Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ Vistara News
Connect with us

ಉದ್ಯೋಗ

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

ರಾಜ್ಯದಲ್ಲಿ ಒಟ್ಟಾರೆ 9, 837 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿದ್ದು, ಇದರಲ್ಲಿ 2007 ಹುದ್ದೆಗಳಿ ಖಾಲಿ ಇವೆ (Village Accountant Recruitment) ಎಂದು ಕಂದಾಯ ಸಚಿವ ಆರ್.‌ ಅಶೋಕ್‌ ವಿಧಾನಸಭೆಗೆ ತಿಳಿಸಿದ್ದಾರೆ.

VISTARANEWS.COM


on

Village Accountant Recruitment
Koo

ಬೆಂಗಳೂರು: ರಾಜ್ಯದಲ್ಲಿ ಒಟ್ಟಾರೆ 9, 837 ಗ್ರಾಮ ಲೆಕ್ಕಾಧಿಕಾರಿ (ಗ್ರಾಮ ಅಡಳಿತ ಅಧಿಕಾರಿ) ಹುದ್ದೆಗಳಿದ್ದು, ಇದರಲ್ಲಿ 2007 ಹುದ್ದೆಗಳಿ ಖಾಲಿ ಇವೆ (Village Accountant Recruitment) ಎಂದು ಕಂದಾಯ ಸಚಿವ ಆರ್.‌ ಅಶೋಕ್‌ ವಿಧಾನಸಭೆಗೆ ತಿಳಿಸಿದ್ದಾರೆ.

ಶ್ರವಣಬೆಳಗೊಳದ ಶಾಸಕ ಬಾಲಕೃಷ್ಣ ಸಿ. ಎನ್‌. ಕೇಳಿದ ಪ್ರಶ್ನೆಗೆ ಲಿಖಿತವಾಗಿ ಉತ್ತರ ನೀಡಿರುವ ಅವರು, ಖಾಲಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ತಿಳಿಸಿದ್ದಾರೆ.

ಹುದ್ದೆಗೆ ಪದವೀಧರರನ್ನು ನೇಮಕ ಮಾಡಿಕೊಳ್ಳಬೇಕೆಂಬ ಬೇಡಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಆರ್‌. ಅಶೋಕ್‌, ಸದ್ಯ ಪಿಯುಸಿ ವಿದ್ಯಾರ್ಹತೆಯನ್ನು ಈ ಹುದ್ದೆಗಳಿಗೆ ನಿಗದಿಪಡಿಸಲಾಗಿದೆ. ಪದವಿಯನ್ನು ಅರ್ಹತೆಯನ್ನಾಗಿ ಪರಿಗಣಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆ? ಇಲ್ಲಿ ನೋಡಿ!

ಸದ್ಯ ಗ್ರಾಮ ಲೆಕ್ಕಿಗರ ನೇಮಕಾತಿಯನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿ ನೇಮಕ ಮಾಡುತ್ತಿದೆ. ಇದರಲ್ಲಿ ಬದಲಾವಣೆ ತಂದು ರಾಜ್ಯಮಟ್ಟದಲ್ಲಿಯೇ, ಅಂದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇಮಕ ಮಾಡಬೇಕೆಂಬ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಇನ್ನೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕಳೆದ ಒಂದು ವರ್ಷದಿಂದಲೂ ಈ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂಬ ಉತ್ತರವನ್ನೇ ಸರ್ಕಾರ ನೀಡುತ್ತಾ ಬಂದಿದೆ.

ಇದನ್ನೂ ಓದಿ : BOI PO Recruitment 2023 : ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪಿಓ ಹುದ್ದೆ; ಎಂಜಿನಿಯರಿಂಗ್‌ ಪದವೀಧರರಿಗೂ ಅವಕಾಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಉದ್ಯೋಗ

Jobs News : ಉಪನ್ಯಾಸಕರ ಹಾಗೂ ಪ್ರೌಢ ಶಾಲಾ ಶಿಕ್ಷಕರ ನೇಮಕ; ವಯೋಮಿತಿ ಹೆಚ್ಚಿಸಿದ ಸರ್ಕಾರ

ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಖಾಸಗಿ ಅನುದಾನಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಹುದ್ದೆಗಳಿಗೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ (Jobs News). ಈ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

Edited by

lecturer in karnataka age limit increased
Koo

ಬೆಂಗಳೂರು: ರಾಜ್ಯದ ನೂತನ ಸರ್ಕಾರವು ಉಪನ್ಯಾಸಕ ಹಾಗೂ ಪ್ರೌಢ ಶಾಲಾ ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ (Jobs News) ನೀಡಿದೆ. ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಖಾಸಗಿ ಅನುದಾನಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 2 ವರ್ಷ ಹೆಚ್ಚಿಸಲಾಗಿದೆ.

ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಆದೇಶ ಹೊರಡಿಸಿದೆ. ʻʻಕೋವಿಡ್‌-19ರ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳ ಹಾಗೂ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರುಗಳ, ಖಾಸಗಿ/ಅನುದಾನಿತ ಪ್ರಾಥಮಿಕ/ ಪ್ರೌಢ ಶಾಲಾ ಶಿಕ್ಷಕರ ಹುದ್ದೆಗಳ ಮೊದಲ ನೇರ ನೇಮಕಾತಿಗೆ ಮಾತ್ರ ಅನ್ವಯವಾಗುವಂತೆ ದಿನಾಂಕ:23-06-2022 ರಿಂದ ಒಂದು ವರ್ಷದ ಅವಧಿಗೆ ಮಾತ್ರ ಗರಿಷ್ಠ ವಯೋಮಿತಿಯಲ್ಲಿ ಎರಡು ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆʼʼ ಎಂದು ಆದೇಶದಲ್ಲಿ ಹೇಳಲಾಗಿದೆ.

ಕೋವಿಡ್‌-19ರ ಸಾಂಕ್ರಾಮಿಕ ಖಾಯಿಲೆಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆರ್ಥಿಕ ಸಂಕಷ್ಟ ಸೃಷ್ಟಿಯಾಗಿದ್ದರಿಂದ ಯಾವುದೇ ಅನುದಾನ ರಹಿತ ವಿದ್ಯಾ ಸಂಸ್ಥೆಗಳನ್ನು, ಹಾಗೂ ಅನುದಾನಿತ ಸಂಸ್ಥೆಗಳಲ್ಲಿನ ಅನುದಾನರಹಿತ ಹುದ್ದೆಗಳನ್ನು ವೇತನಾನುದಾನಕ್ಕೆ ಒಳಪಡಿಸಲು ಆರ್ಥಿಕ ಮಿತವ್ಯಯದ ಕಾರಣ ಸಾಧ್ಯವಾಗಿರಲಿಲ್ಲ.

ಅಲ್ಲದೆ, 2020-21 ಮತ್ತು 2021-22ನೇ ಶೈಕ್ಷಣಿಕ ಸಾಲುಗಳಲ್ಲಿ ನೇಮಕಾತಿ ಪ್ರಕ್ರಿಯೆಗಳು ಸ್ಥಗಿತವಾಗಿದ್ದ ಕಾರಣ ಸಾವಿರಾರು ಅಭ್ಯರ್ಥಿಗಳು ವಯೋಮಿತಿ ಮೀರಿದ್ದರಿಂದಾಗಿ ಅವಕಾಶದಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಎಲ್ಲ ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವ ದೃಷ್ಟಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆ/ಪ್ರೌಢಶಾಲೆ/ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗಳಿಗೆ ಹಾಗೂ ಖಾಸಗಿ ಅನುದಾನಿತ ಪ್ರಾಥಮಿಕ/ಪ್ರೌಢ ಶಾಲಾ ಶಿಕ್ಷಕರ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಮಾತ್ರ ಗರಿಷ್ಠ ವಯೋಮಿತಿಯಲ್ಲಿ ಎರಡು ವರ್ಷಗಳ ಸಡಿಲಿಕೆಯನ್ನು ನೀಡುವ ತೀರ್ಮಾನವನ್ನು ಸರ್ಕಾರ ತೆಗೆದುಕೊಂಡಿದೆ.

ಮೊದಲ ನೇಮಕಾತಿಗೆ ಮಾತ್ರ ಈ ವಯೋಮಿತಿಯ ಸಡಿಲಿಕೆಯು ಅನ್ವಯವಾಗುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಇದುವರೆಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಆಗಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು ಎಂದು ವಯೋಮಿತಿ ನಿಗದಿಪಡಿಸಲಾಗಿತ್ತು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 43 ವರ್ಷ ಎಂದು ತಿಳಿಸಲಾಗಿತ್ತು. ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 45 ವರ್ಷ ಎಂದು ನಿಗದಿಪಡಿಸಲಾಗಿತ್ತು. ಈಗ ಗರಿಷ್ಠ ವಯೋಮಿತಿಯಲ್ಲಿ ಎರಡದು ವರ್ಷ ಸಡಿಲಿಕೆ ನೀಡಲಾಗಿದೆ.

ಇದನ್ನೂ ಓದಿ : KSP Recruitment : 3,484 ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನೇಮಕ; ಜುಲೈನಲ್ಲಿ ಪರೀಕ್ಷೆ

Continue Reading

ಉದ್ಯೋಗ

IDBI Recruitment 2023 : ಐಡಿಬಿಐ ಬ್ಯಾಂಕ್‌ನಲ್ಲಿ 1,036 ಎಕ್ಸಿಕ್ಯೂಟಿವ್‌ ಹುದ್ದೆ; ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ದೇಶದ ಪ್ರಮುಖ ಅಭಿವೃದ್ಧಿ ಬ್ಯಾಂಕುಗಳಲ್ಲಿ ಒಂದಾದ ಐಡಿಬಿಐ ಬ್ಯಾಂಕ್‌ ಎಕ್ಸಿಕ್ಯೂಟಿವ್‌ ಹುದ್ದೆಗಳ ನೇಮಕಕ್ಕೆ ಆನ್‌ಲೈನ್‌ನಲ್ಲಿ (IDBI Recruitment 2023) ಅರ್ಜಿ ಆಹ್ವಾನಿಸಿದೆ. ಈ ನೇಮಕದ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

Edited by

IDBI Recruitment 2023
Koo

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಮತ್ತು ಭಾರತ ಸರ್ಕಾರದ ಒಡೆತನಕ್ಕೆ ಸೇರಿದ, ದೇಶದ ಪ್ರಮುಖ ಅಭಿವೃದ್ಧಿಗೆ ಮೀಸಲಾದ ವಿತ್ತೀಯ ಸಂಸ್ಥೆಗಳಲ್ಲಿ (ಬ್ಯಾಂಕ್‌ಗಳಲ್ಲಿ) ಒಂದಾದ ಐಡಿಬಿಐ ಬ್ಯಾಂಕ್‌ ಗುತ್ತಿಗೆ ಆಧಾರದ ಮೇಲೆ ಎಕ್ಸಿಕ್ಯೂಟಿವ್‌ಗಳ ನೇಮಕಕ್ಕೆ (IDBI Recruitment 2023) ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ನಾಳೆ (ಜೂನ್‌ 07) ಕೊನೆಯ ದಿನವಾಗಿರುತ್ತದೆ.

ಒಟ್ಟು 1,036 ಎಕ್ಸಿಕ್ಯೂಟಿವ್‌ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಹುದ್ದೆಗಳಲ್ಲಿ ಎಸ್‌ಸಿ ಅಭ್ಯರ್ಥಿಗಳಿಗೆ 160, ಎಸ್‌ಟಿ ಅಭ್ಯರ್ಥಿಗಳಿಗೆ 67 ಒಬಿಸಿ ಅಭ್ಯರ್ಥಿಗಳಿಗೆ 255, ಇಡಬ್ಲ್ಯುಎಸ್‌ ಅಭ್ಯರ್ಥಿಗಳಿಗೆ 103 ಹುದ್ದೆಗಳನ್ನು ಹಾಗೂ ಉಳಿದ 451 ಹುದ್ದೆಗಳನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಶುಲ್ಕ ನಿಗದಿಪಡಿಸಲಾಗಿಲ್ಲ.

ಅರ್ಜಿ ಸಲ್ಲಿಸಲು ಇಲ್ಲಿ (Click Here) ಕ್ಲಿಕ್‌ ಮಾಡಿ.

ವಿದ್ಯಾರ್ಹತೆ ಏನು?

ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಡಿಪ್ಲೊಮಾ ಮಾಡಿದವರನ್ನು ಈ ಹುದ್ದೆಗಳಿಗೆ ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿ ಕಾರ್ಯನಿರ್ವಹಿಸುವ ಜ್ಞಾನ ಹೊಂದಿರಬೇಕಾದದು ಕಡ್ಡಾಯ.

ವಯೋಮಿತಿ ಎಷ್ಟು?

ಅಭ್ಯರ್ಥಿಯ ಕನಿಷ್ಠ ವಯಸ್ಸು 20 ವರ್ಷ. ಗರಿಷ್ಠ ವಯೋಮಿತಿ 25 ವರ್ಷ. ವಯೋಮಿತಿಯನ್ನು ಮೇ 1, 2023ಕಕ್ಕೆ ಲೆಕ್ಕಹಾಕಲಾಗುತ್ತದೆ. ಎಸ್‌ಸಿ, ಎಸ್‌ಟಿ, ಓಬಿಸಿ, ಮಾಜಿ ಸೈನಿಕ, ವಿಕಲಚೇತನ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-06-2023
ಆನ್‌ಲೈನ್‌ನ ಪರೀಕ್ಷೆಯ ದಿನಾಂಕ : ಜುಲೈ 2, 2023
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ:
https://www.idbibank.in/

ವೇತನ ಎಷ್ಟಿರುತ್ತದೆ?

ಐಡಿಬಿಐ ಬ್ಯಾಂಕ್‌ನಲ್ಲಿನ ಎಕ್ಸಿಕ್ಯೂಟಿವ್‌ ಹುದ್ದೆಗಳನ್ನು ಮೂರು ವರ್ಷಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮೊದಲ ವರ್ಷ ಮಾಸಿಕ ರೂ.29,000 ವೇತನ ನೀಡಲಾಗುತ್ತದೆ. ಎರಡನೇ ವರ್ಷ ಮಾಸಿಕ 31,000ರೂ. ವೇತನ ನೀಡಿದರೆ ಮೂರನೇ ವರ್ಷ ಮಾಸಿ ರೂ.34,000 ವೇತನ ನೀಡಲಾಗುತ್ತದೆ.

ಮೂರು ವರ್ಷ ಪೂರ್ಣಗೊಳಿಸಿದವರು ಗ್ರೇಡ್‌ ʻಎʼಯ ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗಳ ನೇಮಕಕ್ಕೆ ನಡೆಸಲಾಗುವ ನೇಮಕ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ. ಈ ಹುದ್ದೆಯ ಮಾಸಿಕ ಬೇಸಿಕ್‌ ವೇತನವು 36,000ಸಾವಿರ ರೂ.ಗಳಾಗಿರುತ್ತವೆ. ವೇತನ ಶ್ರೇಣಿ ಇಂತಿದೆ: 36,000-1,490(7)-46,430-1,740(2)–49,910–1,990(7)-63,840(17years)

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ನೇಮಕ ಹೇಗೆ?

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಆನ್‌ಲೈನ್‌ ಟೆಸ್ಟ್‌ (OT) ನಡೆಸಲಾಗುತ್ತದೆ. ಜುಲೈನಲ್ಲಿ ಈ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ಈ ಪರೀಕ್ಷೆ ನಡೆಸಲಾಗುತ್ತಿದ್ದು, ಋಣಾತ್ಮಕ ಮೌಲ್ಯಮಾಪನವಿರುತ್ತದೆ. ಅಂದರೆ ತಪ್ಪು ಉತ್ತರಗಳಿಗೆ 0.25 ಅಂಕಗಳನ್ನು ಕಳೆಯಲಾಗುತ್ತದೆ.

ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, 200 ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪರೀಕ್ಷೆ ಬರೆಯಲು 2 ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಪರೀಕ್ಷೆಯು ನಾಲ್ಕು ವಿಷಯಗಳನ್ನು ಒಳಗೊಂಡಿದ್ದು (1.Logical Reasoning, Data Analysis & Interpretation, 2. English Language, 3.Quantitative Aptitude, 4. General/Economy/ Banking Awareness/ Computer/IT), ಪ್ರತಿ ವಿಷಯದಲ್ಲಿಯೂ ಅಭ್ಯರ್ಥಿಯು ಅರ್ಹತಾ ಅಂಕ ಪಡೆದಿರಬೇಕಾಗುತ್ತದೆ.

ಆಲ್‌ಲೈನ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಸಿ, ವೈದ್ಯಕೀಯ ಪರೀಕ್ಷೆಗೊಳಪಡಿಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ನೇಮಕಾತಿಯ ಸಂಪೂರ್ಣ ಮಾಹಿತಿಗೆ ಅಧಿಸೂಚನೆ (Click Here) ನೋಡಿ

ರಾಜ್ಯದಲ್ಲಿ ಎಲ್ಲೆಲ್ಲಿ ಪರೀಕ್ಷೆ?

ಎಕ್ಸಿಕ್ಯೂಟಿವ್‌ ಹುದ್ದೆಗಾಗಿ ನಡೆಸಲಾಗುವ ಆನ್‌ಲೈನ್‌ ಟೆಸ್ಟ್‌ ಅನ್ನು ರಾಜ್ಯದ ಬೆಂಗಳೂರು, ಬೆಳಗಾವಿ ಬೀದರ್‌, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ನಡೆಸಲಾಗುತ್ತದೆ.

ಇದನ್ನೂ ಓದಿ : DRDO Recruitment 2023 : ಎಂಜಿನಿಯರಿಂಗ್‌ ಮುಗಿಯಿತಾ? ಡಿಆರ್‌ಡಿಒನಲ್ಲಿ ಸೈಂಟಿಸ್ಟ್‌ ಆಗಿ!

Continue Reading

ಉದ್ಯೋಗ

Teacher Recruitment : 15 ಸಾವಿರ ಶಿಕ್ಷಕರ ನೇಮಕ; ಬಾಕಿ ಇರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಸೂಚನೆ

ಶಿಕ್ಷಣ ಇಲಾಖೆಯು 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಕ್ಕೆ (Teacher Recruitment) ಸಂಬಂಧಿಸಿದಂತೆ ಬಾಕಿ ಇರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಸೂಚನೆ ನೀಡಿದೆ. ಇದರಿಂದ ಈ ನೇಮಕ ಪ್ರಕ್ರಿಯೆಗೆ ಮತ್ತೆ ಚಾಲನೆ ದೊರೆತಂತಾಗಿದೆ.

VISTARANEWS.COM


on

Edited by

school teacher
Koo

ಬೆಂಗಳೂರು: ಈಗಾಗಲೇ ಅಂತಿಮ ಹಂತಕ್ಕೆ ಬಂದಿರುವ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8 ನೇ ತರಗತಿ) ನೇಮಕಕ್ಕೆ (Teacher Recruitment 2022) ಶಾಲಾ ಶಿಕ್ಷಣ ಇಲಾಖೆಯು ಮತ್ತೆ ಚಾಲನೆ ನೀಡಿದೆ. ಬಾಕಿ ಇರುವ ಅಭ್ಯರ್ಥಿಗಳ ಮೂಲ ದಾಖಲೆಗಳ ನೈಜತ್ವ ಪರಿಶೀಲನೆಗೆ ಆದೇಶ ಹೊರಡಿಸಿದೆ.

teacher recruitment
ಇಲಾಖೆಯ ಆದೇಶ

ಕಳೆದ ಮಾರ್ಚ್‌ನಲ್ಲಿ ಈ ನೇಮಕಕ್ಕೆ ಸಂಬಂಧಿಸಿದಂತೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಈ ಹಿಂದೆಯೇ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಚಾಲನೆ ನೀಡಲಾಗಿತ್ತಾದರೂ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್‌, ಬಳ್ಳಾರಿ, ವಿಜಯನಗರ, ರಾಯಚೂರು, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳ ಅಭ್ಯರ್ಥಿಗಳ ಮತ್ತು ಬೆಂಗಳೂರು ಮಹಾನಗರ ವ್ಯಾಪ್ತಿಯ ಬೆಂಗಳೂರುನ ದಕ್ಷಿಣ ಮತ್ತು ಬೆಂಗಳೂರು ಉತ್ತರ ಜಿಲ್ಲೆಗಳ ಅಭ್ಯರ್ಥಿಗಳ ಮೂಲ ದಾಖಲೆಗಳ ನೈಜತ್ವ ಪರಿಶೀಲನೆ ನಡೆಸಲಾಗಿರಲಿಲ್ಲ.

ಈಗ ಹೈಕೋರ್ಟ್‌ ಈ ನೇಮಕಾತಿಗೆ ಸಂಬಂಧಿಸಿದ ಅರ್ಜಿಯನ್ನು ಇತ್ಯರ್ಥಪಡಿಸಿರುವುದರಿಂದ ಮೂಲ ದಾಖಲೆಗಳ ಪರಿಶೀಲನೆಗೆ ಇಲಾಖೆಯು ಆಯುಕ್ತರು ಸೂಚನೆ ನೀಡಿದ್ದಾರೆ. ಅಭ್ಯರ್ಥಿಗಳ ವೈದ್ಯಕೀಯ ಪ್ರಮಾಣ ಪತ್ರ, ಪೊಲೀಸ್‌ ಪರಿಶೀಲನಾ ಪ್ರಮಾಣ ಪತ್ರ, ಸಿಂಧುತ್ವ ಪ್ರಮಾಣ ಪತ್ರ, ಗ್ರಾಮೀಣ ಪ್ರಮಾಣ ಪತ್ ಸೇರಿದಂತೆ ಒಟ್ಟು ಹತ್ತು ಪ್ರಮಾಣ ಪತ್ರಗಳ ನೈಜತ್ವವನ್ನು ಪರಿಶೀಲನೆ ಮಾಡಲಾಗುತ್ತದೆ.

ಉಳಿದ ಜಿಲ್ಲೆಗಳ ಆಯ್ಕೆಯಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಸಂಪೂರ್ಣಗೊಂಡಿದ್ದು, ಈಗ ಕೌನ್ಸಿಲಿಂಗ್‌ ನಡೆಸಿ, ನೇಮಕಾತಿ ಆದೇಶ ನೀಡಬೇಕಾಗಿದೆ. ಆದಷ್ಟು ಬೇಕ ನೇಮಕಾತಿ ಆದೇಶ ನೀಡಬೇಕೆಂದು ಆಯ್ಕೆಯಾಗಿರುವ ಅಭ್ಯರ್ಥಿಗಳು ಒತ್ತಾಯಿಸುತ್ತಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಈ ನೇಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ʻವಿಸ್ತಾರ ನ್ಯೂಸ್‌ʼ ಗೆ ತಿಳಿಸಿದ್ದಾರೆ.

ದಾಖಲೆ ಪರಿಶೀಲನೆಗೆ ಹಾಜರಾಗುವ ಅಭ್ಯರ್ಥಿಗಳು ಈ ಕೆಳಗಿನ ಮೂಲ ದಾಖಲೆಗಳನ್ನು ಪರಿಶೀಲನೆಗೆ ಹಾಜರು ಪಡಿಸಬೇಕಿರುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ದಾಖಲೆಗಳ ವಿವರ ಇಂತಿದೆ;
1. ಆನ್‌ಲೈನ್‌ ಅರ್ಜಿಯ ಮುದ್ರಿತ ಪ್ರತಿ
2. ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
3. ಪಿಯುಸಿ ಅಂಕಪಟ್ಟಿ
4. ಪದವಿಯ ಮೂರು ವರ್ಷದ (ಆರು ಸೆಮಿಸ್ಟರ್‌ಗಳ) ಅಂಕಪಟ್ಟಿಗಳು
5. ಪದವಿ ತೇರ್ಗಡೆ ಹೊಂದಿದ ಪ್ರಮಾಣ ಪತ್ರ (ಡಿಗ್ರಿ ಕಾನ್ವಕೇಷನ್‌ ಸರ್ಟಿಫಿಕೇಟ್‌)
6. ಬಿ.ಎ.ಇಡಿ. ಹಾಗೂ ಬಿ.ಎಸ್ಸಿ. ಇಡಿ ಪದವಿಯ ನಾಲ್ಕು ವರ್ಷದ ಅಂಕಪಟ್ಟಿಗಳು.
7. ಬಿ.ಎ.ಇಡಿ ಹಾಗೂ ಬಿ.ಎಸ್ಸಿ.ಇಡಿ ಪದವಿ ತೇರ್ಗಡೆ ಹೊಂದಿದ ಪ್ರಮಾಣ ಪತ್ರ.
8. ಬಿ.ಇಡಿ. ಪದವಿಯ ಅಂಕಪಟ್ಟಿ.
9. ಬಿ.ಇಡಿ ಪದವಿ ತೇರ್ಗಡೆ ಹೊಂದಿದ ಪ್ರಮಾಣ ಪತ್ರ.
11. ಡಿ.ಇಡಿ./ಡಿ.ಎಲ್‌.ಇಡಿ ಕೋರ್ಸಿನ ಎರಡು ವರ್ಷಗಳ ಅಂಕಪಟ್ಟಿ
12. ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಅರ್ಹತಾ ಪ್ರಮಾಣ ಪತ್ರ.
13. ಅಭ್ಯರ್ಥಿಯ ಆಧಾರ್‌ ಕಾರ್ಡ್‌
14. ಮೀಸಲಾತಿ ಕೋರಿರುವ ಪ್ರವರ್ಗದ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಮತ್ತು ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರ (ಆರ್‌ಡಿ ನಂಬರ್‌ ಹೊಂದಿರಬೇಕು) (ಎಸ್‌ಸಿ/ಎಸ್‌ಟಿ, ಸಿಎಟಿ-1 2ಎ, 2ಬಿ ಮತ್ತು 3ಎ 3ಬಿ)
15. ಹೈ.ಕ. ಮೀಸಲಾತಿಗೆ, ಸಕ್ಷಮ ಪ್ರಾಧಿಕಾರದಿಂದ ಪಡೆದ 317ಜೆ ಪ್ರಮಾಣ ಪತ್ರ (ಆರ್‌ಡಿ ನಂಬರ್‌ ಹೊಂದಿರಬೇಕು)
16. ಸಾಮಾನ್ಯ ವರ್ಗದ ಗ್ರಾಮೀಣ ಅಭ್ಯರ್ಥಿಗಳಗಿಎ ನಾನ್‌ ಕ್ರೀಮಿ ಲೇಯರ್‌ ಸರ್ಟಿಫಿಕೇಟ್‌ (non creamy layer certificate) (ಆರ್‌ಡಿ ನಂಬರ್‌ ಹೊಂದಿರಬೇಕು).
17. ಮಾಜಿ ಸೈನಿಕ ಮೀಸಲಾತಿಗೆ ಕಾಋಯನಿರ್ವಹಿಸಿರುವ/ಅವಲಂಬಿತರ ಪ್ರಮಾಣ ಪತ್ರ.
18. ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ಸಕ್ಷಮ ಪ್ರಾಧಿಕಾರದಿಂದ ನೀಡಿದ ಪ್ರಮಾಣ ಪತ್ರ.
19. ಗ್ರಾಮೀಣ ಅಭ್ಯರ್ಥಿ ವ್ಯಾಸಂಗ ಪ್ರಮಾಣ ಪತ್ರ ಹಾಗೂ ಸಿಂಧುತ್ವ ಪ್ರಮಾಣ ಪತ್ರಗಳು (ನಿಗದಿತ ನಮೂನೆಯಲ್ಲಿರಬೇಕು).
20. ಅಂಗವಿಕಲ ಅಭ್ಯರ್ಥಿಗಳು ಪ್ರಮಾಣ ಪತ್ರ.
21. ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ.
22. ಯೋಜನಾ ನಿರಾಶ್ರಿತ ಅಭ್ಯರ್ಥಿಗಳಿಗೆ ಸಕ್ಷಮ ಪ್ರಾಧಿಕಾರದಿಂದ ನೀಡಿದ ಪ್ರಮಾಣ ಪತ್ರ.
23. ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರು ಸೇವಾವಿವರಗಳಿಗೆ ಸಂಬಂಧಸಿದಂತೆ ನೇಮಕಾತಿ ಪ್ರಾಧಿಕಾರದಿಂದ ಪಡೆದುಕೊಂಡಿರುವ ಅನುಮತಿ ಪತ್ರದ ಪ್ರತಿ.
24. ಅರ್ಜಿಯನ್ನು ಭರ್ತಿ ಮಾಡುವಾಗ ತಿಳಿಸಿದ ಅವಶ್ಯವೆಂದು ಭಾವಿಸಿದ ಇನ್ನಿತರ ದಾಖಲೆಗಳು ಪ್ರತಿಗಳು

ಗಮನಿಸಿ: ಈ ಎಲ್ಲ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಎಂದರೆ 23-04-2022ದ ಒಳಗೆ ಪಡೆದಿರಬೇಕು.

ಹೆಚ್ಚಿನ ಮಾಹಿತಿಗೆ ಭೇಟಿ ನೀಡಬೇಕಾದ ವೆಬ್‌ಸೈಟ್‌ ವಿಳಾಸ: https://www.schooleducation.kar.nic.in

ಇದನ್ನೂ ಓದಿ: Teacher Recruitment 2023 : 33 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಒಪ್ಪಿಗೆ; ಎಲ್ಲ ಜಿಲ್ಲೆಗಳಲ್ಲಿಯೂ ಖಾಲಿ ಇವೆ ಹುದ್ದೆ

Continue Reading

ಉದ್ಯೋಗ

UPSC NDA NA Exam : ಸೇನಾಧಿಕಾರಿ ಹುದ್ದೆಗೆ ಎನ್‌ಡಿಎ-ಎನ್‌ಎ ಪರೀಕ್ಷೆ; ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಭಾರತೀಯ ಸೇನೆಯ ಅಕಾಡೆಮಿಗಳಲ್ಲಿ ತರಬೇತಿ ಪಡೆಯುವ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೇಂದ್ರ ಲೋಕ ಸೇವಾ ಆಯೋಗ ಎನ್‌ಡಿಎ-ಎನ್‌ಎ ಪರೀಕ್ಷೆ ನಡೆಸುತ್ತಿದ್ದು (UPSC NDA & NA Exam), ಇದಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

VISTARANEWS.COM


on

Edited by

UPSC NDA NA Exam
Koo

ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಮುಂದಿನ 2023ರ ಸೆಪ್ಟೆಂಬರ್‌ನಲ್ಲಿ ನಡೆಸಲಿರುವ ನ್ಯಾಷನಲ್ ಡಿಫೆನ್ಸ್‌ ಅಕಾಡೆಮಿ ಮತ್ತು ನೇವಲ್‌ ಅಕಾಡೆಮಿ ಪರೀಕ್ಷೆಗೆ (ಎನ್‌ಡಿಎ-ಎನ್‌ಎ) (UPSC NDA NA Exam) ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ಸೇನೆಯಲ್ಲಿ ಅಧಿಕಾರಿಯಾಗಬಯಸುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಇಂದು ಸಂಜೆ 6 ಗಂಟೆಯ ಒಳಗೆ (ಜೂನ್‌ 06) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿಂದೆ ಪುರಷ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿತ್ತು. ಈಗ ಅವಿವಾಹಿತ ಮಹಿಳಾ ಅಭ್ಯರ್ಥಿಗಳು ಕೂಡ ರಕ್ಷಣಾ ಅಕಾಡೆಮಿಯಲ್ಲಿ ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಸೆಪ್ಟೆಂಬರ್‌ 03 ರಂದು ಪರೀಕ್ಷೆ

ಯುಪಿಎಸ್‌ಸಿಯು ಅಭ್ಯರ್ಥಿಗಳ ಆಯ್ಕೆಗೆ ಇದೇ ಸೆಪ್ಟೆಂಬರ್‌ 03 ರಂದು ಲಿಖಿತ ಪರೀಕ್ಷೆ ನಡೆಸಲಿದೆ. ರಾಜ್ಯದ ಅಭ್ಯರ್ಥಿಗಳಿಗೆ ಬೆಂಗಳೂರು, ಮೈಸೂರು ಮತ್ತು ಧಾರವಾಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ತರಬೇತಿಗೆ 395 ಅಭ್ಯರ್ಥಿಗಳನ್ನು ಈ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಇವರಲ್ಲಿ ಭೂಸೇನೆಗೆ-208 (10 ಮಹಿಳೆಯರು), ನೌಕಾಪಡೆಗೆ-42 (ಮೂವರು ಮಹಿಳೆಯರು) ಮತ್ತು ವಾಯುಪಡೆಯ ಫ್ಲೈಯಿಂಗ್‌ ವಿಭಾಗಕ್ಕೆ 92 ಮತ್ತು ಗ್ರೌಂಡ್‌ ಡ್ಯೂಟಿ ವಿಭಾಗಕ್ಕೆ 28 ಮತ್ತು ನೇವಲ್ ಅಕಾಡೆಮಿಗೆ 25 ಅಭ್ಯರ್ಥಿಗಳನ್ನು (7 ಮಂದಿ ಮಹಿಳೆಯರು) ಆಯ್ಕೆ ಮಾಡಿ ತರಬೇತಿಗೆ ಕಳುಹಿಸಲಾಗುತ್ತದೆ. ಈ ಅಕಾಡೆಮಿಗಳಲ್ಲಿ ಯಶಸ್ವಿಯಾಗಿ ತರಬೇತಿ ಪಡೆಯುವ ಅಭ್ಯರ್ಥಿಗಳನ್ನು ಸೇನೆಯು ಅಧಿಕಾರಿ ಹುದ್ದೆಗೆ ನೇಮಕ ಮಾಡಿಕೊಳ್ಳುತ್ತದೆ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:  ಜೂನ್‌ 06, 2023 (6:00 PM)
ಅರ್ಜಿಯಲ್ಲಿ ಬದಲಾವಣೆಗಳನ್ನು ಮಾಡಲು ಅವಕಾಶ: 07-06-2023 ರಿಂದ 13-06-2023
ಪರೀಕ್ಷೆ ನಡೆಯುವ ದಿನಾಂಕ:  03-09-2023
ಸಹಾಯವಾಣಿ ಸಂಖ್ಯೆ: 011-23385271 / 23381125 / 23098543
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಯಾರು ಅರ್ಜಿ ಸಲ್ಲಿಸಬಹುದು?

ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ಅವಿವಾಹಿತ ಯುವಕರು ಮತ್ತು ಯುವತಿಯರು ಈ ಪರೀಕ್ಷೆ ಬರೆಯಬಹುದಾಗಿದೆ. ಈ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿ ಗಳೂ ಅರ್ಜಿಸಲ್ಲಿಸಬಹುದು.

ನೌಕಾ ಪಡೆ ಮತ್ತು ವಾಯುಪಡೆಗೆ ಸೇರಬೇಕೆಂದು ಇಚ್ಛಿಸಿದ್ದಲ್ಲಿ ದ್ವಿತೀಯ ಪಿಯುಸಿಯಲ್ಲಿ  ಗಣಿತ ಮತ್ತು ಭೌತಶಾಸ್ತ್ರ ವಿಷಯವನ್ನು ಕಡ್ಡಾಯವಾಗಿ ಕಲಿತಿರಬೇಕು. ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳು 2005ರ ಜನವರಿ 2 ರಿಂದ 2008ರ ಜನವರಿ 1ರ ನಡುವೆ ಜನಿಸಿರಬೇಕು.

ಅರ್ಜಿ ಶುಲ್ಕ ಎಷ್ಟು?

ಎಸ್‌ಸಿ/ಎಸ್‌ಟಿ ಮತ್ತು ಸೇನೆಯ ಅಧಿಕಾರಿಗಳ (ಜೆಸಿಎ/ಎನ್‌ಸಿಎ ಒಆರ್) ಪುತ್ರರಿಗೆ ಸಂಪೂರ್ಣ ಶುಲ್ಕ ವಿನಾಯ್ತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳು 100 ರೂ. ಶುಲ್ಕ ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಯಾವುದೇ ಎಸ್‌ಬಿಐ ಶಾಖೆಯಲ್ಲಿ ಶುಲ್ಕ ಪಾವತಿಸಬಹುದಾಗಿದೆ ಅಥವಾ ವೀಸಾ ಕಾರ್ಡ್/ಮಾಸ್ಟರ್ ಕಾರ್ಡ್‌ ಪೇ ಕಾರ್ಡ್/ಡೆಬಿಟ್ ಕಾರ್ಡ್‌ಗಳ ಮೂಲಕ ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಅಭ್ಯರ್ಥಿಗಳ ಆಯ್ಕೆ ಹೇಗೆ?

ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಅಥವಾ  ನೇವಲ್ ಅಕಾಡೆಮಿಗೆ ಆಯ್ಕೆಯಾಗಲು ಅಭ್ಯರ್ಥಿಯು ಮೂರು ಹಂತಗಳ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪ್ರವೇಶ ಪರೀಕ್ಷೆ ಮೊದಲನೇ ಹಂತ. ಇದರಲ್ಲಿ ಯಶಸ್ವಿಯಾದ ಅಭ್ಯರ್ಥಿಗಳು ಎಸ್‌ಎಸ್‌ಬಿ ನಡೆಸುವ ಬೌದ್ಧಿಕ ಹಾಗೂ ವ್ಯಕ್ತಿತ್ವ ಪರೀಕ್ಷೆಗೆ ಹಾಜರಾಗಬೇಕು. ಅಧಿಕಾರಿಗೆ ಇರಬೇಕಾದ ಅರ್ಹತೆಗಳನ್ನು ಈ ವ್ಯಕ್ತಿತ್ವ ಪರೀಕ್ಷೆಯ ಸಂದರ್ಭದಲ್ಲಿ ಒರೆಗೆ ಹಚ್ಚಿ ನೋಡಲಾಗುತ್ತದೆ. 

ಈ ಎರಡನೇ ಹಂತ ದಾಟಿದ ಅಭ್ಯರ್ಥಿಗಳು ಎಸ್‌ಎಸ್‌ಬಿ ನಡೆಸುವ ದೈಹಿಕ ಸಾಮರ್ಥ್ಯ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ಪರೀಕ್ಷೆಗೆ ಹಾಜರಾಗಬೇಕು. ಈ ಮೂರೂ ಹಂತಗಳಲ್ಲಿ ಯಶಸ್ವಿಯಾದ ಅಭ್ಯರ್ಥಿಗಳಿಗೆ ಅವರವರ ಆಯ್ಕೆಯ ಕೋರ್ಸ್‌ಗಳಿಗೆ ಸೀಟು ಲಭ್ಯತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : India Post GDS Recruitment 2023 : ಅಂಚೆ ಇಲಾಖೆಯಲ್ಲಿ 12,828 ಹುದ್ದೆ; ಎಸ್ಸೆಸ್ಸೆಲ್ಸಿ ಓದಿದವರಿಗೆ ಅವಕಾಶ

Continue Reading
Advertisement
Marnus Labuschagne
ಕ್ರಿಕೆಟ್4 mins ago

WTC Final 2023 : ಶಮಿ ಎಸೆತಕ್ಕೆ ಮರ್ನಸ್​ ಲಾಬುಶೇನ್​ ಬೌಲ್ಡ್​ ಆದ ರೀತಿ ಹೀಗಿದೆ

wrestlers protest
ಕ್ರೀಡೆ48 mins ago

Wrestlers Protest: ಜೂನ್​ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

abhishek ambareesh wedding Reception
ಕರ್ನಾಟಕ49 mins ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

KS Bharat
ಕ್ರಿಕೆಟ್50 mins ago

WTC Final 2023 : ವಿಕೆಟ್​ ಕೀಪರ್​ ಕೆಎಸ್​ ಭರತ್​​ ಹಿಡಿದ ರೋಮಾಂಚಕಾರಿ ಕ್ಯಾಚ್​ ಹೀಗಿತ್ತು

for tenants also to wrestlers protest and more news
ಕರ್ನಾಟಕ54 mins ago

ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು

Anita Madhu Bangarappa was felicitated by Block Mahila Congress at soraba
ಕರ್ನಾಟಕ1 hour ago

Shivamogga News: ಸೊರಬ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದ ಅನಿತಾ ಮಧು ಬಂಗಾರಪ್ಪ

MLA TB Jayachandra visited Shira Public Hospital
ಕರ್ನಾಟಕ1 hour ago

Tumkur News: ಶಿರಾ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಟಿ.ಬಿ. ಜಯಚಂದ್ರ ಭೇಟಿ, ಪರಿಶೀಲನೆ

Farooq Abdullah meets HD Devegowda
ಕರ್ನಾಟಕ1 hour ago

Farooq Abdullah: ಮಾಜಿ ಪಿಎಂ ದೇವೇಗೌಡ, ಸಿಎಂ ಸಿದ್ದರಾಮಯ್ಯ ಜತೆ ಫಾರೂಕ್‌ ಅಬ್ದುಲ್ಲಾ ʼಲೋಕಾʼಭಿರಾಮ!

Good Train Accident
ದೇಶ1 hour ago

Odisha Train Accident : ಅಯ್ಯೊ ದುರ್ವಿಧಿ, ಟ್ರೈನ್ ಕೆಳಗೆ ಮಲಗಿದ್ದವರು ಅಲ್ಲೇ ಅಪ್ಪಚ್ಚಿ!

BJP lose in karnataka
ಕರ್ನಾಟಕ1 hour ago

BJP Karnataka: ಸೋತು 25 ದಿನದ ನಂತರ ಅವಲೋಕನ ನಡೆಸಲಿದೆ ಬಿಜೆಪಿ!: ಗೆದ್ದ-ಸೋತವರ ಸಭೆ ಗುರುವಾರ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ16 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

abhishek ambareesh wedding Reception
ಕರ್ನಾಟಕ49 mins ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ8 hours ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ16 hours ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

Salman Khan Bigg Boss ott 2
South Cinema1 day ago

Big Boss OTT 2: ಜೂನ್ 17ಕ್ಕೆ ಬಿಗ್‌ಬಾಸ್ ಒಟಿಟಿ 2 ಪ್ರಸಾರ, ಇಲ್ಲೂ ನಿರೂಪಕ ಸಲ್ಲೂ!

dining table vastu tips
ಭವಿಷ್ಯ1 day ago

Vastu Tips : ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

pineapple cultivation
ಕೃಷಿ1 day ago

Krishi Khajane : ಆರೋಗ್ಯಕರ ಅನಾನಸ್‌ ಬೆಳೆಯುವುದು ಕಷ್ಟವೇನಲ್ಲ!

health and horoscope horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಇರಲಿ ಎಚ್ಚರ!

Chakravarthy Sulibele and MB Patil
ಕರ್ನಾಟಕ2 days ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ2 days ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ3 days ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

ಟ್ರೆಂಡಿಂಗ್‌

error: Content is protected !!