Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು! - Vistara News

ಕರ್ನಾಟಕ ಬಜೆಟ್ 2024

Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!

Karnataka Budget 2024 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್‌ ಪ್ರಮುಖಾಂಶಗಳು ಇಲ್ಲಿವೆ. ಇದನ್ನು ಓಡಿದರೆ ಇಡೀ ಬಜೆಟ್‌ನ ಮುಖ್ಯಾಂಶಗಳು ಸಿಗಲಿವೆ.

VISTARANEWS.COM


on

Karnataka Budget 2024 High lights
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನಲ್ಲಿ ಕೃಷಿ, ನೀರಾವರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಿಗೆ ಅನುಕೂಲವಾಗುವಂತೆ ಹಲವು ಯೋಜನೆಗಳನ್ನು ಪ್ರಕಟಿಸಲಾಗಿದೆ. ಬಜೆಟ್‌ನ ಸಂಪೂರ್ಣ ಚಿತ್ರಣ ಇಲ್ಲಿದೆ (Complete details of Budget).

ಬಜೆಟ್‌ ಆರ್ಥಿಕ ನೋಟ ಹೀಗಿದೆ: ಯಾವುದಕ್ಕೆ ಎಷ್ಟು?

  • ಆಯವ್ಯಯ ಗಾತ್ರ (ಸಂಚಿತ ನಿಧಿ): 3,71,383 ಕೋಟಿ ರೂ.
  • ಒಟ್ಟು ಸ್ವೀಕೃತಿ: 3,68,674 ಕೋಟಿ ರೂ
  • ರಾಜಸ್ವ ಸ್ವೀಕೃತಿ: 2,63,178 ಕೋಟಿ
  • ಸಾರ್ವಜನಿಕ ಋಣ: 1,05,246 ಕೋಟ ರೂ. ಸೇರಿದಂತೆ ಬಂಡವಾಳ ಸ್ವೀಕೃತಿ 38 ಕೋಟಿ ರೂ.
  • ಒಟ್ಟು ವೆಚ್ಚ: 3,71,383 ಕೋಟಿ ರೂ.
  • ರಾಜಸ್ವ ವೆಚ್ಚ: 2,90,531 ಕೋಟ ರೂ.
  • ಬಂಡವಾಳ ವೆಚ್ಚ: 55,877 ಕೋಟ ರೂ.
  • ಸಾಲ ಮರುಪಾವತಿ: 24,794 ಕೋಟಿ ರೂ.
  • ಎಸ್‌.ಸಿ.ಎಸ್‌.ಪಿ. ಹಾಗೂ ಟಿ.ಎಸ್‌.ಪಿ. ಅಡಿಯಲ್ಲಿ ಆಯವ್ಯಯದಲ್ಲಿ ಒದಗಿಸಿದ ಅನುದಾನ 39,121 ಕೋಟಿ ರೂ.
  • ಎಸ್‌.ಸಿ.ಎಸ್‌.ಪಿ. ಅಡಿ 27,674 ಕೋಟಿ ರೂ. ಹಾಗೂ ಟಿ.ಎಸ್‌.ಪಿ. ಅಡಿ 11,447 ಕೋಟಿ ರೂ.
  • ಮಹಿಳಾ ಆಯವ್ಯಯದಲ್ಲಿ ಒದಗಿಸಿದ ಅನುದಾನ: 86,423 ಕೋಟಿ ರೂ.
  • ಮಕ್ಕಳ ಆಯವ್ಯಯದಲ್ಲಿ ಒದಗಿಸಿದ ಅನುದಾನ: 54,617 ಕೋಟಿ ರೂ.

2024-25 ನೇ ಸಾಲಿನ ಹೊಸ ಯೋಜನೆಗಳ ವಿವರ ಹೀಗಿದೆ:

ಕೃಷಿ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳೇನು?

  • ವಿವಿಧ ರೈತಪರ ಯೋಜನೆ ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ
  • ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ, ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ.
  • ಕೈಗೆಟಕುವ ದರದಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಮತ್ತು ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನ ಒದಗಿಸಲು “ನಮ್ಮ ಮಿಲ್ಲೆಟ್‌” ಹೊಸ ಕಾರ್ಯಕ್ರಮ ಪ್ರಾರಂಭ.
  • ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ ಸಲಹೆಗೆ ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿದ e-SAP ತಂತ್ರಾಂಶದ ಪರಿಚಯ.
  • ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್‌) ಸಂಸ್ಥೆಯನ್ನು ಬಲಪಡಿಸಲು PMFME ಯೋಜನೆಯಡಿ 80 ಕೋಟಿ ರೂ.
  • ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆ೦ಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಆಹಾರ ಪಾರ್ಕ್‌ ಸ್ಥಾಪನೆ.
  • ಕೃಷಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಆಧರಿಸಿ ಬೆಳೆಯ ಉತ್ಪಾದಕತೆ ಮುನ್ಸೂಚನೆಯನ್ನು ನೀಡಲು ದತ್ತಾಂಶ ಅಭಿವೃದ್ಧಿ.

ತೋಟಗಾರಿಕೆ ಕ್ಷೇತ್ರಕ್ಕೆ ಸಿಕ್ಕಿದ ಹೊಸ ಸವಲತ್ತುಗಳೇನು?

  • ತೋಟಗಾರಿಕೆ ಕುರಿತು ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸಲು ಆಯ್ದ ಜಿಲ್ಲೆಗಳಲ್ಲಿ ಕಿಸಾನ್‌ ಮಾಲ್‌ ಸ್ಥಾಪನೆ.
  • ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.
  • ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತಿನ ಪ್ರಮಾಣ ಹೆಚ್ಚಿಸಲು ಕೊಯ್ಲೋತ್ತರ ನಿರ್ವಹಣಾ ಕೇ೦ದ್ರ (PACKHOUSE) ಹಾಗೂ ಮೌಲ್ಯವರ್ಧನ ಸಂಸ್ಕರಣಾ ಘಟಕಗಳ ಸ್ಥಾಪನೆ.
  • ರಾಜ್ಯದಲ್ಲಿ ಅಡಿಕೆ ಬೆಳೆಯಲ್ಲಿ ರೋಗ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣೆ ಚಟುವಟಿಕೆಗೆ ಉತ್ತೇಜನ.
    -ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಪೈಸ್‌ ಪಾರ್ಕ್‌ ಅಭಿವೃದ್ಧಿ.
  • ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ

ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ

  • ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ 250 ಕೋಟ ರೂ. ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಎರಡನೇ ಹ೦ತ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ.
  • ರೇಷ್ಮ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹ ಧನ ನೀಡಲು 12 ಕೋಟಿ ರೂ. ಅನುದಾನ.
  • ಬೈವೋಲ್ಬೀನ್‌ ರೇಷ್ಮೆಗೂಡುಗಳಿಗೆ ನೀಡುವ ಪ್ರೋತ್ಸಾಹಧನ ಪ್ರತಿ ಕಿಲೋಗೆ 30 ರೂ. ಗೆ ಹೆಚ್ಚಳ.

ಪಶುಸಂಗೋಪನೆ: ಕುರಿಸಾಕಾಣಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆಗೆ ಉತ್ತೇಜನ

  • ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಕುರಿ ಸಾಕಾಣಿಕೆ, ಹೈನುಗಾರಿಕೆ, ಹ೦ದಿ ಮತ್ತು ಕೋಳಿ ಸಾಕಾಣಿಕೆಗೆ ಉತ್ತೇಜನ.
  • ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಷಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ.
  • ದುಸ್ಥಿತಿಯಲ್ಲಿರುವ 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ.
  • ವಲಸೆ ಕುರಿಗಾರರ ಅಭ್ಯುದಯಕ್ಕೆ ಕ್ರಮ ಹಾಗೂ ಅವರ ಮೇಲಿನ ಶೋಷಣೆ, ದೌರ್ಜನ್ಯ ತಡೆಯಲು “ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ’ ಜಾರಿ
  • ಪುತ್ತೂರು ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ.

ಮೀನುಗಾರಿಕೆಗೆ ಹಲವು ಯೋಜನೆ

  • ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್‌ ಗಾತ್ರದ ವಿವಿಧ ಯೋಜನೆಗಳ ಅನುಷ್ಠಾನ
  • ಮೀನುಗಾರರ ರಕ್ಷಣೆಗೆ ಸಮುದ್ರ ಅಂಬ್ಯುಲೆನ್ಸ್‌ ಖರೀದಿಗೆ 7 ಕೋಟಿ ರೂ.
  • ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು 3,000 ರೂ.ಗಳಿಗೆ ಹೆಚ್ಚಳ.
  • ವಿವಿಧ ವಸತಿ ಯೋಜನೆಗಳಡಿ 10,000 ವಸತಿರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ.

ಸಹಕಾರ: ಡಿಸಿಸಿ, ಪಿಕಾರ್ಡ್‌ ಬ್ಯಾಂಕ್‌ಗಳಿಗೆ ಸುಸ್ತಿ ಸಾಲ ಮನ್ನಾ ಅನುದಾನ

  • ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ.ಗಳಷ್ಟು ದಾಖಲೆಯ ಬೆಳೆ ಸಾಲ ವಿತರಣೆ ಗುರಿ.
  • ಸರ್ಕಾರದ ಹಿಂದಿನ ಅವಧಿಯ ಬೆಳೆಸಾಲ ಮನ್ನಾ ಬಾಬ್ತು ಬಾಕಿ ಇರುವ 132 ಕೋಟ ರೂ. ಮೊತ್ತ ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ
  • ಮಧ್ಯಮಾವಧಿ ಮತ್ತು ದೀರ್ಫಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಹಿನ್ನೆಲೆಯಲ್ಲಿ ಡಿಸಿಸಿ ಮತ್ತು ಪಿಕಾರ್ಡ್‌ ಬ್ಯಾಂಕುಗಳಿಗೆ 450 ಕೋಟಿ ರೂ. ಅನುದಾನ
  • ಟಿ.ಎ.ಪಿ.ಸಿ.ಎಂ.ಎಸ್‌.ಗಳಿಗೆ ಗೋದಾಮು ನಿರ್ಮಾಣಕ್ಕೆ ಶೇ. 6ರ ಬಡ್ಡಿ ಸಹಾಯಧನ
  • ರಾಜ್ಯದ ಪ್ರಮುಖ ಬೆಳೆಗಳಾದ ಅಡಿಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಹಾಗೂ ಎಂ.ಎಸ್‌. ಸ್ವಾಮಿನಾಥನ್‌ ಸಮಿತಿ ವರದಿ ಅನ್ವಯ ಬೇಸಾಯ ವೆಚ್ಚ ಮತ್ತು ಮಾಧ್ಯಮಿಕ, ಫೆಡರಲ್‌ ಹಾಗೂ ಅಪೆಕ್ಸ್‌ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಮೀಸಲಾತಿ ತರಲು ಅಧಿನಿಯಮಗಳಿಗೆ ತಿದ್ದುಪಡಿ

ಕೃಷಿ ಉತ್ಪನ್ನ ಸಂಸ್ಕರಣೆ, ಮಾರುಕಟ್ಟೆ ಸಂಪರ್ಕ ಮತ್ತು ಮೌಲ್ಯವರ್ಧನೆಗೆ ಪೂರಕ ಕ್ರಮಗಳು:

  • ಒಟ್ಟು 130 ಕೋಟಿ ರೂ. ವೆಚ್ಚದಲ್ಲಿ 7 ಶೀತಲಗೃಹ ನಿರ್ಮಾಣ. ರಾಯಚೂರು ಹಾಗೂ ರಾಣೆಬೆನ್ನೂರಿನಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭ.
  • ಮಂಗಳೂರಿನಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆ.
  • 10 ಕೋಟಿ ರೂ. ವೆಚ್ಚದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಎಲ್ಲಾ ಕಾರ್ಯ ಚಟುವಟಿಕೆಗಳ ಡಿಜಿಟಲೀಕರಣ.
  • ಎ.ಪಿ.ಎಂ.ಸಿ.ಗಳನ್ನು ಬಲಪಡಿಸಲು ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯುವುದು, ಮಾರುಕಟ್ಟೆ ಅಭಿವೃದ್ಧಿ ಸಹಾಯ ನಿಧಿ ಸ್ಥಾಪನೆ ಹಾಗೂ ಬೆಂಬಲ ಬೆಲೆ ಯೋಜನೆ ಜಾರಿಗೆ ಶಾಸನಾತ್ಮಕ ಬೆ೦ಬಲ ನೀಡಲು ಕ್ರಮ.
  • ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ತೂಕದಲ್ಲಾಗುವ ಮೋಸ ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಬಾನೆಗಳ ಬಳಿ ಎಪಿಎ೦ಸಿಗಳ ಮೂಲಕWeigh Bridge ಗಳ ನಿರ್ಮಾಣಕ್ಕೆ ಕ್ರಮ.

ಜಲಸಂಪನ್ಮೂಲ: ಮೇಕೆದಾಟು, ಎತ್ತಿನಹೊಳೆ ಯೋಜನೆಗೆ ವೇಗ

  1. ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ಒಂದು ಪ್ರತ್ಯೇಕ ಯೋಜನಾ ವಿಭಾಗವನ್ನು ಹಾಗೂ 2 ಉಪವಿಭಾಗಗಳ ಸ್ಥಾಪನೆ.
  • ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ದೊಡ್ಡನಗರದ ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ವ ಪರೀಕ್ಷಾರ್ಥ ಚಾಲನೆ. ಪ್ರಸಕ್ತ ಸಾಲಿನಲ್ಲಿ ಯೋಜನೆಯ ಎಲ್ಲಾ ಲಿಫ್ಟ್‌ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರುತ್ವ ಕಾಲುವೆಗೆ ನೀರು ಹರಿಸಲು ಕ್ರಮ.
  • ಕೃಷ್ಣಾ ಮೇಲ್ಬಂಡೆ ಯೋಜನೆ ಹಂತ-3 ಯೋಜನೆಯಡಿಯ ಉಪಯೋಜನೆಗಳನ್ನು ಪೂರ್ಣಗೊಳಿಸಲು ಹಾಗೂ ಇದರಡಿ ಭೂಸ್ವಾಧೀನ, ಪುನರ್‌ ವಸತಿ ಹಾಗೂ ಪುನರ್‌ ನಿರ್ಮಾಣಕ್ಕೆ ಆದ್ಯತೆ. ಕೃಷ್ಣಾ ನ್ಯಾಯಾಧಿಕರಣ-2ರ ಅಂತಿಮ ತೀರ್ಪಿನ ಬಾಕಿಯಿರುವ ಗೆಜೆಟ್‌ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಒತ್ತಾಯಿಸಲು ಕ್ರಮ.
  • ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಗುರಿ. ಘೋಷಣೆಯಂತೆ 5300 ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ.
  • ಕಳಸಾ ಮತ್ತು ಬಂಡೂರಾ ನಾಲಾ ತಿರುವು ಯೋಜನೆಗಳಡಿ ರಾಷ್ಟೀಯ ವನ್ಯ ಜೀವಿ ಮಂಡಳಿಯಿಂದ ಅರಣ್ಯ ತೀರುವಳಿ ನಿರೀಕ್ಷಿಸಿ ರಾಜ್ಯ ಸರ್ಕಾರವು ಟೆಂಡರ್‌ ಪ್ರಕ್ರಿಯೆ ಪ್ರಾರಂಭ; ಮಂಡಳಿಯ ಸಭೆಯಲ್ಲಿ ತೀರುವಳಿ ಕುರಿತ ತೀರ್ಮಾನ ಮುಂದೂಡಿಕೆ.
  • ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯ 15,600 ಕೋಟಿ ರೂ. ಮೊತ್ತದ ವಿವರವಾದ ಯೋಜನಾ ವರದಿ ಸಿದ್ಧ ಯೋಜನೆಯ ಅನುಷ್ಠಾನ ಸಂಬಂಧ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಾರಂಭ.
  • ಕೆ.ಆರ್‌.ಎಸ್‌ನ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಣ.
  • ಧಾರವಾಡದಲ್ಲಿರುವ ವಾಲ್ಮಿ ಸಂಸ್ಥೆಯನ್ನು Centre of Excellence in Water Management ಆಗಿ ಉನ್ನತೀಕರಿಸಲು ಕ್ರಮ.
  • ಪ್ರಗತಿಯಲ್ಲಿರುವ ಏತನೀರಾವರಿ ಯೋಜನೆಗಳಾದ ಬೂದಿಹಾಳ್‌-ಪೀರಾಪುರ ಹ೦ತ-1 ಶ್ರೀ ವೆಂಕಟೇಶ್ವರ ಹಾಗೂ ಕೆಂಪವಾಡ ಬಸವೇಶ್ವರ ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ಮುಂಡಗೋಡು, ತುಪರೀಹಳ್ಳ, ಸಾಸಿವೆಹಳ್ಳಿ, ದೇವದುರ್ಗ ಮತ್ತು ಗುರುಮಿಠಕಲ್‌ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮ.
  • ಪ್ರಗತಿಯಲ್ಲಿರುವ ಹೇಮಾವತಿ ಯೋಜನೆ ವೈನಾಲೆಯಡಿ 5.45 ಕಿ.ಮೀ ಉದ್ದದ ಹಾಗೂ ತುಮಕೂರು ಶಾಖಾ ನಾಲೆಯಡಿ 166.90 ಕಿ.ಮೀ. ಉದ್ದದ ನಾಲೆಯ ಆಧುನೀಕರಣ ಕಾಮಗಾರಿ ಪೂರ್ಣಗೊಳಿಸಲು ಕ್ರಮ.
  • ಕರ್ನಾಟಕ ನೀರಾವರಿ ನಿಗಮದಡಿ 7.280 ಕೋಟಿ ರೂ. ಅಂದಾಜು ಮೊತ್ತದಲ್ಲಿ ವಿವಿಧ ಏತ ನೀರಾವರಿ ಯೋಜನೆಗಳ ಅನುಷ್ಠಾನ; 97,698 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ.
  • ಕೃಷ್ಣಾ ಭಾಗ್ಯ ಜಲನಿಗಮದಡಿ 3.779 ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆಗಳ ಅನುಷ್ಠಾನ. 1,09,350 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ.
  • ಯಲಬುರ್ಗಾ-ಕುಕನೂರು ತಾಲ್ಲೂಕಿನಲ್ಲಿ 970 ಕೋಟಿ ರೂ. ವೆಚ್ಚದಲ್ಲಿ 38 ಕೆರೆಗಳನ್ನು ತುಂಬಿಸುವ ಯೋಜನೆ ಹಾಗೂ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪ್ರದೇಶಗಳಿಗೆ ಅಂದಾಜು 990 ಕೋಟಿ ರೂ. ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆ ಅನುಷ್ಠಾನ.
  • ಕಾವೇರಿ ನೀರಾವರಿ ನಿಗಮದಡಿ 2,000 ಕೋಟಿ ರೂ. ಮೊತ್ತದ ನೀರಾವರಿ, ನಾಲಾ ಹಾಗೂ ಕೆರೆ ತುಂಬಿಸುವ ಯೋಜನೆಗಳ ಜಾರಿ.
  • ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ 365 ಕೋಟ ರೂ. ಮೊತ್ತದ ಯೋಜನೆ ಜಾರಿ.
  • ಧಾರವಾಡ ಜಿಲ್ಲೆಯಲ್ಲಿ ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ.

ಸಣ್ಣ ನೀರಾವರಿ

  • 200 ಕೋಟಿ ರೂ. ವೆಚ್ಚದಲ್ಲಿ 115 ಜಲ ಸಂರಕ್ಷಣಾ ಕಾಮಗಾರಿ ಅನುಷ್ಠಾನ. ಪ್ರಗತಿಯಲ್ಲಿರುವ 455 ಕೋಟಿ ರೂ. ಮೊತ್ತದ ಕೆ.ಸಿ ವ್ಯಾಲಿ-2ನೇ ಹಂತದ ಉದ್ದೇಶಿತ 272 ಕೆರೆ ತುಂಬಿಸುವ ಯೋಜನೆ ಪೂರ್ಣಗೊಳಿಸಲು ಕ್ರಮ.

ಶಿಕ್ಷಣ ಮತ್ತು ಸಾಕ್ಷರತೆ: 2000 ದ್ವಿ ಮಾಧ್ಯಮ ಶಾಲೆ

  • ಶಾಲಾ ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದ೦ತಹ ಕಾಮಗಾರಿಗಳಿಗೆ 850 ಕೋಟಿ ರೂ.
  • ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ಸಿ.ಎಸ್‌.ಆರ್‌. ಅನುದಾನದಡಿ, ಕರ್ನಾಟಕ ಪಜ್ಲಿಕ್‌ ಶಾಲೆಗಳಾಗಿ ಆಯ್ದ ಶಾಲೆಗಳ ಉನ್ನತೀಕರಣ; 3ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ-ಗಣಕ ಕಾರ್ಯಕ್ರಮ, 10 ಕೋಟ ರೂ. ವೆಚ್ಚದಲ್ಲಿ ಮರು ಸಿ೦ಚನ ಕಾರ್ಯಕ್ರಮ; ಆಯ್ದ ಪ್ರೌಢ ಶಾಲೆಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ಹಾಗೂ ಕಂಪ್ಯೂಟರ್‌ ಪ್ರಯೋಗಾಲಯ, ಇಂಟರ್‌ನೆಟ್‌ ಸೌಲಭ್ಯ.
  • ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳ ಪರಿವರ್ತನೆ.
  • ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೊಸ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾರಂಭ.
  • ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ರಾಜ್ಯದ 74 ಆದರ್ಶ ವಿದ್ಯಾಲಯಗಳ ಉನ್ನತೀಕರಣ.
  • 100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಗಣಕ ವಿಜ್ಞಾನ ಸಂಯೋಜನೆ ಪ್ರಾರಂಭ.
  • ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಪ್ರಯೋಗಾಲಯಗಳ ಉನ್ನತೀಕರಣ.
  • ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 20,000 ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ 10 ಕೋಟ ರೂ. ವೆಚ್ಚದಲ್ಲಿ NEET/ JEE/CET ತರಬೇತಿ ಕಾರ್ಯಕ್ರಮ

ಉನ್ನತ ಶಿಕ್ಷಣ: ಎಂಜಿನಿಯರಿಂಗ್‌ ಕಾಲೇಜುಗಳ ಅಭಿವೃದ್ಧಿ

  • ರಾಜ್ಯದ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಸರ್ಕಾರಿ ಮಹಿಳಾ ಪಾಲಿಟೆಕ್ಸಿಕ್‌ಗಳ ಉನ್ನತೀಕರಣಕ್ಕಾಗಿ ಒಟ್ಟು 30 ಕೋಟಿ ರೂ. ಅನುದಾನ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಕಾಮಗಾರಿಗಳಿಗೆ 250 ಕೋಟಿ ರೂ. ಮತ್ತು ಸರ್ಕಾರಿ ಪಾಲಿಟೆಕ್ನಿಕ್‌ ಮತ್ತು ಇಂಜಿನಿಯರಿಂಗ್‌ ಕಾಲೇಜುಗಳ ಕಾಮಗಾರಿಗಳಿಗೆ 120 ಕೋಟಿ ರೂ. ಅನುದಾನ.
  • ಐಐಟಿ ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ವಿಶ್ವೇಶ್ವರಯ್ಯ ಇಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯ ಅಭಿವೃದ್ಧಿ.
  • 56 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ ಹಾಗೂ 116 ಕೋಟಿ ರೂ. ವೆಚ್ಚದಲ್ಲಿ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಸ್ಟೆಲ್‌ ಕಟ್ಟಡ ನಿರ್ಮಾಣಕ್ಕೆ ಕ್ರಮ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ಏಳು ಜಿಲ್ಲೆಗೆ ಕ್ರಿಟಿಕಲ್‌ ಕೇರ್‌ ಬ್ಲಾಕ್‌

  • ಏಳು ಜಿಲ್ಲೆಗಳಲ್ಲಿ 187 ಕೋಟ ರೂ. ವೆಚ್ಚದಲ್ಲಿ ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಕಟ್ಟಡ ನಿರ್ಮಾಣ
  • 280 ಕೋಟಿ ರೂ. ವೆಚ್ಚದಲ್ಲಿ ಏಳು ತಾಲೂಕುಗಳಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆ ನಿರ್ಮಾಣ.
  • ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಅನುದಾನ
  • ಬೆಂಗಳೂರಿನ ಕೆ.ಸಿ. ಜನರಲ್‌ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳಿಗೆ 150 ಕೋಟಿ ರೂ.
  • ಎರಡು ವರ್ಷಗಳಲ್ಲಿ 350 ಕೋಟಿ ರೂ. ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರ ಉನ್ನತೀಕರಣ.
  • ಕಲ್ಯಾಣ ಕರ್ನಾಟಕ ಭಾಗದಲ್ಲಿ 221 ಕೋಟಿ ರೂ. ವೆಚ್ಚದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ.
  • ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ 199 ಉಪಕೇ೦ದ್ರಗಳನ್ನು ಆರೋಗ್ಯ ಕ್ಷೇಮ ಕೇಂದ್ರಗಳ ಕಟ್ಟಡಕ್ಕಾಗಿ 130 ಕೋಟಿ ರೂ. ಅನುದಾನ.
  • 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ಡೇ-ಕೇರ್‌ ಕಿಮೋಥೆರಪಿ ಕೇಂದ್ರ ಸ್ಥಾಪನೆ.
  • 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್‌ ಆಸ್ಪತ್ರೆ ಬೆ೦ಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣ ಖರೀದಿಗೆ 21 ಕೋಟಿ ರೂ. ಅನುದಾನ
  • 13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ವ್ಯವಸ್ಥೆಯನ್ನು ಒದಗಿಸಲು 6 ಕೋಟ ರೂ. ಅನುದಾನ.
  • ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯ ರೋಗ ತಪಾಸಣೆಗಾಗಿ 87 True-Nat Machinesಗಳ ಖರೀದಿಗೆ 6 ಕೋಟ ರೂ. ಅನುದಾನ
  • ಉತ್ತರ ಕರ್ನಾಟಕದ ಜಿಲ್ಲೆಗಳ First Referral Unit (FRU) ಗಳಲ್ಲಿ ಎರಡು ವರ್ಷಗಳಲ್ಲಿ 50 ಹೊಸ ರಕ್ತ ಶೇಖರಣಾ ಘಟಕಗಳ ಸ್ಥಾಪನೆ.
  • ಮುಂದಿನ 4 ವರ್ಷದಲ್ಲಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL) ಸ್ಥಾಪನೆ.
  • ಮುಂದಿನ ಎರಡು ವರ್ಷಗಳಲ್ಲಿ 16 ಜಿಲ್ಲೆಗಳಲ್ಲಿ ಹಾಗೂ ಪ್ರಸಕ್ತ ಸಾಲಿನಲ್ಲಿ ತಾಲ್ಲೂಕು ಮಟ್ಟದ ಪ್ರಯೋಗಾಲಯ ಸ್ಥಾಪನೆ. ಒಟ್ಟಾರೆ 11 ಕೋಟಿ ರೂ. ಅನುದಾನ.
  • ಬೆಂಗಳೂರಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ HUB and Spoke ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಹನೆಗೆ 20 ಕೋಟಿ ರೂ. ಅನುದಾನ

ವೈದ್ಯಕೀಯ ಶಿಕ್ಷಣ: ಮೈಸೂರಿಗೆ Nephro-Urology ಆಸ್ಪತ್ರೆ

  • ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ.
  • 2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ 400 ಕೋಟಿ ರೂ. ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ 130 ಕೋಟಿ ರೂ. ಅನುದಾನ.
  • ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಣ.
  • ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ.
  • ಬೆ೦ಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೋಟಿಕ್‌ ಶಸ್ತ್ರಚಿಕಿತ್ಸಾ ಸೌಲಭ್ಯ.
  • ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Viral Research & Diagnostic Laboratory (VRDL)ಅನ್ನು ಸ್ಥಾಪಿಸಲಾಗುವುದು.
  • ಡಿಜಿಟಲ್‌ ಹೆಲ್ತ್‌ ಸೊಸೈಟಿಯಡಿ Health Repositoryಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿ ಒಂದೇ ಮೂಲದಿಂದ ಲಭ್ಯವಾಗುವಂತೆ ಮಾಡಲು ಕ್ರಮ.
  • ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಶತಮಾನೋತ್ಸವದ ಸವಿನೆನಪಿಗಾಗಿ ಕೆ.ಆರ್‌. ಆಸ್ಪತ್ರೆ ಆವರಣದಲ್ಲಿ 75 ಕೋಟ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣಕ್ಕೆ ಕ್ರಮ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ: ಅಂಗನವಾಡಿ ಶಿಕ್ಷಕಿಯರಿಗೆ ಫೋನ್‌

  • ಗೃಹಲಕ್ಷ್ಮಿ ಯೋಜನೆಗೆ 2024-25ನೇ ಸಾಲಿಗೆ 28,608 ಕೋಟಿ ರೂ. ನಿಗದಿ.
  • ಅ೦ಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್‌ ಘೋನ್‌ ಒದಗಿಸಲು ಕ್ರಮ.
  • ರಾಜ್ಯದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 1,000 ಅ೦ಗನವಾಡಿ ನಿರ್ಮಾಣ.
  • Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನ
  • ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ ಎರಡು ಕೋಟಿ ರೂ. ವೆಚ್ಚದಲ್ಲಿ 4 ಅನುಪಾಲನಾ ಗೃಹಗಳ ಪ್ರಾರಂಭ. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ಪ್ರಸ್ತುತ ನೀಡುತ್ತಿರುವ ಮಾಸಾಶನ 2000 ರೂ. ಗಳಿಗೆ ಹೆಚ್ಚಳ
  • ಲಿಂಗತ್ವ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನ 1.200 ರೂ. ಗಳಿಗೆ ಹೆಚ್ಚಳ.

ಸಮಾಜ ಕಲ್ಯಾಣ: ಹಾಸ್ಟೆಲ್‌ ಅಭಿವೃದ್ಧಿಗೆ 2,710 ಕೋಟಿ ರೂ.

  1. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿ೦ದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ. ಅನುದಾನ.
  • ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಭೋಜನ ಮಾಸಿಕ ಭೋಜನ ವೆಚ್ಚ ತಲಾ 100 ರೂ. ಹೆಚ್ಚಳ.
  • ಕ್ರೈಸ್‌ ಅಡಿಯಲ್ಲಿ 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ.
  • 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳ ಪ್ರಾರಂಭ.
  • 18 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳ ನಿರ್ಮಾಣ; 31 ಹೊಸ ಮೆಟ್ರಕ್‌ ನಂತರದ ವಸತಿನಿಲಯ ಮಂಜೂರು ಮಾಡಲು ಕ್ರಮ.
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 35 ಕೋಟಿ ರೂ.ಗಳ Corpus Fund ಸ್ಥಾಪನೆ.
  • ಪದ್ಮಶ್ರೀ ಡಾ. ಸಿದ್ದಲಿಂಗಯ್ಯ ಅವರ ಸರಣಾರ್ಥ ಬೆ೦ಗಳೂರು ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಸ್ಥಾಪನೆ.

ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಹಲವು ಯೋಜನೆ

  • ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳಿಗೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಎ೦ದು ಮರುನಾಮಕರಣ ಮಾಡಿ 5 ಹಾಗೂ 7ನೇ ತರಗತಿವರೆಗೆ ಇರುವ ಈ ಶಾಲೆಗಳಲ್ಲಿ ಕ್ರಮವಾಗಿ ಆರನೇ ಹಾಗೂ ಎ೦ಟನೇ ತರಗತಿ ಪ್ರಾರಂಭಿಸಲು ಕ್ರಮ ಹಾಗೂ ಪ್ರತಿ ತರಗತಿಯ ವಿದ್ಯಾರ್ಥಿಗಳ ಸಂಖ್ಯಾಬಲ 25 ರಿಂದ 40ಕ್ಕೆ ಹೆಚ್ಚಳ.
  • 7 ಜಿಲ್ಲಾ ಕೇಂದ್ರಗಳಲ್ಲಿ 100 ಸಂಖ್ಯಾಬಲದ ಬಾಲಕ/ಬಾಲಕಿಯರ 14 ವಿದ್ಯಾರ್ಥಿನಿಲಯಗಳ ಪ್ರಾರಂಭ.
  • IISC, IIT ಮತ್ತು NIT ಸಂಸ್ಥೆಗಳ ಮೂಲಕ ವೃತ್ತಿಪರ ತರಬೇತಿ ಕೋರ್ಸ್‌ಗೆ ದಾಖಲಾಗುವ 200 ಇಂಜಿನಿಯರಿಂಗ್‌ ಪದವೀಧರರಿಗೆ 15,000 ರೂ.ಗಳ ಶಿಷ್ಯವೇತನ ನೀಡಲು ಕ್ರಮ.
  • 5,000 ಯುವಕ/ಯುವತಿಯರಿಗೆ ಡ್ರೋನ್‌ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ.
  • ಪೋಸ್ಟ್‌ ಡಾಕ್ಟರಲ್‌ ಫೆಲೋಶಿಪ್‌ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್‌ ಪಡೆಯದಿದ್ದಲ್ಲಿ ಮಾಸಿಕ 25,000 ರೂ.ಗಳ ಶಿಷ್ಯವೇತನ ಸೌಲಭ್ಯ.
  • 23 ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಏಕಲವ್ಯ ಮಾದರಿಯ ಪ್ರತಿ ವಸತಿ ಶಾಲೆಯಲ್ಲಿ 20 ಸೀಟು ಮೀಸಲು ಹಾಗೂ ಪಡಿತರ ಚೀಟಿ ಮುಂತಾದ ಸರ್ಕಾರಿ ದಾಖಲೆಗಳನ್ನು ಒದಗಿಸಲು ವಿಶೇಷ ಕೋಶ ಸ್ಥಾಪನೆ.

ಹಿಂದುಳಿದ ವರ್ಗಗಳ ಕಲ್ಯಾಣ: ಹೊಸ ವಸತಿ ನಿಲಯ ಪ್ರಾರಂಭ

  • ಹಿಂದುಳಿದ ವರ್ಗಗಳ 150 ಮೆಟ್ರಿಕ್‌ ನಂತರದ ಹೊಸ ವಸತಿನಿಲಯಗಳ ಪ್ರಾರಂಭ; 174 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 200 ಕೋಟ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಕ್ರಮ.
  • 30 ವಿದ್ಯಾರ್ಥಿನಿಲಯಗಳಿಗೆ ನಾಲ್ಕು ಕೋಟ ರೂ.ಗಳ ಘಟಕ ವೆಚ್ಚದಲ್ಲಿ ಕಟ್ಟಡ ನಿರ್ಮಾಣ.
  • ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ CLAT, MAT ಮತ್ತು Chartered Accountant ಫೌಂಡೇಷನ್‌ ಪರೀಕ್ಷಾ ಪೂರ್ವ ತರಬೇತಿ.
  • 500 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷಗಳ JEE/NEET ಉಚಿತ ತರಬೇತಿ ನೀಡಲು ಕ್ರಮ.
  • ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸ್ಥಿತಿಗತಿ ಅಧ್ಯಯನಕ್ಕಾಗಿ ಅಭಿವೃದ್ಧಿಗಾಗಿ ಕರ್ನಾಟಕ ಅಲೆಮಾರಿ ಆಯೋಗ ರಚನೆ.
  • ಅಲ್ಪಸಂಖ್ಯಾತರ ಕಲ್ಯಾಣ
  • 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 100 ಸಂಖ್ಯಾಬಲವುಳ್ಳ 100 ಮೆಟ್ರಿಕ್‌ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳು, 100 ಹೊಸ ಮೌಲಾನಾ ಆಜಾದ್‌ ಶಾಲೆಗಳ ಪ್ರಾರಂಭ ಹಾಗೂ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಪ್ರಾರಂಭ.
  • ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ 10 ಕೋಟ ರೂ.ವರೆಗಿನ ಸಾಲಕ್ಕೆ ಶೇ.6 ರಷ್ಟು ಬಡ್ಡಿ ಸಹಾಯಧನ ಸೌಲಭ್ಯ.
  • ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಅನುದಾನ. ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ದಿಗಾಗಿ 100 ಕೋಟ ರೂ. ಅನುದಾನ
  • ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು 20 ಕೋಟ ರೂ. ಅನುದಾನ.
  • ಮಂಗಳೂರಿನ ಹಜ್‌ ಭವನದ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ.
  • ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. ಅನುದಾನ.
  • ಸಿಖ್‌ ಲಿಗಾರ್‌ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಹಾಗೂ ಬೀದರ್‌ ಗುರುದ್ದಾರ ಅಭಿವೃದ್ಧಿಗೆ 1 ಕೋಟಿ ರೂ.

ವಸತಿ: 2024-25 ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ

  • ನಗರ ಪ್ರದೇಶದ ಬಡವರಿಗೆ ವಸತಿ ಸೌಲಭ್ಯಕ್ಕಾಗಿ ಸಂಪನ್ಮೂಲ ಕ್ರೋಡೀಕರಿಸಲು ಪ್ರಸ್ತಾಪಿಸಿದ ಸುಧಾರಣಾ ಕ್ರಮಗಳು: Asset Monetisation, Karnataka Affordable Housing Fund (KAHF) ಸ್ಥಾಪನೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್‌ ದರ ಪರಿಷ್ಕರಣೆ; ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸ೦ಪನ್ಮೂಲ ಸೃಜನೆಗೆ ಕ್ರಮ.
  • ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು
  • ಅನ್ನಭಾಗ್ಯ ಯೋಜನೆಯಡಿ ಜನವರಿ 2024ರ ಅಂತ್ಯದವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟ ರೂ. ವರ್ಗಾವಣೆ.
  • 80 ವರ್ಷ ದಾಟದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸಲು ಅನ್ನ-ಸುವಿಧಾ ಯೋಜನೆ ಜಾರಿ.

ಕಾರ್ಮಿಕ: ಗಿಗ್‌ ಕಾರ್ಮಿಕರ ಕಲ್ಯಾಣ

  • Platform-Based Gig Workers Fund and Welfare Fee Bill ಎಂಬ ಹೊಸ ವಿಧೇಯಕ ಜಾರಿಯ ಮೂಲಕ ಗಿಗ್‌ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮ ರೂಪಿಸಲು ಕ್ರಮ.
  • ಆಶಾದೀಪ ಯೋಜನೆಯಡಿ ಅಪ್ರೆಂಟಿಸ್‌ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಸೌಲಭ್ಯ ವಿಸ್ತರಣೆ ಮೂಲಕ ಶಿಷ್ಯ ವೇತನ ಅವಧಿ ಒಂದು ವರ್ಷಕ್ಕೆ ಹೆಚ್ಚಳ, ಕಾಯಂ ನೇಮಕಾತಿ ಮಾಡಿಕೊಂಡಲ್ಲಿ ವೇತನ ಮರುಪಾವತಿ ಅವಧಿ ಎರಡು ವರ್ಷಕ್ಕೆ ಹೆಚ್ಚಳ ಹಾಗೂ ವೇತನದ ಗರಿಷ್ಠ ಮಿತಿ 7,000 ರೂ. ಗಳಿಗೆ ಹೆಚ್ಚಳ.
  • ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲು ಆಯ್ದ 10 ಜಿಲ್ಲೆಗಳಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಾಣ.
  • ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಸಾರಿಗೆ ವಾಹನಗಳ ಕಾರ್ಮಿಕರಿಗೆ ಭದ್ರತಾ ಮತ್ತು ಕಲ್ಯಾಣ ಕಾರ್ಯಕ್ರಮಗಳ ಜಾರಿ
  • ಇ.ಎಸ್‌.ಐ ಯೋಜನೆಯಡಿ ಒಟ್ಟಾರೆ 311 ಕೋಟಿ ರೂ. ವೆಚ್ಚದಲ್ಲಿ ವಿವಿಧ ಸೇವೆ ಹಾಗೂ ಸೌಲಭ್ಯಗಳ ವಿಸ್ತರಣೆ.

ಕೌಶಲ್ಯಾಭಿವೃದ್ಧಿ: ರಾಜ್ಯ ಕೌಶಲ್ಯ ನೀತಿ ಜಾರಿ

  • ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯಮ ಅವಕಾಶಗಳನ್ನು ಒದಗಿಸಲು ರಾಜ್ಯ ಕೌಶಲ್ಯ ನೀತಿ ಜಾರಿ.
  • ಯುವನಿಧಿ ಪ್ಲಸ್‌ ಉಪಕ್ರಮದಡಿಯಲ್ಲಿ 25,000 ಫಲಾನುಭವಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ.
  • ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್‌ ಅಕಾಡೆಮಿ ಸ್ಥಾಪನೆ.
  • ಬಳ್ಳಾರಿ, ಕಲಬುರಗಿ, ತಳಕಲ್‌ ಮತ್ತು ಮೈಸೂರಿನ ವರುಣಾದಲ್ಲಿ 350 ಕೋಟಿ ವೆಚ್ಚದಲ್ಲಿ ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ.
  • ಬಳ್ಳಾರಿ, ಚಿತ್ರದುರ್ಗ, ರೋಣದಲ್ಲಿ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿಗಳ ಪ್ರಾರಂಭ.
  • ಕಲಬುರಗಿಯ ಕೆ.ಜಿ.ಟಿ.ಟಿ.ಐ.ನಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ಸಿ.ಎನ್‌.ಸಿ (Computer Numerical Control) ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಶ್ರೇಷ್ಟತಾ ಕೇಂದ್ರ ಸ್ಥಾಪನೆ.
  • ಐ.ಟಿ.ಐ. ಮತ್ತು ಜಿ.ಟಿ.ಟಿ.ಸಿ 40,000 ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಮತ್ತು ಸಂವಹನ ಕೌಶಲ್ಯ ತರಬೇತಿಗೆ 5 ಕೋಟಿ ರೂ. ವೆಚ್ಚ
  • ರಾಜ್ಯದ ಎಲ್ಲಾ ಐ.ಟಿ.ಐಗಳಲ್ಲಿ ಸ್ಥಳೀಯ ಕೈಗಾರಿಕೆಗಳು ಹಾಗೂ ಉದ್ಯಮಗಳ ಸಹಭಾಗಿತ್ವದಲ್ಲಿ Dual System of Training (DST) ವಿಸ್ತರಣೆ.
  • ಜಾಗತಿಕ ಬ೦ಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸ್ಕಿಲ್‌ ಕನೆಕ್ಟ್‌ ಸಮಿಟ್‌ (Skill Connect Summit) ಆಯೋಜನೆಗೆ ಕ್ರಮ.
  • ಎರಡು ವರ್ಷದಲ್ಲಿ 50,000 ಎಸ್‌.ಎಚ್‌.ಜಿ. ಮಹಿಳಾ ಸ್ವಾಮ್ಯದ ಸೂಕ್ಷ್ಮ ಉದ್ಯಮಗಳ ಅಭಿವೃದ್ಧಿಗೆ ಕ್ರಮ.
  • ಒಂದು ಲಕ್ಷ ಮಹಿಳಾ ಸ್ವ-ಸಹಾಯ ಗು೦ಪುಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಿರು ಉದ್ದಿಮೆಗಳನ್ನು ಸ್ಥಾಪಿಸಲು ಮತ್ತು ಅವುಗಳಿಗೆ ಸೂಕ್ತ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸಲು ಕ್ರಮ.
  • ಐಐಎಂಬಿ ಸಹಭಾಗಿತ್ವದಲ್ಲಿ 10 ಜಿಲ್ಲಾ ಮಟ್ಟದ ಇನ್‌ಕ್ಯುಬೇಷನ್‌ ಕೇಂದ್ರಗಳ ಸ್ಥಾಪನೆ.
  • ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿ ಎ೦ಬ ಮಹಿಳೆಯರೇ ನಡೆಸುವ ಕ್ಯಾಂಟೀನ್‌ಗಳ ಸ್ಥಾಪನೆ ಹಾಗೂ 2.500 ಕಾಫಿ ಕಿಯಾಸ್ಕ್‌ ಸ್ಥಾಪನೆಗೆ ಕ್ರಮ.

ಬಜೆಟ್‌ ಮುಖ್ಯಾಂಶಗಳ ಪೂರ್ಣ ರೂಪವನ್ನು ಇಲ್ಲಿಯೂ ನೋಡಬಹುದು..

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕರ್ನಾಟಕ

Karnataka Budget 2024: ದಿಕ್ಕು-ದೆಸೆ ಇಲ್ಲದ ಸಾಲದ ಹೊರೆಯ ಬಜೆಟ್: ಸಚಿವ ಪ್ರಲ್ಹಾದ್‌ ಜೋಶಿ

Karnataka Budget 2024: ರಾಜ್ಯ ಬಜೆಟ್‌ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ.

VISTARANEWS.COM


on

Union Minister Pralhad Joshi reacts to state budget
Koo

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಯಾವುದೇ ದಿಕ್ಕು-ದಿಸೆ ಇಲ್ಲದ ಒಂದು ದಾಖಲೆ ಪಟ್ಟಿಯಂತಿದೆ. 3.71 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆ ಬಿಟ್ಟರೆ, ಇದು ರಾಜ್ಯದ ಜನರ ಕಲ್ಯಾಣ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ರಾಜ್ಯ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು. ಗ್ಯಾರಂಟಿಗಳಿಗೆ ವರ್ಷವಿಡೀ ಹೇಗೆ ಹಣ ಕ್ರೋಡೀಕರಣ ಎಂಬ ಅಂಶವಿದೆಯೇ ಹೊರತು ಮುಂದಿನ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಶಕ್ತಗೊಳಿಸಲು ಯಾವುದೇ ಯೋಜನೆಗಳ ಪ್ರಸ್ತಾಪವೇ ಇಲ್ಲ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರದ ಪ್ರಸ್ತಾವನೆಗಳೇ ಈ ಬಜೆಟ್‌ನಲ್ಲಿವೆ ಅಷ್ಟೇ. ನೀರಾವರಿ ಯೋಜನೆಗಳಿಗೆ ಯಾವುದೇ ಹಣಕಾಸು ಪ್ರಸ್ತಾಪವಿಲ್ಲ. ಕೇಂದ್ರ ಸರ್ಕಾರದ ಅನುಮತಿ ನೇಪಹೇಳಿ ಜಾರಿಕೊಳ್ಳುವ ವ್ಯರ್ಥ ಪ್ರಯತ್ನವೇ ಸಿಎಂ ಸಿದ್ದರಾಮಯ್ಯ ಅವರ ಕಸರತ್ತು ಆಗಿದೆ ಎಂದು ಸಚಿವರು ಆರೋಪಿಸಿದ್ದಾರೆ.‌

ಇದನ್ನೂ ಓದಿ | Karnataka Budget 2024 : ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!

ಸಾಲದ ಹೊರೆಯ ಬಜೆಟ್

ಕಳೆದ ವರ್ಷಕ್ಕೆ ಹೋಲಿಸಿದರೆ ರೆವೆನ್ಯೂ ವೆಚ್ಚ 1 ಲಕ್ಷ ಕೋಟಿಗೂ ಮೀರಿದೆ. ತೆರಿಗೆದಾರರ ಮೇಲೆ ಅನಗತ್ಯ ಹೊರೆ ಹೇರಲಾಗಿದೆ. ಅಲ್ಲದೇ, ಕಳೆದ ಸರ್ಕಾರಕ್ಕಿಂತ ಶೇ.22ರಷ್ಟು ಸಾಲದ ಹೊರೆ ಇದರಲ್ಲಿದೆ. 1,05,246 ಕೋಟಿಗೂ ಅಧಿಕ ಸಾಲ ಈ ಬಜೆಟ್ ಒಳಗೊಂಡಿದೆ. ಹಾಗಾಗಿ ಇದೊಂದು ಸಾಲದ ಹೊರೆಯ ಬಜೆಟ್ ಆಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

Continue Reading

ಕರ್ನಾಟಕ

Karnataka Budget 2024: ಸಾಲ ಶೂಲದ ಹರಿಕಾರ ಸಾಲರಾಮಯ್ಯ; ರಾಜ್ಯ ಬಜೆಟ್‌ ಬಗ್ಗೆ ಬಿಜೆಪಿ ಟೀಕೆ

Karnataka Budget 2024: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

VISTARANEWS.COM


on

Karnataka Budget 2024 new 1
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ ಬಗ್ಗೆ ಸಾರ್ವಜನಿಕರು ಮತ್ತು ರಾಜಕೀಯ ನಾಯಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇನ್ನು ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿ, ಸಾಲ ಶೂಲದ ಹರಿಕಾರ ಸಾಲರಾಮಯ್ಯ, ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ. ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ | Karnataka Budget Session 2024: ಬಿಜೆಪಿಯವರ ತಲೆಯಲ್ಲಿ ಏನೂ ಇಲ್ಲ; ಬಡವರ ಕೊಳ್ಳುವ ಶಕ್ತಿ ಹೆಚ್ಚಿಸುವ ಬಜೆಟ್‌ ಎಂದ ಸಿದ್ದರಾಮಯ್ಯ

ನಯಾಪೈಸೆ ಪ್ರಯೋಜನ ಇಲ್ಲದ ಬಜೆಟ್‌, ಉತ್ತರಕ್ಕೆ ಒಂದು ರೂ. ಕೂಡಾ ಇಲ್ಲ; ಬಿ.ವೈ ವಿಜಯೇಂದ್ರ

Karnataka-Budget-2024-BY-Vijayendra
Karnataka-Budget-2024-BY-Vijayendra

ಬೆಂಗಳೂರು: ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು (CM Siddaramaiah) ಇಂದು ಮಂಡಿಸಿದ ರಾಜ್ಯ ಬಜೆಟ್‌ (Karnataka Budget 2024) ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ವಿಶ್ಲೇಷಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಟೀಕಿಸಿದರು.

ಯುವಕರಿಗೆ ಯಾವುದೇ ಒಂದು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಣೆ ಮಾಡಿಲ್ಲ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಇವತ್ತು ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ಸಮಯ ವ್ಯರ್ಥ ಮಾಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!

ಈ ಬಜೆಟ್‍ನ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ಷೇಪಿಸಿದ ಅವರು, ಮೊನ್ನೆ ದೆಹಲಿ ಚಲೋ ಮಾಡಿದ್ದರು. ದೆಹಲಿಯಲ್ಲಿ ರಾಜ್ಯ ಸರಕಾರದ ಗೌರವವನ್ನು ಹರಾಜು ಹಾಕುವ ಕೆಲಸ ಆಗಿತ್ತು. ಇವತ್ತು ಕೂಡ ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಕೇಂದ್ರ ಸರಕಾರವನ್ನು ದೂರುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿ ಇಲ್ಲ..

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಡದ ಬಜೆಟ್ ಇದಾಗಿದೆ. ಸಂಕಷ್ಟದಲ್ಲಿರುವ ರೈತರು ಬಜೆಟ್ ಮೂಲಕ ಪರಿಹಾರದ ನಿರೀಕ್ಷೆಯಲ್ಲಿದ್ದರು. ಇದರಡಿ ಮಹಿಳೆಯರಿಗೂ ಅನುಕೂಲ ಆಗುವುದಿಲ್ಲ. ಇವರು ತಮ್ಮ ಪ್ರಣಾಳಿಕೆಯಲ್ಲಿ ನೇಕಾರರ ಬಗ್ಗೆ ಮಾತನಾಡಿದ್ದರು. ನೇಕಾರರ ಪರವಾಗಿ ಯಾವುದೇ ಒಂದು ಯೋಜನೆಯನ್ನು ಘೋಷಣೆ ಮಾಡಿಲ್ಲ. ಯೋಜನೆ ಘೋಷಿಸುವುದು ಇರಲಿ; ಆ ನೇಕಾರರ ಹೆಸರನ್ನೂ ಉಲ್ಲೇಖಿಸಿಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳವಿಲ್ಲ!

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಅದರ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ‘ನುಡಿದಂತೆ ನಡೆದ ಸರಕಾರ’ ಎಂದು ಕೊಚ್ಚಿಕೊಳ್ಳುತ್ತಾರೆ. ‘ನುಡಿದಂತೆ ನಡೆದ ಸರಕಾರ’ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದು, ರಾಜ್ಯದ ರೈತರು, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿ ಎಲ್ಲ ವರ್ಗಕ್ಕೂ ನಿರಾಸೆ ಮೂಡಿಸಿದ ಬಜೆಟ್ ಇದು ಎಂದು ತಿಳಿಸಿದರು.

ಕೃಷಿ ಬೆಳೆ ಸಾಲ ಮನ್ನಾದ ಉಲ್ಲೇಖವೇ ಇಲ್ಲ

ಬರಗಾಲದ ಸಂದರ್ಭದಲ್ಲೂ ಕೃಷಿ ಮತ್ತು ಬೆಳೆ ಸಾಲದ ಮನ್ನಾ ಕುರಿತು ಉಲ್ಲೇಖ ಮಾಡಿಲ್ಲ. ಸರಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಇವರು ಮಾಡಿದ್ದಾರೆ. ಬರಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ಅನುಕೂಲ ಆಗದ ಬಜೆಟ್, ನಿಶ್ಚಿತವಾಗಿ ಇದು ಕರಾಳ ದಿನ ಎಂದರೂ ತಪ್ಪಾಗಲಾರದು ಎಂದು ನುಡಿದರು.

ಇದನ್ನೂ ಓದಿ | Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ?; ಇಲ್ಲಿದೆ ಮಾಹಿತಿ

ಸಿದ್ದರಾಮಯ್ಯ ಅವರಿಂದ ಇಂಥ ಬಜೆಟ್‌ ನಿರೀಕ್ಷೆ ಮಾಡಿರಲಿಲ್ಲ

15ನೇ ಬಜೆಟ್ ಮಂಡಿಸುತ್ತಿರುವ ಒಬ್ಬ ಅನುಭವಿ ಮುಖ್ಯಮಂತ್ರಿ ಈ ರೀತಿ ಬಜೆಟ್ ಮಂಡಿಸಬಹುದೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ನಿಜವಾಗಲೂ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಒಂದು ದುರಂತವೇ ಸರಿ ಎಂದ ಅವರು, ರೈತರನ್ನೂ ಕಡೆಗಣಿಸಿದ್ದಾರೆ; ಮಹಿಳೆಯರನ್ನೂ ಕಡೆಗಣಿಸಿದ್ದಾರೆ; ನೇಕಾರರನ್ನೂ ಕಡೆಗಣಿಸಿದ್ದಾರೆ, ಯುವಕರನ್ನೂ ಕಡೆಗಣಿಸಿದ್ದಾರೆ; ಉತ್ತರ ಕರ್ನಾಟಕದ ಅಭಿವೃದ್ಧಿಯನ್ನೂ ಕಡೆಗಣಿಸಿದ ಸರಕಾರ ಬಹುಶಃ ರಾಜ್ಯದ ಜನರ ಪಾಲಿಗೆ ಬದುಕಿದ್ದೂ ಸತ್ತಂತೆ ಎಂದು ಹೇಳಿದರು.

Continue Reading

ಕರ್ನಾಟಕ ಬಜೆಟ್ 2024

Karnataka Budget 2024 : ಸಾಲ ಮಾಡಿ ತುಪ್ಪ ತಂದ ಸಿದ್ದರಾಮಯ್ಯ: ಗ್ಯಾರಂಟಿಗೆ ಮೋಸವಿಲ್ಲ!

Karnataka Budget 2024 : ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ ಸರ್ವಸ್ಪರ್ಶಿ. ಆದರೆ, ಅದು ಯಾವುದನ್ನೂ ತಟ್ಟಿದಂತಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಸಾಕಷ್ಟು ಹಣವನ್ನು ಇಟ್ಟಿರುವ ಸಿದ್ದರಾಮಯ್ಯ ತಮ್ಮ ಬಜೆಟ್‌ ಗಾಗಿ ಒಂದು ಲಕ್ಷಕ್ಕಿಂತಲೂ ಹೆಚ್ಚು ಹಣವನ್ನು ಸಾಲದ ಮೂಲಕ ಹೊಂದಾಣಿಕೆ ಮಾಡಬೇಕಾಗಿದೆ.

VISTARANEWS.COM


on

Karnataka Budget 2024 Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಾಲ ಮಾಡಿ ತುಪ್ಪ ತಂದಿದ್ದಾರೆ. ರಾಜ್ಯದ ಜನತೆಗೆ ಅದನ್ನು ಹಿತವಾಗಿ ಹಂಚಿದ್ದಾರೆ. ಹೊಸತೇನೂ ಇಲ್ಲವಾದರೂ ಹೊತ್ತಿನ ಊಟಕ್ಕೆ ಸಾಕಾಗುವಂತೆ ಬಡಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಭಾರಿ ಜನಪ್ರಿಯ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅಡಚಣೆ ಆಗದಂತೆ ತಾಳಮೇಳ ಕಾಯ್ದುಕೊಂಡಿದ್ದಾರೆ: ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನ (Karnataka Budget 2024) ಸಿಂಪಲ್‌ ವಿಮರ್ಶೆ.

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಮಂಡಿಸಿದ ಮೊದಲ ಪೂರ್ಣ ಪ್ರಮಾಣದ ಬಜೆಟ್‌ ಇದಾಗಿದೆ. 2023ರ ಜುಲೈ 7ರಂದು ಮಂಡಿಸಿದ ಬಜೆಟ್‌ ಕೇವಲ ಎಂಟು ತಿಂಗಳಿಗೆ ಸೀಮಿತವಾಗಿತ್ತು. ಶುಕ್ರವಾರ ವಿಧಾನಸಭೆಯಲ್ಲಿ ಅವರು ಸುಮಾರು ಮೂರು ಗಂಟೆ 14 ನಿಮಿಷಗಳ ಸುದೀರ್ಘ ಕಾಲ ಬಜೆಟ್‌ ಮಂಡನೆ ಮಾಡಿದ್ದು, ಅದರಲ್ಲಿ ಎಲ್ಲ ಪ್ರಮುಖ ಕ್ಷೇತ್ರಗಳಿಗೆ ಬಿಡಿ ಬಿಡಿಯಾಗಿ ಅನುದಾನಗಳನ್ನು ಪ್ರಕಟಿಸಿದ್ದಾರೆ.

2024-25ನೇ ಸಾಲಿನ ಕರ್ನಾಟಕ ರಾಜ್ಯ ‌ ಆಯವ್ಯಯದ (Karnataka Budget 2024) ಒಟ್ಟು ಗಾತ್ರವು (Budget layout) 3,71,383 ಕೋಟಿ ರೂ. ಅಂದರೆ 2023-24ನೇ ಸಾಲಿಗಿಂತ 44 ಸಾವಿರ ಕೋಟಿ ರೂ. ಹೆಚ್ಚು. ಇಷ್ಟು ದೊಡ್ಡ ಗಾತ್ರದ ಬಜೆಟ್‌ ಮಂಡನೆಗಾಗಿ ಸಿದ್ದರಾಮಯ್ಯ ಅವರು 1,05,246 ಕೋಟಿ ರೂ. ಸಾಲ ಮಾಡಬೇಕಾಗಿದೆ (Loan Responsibility). ಹಾಗಂತ ಇದು ವಿತ್ತೀಯ ಶಿಸ್ತಿನ ಒಳಗೇ ಇರುವ ಪ್ರಮಾಣವಾಗಿರುವುದರಿಂದ ರಾಜ್ಯಕ್ಕೆ ಆರ್ಥಿಕ ಅಪಾಯವೇನೂ ಎದುರಾಗುವ ಸ್ಥಿತಿಯಲ್ಲಿ ಇಲ್ಲ. ಆದರೆ, ಈ ಬಜೆಟ್‌ನ ಅಂತ್ಯದಲ್ಲಿ ರಾಜ್ಯಕ್ಕೆ ಒಟ್ಟು 6.65 ಲಕ್ಷ ಕೋಟಿ ರೂ. ಸಾಲದ ಹೊರೆ ಎದುರಾಗಿದೆ. ಅಂದರೆ ಪ್ರತಿಯೊಬ್ಬ ನಾಗರಿಕನ ತಲೆಯ ಮೇಲೆ ತಲಾ ಒಂದು ಲಕ್ಷ ರೂ ಸಾಲದ ಹೊರೆ ಇದೆ.

ಏನಿಲ್ಲ ಏನಿಲ್ಲ ಎಂದ ಬಿಜೆಪಿ ಬಹಿಷ್ಕಾರ ನಡುವೆಯೇ ಬಜೆಟ್‌ ಮಂಡನೆ

ಈ ಬಾರಿಯ ಬಜೆಟ್‌ ಮಂಡನೆಗೆ ಪ್ರತಿಪಕ್ಷವಾದ ಬಿಜೆಪಿ ಶಾಸಕರು ʻಏನಿಲ್ಲ ಏನಿಲ್ಲʼ ಎಂಬ ಜನಪ್ರಿಯ ಹಾಡನ್ನು ಬಳಸಿಕೊಂಡು ಪ್ಲೇಕಾರ್ಡ್‌ಗಳನ್ನು ಹಿಡಿದುಕೊಂಡು ಬಂದಿದ್ದರು. ಬಜೆಟ್‌ ಮಂಡನೆಯ ಮೇಲೆ ಇವುಗಳನ್ನು ಪ್ರದರ್ಶಿಸಿ ಕಾಂಗ್ರೆಸ್‌ ಸರ್ಕಾರದ ಬಜೆಟ್‌ನಲ್ಲಿ ಏನೇನೂ ಇಲ್ಲ ಎಂದು ಹೇಳಿ ಸಭಾತ್ಯಾಗ ಮಾಡಿದರು. ಬಳಿಕ ಆಡಳಿತ ಪಕ್ಷದ ಸದಸ್ಯರ ಉಪಸ್ಥಿತಿಯಲ್ಲಿ ಸಿದ್ದರಾಮಯ್ಯ ಸುದೀರ್ಘ ಬಜೆಟ್‌ ಮಂಡಿಸಿದರು.

ಇದನ್ನೂ ಓದಿ: Karnataka Budget Session 2024: ಬಿಜೆಪಿಯಿಂದ ಬಜೆಟ್‌ ಬಾಯ್ಕಾಟ್‌; ಇತಿಹಾಸದಲ್ಲೇ ಮೊದಲು ಎಂದ ಸಿದ್ದರಾಮಯ್ಯ

2024-25ನೇ ಸಾಲಿನಲ್ಲಿ ಒಟ್ಟು 2,90,531 ಕೋಟಿ ರೂ.ಗಳ ರಾಜಸ್ವ ವೆಚ್ಚ, 55,877 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 24,974 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚವು 3,71,383 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ಎಲ್ಲ ವಿತ್ತೀಯ ಮೂಲಗಳಿಂದು ಬರುವ ಒಟ್ಟು ಆದಾಯವು 2.66 ಲಕ್ಷ ಕೋಟಿ ಆಗುವುದರಿಂದ ಉಳಿದ ಮೊತ್ತವನ್ನು ಸಾಲವಾಗಿ ತರಬೇಕಾಗಿದೆ.

ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ. ಅನುದಾನ

ಒಟ್ಟಾರೆಯಾಗಿ ಐದೂ ಗ್ಯಾರಂಟಿಗಳಿಗೆ ಸೇರಿ 52,009 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಐದೂ ಗ್ಯಾರಂಟಿ ಯೋಜನೆಯಲ್ಲಿ ಸಿಂಹಪಾಲು ಗೃಹ ಲಕ್ಷ್ಮಿ ಯೋಜನೆಗೆ (28,608 ಕೋಟಿ ರೂ) ಖರ್ಚಾಗುತ್ತಿದ್ದರೆ, ಅತಿ ಕಡಿಮೆ ಅನುದಾನ (650 ಕೋಟಿ ರೂ.) ಯುವ ನಿಧಿಗೆ ಮೀಸಲಿಡಲಾಗಿದೆ.

Karnataka Budget Session 2024 Rs 52009 crore earmarked for 5 guarantee scheme

ಯಾವ ಗ್ಯಾರಂಟಿಗೆ ಎಷ್ಟು?

  1. ಗೃಹ ಜ್ಯೋತಿ: 9,657 ಕೋಟಿ ರೂ.
    ಅನ್ನ ಭಾಗ್ಯ: 8,079 ಕೋಟಿ ರೂ.
    ಶಕ್ತಿ: 5,015 ಕೋಟಿ ರೂ.
    ಯುವನಿಧಿ: 650 ಕೋಟಿ ರೂ.
    ಗೃಹ ಲಕ್ಷ್ಮಿ :28,608 ಕೋಟಿ ರೂ.
    ಒಟ್ಟು: 52,009 ಕೋಟಿ ರೂ.

ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆ ಹೇಗಿದೆ?

Karnataka Budget 2024 Yavudakke Estu

ಶಿಕ್ಷಣ- 44422 ಕೋಟಿ ರೂ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ- 34406 ಕೋಟಿ ರೂ.
ಇಂಧನ- 23159 ಕೋಟಿ ರೂ.
ಗ್ರಾಮೀಣಾಭಿವೃದ್ಧಿ- 21160 ಕೋಟಿ ರೂ.
ಒಳಾಡಳಿತ ಸಾರಿಗೆ- 19777 ಕೋಟಿ ರೂ.
ನೀರಾವರಿ- 19179 ಕೋಟಿ ರೂ.
ನಗರಾಭಿವೃದ್ಧಿ – 18155 ಕೋಟಿ ರೂ.
ಕಂದಾಯ- 16170 ಕೋಟಿ ರೂ.
ಆರೋಗ್ಯ – 15145 ಕೋಟಿ ರೂ.
ಸಮಾಜ ಕಲ್ಯಾಣ- 13334 ಕೋಟಿ ರೂ.
ಲೋಕೋಪಯೋಗಿ- 10424 ಕೋಟಿ ರೂ.
ಆಹಾರ ಮತ್ತು ನಾಗರಿಕ ಪೂರೈಕೆ- 9963 ಕೋಟಿ ರೂ.
ಕೃಷಿ ತೋಟಗಾರಿಕೆ- 6688 ಕೋಟಿ ರೂ.
ಪಶುಸಂಗೋಪನೆ- 3307 ಕೋಟಿ ರೂ.
ಇತರೆ- 124593 ಕೋಟಿ ರೂಪಾಯಿ

ಬಜೆಟ್‌ ಆರ್ಥಿಕ ನೋಟ ಹೀಗಿದೆ: ಯಾವುದಕ್ಕೆ ಎಷ್ಟು?

  • ಆಯವ್ಯಯ ಗಾತ್ರ (ಸಂಚಿತ ನಿಧಿ): 3,71,383 ಕೋಟಿ ರೂ.
  • ಒಟ್ಟು ಸ್ವೀಕೃತಿ: 3,68,674 ಕೋಟಿ ರೂ
  • ರಾಜಸ್ವ ಸ್ವೀಕೃತಿ: 2,63,178 ಕೋಟಿ
  • ಸಾರ್ವಜನಿಕ ಋಣ: 1,05,246 ಕೋಟ ರೂ. ಸೇರಿದಂತೆ ಬಂಡವಾಳ ಸ್ವೀಕೃತಿ 38 ಕೋಟಿ ರೂ.
  • ಒಟ್ಟು ವೆಚ್ಚ: 3,71,383 ಕೋಟಿ ರೂ.
  • ರಾಜಸ್ವ ವೆಚ್ಚ: 2,90,531 ಕೋಟ ರೂ.
  • ಬಂಡವಾಳ ವೆಚ್ಚ: 55,877 ಕೋಟ ರೂ.
  • ಸಾಲ ಮರುಪಾವತಿ: 24,794 ಕೋಟಿ ರೂ.
  • ಎಸ್‌.ಸಿ.ಎಸ್‌.ಪಿ. ಹಾಗೂ ಟಿ.ಎಸ್‌.ಪಿ. ಅಡಿಯಲ್ಲಿ ಆಯವ್ಯಯದಲ್ಲಿ ಒದಗಿಸಿದ ಅನುದಾನ 39,121 ಕೋಟಿ ರೂ.
  • ಎಸ್‌.ಸಿ.ಎಸ್‌.ಪಿ. ಅಡಿ 27,674 ಕೋಟಿ ರೂ. ಹಾಗೂ ಟಿ.ಎಸ್‌.ಪಿ. ಅಡಿ 11,447 ಕೋಟಿ ರೂ.

ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಪ್ರಕಟಿಸಿದ ಪ್ರಮುಖ ಕೊಡುಗೆಗಳ ಪಟ್ಟಿ ಇಲ್ಲಿದೆ

  1. ವಿವಿಧ ರೈತಪರ ಯೋಜನೆ ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ
  • ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ, ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ.
  • ತೋಟಗಾರಿಕೆ ಕುರಿತು ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸಲು ಆಯ್ದ ಜಿಲ್ಲೆಗಳಲ್ಲಿ ಕಿಸಾನ್‌ ಮಾಲ್‌ ಸ್ಥಾಪನೆ.
  • ಮಧ್ಯಮಾವಧಿ ಮತ್ತು ದೀರ್ಫಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಹಿನ್ನೆಲೆಯಲ್ಲಿ ಡಿಸಿಸಿ ಮತ್ತು ಪಿಕಾರ್ಡ್‌ ಬ್ಯಾಂಕುಗಳಿಗೆ 450 ಕೋಟಿ ರೂ. ಅನುದಾನ. ಟಿ.ಎ.ಪಿ.ಸಿ.ಎಂ.ಎಸ್‌.ಗಳಿಗೆ ಗೋದಾಮು ನಿರ್ಮಾಣಕ್ಕೆ ಶೇ. 6ರ ಬಡ್ಡಿ ಸಹಾಯಧನ
  • ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಗುರಿ. ಘೋಷಣೆಯಂತೆ 5300 ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ.
  • 2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ
  • ಏಳು ಜಿಲ್ಲೆಗಳಲ್ಲಿ 187 ಕೋಟ ರೂ. ವೆಚ್ಚದಲ್ಲಿ ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಕಟ್ಟಡ ನಿರ್ಮಾಣ
  • ಅ೦ಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್‌ ಘೋನ್‌ ಒದಗಿಸಲು ಕ್ರಮ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿ೦ದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ. ಅನುದಾನ.
  • ಪರಿಶಿಷ್ಟ ಜಾತಿಯ 5,000 ಯುವಕ/ಯುವತಿಯರಿಗೆ ಡ್ರೋನ್‌ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ.
  • ಹಿಂದುಳಿದ ವರ್ಗಗಳ 150 ಮೆಟ್ರಿಕ್‌ ನಂತರದ ಹೊಸ ವಸತಿನಿಲಯಗಳ ಪ್ರಾರಂಭ; 174 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 200 ಕೋಟ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಕ್ರಮ.
  • 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 100 ಸಂಖ್ಯಾಬಲವುಳ್ಳ 100 ಮೆಟ್ರಿಕ್‌ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳು, 100 ಹೊಸ ಮೌಲಾನಾ ಆಜಾದ್‌ ಶಾಲೆಗಳ ಪ್ರಾರಂಭ ಹಾಗೂ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಪ್ರಾರಂಭ.
  • ವಸತಿ: 2024-25 ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ
  • ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.
  • ಬೆ೦ಗಳೂರು ಗ್ರಾಮಾ೦ತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ.
  • ಯಾವುದೇ ಆದಾಯವಿಲ್ಲದ 34,165 “ಸಿ’ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ Vision Group ರಚನೆ.
  • 29,523 “ಸಿ’ ವರ್ಗದ ದೇವಾಲಯಗಳ ಅರ್ಚಕರ ಬ್ಯಾಂಕ್‌ ಖಾತೆಗೆ ತಸ್ತಿಕ್‌ ಮೊತ್ತ ಜಮೆ ಮಾಡಲು ಕ್ರಮ.
  • ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ IML ಹಾಗೂ ಬಿಯರ್‌ ಸ್ಲಾಬ್‌ಗಳ ಪರಿಷ್ಕರಣೆ.
  • ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!
Continue Reading

ಕರ್ನಾಟಕ ಬಜೆಟ್ 2024

Karnataka Budget 2024 : ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!

Karanataka Budget 2024: ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ಗೇಲಿ ಮಾಡಿದೆ. ಸಿದ್ದರಾಮಯ್ಯ ಅವರೇ 2021ರಲ್ಲಿ ಬಜೆಟ್‌ ಬಹಿಷ್ಕರಿಸಿದ್ದರು ಎಂದು ನೆನಪಿಸಿದೆ.

VISTARANEWS.COM


on

Karnataka Budget 2024 Walkout
2021ರಲ್ಲಿ ಸಿದ್ದರಾ‌ಮಯ್ಯ ನೇತೃತ್ವದಲ್ಲಿ ನಡೆದ ಬಜೆಟ್‌ ಬಹಿಷ್ಕಾರದ ಚಿತ್ರ.
Koo

ಬೆಂಗಳೂರು: ರಾಜ್ಯ ವಿಧಾನ ಮಂಡಲದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನ್ನು (Karnataka Budget 2024) ಪ್ರತಿಪಕ್ಷ ಬಿಜೆಪಿ ಬಹಿಷ್ಕರಿಸಿದೆ. ಸಿದ್ದರಾಮಯ್ಯ ಅವರು ಭಾಷಣ ಆರಂಭ ಮಾಡುತ್ತಲೇ ʻಏನಿಲ್ಲ.. ಏನಿಲ್ಲ.. ಬಜೆಟ್‌ನಲ್ಲಿ ಏನಿಲ್ಲʼ ಎಂದು ಗೇಲಿ ಮಾಡುತ್ತಾ ಬಿಜೆಪಿ ಶಾಸಕರು ಹೊರನಡೆದಿದ್ದರು. ಈ ರೀತಿ ಬಜೆಟ್‌ ಮಂಡನೆಯನ್ನೇ ಬಹಿಷ್ಕರಿಸಿರುವುದು ಇತಿಹಾಸದಲ್ಲೇ ಮೊದಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಮೇಲೆ ಹರಿಹಾಯ್ದಿದ್ದರು. ಆದರೆ, ಇದು ಇತಿಹಾಸದಲ್ಲಿ ಮೊದಲೇನಲ್ಲ. ಈ ಹಿಂದೆ ಸಿದ್ದರಾಮಯ್ಯನವರೇ ಬಜೆಟ್‌ ಬಹಿಷ್ಕಾರದ ಮೂಲಕ ಇತಿಹಾಸ ಬರೆದಿದ್ದರು ಎಂದು ಬಿಜೆಪಿ (Karnataka BJP) ಹೇಳಿದೆ.

Karnataka Budget 2024 BJP Walkout
ಬಜೆಟ್‌ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಆರ್‌. ಅಶೋಕ್‌ (R Ashok) ಅವರು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಒಂದು ಪೋಸ್ಟ್‌ ಹಾಕಿ, 2021ರ ಬಜೆಟನ್ನು ಆಗ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬಹಿಷ್ಕಾರ ಹಾಕಿದ್ದನ್ನು ನೆನಪಿಸಿಕೊಂಡಿದ್ದಾರೆ.

ಬಿಎಸ್‌ವೈ ಬಜೆಟ್‌ನಿಂದ ವಾಕೌಟ್‌ ಮಾಡಿದ್ದ ಸಿದ್ದರಾಮಯ್ಯ

ʻʻಬಜೆಟ್ ಭಾಷಣ ಬಹಿಷ್ಕಾರ ಮಾಡಿದ ಘಟನೆ ನಾನು ಇತಿಹಾಸದಲ್ಲೇ ನೋಡಿಲ್ಲ, ಇದು ಸಂವಿಧಾನಕ್ಕೆ ಮಾಡಿದ ಅಪಮಾನ ಅಂತ ಬುರುಡೆ ಬಿಡುವ ಮೊದಲ ತಮ್ಮ ಹಾಗೂ ತಮ್ಮ ಕಾಂಗ್ರೆಸ್‌ ಕ್ಷದ ಇತಿಹಾಸ ಒಮ್ಮೆ ತೆಗೆದು ನೋಡಿ ಸಿಎಂ ಸಿದ್ದರಾಮಯ್ಯ ಅವರೇ. 2021ರಲ್ಲಿ ಅಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಬಜೆಟ್ ಭಾಷಣವನ್ನು ಬಹಿಷ್ಕಾರ ಮಾಡಿ ಸದನದಿಂದ ವಾಕ್ ಔಟ್ ಮಾಡುವ ಮೂಲಕ ಸನ್ಮಾನ್ಯ ಯಡಿಯೂರಪ್ಪನವರಂತಹ ಮುತ್ಸದ್ದಿ , ಹಿರಿಯ ಜನ ನಾಯಕರಿಗೆ ಅವಮಾನ ಮಾಡುವಾಗ ತಮ್ಮ ಈ ಉಪದೇಶ ತಮಗೆ ನೆನಪಿರಲಿಲ್ಲವೆ? ತಾವು ಮಹಾ ಸಾಚಾ ಎನ್ನುವಂತೆ ಮಾಧ್ಯಮಗಳ ಮುಂದೆ ನಾಟಕ ಆಡುವುದರಿಂದ ಏನೂ ಪ್ರಯೋಜನವಿಲ್ಲ. ತಮ್ಮ ಆಷಾಢಭೂತಿತನ, ಎರಡು ನಾಲಿಗೆ ಬಗ್ಗೆ ಎಲ್ಲರಿಗೂ ತಿಳಿದಿದೆʼʼ ಎಂದು ಆರ್‌. ಆಶೋಕ್‌ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

2021ರಲ್ಲಿ ಬಿಎಸ್‌ ಯಡಿಯೂರಪ್ಪ ಅವರು ಬಜೆಟ್‌ ಮಂಡನೆ ಮಾಡಿದಾಗ ಸಿದ್ದರಾಮಯ್ಯ ಅವರು ಈ ಸರ್ಕಾರಕ್ಕೆ ನೈತಿಕ ಮೌಲ್ಯಗಳಿಲ್ಲ. ಹೀಗಾಗಿ ಬಜೆಟ್‌ ಮಂಡನೆಗೆ ಅರ್ಹತೆ ಇಲ್ಲ ಎಂದು ಹೇಳಿ ಭಾಷಣದ ಆರಂಭದಲ್ಲೇ ಸಭಾತ್ಯಾಗ ಮಾಡಿದ್ದಕ್ಕೆ ಸಂಬಂಧಿಸಿ ಅಂದು ಪ್ರಕಟವಾಗಿದ್ದ ಮಾಧ್ಯಮಗಳ ವರದಿಗಳು ಮತ್ತು ವಾಹಿನಿಗಳ ವರದಿಗಳನ್ನು ಟ್ಯಾಗ್‌ ಮಾಡಿದ್ದಾರೆ.

ಇದನ್ನೂ ಓದಿ : Karnataka Budget Session 2024: ಬಿಜೆಪಿಯಿಂದ ಬಜೆಟ್‌ ಬಾಯ್ಕಾಟ್‌; ಇತಿಹಾಸದಲ್ಲೇ ಮೊದಲು ಎಂದ ಸಿದ್ದರಾಮಯ್ಯ

ಬಿಜೆಪಿ ಸಭಾತ್ಯಾಗದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಬಿಜೆಪಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ: ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಬಜೆಟ್ ಓದಲು ಪ್ರಾರಂಭ ಮಾಡಿದ ಕೂಡಲೇ ಸುನೀಲ್ ಕುಮಾರ್ ಅವರು ಏನಿಲ್ಲ ಏನಿಲ್ಲ ಎಂದು ಘೋಷಣೆ ಕೂಗುತ್ತಿದ್ದರು. ಬಿಜೆಪಿಗೆ ಸಂಸದೀಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ಅವರ ತಲೆ ತುಂಬ ರಾಜಕೀಯ ಮಂಜು ತುಂಬಿದೆ. ಕಾಮಾಲೆ ರೋಗಿಗಳಿಗೆ ಕಂಡಿದ್ದೆಲ್ಲ ಹಳದಿಯಂತೆ ಆಗಿದೆ. ರಾಜಕೀಯ ಹೇಳಿಕೆ ಬೇಡ ಎನ್ನುವುದಿಲ್ಲ. ಆದರೆ ಟೀಕೆಗಳು ಆರೋಗ್ಯಕರವಾಗಿರಬೇಕು. ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ಲೇಕಾರ್ಡ್ ಹಿಡಿದಿದ್ದರು. ಬಜೆಟ್ ಕೇಳಬಾರದು ಎಂದು ಯೋಚಿಸಿಕೊಂಡೇ ಬಂದಿದ್ದರು. ನಾನು ವಸ್ತುಸ್ಥಿತಿಯನ್ನು ಹೇಳಿದರೆ ಅವರಿಗೆ ಅದು ನುಂಗಲಾರದ ತುತ್ತು. ಸತ್ಯ ಹೇಳಿದರೆ ತಡೆದುಕೊಳ್ಳಲು ಆಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು‌ ಆಕ್ಷೇಪಿಸಿದ್ದರು.

Continue Reading
Advertisement
Dina Bhavishya
ಭವಿಷ್ಯ11 ಗಂಟೆಗಳು ago

Dina Bhavishya : ಭೂ ಸಂಬಂಧಿ ವ್ಯವಹಾರಗಳಲ್ಲಿ ಡಬಲ್‌ ಲಾಭ; ಬಹುದಿನಗಳ ಕನಸು ನನಸಾಗುವ ಕಾಲ

Hc grants interim bail to actor Darshan
ಸಿನಿಮಾ1 ದಿನ ago

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

dina bhavishya
ಭವಿಷ್ಯ2 ದಿನಗಳು ago

Dina Bhavishya : ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ

Doctors at Fortis Hospital remove fish bone from man's stomach for 5 years
ಬೆಂಗಳೂರು2 ದಿನಗಳು ago

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

murder case
ಕೊಡಗು2 ದಿನಗಳು ago

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

ಬೆಂಗಳೂರು2 ದಿನಗಳು ago

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

Dina Bhavishya
ಭವಿಷ್ಯ3 ದಿನಗಳು ago

Dina Bhavishya : ಈ ದಿನ ಯಾವುದೇ ಕಾರಣಕ್ಕೂ ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ

Murder case
ಉತ್ತರ ಕನ್ನಡ3 ದಿನಗಳು ago

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿಗಳು

Medical negligence
ಪ್ರಮುಖ ಸುದ್ದಿ3 ದಿನಗಳು ago

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

assault case
ಬೆಂಗಳೂರು3 ದಿನಗಳು ago

Assault case: ಕರ್ನಾಟಕದ ಲಾರಿ ಡ್ರೈವರ್‌ಗೆ ಕಪಾಳಮೋಕ್ಷ ಮಾಡಿದ ತಮಿಳುನಾಡು ಟ್ರಾಫಿಕ್‌ ಪೊಲೀಸ್‌!

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ12 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌