Site icon Vistara News

Karnataka Budget 2024: ಗಣಕೀಕರಣ, ಡ್ರೋನ್‌ ಸರ್ವೇ; ಕಂದಾಯ ಇಲಾಖೆಗೆ ಏನೆಲ್ಲ ಸಂದಾಯ?

CM Siddaramaiah

Funds Allocation To Revenue Department In Karnataka Budget 2024

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಮಹತ್ವದ ಬದಲಾವಣೆ ತರುವ ದಿಸೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬಜೆಟ್‌ (Karnataka Budget 2024) ಮಂಡನೆ ವೇಳೆ ಪ್ರಮುಖ ಘೋಷಣೆ ಮಾಡಿದ್ದಾರೆ. ದಾಖಲೆಗಳ ಡಿಜಿಟಲೀಕರಣ. ಡ್ರೋನ್‌ಗಳ ಮೂಲಕ ಭೂ ಸರ್ವೇ, ದಾಖಲೆಗಳಿಗೆ ಸ್ವಯಂಚಾಲಿತ ಅನುಮೋದನೆ ಸೇರಿ ಹಲವು ಪ್ರಮುಖ ಘೋಷಣೆಗಳ ಮೂಲಕ ಗಮನ ಸೆಳೆದಿದ್ದಾರೆ.

“ಕಂದಾಯ ಇಲಾಖೆಯ ಭೂಮಿ, ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಗಣಕೀಕರಣಗೊಳಿಸಿ, ಶಿಥಿಲಾವಸ್ಥೆಯಲ್ಲಿರುವ ದಾಖಲೆಗಳನ್ನು ಶಾಶ್ವತವಾಗಿ ಉಳಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಅವಕಾಶವಿರದಂತೆ ಗಣಕೀಕೃತ ದಾಖಲೆಗಳನ್ನು ನಾಗರಿಕರು, ಸ್ವತಃ ಆನ್‌ನೈಲ್‌ನಲ್ಲಿ ಪಡೆದುಕೊಳ್ಳಲು ಅನುವಾಗುವಂತೆ ಭೂ ಸುರಕ್ಷಾ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗುವುದು” ಎಂದು ಹೇಳಿದರು.

“ಆಕಾರ್‌ಬಂದ್‌ ಮತ್ತು ಆರ್.ಟಿ.ಸಿಯಲ್ಲಿನ ವಿಸ್ತೀರ್ಣವನ್ನು ಹೊಂದಾಣಿಕೆ ಮಾಡುವ ಮೂಲಕ ಹಿಡುವಳಿದಾರರಿಗೆ ತ್ವರಿತ ಸೇವೆ ಒದಗಿಸಲು ಆಕಾರ್‌ಬಂದ್‌ಗಳ ಗಣಕೀಕರಣ ಕಾರ್ಯವನ್ನು ಕೈಗೊಳ್ಳಲಾಗುವುದು. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಬಹು ಮಾಲೀಕತ್ವವುಳ್ಳ ಪಹಣಿಗಳನ್ನು ಅಳತೆಗೆ ಒಳಪಡಿಸುವ ಮೂಲಕ ಪ್ರತಿ ಹಿಡುವಳಿದಾರರಿಗೆ ಪೋಡಿ ಮಾಡಿ ಪ್ರತ್ಯೇಕ ಆರ್.ಟಿ.ಸಿ.ಯನ್ನು ವಿತರಿಸುವ ಅಭಿಯಾನವನ್ನು ಪ್ರಾರಂಭಿಸಲಾಗಿತ್ತು. ಬಾಕಿ ಉಳಿದಿರುವ ಗ್ರಾಮಗಳನ್ನು ಪೋಡಿ ಅಭಿಯಾನ 2.0 ರಡಿ ಪೋಡಿ ಮುಕ್ತ ಮಾಡಲು ಆದ್ಯತೆ ಮೇರೆಗೆ ಕ್ರಮ ವಹಿಸಲಾಗುವುದು” ಎಂದು ಹೇಳಿದರು.

ಸಿದ್ದರಾಮಯ್ಯ ಘೋಷಣೆಯ ಪ್ರಮುಖಾಂಶಗಳು

ಇದನ್ನೂ ಓದಿ: Karnataka Budget 2024: ಅತಿ ಹೆಚ್ಚು ಸಾಲ ಮಾಡಿರುವುದೇ ಸಿದ್ದರಾಮಯ್ಯ ಬಜೆಟ್ ದಾಖಲೆ: ಬೊಮ್ಮಾಯಿ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version