ಥಿಗಳು ಈಗ ದಿಕ್ಕುಕಾಣದಂತಾಗಿದ್ದಾರೆ. ಈ ಹೊತ್ತಿನಲ್ಲಿ ಈ ನೇಮಕಾತಿ ಪರೀಕ್ಷೆ ನಡೆಯಲಿದೆ ಎಂಬ ಸುದ್ದಿ ಇಲಾಖೆಯಿಂದ ಹೊರ ಬಿದ್ದಿರುವುದು ಅಭ್ಯರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.
ಮಾಹಿತಿಗಾಗಿ ನೋಡುತ್ತಿರಬೇಕಾದ ವೆಬ್ ವಿಳಾಸ: https://apc3064.ksp-recruitment.in/index
ಈ ನಡುವೆ ನೂತನ ಗೃಹ ಸಚಿವ ಡಾ.ಜಿ. ಪರಮೇಶ್ವರ್ 15 ಸಾವಿರ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಶೀಘ್ರವೇ ನೇಮಕ ಮಾಡಿಕೊಳ್ಳಲಾಗುವುದು ಎಂದು ತುಮಕೂರಿನಲ್ಲಿ ಇತ್ತೀಚೆಗೆ ತಿಳಿಸಿರುವುದರಿಂದ ಪೊಲೀಸ್ ಇಲಾಖೆಯಲ್ಲಿ ಮತ್ತೆ ನೇಮಕ ಪ್ರಕ್ರಿಯೆ ಒಂದರ ಹಿಂದೊಂದರಂತೆ ನಡೆಯುವುದರ ಸುಳಿವು ನೀಡಿದೆ.
ಇದನ್ನೂ ಓದಿ : Court Recruitment 2023 : ಮೈಸೂರು ಕೋರ್ಟ್‌ನಲ್ಲಿ ಕಾಯಂ ಹುದ್ದೆ; ಇಂದಿನಿಂದ ಅರ್ಜಿ ಸಲ್ಲಿಕೆ ಶುರು
ಉದ್ಯೋಗ
Court Recruitment 2023 : ಮೈಸೂರು ಕೋರ್ಟ್‌ನಲ್ಲಿ ಕಾಯಂ ಹುದ್ದೆ; ಇಂದಿನಿಂದ ಅರ್ಜಿ ಸಲ್ಲಿಕೆ ಶುರು
ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ವಿವಿಧ ಹುದ್ದೆಗಳ ನೇಮಕಕ್ಕೆ ( Court Recruitment 2023) ಅರ್ಜಿ ಆಹ್ವಾನಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.
ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸ್ಟೆನೋಗ್ರಾಫರ್, ಟೈಪಿಸ್ಟ್ ಮತ್ತು ಪ್ಯೂನ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು (Court Recruitment 2023), ಸೋಮವಾರದಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಿದೆ.
ಸ್ಟೆನೋಗ್ರಾಫರ್ (ಶೀಘ್ರಲಿಪಿಗಾರರು)-11 ಹುದ್ದೆ, ಟೈಪಿಸ್ಟ್ ( ಬೆರಳಚ್ಚುಗಾರರು) -3, ಹುದ್ದೆ ಹಾಗೂ ಪ್ಯೂನ್ ( ಸೇವಕರು) 45 ಹುದ್ದೆಗಳಿಗೆ ನೇಮಕ ನಡೆಯಲಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ವಿದ್ಯಾರ್ಹತೆ ಏನು?
ಸ್ಟೆನೋಗ್ರಾಫರ್ ಹುದ್ದೆ : ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಜತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಹಿರಿಯ ಶ್ರೇಣಿ ಬೆರಳಚ್ಚು ಹಾಗೂ ಕನ್ನಡ ಹಾಗೂ ಇಂಗ್ಲಿಷ್ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿಬೇಕು. ಅಲ್ಲದೆ, ಕಂಪ್ಯೂಟರ್‌ನಲ್ಲಿ ಕಾರ್ಯನಿರ್ವಹಿಸುವ ಜ್ಞಾನ ಹೊಂದಿರಬೇಕು.
ಟೈಪಿಸ್ಟ್ ಹುದ್ದೆ: ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕಮರ್ಷಿಯಲ್ ಪ್ರಾಕ್ಟೀಸ್‌ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಮಾಡಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಜತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಹಿರಿಯ ಶ್ರೇಣಿ ಬೆರಳಚ್ಚು ಹಾಗೂ ಕನ್ನಡ ಹಾಗೂ ಇಂಗ್ಲಿಷ್ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿಬೇಕು. ಅಲ್ಲದೆ, ಕಂಪ್ಯೂಟರ್‌ನಲ್ಲಿ ಕಾರ್ಯನಿರ್ವಹಿಸುವ ಜ್ಞಾನ ಹೊಂದಿರಬೇಕು.
ಪ್ಯೂನ್ ಹುದ್ದೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಥವಾ 10 ನೇ ತರಗತಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿ ಪಡೆಯಲು ಲಿಂಕ್‌ಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ.
ನೇಮಕ ಹೇಗೆ?
ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಅಂಕಗಳ ಶೇಕಡವಾರು ಅಂಕಗಳು ಮತ್ತು ಕೌಶಲ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ನೇಮಕ ನಡೆಯಲಿದೆ.
ಪ್ಯೂನ್ ಹುದ್ದೆಗೆ ಮಾತ್ರ ಎಸ್‌ಎಸ್‌ಎಲ್‌ಸಿಯಲ್ಲಿ ಪಡೆದ ಒಟ್ಟು ಶೇಕಡವಾರು ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ. ಸಂದಶನಕ್ಕೆ 10 ಅಂಕ ನಿಗದಿಯಾಗಿದ್ದು, ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇಮಕ ನಡೆಯಲಿದೆ.
ವಯೋಮಿತಿ ಎಷ್ಟು?
ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಪ್ರವರ್ಗ- 1ರ ಅಭ್ಯರ್ಥಿಗಳಿಗೆ 40 ವರ್ಷ ಎಂದು ನಿಗದಿಪಡಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಲೆಕ್ಕ ಹಾಕಲಾಗುತ್ತದೆ.
ಅರ್ಜಿ ಶುಲ್ಕ ಎಷ್ಟು?
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ- 1ರ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 150 ರೂ. (ಪ್ಯೂನ್ ಹುದ್ದೆಗೆ 100 ರೂ.) ಹಾಗು ಸಾಮಾನ್ಯ ವರ್ಗದ ಅಭ್ಯರ್ಥಿಗಳು 300 ರೂ. (ಪ್ಯೂನ್ ಹುದ್ದೆಗೆ 200 ರೂ.) ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸಬಹುದು. ಇಲ್ಲವೇ ಭಾರತೀಯ ಸ್ಟೇಟ್ ಬ್ಯಾಂಕ್‌ನ ಚಲನ್ ಮೂಲಕ ಕೂಡ ಪಾವತಿಸಬಹುದಾಗಿರುತ್ತದೆ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ.
ವೇತನ ಎಷ್ಟಿರುತ್ತದೆ?
ಸ್ಟೆನೋಗ್ರಾಫರ್ ಹುದ್ದೆಯ ವೇತನ ಶ್ರೇಣಿ: ರೂ.27,650-650-29,600-750-32,600-850-36,000-950-39,800-1,100-46,400-1,250-52,650
ಟೈಪಿಸ್ಟ್ ಹುದ್ದೆಯ ವೇತನ ಶ್ರೇಣಿ: ರೂ. 21,400-500-22,400-550-24,600-600-27,000-650-29,600-750 32,600-850-36,000-950-39,800-1,100-42,000.
ಪ್ಯೂನ್ ಹುದ್ದೆಯ ವೇತನ ಶ್ರೇಣಿ : ರೂ. 17,000-400-18,600-450-20,400-500-22,400-550-24,600-600-27,000-650-28,950.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: https://districts.ecourts.gov.in/mysuru
ಇದನ್ನೂ ಓದಿ : India Post GDS Recruitment 2023 : ಅಂಚೆ ಇಲಾಖೆಯಲ್ಲಿ 12,828 ಹುದ್ದೆ; ಎಸ್ಸೆಸ್ಸೆಲ್ಸಿ ಓದಿದವರಿಗೆ ಅವಕಾಶ
ಉದ್ಯೋಗ
Fraud Case: ಸರ್ಕಾರಿ ಕೆಲಸಕ್ಕೆಂದು ಕಂಡ ಕಂಡವರ ಬಳಿ ಹೋಗ್ಬೇಡಿ; ಫೇಕ್ ಅಪಾಯಿಂಟ್ಮೆಂಟ್ ಆರ್ಡರ್ ಕೊಡ್ತಾರೆ!
Fake appointment letter: ಸರ್ಕಾರಿ ಕೆಲಸ ಸಿಕ್ಕ ಖುಷಿಯಲ್ಲಿದ್ದ ಆ ವ್ಯಕ್ತಿಗೆ ಬರ ಸಿಡಿಲು ಬಡಿದಂತೆ ಆಗಿತ್ತು. ಕೈನಲ್ಲಿ ಬೆಸ್ಕಾಂ ನಕಲಿ ನೇಮಕಾತಿ ಪತ್ರವನ್ನು ತಂದವನನ್ನು ಸೇರಿ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಉದ್ಯೋಗಾಕಾಂಕ್ಷಿಗಳನ್ನು ಹುಡುಕಿ ಸರ್ಕಾರಿ ಕೆಲಸ (Govt Job) ಕೊಡಿಸುವ ನೆಪದಲ್ಲಿ ವಂಚನೆ ಮಾಡಿರುವ (Fraud Case) ಘಟನೆ ನಡೆದಿದೆ. ಬೆಸ್ಕಾಂನಲ್ಲಿ (Bescom) ಕಿರಿಯ ಸಹಾಯಕ ಹುದ್ದೆಗಾಗಿ ನಕಲಿ ನೇಮಕಾತಿ ಪತ್ರವನ್ನು ನೀಡಿದವನು ಸೇರಿ ಏಳು ಮಂದಿಯನ್ನು ಹೈಗ್ರೌಂಡ್ಸ್ ಪೊಲೀಸರು (Highgrounds Police) ಬಂಧಿಸಿದ್ದಾರೆ. ನಕಲಿ ನೇಮಕಾತಿ ಪತ್ರ ತಂದಿದ್ದ ವೆಂಕಟೇಶ್ ವೈಭವ್ ಸೇರಿ ಪ್ರಜ್ವಲ್, ಪ್ರವೀಣ್, ಪ್ರದೀಪ್ ಹಾಗೂ ಪುರುಷೋತ್ತಮ್, ಲೋಹಿತ್, ಶಿವಪ್ರಸಾದ್, ವಿಜಯ್ ಕುಮಾರ್ ಶಿವಲಿಂಗಪ್ಪ ಬಂಧಿತ ಆರೋಪಿಗಳಾಗಿದ್ದಾರೆ.
ಮೋಸ ಹೋಗುವವರು ಇರುವವರೆಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿಯಾಗಿದೆ. ವೆಂಕಟೇಶ್ ವೈಭವ್ ಎಂಬಾತ ಬೆಸ್ಕಾಂನ ಕಿರಿಯ ಸಹಾಯಕ ಹುದ್ದೆಗೆ ಆಯ್ಕೆಯಾಗಿರುವ ನೇಮಕಾತಿ ಪತ್ರ ತಂದಿದ್ದ. ಈ ನೇಮಕಾತಿ ಪತ್ರವನ್ನು ನೋಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರೇ ದಂಗಾಗಿದ್ದರು. ಯಾಕೆಂದರೆ ಇದು ಅಸಲಿ ನೇಮಕಾತಿ ಪತ್ರವಾಗಿರದೇ ನಕಲಿ ಆಗಿತ್ತು.
ವೆಂಕಟೇಶ್ ವೈಭವ್, ಅಸಲಿ ನೇಮಕಾತಿ ಪತ್ರ ಎಂದು ತಿಳಿದು ಕೆಲಸಕ್ಕೆ ವರದಿ ಮಾಡಿಕೊಳ್ಳಲು ಬಂದಿದ್ದರು. ಅಧೀಕ್ಷಕ ಎಂಜಿನಿಯರ್ ಸಹಿ ಮಾಡಿರುವ ನೇಮಕಾತಿ ಪತ್ರ ಕಂಡು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅನುಮಾನಗೊಂಡಿದ್ದರು. ನೇಮಕಾತಿ ಪತ್ರದಲ್ಲಿ ನಕಲಿ ಸೀಲ್ ಮತ್ತು ನಕಲಿ ಸಹಿ ಇರುವುದು ಗಮನಿಸಿದರು.
ಬಳಿಕ ಅಧೀಕ್ಷಕ ಎಂಜಿನಿಯರ್ ತಮ್ಮಲ್ಲಿಗೆ ಕರೆಸಿ ಪರಿಶೀಲಿಸಿದಾಗ ನಕಲಿ ನೇಮಕಾತಿ ಪತ್ರ ಎಂಬುದು ತಿಳಿದು ಬಂದಿದೆ. ಈ ಸಂಬಂಧ ವೆಂಕಟೇಶ್ ವೈಭವ್‌ನನ್ನು ವಿಚಾರಿಸಿದಾಗ, ಈತನ ಬಳಿ 20 ಲಕ್ಷ ರೂ. ಪಡೆದು ನೇಮಕಾತಿ ಪತ್ರ ನೀಡಿ, ಕೆಲಸಕ್ಕೆ ಸೇರಿಕೊಳ್ಳುವಂತೆ ಹೇಳಿ ಕಳುಹಿಸಿದ್ದನ್ನು ವಿವರಿಸಿದ್ದಾನೆ. ಸರ್ಕಾರಿ ಕೆಲಸ ಸಿಕ್ಕ ಖುಷಿಗೆ ಬೆಸ್ಕಾಂ ಕಚೇರಿಗೆ ಬಂದಾಗ, ಇದು ಅಸಲಿ ಅಲ್ಲ ನಕಲಿ ಎಂದು ತಿಳಿದು ಬಂದಿದೆ.
ಈ ಸಂಬಂಧವನ್ನು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಗಿಳಿದ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ. ಉದ್ಯೋಗಾಕಾಂಕ್ಷಿಗಳನ್ನೇ ಟಾರ್ಗೆಟ್ ಮಾಡುವ ಈ ಆರೋಪಿಗಳು ಅವರಿಗೆ ಸರ್ಕಾರಿ ಉದ್ಯೋಗವನ್ನು ಕೊಡಿಸುವುದಾಗಿ ಹೇಳಿ ಲಕ್ಷ ಲಕ್ಷ ಪಡೆದು ವಂಚಿಸಿದ್ದಾರೆ.
ಇದನ್ನೂ ಓದಿ: Video Viral: ಅಯ್ಯೋ ಭಗವಂತ, ಆನೆ ಓಡೋಡಿ ಬಂದೇ ಬಿಡ್ತು, ಇನ್ನೇನು ಗತಿ?; ವಿಚಾರವಾದಿ ಭಗವಾನ್ ಜಸ್ಟ್ ಸೇವ್!
ಬಂಧಿತ ಪ್ರಜ್ವಲ್, ಮಧ್ಯವರ್ತಿಗಳಿಂದ ಹಣ ಪಡೆದು ಕೆಲಸ ಕೊಡಿಸುವ ನೆಪದಲ್ಲಿ ನಕಲಿ ನೇಮಕಾತಿ ಆದೇಶಗಳನ್ನು ಸೃಷ್ಟಿಸಿ, ಆದೇಶ ಪತ್ರಿಗಳನ್ನು ನೀಡುತ್ತಿದ್ದ. ಪ್ರವೀಣ್ ಎಂಬುವವನು ಮಧ್ಯವರ್ತಿಗಳಿಂದ ಹಣ ಪಡೆದು ಪ್ರಜ್ವಲ್‌ಗೆ ನೀಡಿ, ಆದೇಶ ಪತ್ರಿಗಳನ್ನು ಪಡೆದುಕೊಳ್ಳುತ್ತಿದ್ದ. ಪ್ರದೀಪ್, ಪುರುಷೋತ್ತಮ್ ಹಾಗೂ ಲೋಹಿತ್ ಎಲ್ಲರೂ ಮಧ್ಯವರ್ತಿಗಳಾಗಿದ್ದು ಕಮಿಷನ್ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು, ಎಲ್ಲ ಆರೋಪಿಗಳನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉದ್ಯೋಗ
KPSC Departmental Examination : ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆ; ಪ್ರವೇಶ ಪತ್ರ ಪ್ರಕಟ
ಕೆಪಿಎಸ್‌ಸಿಯು 2021ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ (KPSC Departmental Examination) ಪ್ರವೇಶ ಪತ್ರವನ್ನು ವೆಬ್‌ಸೈಟ್‌ನಲ್ಲಿ ಒದಗಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) 2021ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ (KPSC Departmental Examination) ಪ್ರವೇಶ ಪತ್ರವನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಅಥವಾ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಜೂನ್ 9 ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಜುಲೈ 9 ರವರೆಗೆ ನಡೆಯಲಿವೆ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ (Click Here) ಮಾಡಿ.
ಆಫ್‌ಲೈನ್ ಮಾದರಿಯಲ್ಲಿಯೇ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಸಂಬಂಧಿಸಿದಂತೆ ಜನವರಿ 6 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರಿ ನೌಕರರು (ಗ್ರೂಪ್-ಡಿ ನೌಕರರು ಹೊರತುಪಡಿಸಿ), ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ/ ಪ್ರಾಧಿಕಾರಗಳ ಕಾಯಂ ನೌಕರರಿಗೆ ಈ ಪರೀಕ್ಷೆ ನಡೆಸಲಾಗುತ್ತದೆ.
ಎಲ್ಲ ವಿಭಾಗೀಯ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಸಲಾಗುತ್ತದೆ. ಅಧಿಸೂಚನೆಯಲ್ಲಿ ಆನ್‌ಲೈನ್ ಮಾದರಿಯ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಲಾಗಿತ್ತಾದರೂ ಈಗ ಕೆಪಿಎಸ್‌ಸಿಯು ಆಫ್‌ಲೈನ್ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಈ ಇಲಾಖಾ ಪರೀಕ್ಷೆಯನ್ನು ಒಟ್ಟು ಎರಡು ಹಂತದಲ್ಲಿ ನಡೆಸಲಾಗುತ್ತದೆ. ಪ್ರಥಮ ಹಂತದ ಪರೀಕ್ಷೆಯನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಎರಡನೇ ಹಂತದ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ.
ವಿವಿಧ ವಿಷಯಗಳ ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಒಟ್ಟು 99 ಪತ್ರಿಕೆಗಳಿಗೆ ಹಾಗೂ ವಿವರಣಾತ್ಮಕ ಮಾದರಿಯ ಒಟ್ಟು 19 ಪತ್ರಿಕೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಈ ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೆಲವು ಇಲಾಖೆಗಳ ಪಠ್ಯಕ್ರಮಗಳು ಪರಿಷ್ಕೃತಗೊಂಡಿದ್ದು, ಈ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.
ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ;
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: https://kpsc.kar.nic.in/
-
ಕರ್ನಾಟಕ18 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ15 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ9 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ಕರ್ನಾಟಕ13 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ದೇಶ14 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ17 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಪರಿಸರ9 hours ago
ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ
-
ಕರ್ನಾಟಕ15 hours ago
ಕಲಬುರಗಿಯಲ್ಲಿ ಚಂಡಿಕಾ ಹೋಮದ ಬೆಂಕಿಯಲ್ಲಿ ಕಾಣಿಸಿಕೊಂಡ ದುರ್ಗಾ ದೇವಿ!; ಇಲ್ಲಿದೆ ನೋಡಿ ಫೋಟೊ