Karnataka Budget 2024 : ಮುಸ್ಲಿಮರಿಗೆ ಸಿದ್ದು ಭರ್ಜರಿ ಕೊಡುಗೆ; 100 ಮೌಲಾನಾ ಆಜಾದ್‌ ಶಾಲೆ! - Vistara News

ಕರ್ನಾಟಕ ಬಜೆಟ್ 2024

Karnataka Budget 2024 : ಮುಸ್ಲಿಮರಿಗೆ ಸಿದ್ದು ಭರ್ಜರಿ ಕೊಡುಗೆ; 100 ಮೌಲಾನಾ ಆಜಾದ್‌ ಶಾಲೆ!

Karnataka Budget 2024 : ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಮರು ಸೇರಿದಂತೆ ಎಲ್ಲ ಅಲ್ಪಸಂಖ್ಯಾತ ಸಮುದಾಯಗಳಿಗೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಇದರಲ್ಲಿ 100 ಮೌಲಾನಾ ಅಜಾದ್‌ ಶಾಲೆಗಳು ಕೂಡಾ ಸೇರಿವೆ.

VISTARANEWS.COM


on

Karnataka Budget 2024 Minorities
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು 2024-25ನೇ ಸಾಲಿನ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ (Minority development) ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದಾರೆ. 100 ಹೊಸ ಮೌಲಾನಾ ಆಜಾದ್‌ ಶಾಲೆಗಳು (Moulana Azad Schools), ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಮುಸ್ಲಿಂ ಮಹಿಳೆಯರ ಸ್ವಸಹಾಯ ಸಂಘಗಳಿಗೆ 10 ಕೋಟಿ ರೂ. ನೀಡಲಾಗುತ್ತದೆ.

Karnataka Budget 2024 :ಹಾಗಿದ್ದರೆ ಅಲ್ಪಸಂಖ್ಯಾತ ಕಲ್ಯಾಣಕ್ಕೆ ಯೋಜನೆಗಳೇನು?

  1. ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು.
  2. • 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.
    • 100 ಸಂಖ್ಯಾಬಲವುಳ್ಳ 100 ಮೆಟ್ರಿಕ್‌ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.
    • 100 ಹೊಸ ಮೌಲಾನಾ ಆಜಾದ್‌ ಶಾಲೆಗಳನ್ನು ತೆರೆಯಲಾಗುವುದು.
    • ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗುವುದು.
  3. ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನರ್ಸಿಂಗ್‌/ ಜಿ.ಎನ್‌.ಎಂ ನರ್ಸಿಂಗ್‌ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆಯನ್ನು ಪುನಃ ಪ್ರಾರಂಭ ಮಾಡಲಾಗುವುದು.
  4. ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ
    10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು.
  5. ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆ.ಎಂ.ಡಿ.ಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುವುದು.
  6. ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸಲಾಗುವುದು.

  7. Karnataka Budget 2024: ವಕ್ಫ್‌ ಆಸ್ತಿಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 100 ಕೋಟಿ
  8. ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್‌ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು.
  9. ವಕ್ಫ್‌ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸಲಾಗುವುದು.
  10. ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು.
  11. ಮಂಗಳೂರಿನ ಹಜ್‌ ಭವನದ ನಿರ್ಮಾಣ ಕಾಮಗಾರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.

ಇದನ್ನೂ ಓದಿ : Karnataka Budget 2024 : ಎಲ್ಲ ಜಿಲ್ಲೆಗಳಲ್ಲಿ ಕ್ರಿಟಿಕಲ್ ಕೇರ್​ ಆಸ್ಪತ್ರೆ; ಬಜೆಟ್​ನಲ್ಲಿ ಸಿಎಂ ಘೋಷಣೆ

Karnataka Budget 2024 : ಜೈನರು, ಕ್ರಿಶ್ಚಿಯನ್ನರಿಗೂ ಇದೆ ಹಲವು ಕೊಡುಗೆ

  1. ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.
  1. ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. ಒದಗಿಸಲಾಗುವುದು.
  2. ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಲು ಸೂಕ್ತ ಅನುದಾನ ಒದಗಿಸಲಾಗುವುದು.
  3. ರಾಜ್ಯದಲ್ಲಿ ವಾಸಿಸುತ್ತಿರುವ ಸಿಖ್ಖ್‌ ಲಿಗಾರ್‌ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಅನುದಾನದಲ್ಲಿ ಹೊಸ ಯೋಜನೆಗಳನ್ನು ರೂಪಿಸಲಾಗುವುದು.
  4. ಬೀದರ್‌ನಲ್ಲಿರುವ ಶ್ರೀ ನಾನಕ್‌ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಅನುದಾನ ನೀಡಲಾಗುವುದು.
  5. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕರ್ನಾಟಕ

Karnataka Budget 2024: ದಿಕ್ಕು-ದೆಸೆ ಇಲ್ಲದ ಸಾಲದ ಹೊರೆಯ ಬಜೆಟ್: ಸಚಿವ ಪ್ರಲ್ಹಾದ್‌ ಜೋಶಿ

Karnataka Budget 2024: ರಾಜ್ಯ ಬಜೆಟ್‌ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ.

VISTARANEWS.COM


on

Union Minister Pralhad Joshi reacts to state budget
Koo

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಯಾವುದೇ ದಿಕ್ಕು-ದಿಸೆ ಇಲ್ಲದ ಒಂದು ದಾಖಲೆ ಪಟ್ಟಿಯಂತಿದೆ. 3.71 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆ ಬಿಟ್ಟರೆ, ಇದು ರಾಜ್ಯದ ಜನರ ಕಲ್ಯಾಣ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ರಾಜ್ಯ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು. ಗ್ಯಾರಂಟಿಗಳಿಗೆ ವರ್ಷವಿಡೀ ಹೇಗೆ ಹಣ ಕ್ರೋಡೀಕರಣ ಎಂಬ ಅಂಶವಿದೆಯೇ ಹೊರತು ಮುಂದಿನ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಶಕ್ತಗೊಳಿಸಲು ಯಾವುದೇ ಯೋಜನೆಗಳ ಪ್ರಸ್ತಾಪವೇ ಇಲ್ಲ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರದ ಪ್ರಸ್ತಾವನೆಗಳೇ ಈ ಬಜೆಟ್‌ನಲ್ಲಿವೆ ಅಷ್ಟೇ. ನೀರಾವರಿ ಯೋಜನೆಗಳಿಗೆ ಯಾವುದೇ ಹಣಕಾಸು ಪ್ರಸ್ತಾಪವಿಲ್ಲ. ಕೇಂದ್ರ ಸರ್ಕಾರದ ಅನುಮತಿ ನೇಪಹೇಳಿ ಜಾರಿಕೊಳ್ಳುವ ವ್ಯರ್ಥ ಪ್ರಯತ್ನವೇ ಸಿಎಂ ಸಿದ್ದರಾಮಯ್ಯ ಅವರ ಕಸರತ್ತು ಆಗಿದೆ ಎಂದು ಸಚಿವರು ಆರೋಪಿಸಿದ್ದಾರೆ.‌

ಇದನ್ನೂ ಓದಿ | Karnataka Budget 2024 : ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!

ಸಾಲದ ಹೊರೆಯ ಬಜೆಟ್

ಕಳೆದ ವರ್ಷಕ್ಕೆ ಹೋಲಿಸಿದರೆ ರೆವೆನ್ಯೂ ವೆಚ್ಚ 1 ಲಕ್ಷ ಕೋಟಿಗೂ ಮೀರಿದೆ. ತೆರಿಗೆದಾರರ ಮೇಲೆ ಅನಗತ್ಯ ಹೊರೆ ಹೇರಲಾಗಿದೆ. ಅಲ್ಲದೇ, ಕಳೆದ ಸರ್ಕಾರಕ್ಕಿಂತ ಶೇ.22ರಷ್ಟು ಸಾಲದ ಹೊರೆ ಇದರಲ್ಲಿದೆ. 1,05,246 ಕೋಟಿಗೂ ಅಧಿಕ ಸಾಲ ಈ ಬಜೆಟ್ ಒಳಗೊಂಡಿದೆ. ಹಾಗಾಗಿ ಇದೊಂದು ಸಾಲದ ಹೊರೆಯ ಬಜೆಟ್ ಆಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

Continue Reading

ಕರ್ನಾಟಕ

Karnataka Budget 2024: ಸಾಲ ಶೂಲದ ಹರಿಕಾರ ಸಾಲರಾಮಯ್ಯ; ರಾಜ್ಯ ಬಜೆಟ್‌ ಬಗ್ಗೆ ಬಿಜೆಪಿ ಟೀಕೆ

Karnataka Budget 2024: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

VISTARANEWS.COM


on

Karnataka Budget 2024 new 1
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ ಬಗ್ಗೆ ಸಾರ್ವಜನಿಕರು ಮತ್ತು ರಾಜಕೀಯ ನಾಯಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇನ್ನು ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿ, ಸಾಲ ಶೂಲದ ಹರಿಕಾರ ಸಾಲರಾಮಯ್ಯ, ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ. ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ | Karnataka Budget Session 2024: ಬಿಜೆಪಿಯವರ ತಲೆಯಲ್ಲಿ ಏನೂ ಇಲ್ಲ; ಬಡವರ ಕೊಳ್ಳುವ ಶಕ್ತಿ ಹೆಚ್ಚಿಸುವ ಬಜೆಟ್‌ ಎಂದ ಸಿದ್ದರಾಮಯ್ಯ

ನಯಾಪೈಸೆ ಪ್ರಯೋಜನ ಇಲ್ಲದ ಬಜೆಟ್‌, ಉತ್ತರಕ್ಕೆ ಒಂದು ರೂ. ಕೂಡಾ ಇಲ್ಲ; ಬಿ.ವೈ ವಿಜಯೇಂದ್ರ

Karnataka-Budget-2024-BY-Vijayendra

ಬೆಂಗಳೂರು: ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು (CM Siddaramaiah) ಇಂದು ಮಂಡಿಸಿದ ರಾಜ್ಯ ಬಜೆಟ್‌ (Karnataka Budget 2024) ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ವಿಶ್ಲೇಷಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಟೀಕಿಸಿದರು.

ಯುವಕರಿಗೆ ಯಾವುದೇ ಒಂದು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಣೆ ಮಾಡಿಲ್ಲ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಇವತ್ತು ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ಸಮಯ ವ್ಯರ್ಥ ಮಾಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!

ಈ ಬಜೆಟ್‍ನ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ಷೇಪಿಸಿದ ಅವರು, ಮೊನ್ನೆ ದೆಹಲಿ ಚಲೋ ಮಾಡಿದ್ದರು. ದೆಹಲಿಯಲ್ಲಿ ರಾಜ್ಯ ಸರಕಾರದ ಗೌರವವನ್ನು ಹರಾಜು ಹಾಕುವ ಕೆಲಸ ಆಗಿತ್ತು. ಇವತ್ತು ಕೂಡ ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಕೇಂದ್ರ ಸರಕಾರವನ್ನು ದೂರುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿ ಇಲ್ಲ..

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಡದ ಬಜೆಟ್ ಇದಾಗಿದೆ. ಸಂಕಷ್ಟದಲ್ಲಿರುವ ರೈತರು ಬಜೆಟ್ ಮೂಲಕ ಪರಿಹಾರದ ನಿರೀಕ್ಷೆಯಲ್ಲಿದ್ದರು. ಇದರಡಿ ಮಹಿಳೆಯರಿಗೂ ಅನುಕೂಲ ಆಗುವುದಿಲ್ಲ. ಇವರು ತಮ್ಮ ಪ್ರಣಾಳಿಕೆಯಲ್ಲಿ ನೇಕಾರರ ಬಗ್ಗೆ ಮಾತನಾಡಿದ್ದರು. ನೇಕಾರರ ಪರವಾಗಿ ಯಾವುದೇ ಒಂದು ಯೋಜನೆಯನ್ನು ಘೋಷಣೆ ಮಾಡಿಲ್ಲ. ಯೋಜನೆ ಘೋಷಿಸುವುದು ಇರಲಿ; ಆ ನೇಕಾರರ ಹೆಸರನ್ನೂ ಉಲ್ಲೇಖಿಸಿಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳವಿಲ್ಲ!

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಅದರ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ‘ನುಡಿದಂತೆ ನಡೆದ ಸರಕಾರ’ ಎಂದು ಕೊಚ್ಚಿಕೊಳ್ಳುತ್ತಾರೆ. ‘ನುಡಿದಂತೆ ನಡೆದ ಸರಕಾರ’ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದು, ರಾಜ್ಯದ ರೈತರು, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿ ಎಲ್ಲ ವರ್ಗಕ್ಕೂ ನಿರಾಸೆ ಮೂಡಿಸಿದ ಬಜೆಟ್ ಇದು ಎಂದು ತಿಳಿಸಿದರು.

ಕೃಷಿ ಬೆಳೆ ಸಾಲ ಮನ್ನಾದ ಉಲ್ಲೇಖವೇ ಇಲ್ಲ

ಬರಗಾಲದ ಸಂದರ್ಭದಲ್ಲೂ ಕೃಷಿ ಮತ್ತು ಬೆಳೆ ಸಾಲದ ಮನ್ನಾ ಕುರಿತು ಉಲ್ಲೇಖ ಮಾಡಿಲ್ಲ. ಸರಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಇವರು ಮಾಡಿದ್ದಾರೆ. ಬರಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ಅನುಕೂಲ ಆಗದ ಬಜೆಟ್, ನಿಶ್ಚಿತವಾಗಿ ಇದು ಕರಾಳ ದಿನ ಎಂದರೂ ತಪ್ಪಾಗಲಾರದು ಎಂದು ನುಡಿದರು.

ಇದನ್ನೂ ಓದಿ | Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ?; ಇಲ್ಲಿದೆ ಮಾಹಿತಿ

ಸಿದ್ದರಾಮಯ್ಯ ಅವರಿಂದ ಇಂಥ ಬಜೆಟ್‌ ನಿರೀಕ್ಷೆ ಮಾಡಿರಲಿಲ್ಲ

15ನೇ ಬಜೆಟ್ ಮಂಡಿಸುತ್ತಿರುವ ಒಬ್ಬ ಅನುಭವಿ ಮುಖ್ಯಮಂತ್ರಿ ಈ ರೀತಿ ಬಜೆಟ್ ಮಂಡಿಸಬಹುದೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ನಿಜವಾಗಲೂ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಒಂದು ದುರಂತವೇ ಸರಿ ಎಂದ ಅವರು, ರೈತರನ್ನೂ ಕಡೆಗಣಿಸಿದ್ದಾರೆ; ಮಹಿಳೆಯರನ್ನೂ ಕಡೆಗಣಿಸಿದ್ದಾರೆ; ನೇಕಾರರನ್ನೂ ಕಡೆಗಣಿಸಿದ್ದಾರೆ, ಯುವಕರನ್ನೂ ಕಡೆಗಣಿಸಿದ್ದಾರೆ; ಉತ್ತರ ಕರ್ನಾಟಕದ ಅಭಿವೃದ್ಧಿಯನ್ನೂ ಕಡೆಗಣಿಸಿದ ಸರಕಾರ ಬಹುಶಃ ರಾಜ್ಯದ ಜನರ ಪಾಲಿಗೆ ಬದುಕಿದ್ದೂ ಸತ್ತಂತೆ ಎಂದು ಹೇಳಿದರು.

Continue Reading

ಕರ್ನಾಟಕ ಬಜೆಟ್ 2024

Karnataka Budget 2024 : ಸಾಲ ಮಾಡಿ ತುಪ್ಪ ತಂದ ಸಿದ್ದರಾಮಯ್ಯ: ಗ್ಯಾರಂಟಿಗೆ ಮೋಸವಿಲ್ಲ!

Karnataka Budget 2024 : ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ ಸರ್ವಸ್ಪರ್ಶಿ. ಆದರೆ, ಅದು ಯಾವುದನ್ನೂ ತಟ್ಟಿದಂತಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಸಾಕಷ್ಟು ಹಣವನ್ನು ಇಟ್ಟಿರುವ ಸಿದ್ದರಾಮಯ್ಯ ತಮ್ಮ ಬಜೆಟ್‌ ಗಾಗಿ ಒಂದು ಲಕ್ಷಕ್ಕಿಂತಲೂ ಹೆಚ್ಚು ಹಣವನ್ನು ಸಾಲದ ಮೂಲಕ ಹೊಂದಾಣಿಕೆ ಮಾಡಬೇಕಾಗಿದೆ.

VISTARANEWS.COM


on

Karnataka Budget 2024 Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಾಲ ಮಾಡಿ ತುಪ್ಪ ತಂದಿದ್ದಾರೆ. ರಾಜ್ಯದ ಜನತೆಗೆ ಅದನ್ನು ಹಿತವಾಗಿ ಹಂಚಿದ್ದಾರೆ. ಹೊಸತೇನೂ ಇಲ್ಲವಾದರೂ ಹೊತ್ತಿನ ಊಟಕ್ಕೆ ಸಾಕಾಗುವಂತೆ ಬಡಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಭಾರಿ ಜನಪ್ರಿಯ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅಡಚಣೆ ಆಗದಂತೆ ತಾಳಮೇಳ ಕಾಯ್ದುಕೊಂಡಿದ್ದಾರೆ: ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನ (Karnataka Budget 2024) ಸಿಂಪಲ್‌ ವಿಮರ್ಶೆ.

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಮಂಡಿಸಿದ ಮೊದಲ ಪೂರ್ಣ ಪ್ರಮಾಣದ ಬಜೆಟ್‌ ಇದಾಗಿದೆ. 2023ರ ಜುಲೈ 7ರಂದು ಮಂಡಿಸಿದ ಬಜೆಟ್‌ ಕೇವಲ ಎಂಟು ತಿಂಗಳಿಗೆ ಸೀಮಿತವಾಗಿತ್ತು. ಶುಕ್ರವಾರ ವಿಧಾನಸಭೆಯಲ್ಲಿ ಅವರು ಸುಮಾರು ಮೂರು ಗಂಟೆ 14 ನಿಮಿಷಗಳ ಸುದೀರ್ಘ ಕಾಲ ಬಜೆಟ್‌ ಮಂಡನೆ ಮಾಡಿದ್ದು, ಅದರಲ್ಲಿ ಎಲ್ಲ ಪ್ರಮುಖ ಕ್ಷೇತ್ರಗಳಿಗೆ ಬಿಡಿ ಬಿಡಿಯಾಗಿ ಅನುದಾನಗಳನ್ನು ಪ್ರಕಟಿಸಿದ್ದಾರೆ.

2024-25ನೇ ಸಾಲಿನ ಕರ್ನಾಟಕ ರಾಜ್ಯ ‌ ಆಯವ್ಯಯದ (Karnataka Budget 2024) ಒಟ್ಟು ಗಾತ್ರವು (Budget layout) 3,71,383 ಕೋಟಿ ರೂ. ಅಂದರೆ 2023-24ನೇ ಸಾಲಿಗಿಂತ 44 ಸಾವಿರ ಕೋಟಿ ರೂ. ಹೆಚ್ಚು. ಇಷ್ಟು ದೊಡ್ಡ ಗಾತ್ರದ ಬಜೆಟ್‌ ಮಂಡನೆಗಾಗಿ ಸಿದ್ದರಾಮಯ್ಯ ಅವರು 1,05,246 ಕೋಟಿ ರೂ. ಸಾಲ ಮಾಡಬೇಕಾಗಿದೆ (Loan Responsibility). ಹಾಗಂತ ಇದು ವಿತ್ತೀಯ ಶಿಸ್ತಿನ ಒಳಗೇ ಇರುವ ಪ್ರಮಾಣವಾಗಿರುವುದರಿಂದ ರಾಜ್ಯಕ್ಕೆ ಆರ್ಥಿಕ ಅಪಾಯವೇನೂ ಎದುರಾಗುವ ಸ್ಥಿತಿಯಲ್ಲಿ ಇಲ್ಲ. ಆದರೆ, ಈ ಬಜೆಟ್‌ನ ಅಂತ್ಯದಲ್ಲಿ ರಾಜ್ಯಕ್ಕೆ ಒಟ್ಟು 6.65 ಲಕ್ಷ ಕೋಟಿ ರೂ. ಸಾಲದ ಹೊರೆ ಎದುರಾಗಿದೆ. ಅಂದರೆ ಪ್ರತಿಯೊಬ್ಬ ನಾಗರಿಕನ ತಲೆಯ ಮೇಲೆ ತಲಾ ಒಂದು ಲಕ್ಷ ರೂ ಸಾಲದ ಹೊರೆ ಇದೆ.

ಏನಿಲ್ಲ ಏನಿಲ್ಲ ಎಂದ ಬಿಜೆಪಿ ಬಹಿಷ್ಕಾರ ನಡುವೆಯೇ ಬಜೆಟ್‌ ಮಂಡನೆ

ಈ ಬಾರಿಯ ಬಜೆಟ್‌ ಮಂಡನೆಗೆ ಪ್ರತಿಪಕ್ಷವಾದ ಬಿಜೆಪಿ ಶಾಸಕರು ʻಏನಿಲ್ಲ ಏನಿಲ್ಲʼ ಎಂಬ ಜನಪ್ರಿಯ ಹಾಡನ್ನು ಬಳಸಿಕೊಂಡು ಪ್ಲೇಕಾರ್ಡ್‌ಗಳನ್ನು ಹಿಡಿದುಕೊಂಡು ಬಂದಿದ್ದರು. ಬಜೆಟ್‌ ಮಂಡನೆಯ ಮೇಲೆ ಇವುಗಳನ್ನು ಪ್ರದರ್ಶಿಸಿ ಕಾಂಗ್ರೆಸ್‌ ಸರ್ಕಾರದ ಬಜೆಟ್‌ನಲ್ಲಿ ಏನೇನೂ ಇಲ್ಲ ಎಂದು ಹೇಳಿ ಸಭಾತ್ಯಾಗ ಮಾಡಿದರು. ಬಳಿಕ ಆಡಳಿತ ಪಕ್ಷದ ಸದಸ್ಯರ ಉಪಸ್ಥಿತಿಯಲ್ಲಿ ಸಿದ್ದರಾಮಯ್ಯ ಸುದೀರ್ಘ ಬಜೆಟ್‌ ಮಂಡಿಸಿದರು.

ಇದನ್ನೂ ಓದಿ: Karnataka Budget Session 2024: ಬಿಜೆಪಿಯಿಂದ ಬಜೆಟ್‌ ಬಾಯ್ಕಾಟ್‌; ಇತಿಹಾಸದಲ್ಲೇ ಮೊದಲು ಎಂದ ಸಿದ್ದರಾಮಯ್ಯ

2024-25ನೇ ಸಾಲಿನಲ್ಲಿ ಒಟ್ಟು 2,90,531 ಕೋಟಿ ರೂ.ಗಳ ರಾಜಸ್ವ ವೆಚ್ಚ, 55,877 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 24,974 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚವು 3,71,383 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ಎಲ್ಲ ವಿತ್ತೀಯ ಮೂಲಗಳಿಂದು ಬರುವ ಒಟ್ಟು ಆದಾಯವು 2.66 ಲಕ್ಷ ಕೋಟಿ ಆಗುವುದರಿಂದ ಉಳಿದ ಮೊತ್ತವನ್ನು ಸಾಲವಾಗಿ ತರಬೇಕಾಗಿದೆ.

ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ. ಅನುದಾನ

ಒಟ್ಟಾರೆಯಾಗಿ ಐದೂ ಗ್ಯಾರಂಟಿಗಳಿಗೆ ಸೇರಿ 52,009 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಐದೂ ಗ್ಯಾರಂಟಿ ಯೋಜನೆಯಲ್ಲಿ ಸಿಂಹಪಾಲು ಗೃಹ ಲಕ್ಷ್ಮಿ ಯೋಜನೆಗೆ (28,608 ಕೋಟಿ ರೂ) ಖರ್ಚಾಗುತ್ತಿದ್ದರೆ, ಅತಿ ಕಡಿಮೆ ಅನುದಾನ (650 ಕೋಟಿ ರೂ.) ಯುವ ನಿಧಿಗೆ ಮೀಸಲಿಡಲಾಗಿದೆ.

Karnataka Budget Session 2024 Rs 52009 crore earmarked for 5 guarantee scheme

ಯಾವ ಗ್ಯಾರಂಟಿಗೆ ಎಷ್ಟು?

  1. ಗೃಹ ಜ್ಯೋತಿ: 9,657 ಕೋಟಿ ರೂ.
    ಅನ್ನ ಭಾಗ್ಯ: 8,079 ಕೋಟಿ ರೂ.
    ಶಕ್ತಿ: 5,015 ಕೋಟಿ ರೂ.
    ಯುವನಿಧಿ: 650 ಕೋಟಿ ರೂ.
    ಗೃಹ ಲಕ್ಷ್ಮಿ :28,608 ಕೋಟಿ ರೂ.
    ಒಟ್ಟು: 52,009 ಕೋಟಿ ರೂ.

ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆ ಹೇಗಿದೆ?

Karnataka Budget 2024 Yavudakke Estu

ಶಿಕ್ಷಣ- 44422 ಕೋಟಿ ರೂ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ- 34406 ಕೋಟಿ ರೂ.
ಇಂಧನ- 23159 ಕೋಟಿ ರೂ.
ಗ್ರಾಮೀಣಾಭಿವೃದ್ಧಿ- 21160 ಕೋಟಿ ರೂ.
ಒಳಾಡಳಿತ ಸಾರಿಗೆ- 19777 ಕೋಟಿ ರೂ.
ನೀರಾವರಿ- 19179 ಕೋಟಿ ರೂ.
ನಗರಾಭಿವೃದ್ಧಿ – 18155 ಕೋಟಿ ರೂ.
ಕಂದಾಯ- 16170 ಕೋಟಿ ರೂ.
ಆರೋಗ್ಯ – 15145 ಕೋಟಿ ರೂ.
ಸಮಾಜ ಕಲ್ಯಾಣ- 13334 ಕೋಟಿ ರೂ.
ಲೋಕೋಪಯೋಗಿ- 10424 ಕೋಟಿ ರೂ.
ಆಹಾರ ಮತ್ತು ನಾಗರಿಕ ಪೂರೈಕೆ- 9963 ಕೋಟಿ ರೂ.
ಕೃಷಿ ತೋಟಗಾರಿಕೆ- 6688 ಕೋಟಿ ರೂ.
ಪಶುಸಂಗೋಪನೆ- 3307 ಕೋಟಿ ರೂ.
ಇತರೆ- 124593 ಕೋಟಿ ರೂಪಾಯಿ

ಬಜೆಟ್‌ ಆರ್ಥಿಕ ನೋಟ ಹೀಗಿದೆ: ಯಾವುದಕ್ಕೆ ಎಷ್ಟು?

  • ಆಯವ್ಯಯ ಗಾತ್ರ (ಸಂಚಿತ ನಿಧಿ): 3,71,383 ಕೋಟಿ ರೂ.
  • ಒಟ್ಟು ಸ್ವೀಕೃತಿ: 3,68,674 ಕೋಟಿ ರೂ
  • ರಾಜಸ್ವ ಸ್ವೀಕೃತಿ: 2,63,178 ಕೋಟಿ
  • ಸಾರ್ವಜನಿಕ ಋಣ: 1,05,246 ಕೋಟ ರೂ. ಸೇರಿದಂತೆ ಬಂಡವಾಳ ಸ್ವೀಕೃತಿ 38 ಕೋಟಿ ರೂ.
  • ಒಟ್ಟು ವೆಚ್ಚ: 3,71,383 ಕೋಟಿ ರೂ.
  • ರಾಜಸ್ವ ವೆಚ್ಚ: 2,90,531 ಕೋಟ ರೂ.
  • ಬಂಡವಾಳ ವೆಚ್ಚ: 55,877 ಕೋಟ ರೂ.
  • ಸಾಲ ಮರುಪಾವತಿ: 24,794 ಕೋಟಿ ರೂ.
  • ಎಸ್‌.ಸಿ.ಎಸ್‌.ಪಿ. ಹಾಗೂ ಟಿ.ಎಸ್‌.ಪಿ. ಅಡಿಯಲ್ಲಿ ಆಯವ್ಯಯದಲ್ಲಿ ಒದಗಿಸಿದ ಅನುದಾನ 39,121 ಕೋಟಿ ರೂ.
  • ಎಸ್‌.ಸಿ.ಎಸ್‌.ಪಿ. ಅಡಿ 27,674 ಕೋಟಿ ರೂ. ಹಾಗೂ ಟಿ.ಎಸ್‌.ಪಿ. ಅಡಿ 11,447 ಕೋಟಿ ರೂ.

ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಪ್ರಕಟಿಸಿದ ಪ್ರಮುಖ ಕೊಡುಗೆಗಳ ಪಟ್ಟಿ ಇಲ್ಲಿದೆ

  1. ವಿವಿಧ ರೈತಪರ ಯೋಜನೆ ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ
  • ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ, ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ.
  • ತೋಟಗಾರಿಕೆ ಕುರಿತು ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸಲು ಆಯ್ದ ಜಿಲ್ಲೆಗಳಲ್ಲಿ ಕಿಸಾನ್‌ ಮಾಲ್‌ ಸ್ಥಾಪನೆ.
  • ಮಧ್ಯಮಾವಧಿ ಮತ್ತು ದೀರ್ಫಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಹಿನ್ನೆಲೆಯಲ್ಲಿ ಡಿಸಿಸಿ ಮತ್ತು ಪಿಕಾರ್ಡ್‌ ಬ್ಯಾಂಕುಗಳಿಗೆ 450 ಕೋಟಿ ರೂ. ಅನುದಾನ. ಟಿ.ಎ.ಪಿ.ಸಿ.ಎಂ.ಎಸ್‌.ಗಳಿಗೆ ಗೋದಾಮು ನಿರ್ಮಾಣಕ್ಕೆ ಶೇ. 6ರ ಬಡ್ಡಿ ಸಹಾಯಧನ
  • ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಗುರಿ. ಘೋಷಣೆಯಂತೆ 5300 ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ.
  • 2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ
  • ಏಳು ಜಿಲ್ಲೆಗಳಲ್ಲಿ 187 ಕೋಟ ರೂ. ವೆಚ್ಚದಲ್ಲಿ ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಕಟ್ಟಡ ನಿರ್ಮಾಣ
  • ಅ೦ಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್‌ ಘೋನ್‌ ಒದಗಿಸಲು ಕ್ರಮ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿ೦ದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ. ಅನುದಾನ.
  • ಪರಿಶಿಷ್ಟ ಜಾತಿಯ 5,000 ಯುವಕ/ಯುವತಿಯರಿಗೆ ಡ್ರೋನ್‌ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ.
  • ಹಿಂದುಳಿದ ವರ್ಗಗಳ 150 ಮೆಟ್ರಿಕ್‌ ನಂತರದ ಹೊಸ ವಸತಿನಿಲಯಗಳ ಪ್ರಾರಂಭ; 174 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 200 ಕೋಟ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಕ್ರಮ.
  • 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 100 ಸಂಖ್ಯಾಬಲವುಳ್ಳ 100 ಮೆಟ್ರಿಕ್‌ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳು, 100 ಹೊಸ ಮೌಲಾನಾ ಆಜಾದ್‌ ಶಾಲೆಗಳ ಪ್ರಾರಂಭ ಹಾಗೂ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಪ್ರಾರಂಭ.
  • ವಸತಿ: 2024-25 ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ
  • ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.
  • ಬೆ೦ಗಳೂರು ಗ್ರಾಮಾ೦ತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ.
  • ಯಾವುದೇ ಆದಾಯವಿಲ್ಲದ 34,165 “ಸಿ’ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ Vision Group ರಚನೆ.
  • 29,523 “ಸಿ’ ವರ್ಗದ ದೇವಾಲಯಗಳ ಅರ್ಚಕರ ಬ್ಯಾಂಕ್‌ ಖಾತೆಗೆ ತಸ್ತಿಕ್‌ ಮೊತ್ತ ಜಮೆ ಮಾಡಲು ಕ್ರಮ.
  • ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ IML ಹಾಗೂ ಬಿಯರ್‌ ಸ್ಲಾಬ್‌ಗಳ ಪರಿಷ್ಕರಣೆ.
  • ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!
Continue Reading

ಕರ್ನಾಟಕ ಬಜೆಟ್ 2024

Karnataka Budget 2024 : ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!

Karanataka Budget 2024: ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ಗೇಲಿ ಮಾಡಿದೆ. ಸಿದ್ದರಾಮಯ್ಯ ಅವರೇ 2021ರಲ್ಲಿ ಬಜೆಟ್‌ ಬಹಿಷ್ಕರಿಸಿದ್ದರು ಎಂದು ನೆನಪಿಸಿದೆ.

VISTARANEWS.COM


on

Karnataka Budget 2024 Walkout
2021ರಲ್ಲಿ ಸಿದ್ದರಾ‌ಮಯ್ಯ ನೇತೃತ್ವದಲ್ಲಿ ನಡೆದ ಬಜೆಟ್‌ ಬಹಿಷ್ಕಾರದ ಚಿತ್ರ.
Koo

ಬೆಂಗಳೂರು: ರಾಜ್ಯ ವಿಧಾನ ಮಂಡಲದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನ್ನು (Karnataka Budget 2024) ಪ್ರತಿಪಕ್ಷ ಬಿಜೆಪಿ ಬಹಿಷ್ಕರಿಸಿದೆ. ಸಿದ್ದರಾಮಯ್ಯ ಅವರು ಭಾಷಣ ಆರಂಭ ಮಾಡುತ್ತಲೇ ʻಏನಿಲ್ಲ.. ಏನಿಲ್ಲ.. ಬಜೆಟ್‌ನಲ್ಲಿ ಏನಿಲ್ಲʼ ಎಂದು ಗೇಲಿ ಮಾಡುತ್ತಾ ಬಿಜೆಪಿ ಶಾಸಕರು ಹೊರನಡೆದಿದ್ದರು. ಈ ರೀತಿ ಬಜೆಟ್‌ ಮಂಡನೆಯನ್ನೇ ಬಹಿಷ್ಕರಿಸಿರುವುದು ಇತಿಹಾಸದಲ್ಲೇ ಮೊದಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಮೇಲೆ ಹರಿಹಾಯ್ದಿದ್ದರು. ಆದರೆ, ಇದು ಇತಿಹಾಸದಲ್ಲಿ ಮೊದಲೇನಲ್ಲ. ಈ ಹಿಂದೆ ಸಿದ್ದರಾಮಯ್ಯನವರೇ ಬಜೆಟ್‌ ಬಹಿಷ್ಕಾರದ ಮೂಲಕ ಇತಿಹಾಸ ಬರೆದಿದ್ದರು ಎಂದು ಬಿಜೆಪಿ (Karnataka BJP) ಹೇಳಿದೆ.

Karnataka Budget 2024 BJP Walkout
ಬಜೆಟ್‌ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಆರ್‌. ಅಶೋಕ್‌ (R Ashok) ಅವರು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಒಂದು ಪೋಸ್ಟ್‌ ಹಾಕಿ, 2021ರ ಬಜೆಟನ್ನು ಆಗ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬಹಿಷ್ಕಾರ ಹಾಕಿದ್ದನ್ನು ನೆನಪಿಸಿಕೊಂಡಿದ್ದಾರೆ.

ಬಿಎಸ್‌ವೈ ಬಜೆಟ್‌ನಿಂದ ವಾಕೌಟ್‌ ಮಾಡಿದ್ದ ಸಿದ್ದರಾಮಯ್ಯ

ʻʻಬಜೆಟ್ ಭಾಷಣ ಬಹಿಷ್ಕಾರ ಮಾಡಿದ ಘಟನೆ ನಾನು ಇತಿಹಾಸದಲ್ಲೇ ನೋಡಿಲ್ಲ, ಇದು ಸಂವಿಧಾನಕ್ಕೆ ಮಾಡಿದ ಅಪಮಾನ ಅಂತ ಬುರುಡೆ ಬಿಡುವ ಮೊದಲ ತಮ್ಮ ಹಾಗೂ ತಮ್ಮ ಕಾಂಗ್ರೆಸ್‌ ಕ್ಷದ ಇತಿಹಾಸ ಒಮ್ಮೆ ತೆಗೆದು ನೋಡಿ ಸಿಎಂ ಸಿದ್ದರಾಮಯ್ಯ ಅವರೇ. 2021ರಲ್ಲಿ ಅಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಬಜೆಟ್ ಭಾಷಣವನ್ನು ಬಹಿಷ್ಕಾರ ಮಾಡಿ ಸದನದಿಂದ ವಾಕ್ ಔಟ್ ಮಾಡುವ ಮೂಲಕ ಸನ್ಮಾನ್ಯ ಯಡಿಯೂರಪ್ಪನವರಂತಹ ಮುತ್ಸದ್ದಿ , ಹಿರಿಯ ಜನ ನಾಯಕರಿಗೆ ಅವಮಾನ ಮಾಡುವಾಗ ತಮ್ಮ ಈ ಉಪದೇಶ ತಮಗೆ ನೆನಪಿರಲಿಲ್ಲವೆ? ತಾವು ಮಹಾ ಸಾಚಾ ಎನ್ನುವಂತೆ ಮಾಧ್ಯಮಗಳ ಮುಂದೆ ನಾಟಕ ಆಡುವುದರಿಂದ ಏನೂ ಪ್ರಯೋಜನವಿಲ್ಲ. ತಮ್ಮ ಆಷಾಢಭೂತಿತನ, ಎರಡು ನಾಲಿಗೆ ಬಗ್ಗೆ ಎಲ್ಲರಿಗೂ ತಿಳಿದಿದೆʼʼ ಎಂದು ಆರ್‌. ಆಶೋಕ್‌ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

2021ರಲ್ಲಿ ಬಿಎಸ್‌ ಯಡಿಯೂರಪ್ಪ ಅವರು ಬಜೆಟ್‌ ಮಂಡನೆ ಮಾಡಿದಾಗ ಸಿದ್ದರಾಮಯ್ಯ ಅವರು ಈ ಸರ್ಕಾರಕ್ಕೆ ನೈತಿಕ ಮೌಲ್ಯಗಳಿಲ್ಲ. ಹೀಗಾಗಿ ಬಜೆಟ್‌ ಮಂಡನೆಗೆ ಅರ್ಹತೆ ಇಲ್ಲ ಎಂದು ಹೇಳಿ ಭಾಷಣದ ಆರಂಭದಲ್ಲೇ ಸಭಾತ್ಯಾಗ ಮಾಡಿದ್ದಕ್ಕೆ ಸಂಬಂಧಿಸಿ ಅಂದು ಪ್ರಕಟವಾಗಿದ್ದ ಮಾಧ್ಯಮಗಳ ವರದಿಗಳು ಮತ್ತು ವಾಹಿನಿಗಳ ವರದಿಗಳನ್ನು ಟ್ಯಾಗ್‌ ಮಾಡಿದ್ದಾರೆ.

ಇದನ್ನೂ ಓದಿ : Karnataka Budget Session 2024: ಬಿಜೆಪಿಯಿಂದ ಬಜೆಟ್‌ ಬಾಯ್ಕಾಟ್‌; ಇತಿಹಾಸದಲ್ಲೇ ಮೊದಲು ಎಂದ ಸಿದ್ದರಾಮಯ್ಯ

ಬಿಜೆಪಿ ಸಭಾತ್ಯಾಗದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಬಿಜೆಪಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ: ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಬಜೆಟ್ ಓದಲು ಪ್ರಾರಂಭ ಮಾಡಿದ ಕೂಡಲೇ ಸುನೀಲ್ ಕುಮಾರ್ ಅವರು ಏನಿಲ್ಲ ಏನಿಲ್ಲ ಎಂದು ಘೋಷಣೆ ಕೂಗುತ್ತಿದ್ದರು. ಬಿಜೆಪಿಗೆ ಸಂಸದೀಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ಅವರ ತಲೆ ತುಂಬ ರಾಜಕೀಯ ಮಂಜು ತುಂಬಿದೆ. ಕಾಮಾಲೆ ರೋಗಿಗಳಿಗೆ ಕಂಡಿದ್ದೆಲ್ಲ ಹಳದಿಯಂತೆ ಆಗಿದೆ. ರಾಜಕೀಯ ಹೇಳಿಕೆ ಬೇಡ ಎನ್ನುವುದಿಲ್ಲ. ಆದರೆ ಟೀಕೆಗಳು ಆರೋಗ್ಯಕರವಾಗಿರಬೇಕು. ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ಲೇಕಾರ್ಡ್ ಹಿಡಿದಿದ್ದರು. ಬಜೆಟ್ ಕೇಳಬಾರದು ಎಂದು ಯೋಚಿಸಿಕೊಂಡೇ ಬಂದಿದ್ದರು. ನಾನು ವಸ್ತುಸ್ಥಿತಿಯನ್ನು ಹೇಳಿದರೆ ಅವರಿಗೆ ಅದು ನುಂಗಲಾರದ ತುತ್ತು. ಸತ್ಯ ಹೇಳಿದರೆ ತಡೆದುಕೊಳ್ಳಲು ಆಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು‌ ಆಕ್ಷೇಪಿಸಿದ್ದರು.

Continue Reading
Advertisement
Kodava Family Hockey Tournament Website Launched
ಕೊಡಗು1 ತಿಂಗಳು ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ತಿಂಗಳು ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ತಿಂಗಳು ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ತಿಂಗಳು ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

Bengaluru airport
ಬೆಂಗಳೂರು1 ತಿಂಗಳು ago

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೈಗರ್‌ ವಿಂಗ್ಸ್‌; 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುತ್ತಾ ಕಾಲಹರಣ ಮಾಡ್ಬೇಡಿ

dina bhavishya read your daily horoscope predictions for november 4 2024
ಭವಿಷ್ಯ2 ತಿಂಗಳುಗಳು ago

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಶುಭ ಸುದ್ದಿ

galipata neetu
ಕಿರುತೆರೆ1 ವರ್ಷ ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ1 ವರ್ಷ ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ1 ವರ್ಷ ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ತಿಂಗಳುಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್4 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌