Site icon Vistara News

Karnataka Budget 2024 : ಮಹಿಳೆಯರೇ ನಡೆಸುವ 50 ಕೆಫೆ ಸಂಜೀವಿನಿ ಸ್ಥಾಪನೆ; ಏನಿದು ಸ್ಪೆಷಲ್‌ ಫುಡ್‌ ಜಾಯಿಂಟ್‌?

Karnataka Budget 2024 Cafe Sanjeevini

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸುವ ಸದುದ್ದೇಶದಿಂದ ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್‍ಗಳನ್ನು (Cafe Sanjeevini Canteen) ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah) ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಘೋಷಣೆ (Karnataka Budget 2024) ಮಾಡಿದ್ದಾರೆ. ಈ ಘೋಷಣೆ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಜೀವನೋಪಾಯ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ರಾಯಚೂರು ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು, ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿ ಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 7.50 ಕೋಟಿ ರೂ. ವೆಚ್ಚಮಾಡಿ 50 ಕೆಫೆಗಳನ್ನು ಸ್ಥಾಪನೆ ಮಾಡಲಾಗುವುದೆಂದು ಆಶ್ವಾಸನೆ ನೀಡಿದರು.

ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳ ಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. 2500 ಕಾಫಿ ಕಿಯೋಸ್ಕ್‌ಗಳನ್ನು 25 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಿ ಇದರ ಸಂಪೂರ್ಣ ನಿರ್ವಹಣೆಯನ್ನು ಮಹಿಳೆಯರೇ ಮಾಡಲಿದ್ದಾರೆ ಎಂದರು.

ಇದನ್ನೂ ಓದಿ : Karnataka Budget 2024 : ನಾವು ಮನುಜರು : ಶಾಲೆಗಳಲ್ಲಿ ಇನ್ನು ವಾರಕ್ಕೆ 2 ಗಂಟೆ ಸಾಮರಸ್ಯ ಪಾಠ

ಮಹಿಳೆಯರಿಗೆ ರಾತ್ರಿ ತಂಗುವ ವ್ಯವಸ್ಥೆ

ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟುಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು ಐದು ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ವಹಣೆ ಮಾಡಲಾಗುವುದು.

ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ನೀಡುತ್ತಿರುವ ಕೋರ್ಸ್‍ಗಳಲ್ಲಿ ವಿಷಯಾಧಾರಿತ ಉದ್ಯಮಶೀಲತೆ ಅಭಿವೃದ್ಧಿ ತರಬೇತಿಯನ್ನು 25 ಸಾವಿರ ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು ಎಂದು ಹೇಳಿದರು.

ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆಉದ್ಯೋಗ ಆಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇವೇದಿಕೆಯಡಿ ತರಲು ಯುವ ಸಮೃದ್ಧಿ ಉದ್ಯೋಗ ಮೇಳವನ್ನುರಾಜ್ಯದ ವಿವಿಧ ಭಾಗದಲ್ಲೂ ಆಯೋಜಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

ಬಳ್ಳಾರಿ ಸಂಡೂರಿನಲ್ಲಿ ಸ್ಕಿಲ್‌ ಅಕಾಡೆಮಿ, ಮೈಸೂರಿನಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ

ಕೈಗಾರಿಕೆ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ, ಜಿಟಿಟಿಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ. ಮೊದಲ ಹಂತದ ಯೋಜನೆಯನ್ನು ಮೂರು ವರ್ಷಗಳ ಅವಧಿಯಲ್ಲಿ ಅಂದಾಜು 120 ಕೋಟಿ ರೂ.ಅನುಷ್ಠಾನ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾ ಖನಿಜ ನಿಧಿಯ ಮೂಲಕಗದಗ ಜಿಲ್ಲೆಯ ರೋಣದಲ್ಲಿ ನಬಾರ್ಡ್ ಸಹಯೋಗದೊಂದಿಗೆ 150 ಕೋಟಿ ವೆಚ್ಚದಲ್ಲಿ ಜಿಟಿಟಿಸಿ ಪ್ರಾರಂಭ ಮಾಡುವುದಾಗಿ ತಿಳಿಸಿದ್ದಾರೆ.

ರೋಬೋಟಿಕ್ಸ್‌ನಲ್ಲಿ ಹೆಚ್ಚುವರಿ ಡಿಪ್ಲೊಮಾ ಕೋರ್ಸ್‌

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಮೆಕ್ಯಾಟ್ರಾನಿಕ್ಸ್‍, ಎಲೆಕ್ಟ್ರಿಕಲ್ಸ್ , ಎಲೆಕ್ಟ್ರಾನಿಕ್ಸ್‌, ಎಂಜಿನಿಯರಿಂಗ್, ರೋಬೊಟಿಕ್ಸ್‌ ಇತ್ಯಾದಿ ಹೆಚ್ಚುವರಿ ಡಿಪ್ಲೊಮಾ ಕೋರ್ಸ್‍ಗಳನ್ನು ಜಿಟಿಟಿಸಿ ಮಾದರಿಯಲ್ಲಿ ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಇದರಿಂದ 15 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗುವುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೌಶಲ್ಯ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ್ಯ ಒಲಿಂಪಿಕ್ಸ್‌

ಕಲಬುರಗಿಯ ಕೆಜಿಟಿಟಿಐನಲ್ಲಿ ಸಿಎನ್‍ಸಿ ಯಂತ್ರವನ್ನುಕೇಂದ್ರೀಕರಿಸುವ ಮೊದಲ ಜೇಷ್ಠತಾ ಕೇಂದ್ರವನ್ನು 16 ಕೋಟಿ ವೆಚ್ಚದಲ್ಲಿ ಸ್ಥಾಪನೆ, ಐಟಿಐ ಜಿಟಿಟಿಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆಂಗ್ಲ ಮತ್ತು ಸಂಹನ ತರಬೇತಿಗೆ 5 ಕೋಟಿ ನೀಡಲಾಗುವುದು, ಶ್ರೇಷ್ಠತೆ ಮತ್ತು ಉನ್ನತ ಸಾಧನೆಯನ್ನು ಗುರುತಿಸಲು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುವ ಪ್ರತಿಕ್ಷಣಾರ್ಥಿಗಳನ್ನು ಕೌಶಲ್ಯ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ್ಯ ಒಲಿಂಪಿಕ್ಸ್‌ ಆಯೋಜಿಸಲಾಗುವುದು ಎಂದುತಿಳಿಸಿದ್ದಾರೆ.

ಉದ್ಯೋಗ ಶೀಲತೆಯನ್ನು ಹೆಚ್ಚಿಸಲು ಡ್ಯುಯಲ್ ಸಿಸ್ಟಮ್ ಟ್ರೈನಿಂಗ್ (ಡಿಎಸ್‍ಟಿ)ನ್ನು ರಾಜ್ಯದ ಎಲ್ಲಾ ಐಟಿಐಗಳಲ್ಲಿ ಕೈಗಾರಿಕೆಗಳು ಮತ್ತು ಉದ್ಯಮಗಳ ಸಹಭಾಗಿತ್ವದಲ್ಲಿ ಹಂತ ಹಂತವಾಗಿವಿಸ್ತರಿಸಲಾಗುವುದು ಎಂದಿದ್ದಾರೆ.

ಒಂದು ಲಕ್ಷ ಮಹಿಳಾ ಸ್ವಸಹಾಯ ಗುಂಪುಗಳನ್ನು ಮೀನುಗಾರಿಕೆ, ಕುಟುಕ, ಕುರಿ, ಮೇಕೆ ಸಾಗಾಣಿಕೆ, ಜೇನು ಸಾಕಾಣಿಕೆ ಮತ್ತು ಕಿರುಉದ್ಯಮ ಸ್ಥಾಪಿಸಲು 100 ಕೋಟಿ ವೆಚ್ಚ ಮಾಡುವುದಾಗಿಹೇಳಿರುವುದು ಸ್ವಾಗತಾರ್ಹ ಎಂದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version