ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ (Karnataka State Open University) ಉದ್ಯೋಗಾಂಕ್ಷಿಗಳಿಗೆ ಶುಭ ಸುದ್ದಿ (Job News) ಹೊರಬಿದ್ದಿದೆ. ಒಟ್ಟು 21 ಅಧ್ಯಯನ ವಿಭಾಗಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ (Appointment of Guest Lecturers) ಮುಂದಾಗಲಾಗಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಇದು ಅತಿಥಿ ಉಪನ್ಯಾಸಕರ ಹುದ್ದೆಗಳಾಗಿದ್ದು, ನೇರ ಸಂದರ್ಶನದ ಮೂಲಕ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ. ಅರ್ಜಿ ನಮೂನೆ, ಸಂದರ್ಶನದ ದಿನಾಂಕ ಮತ್ತು ವೇಳೆ ಸೇರಿದಂತೆ ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅಂತರ್ಜಾಲ www.ksoumysuru.ac.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯಾವ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ?
ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಸಂಸ್ಕೃತ, ಸಮಾಜಕಾರ್ಯ (ಎಂಎಸ್‌ಡಬ್ಲ್ಯೂ), ಪ್ರವಾಸೋಧ್ಯಮ ಮತ್ತು ನಿರ್ವಹಣೆ, ವಾಣಿಜ್ಯಶಾಸ್ತ್ರ, ನಿರ್ವಹಣಾಶಾಸ್ತ್ರ, ಗಣಕವಿಜ್ಞಾನ, ಮಾಹಿತಿ ತಂತ್ರಜ್ಞಾನ, ಬಯೋಟೆಕ್ನಾಲಜಿ, ಬಯೋಕೆಮಿಸ್ಟ್ರಿ, ಗಣಿತಶಾಸ್ತ್ರ, ಗ್ರಂಥಾಲಯ ವಿಜ್ಞಾನ, ಮನೋವಿಜ್ಞಾನ, ಭೌತಶಾಸ್ತ್ರ, ಆಹಾರ ಮತ್ತು ಪೌಷ್ಠಿಕತೆ, ಸಾರ್ವಜನಿಕ ಆಡಳಿತ ಮತ್ತು ಶಿಕ್ಷಣಶಾಸ್ತ್ರದ ವಿಭಾಗಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ಅರ್ಹತೆಗಳೇನು?
ಯುಜಿಸಿ – 2018 ರ ಮಾರ್ಗಸೂಚಿ ಅನುಸಾರ ಅರ್ಹತೆ ಹೊಂದಿರಬೇಕು. ಜತೆಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವ ಅಧ್ಯಯನ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು ಎಂದು ತಿಳಿಸಲಾಗಿದೆ.
ಎನ್‌ಇಟಿ / ಕೆಸೆಟ್ / ಎಸ್ಎಲ್‌ಇಟಿ ಪರೀಕ್ಷೆಗಳಲ್ಲಿ ಅರ್ಹತೆ ಪಡೆದಿರುವವರಿಗೆ ಹಾಗೂ ಪಿಎಚ್.ಡಿ ಅರ್ಹತೆ ಪಡೆದಿರುವವರಿಗೆ ಮೊದಲ ಆದ್ಯತೆ ನೀಡುವುದಾಗಿಯೂ ಅಧಿಸೂಚನೆಯಲ್ಲಿ ಹೇಳಲಾಗಿದೆ.
ಇದನ್ನೂ ಓದಿ: JOB News : ಉದ್ಯೋಗ ಆಕಾಂಕ್ಷಿಗಳಿಗೆ GOOD NEWS, ಸದ್ಯವೇ ನಡೆಯಲಿದೆ 20000 ಪೊಲೀಸ್ ಹುದ್ದೆಗಳಿಗೆ ನೇಮಕಾತಿ
ಈ ಮೇಲಿನ ವಿಭಾಗಗಳಿಗೆ ಅತಿಥಿ ಉಪನ್ಯಾಸಕರನ್ನು ಗುತ್ತಿಗೆ ಆಧಾರದ ಮೇಲೆ (ತಾತ್ಕಾಲಿಕ) ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಹರು ನಿಗದಿತ ನಮೂನೆ ಅರ್ಜಿಯ ಐದು ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಇನ್ನು ಒಂದಕ್ಕಿಂತ ಹೆಚ್ಚು ವಿಷಯಗಳಿಗೆ ಅರ್ಜಿಗಳನ್ನು ಸಲ್ಲಿಸಬೇಕೆಂದಿದ್ದರೆ, ಪ್ರತಿ ವಿಷಯಕ್ಕೆ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ಇನ್ನು ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ತಿಳಿಸಿದೆ.
ಉದ್ಯೋಗಕ್ಕೆ ಸಂಬಂಧಪಟ್ಟ ಇನ್ನಷ್ಟು ಸುದ್ದಿಗಳನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ