ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್ನಲ್ಲಿ ಕೃಷಿ, ನೀರಾವರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಿಗೆ ಅನುಕೂಲವಾಗುವಂತೆ ಹಲವು ಯೋಜನೆಗಳನ್ನು ಪ್ರಕಟಿಸಲಾಗಿದೆ. ಬಜೆಟ್ನ ಸಂಪೂರ್ಣ ಚಿತ್ರಣ ಇಲ್ಲಿದೆ (Complete details of Budget).
ಬಜೆಟ್ ಆರ್ಥಿಕ ನೋಟ ಹೀಗಿದೆ: ಯಾವುದಕ್ಕೆ ಎಷ್ಟು?
- ಆಯವ್ಯಯ ಗಾತ್ರ (ಸಂಚಿತ ನಿಧಿ): 3,71,383 ಕೋಟಿ ರೂ.
- ಒಟ್ಟು ಸ್ವೀಕೃತಿ: 3,68,674 ಕೋಟಿ ರೂ
- ರಾಜಸ್ವ ಸ್ವೀಕೃತಿ: 2,63,178 ಕೋಟಿ
- ಸಾರ್ವಜನಿಕ ಋಣ: 1,05,246 ಕೋಟ ರೂ. ಸೇರಿದಂತೆ ಬಂಡವಾಳ ಸ್ವೀಕೃತಿ 38 ಕೋಟಿ ರೂ.
- ಒಟ್ಟು ವೆಚ್ಚ: 3,71,383 ಕೋಟಿ ರೂ.
- ರಾಜಸ್ವ ವೆಚ್ಚ: 2,90,531 ಕೋಟ ರೂ.
- ಬಂಡವಾಳ ವೆಚ್ಚ: 55,877 ಕೋಟ ರೂ.
- ಸಾಲ ಮರುಪಾವತಿ: 24,794 ಕೋಟಿ ರೂ.
- ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಅಡಿಯಲ್ಲಿ ಆಯವ್ಯಯದಲ್ಲಿ ಒದಗಿಸಿದ ಅನುದಾನ 39,121 ಕೋಟಿ ರೂ.
- ಎಸ್.ಸಿ.ಎಸ್.ಪಿ. ಅಡಿ 27,674 ಕೋಟಿ ರೂ. ಹಾಗೂ ಟಿ.ಎಸ್.ಪಿ. ಅಡಿ 11,447 ಕೋಟಿ ರೂ.
- ಮಹಿಳಾ ಆಯವ್ಯಯದಲ್ಲಿ ಒದಗಿಸಿದ ಅನುದಾನ: 86,423 ಕೋಟಿ ರೂ.
- ಮಕ್ಕಳ ಆಯವ್ಯಯದಲ್ಲಿ ಒದಗಿಸಿದ ಅನುದಾನ: 54,617 ಕೋಟಿ ರೂ.
2024-25 ನೇ ಸಾಲಿನ ಹೊಸ ಯೋಜನೆಗಳ ವಿವರ ಹೀಗಿದೆ:
ಕೃಷಿ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳೇನು?
- ವಿವಿಧ ರೈತಪರ ಯೋಜನೆ ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ
- ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ, ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ.
- ಕೈಗೆಟಕುವ ದರದಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಮತ್ತು ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನ ಒದಗಿಸಲು “ನಮ್ಮ ಮಿಲ್ಲೆಟ್” ಹೊಸ ಕಾರ್ಯಕ್ರಮ ಪ್ರಾರಂಭ.
- ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ ಸಲಹೆಗೆ ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿದ e-SAP ತಂತ್ರಾಂಶದ ಪರಿಚಯ.
- ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು PMFME ಯೋಜನೆಯಡಿ 80 ಕೋಟಿ ರೂ.
- ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆ೦ಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಆಹಾರ ಪಾರ್ಕ್ ಸ್ಥಾಪನೆ.
- ಕೃಷಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಆಧರಿಸಿ ಬೆಳೆಯ ಉತ್ಪಾದಕತೆ ಮುನ್ಸೂಚನೆಯನ್ನು ನೀಡಲು ದತ್ತಾಂಶ ಅಭಿವೃದ್ಧಿ.
ತೋಟಗಾರಿಕೆ ಕ್ಷೇತ್ರಕ್ಕೆ ಸಿಕ್ಕಿದ ಹೊಸ ಸವಲತ್ತುಗಳೇನು?
- ತೋಟಗಾರಿಕೆ ಕುರಿತು ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸಲು ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ ಸ್ಥಾಪನೆ.
- ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.
- ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತಿನ ಪ್ರಮಾಣ ಹೆಚ್ಚಿಸಲು ಕೊಯ್ಲೋತ್ತರ ನಿರ್ವಹಣಾ ಕೇ೦ದ್ರ (PACKHOUSE) ಹಾಗೂ ಮೌಲ್ಯವರ್ಧನ ಸಂಸ್ಕರಣಾ ಘಟಕಗಳ ಸ್ಥಾಪನೆ.
- ರಾಜ್ಯದಲ್ಲಿ ಅಡಿಕೆ ಬೆಳೆಯಲ್ಲಿ ರೋಗ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣೆ ಚಟುವಟಿಕೆಗೆ ಉತ್ತೇಜನ.
-ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ. - ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ
ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ನವನಿರ್ಮಾಣದ ಗ್ಯಾರಂಟಿ ಬಜೆಟನ್ನು ರಾಜ್ಯದ ಸಮಸ್ತ ಜನರಿಗೆ ಅರ್ಪಿಸುತ್ತಿದ್ದೇವೆ.
— Siddaramaiah (@siddaramaiah) February 16, 2024
ಹೈನುಗಾರರ ಉನ್ನತಿ ನಮ್ಮ ಸರ್ಕಾರದ ಆದ್ಯತೆ. #NammaBudget2024 pic.twitter.com/2N7QXU8AZE
ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ
- ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ 250 ಕೋಟ ರೂ. ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಎರಡನೇ ಹ೦ತ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ.
- ರೇಷ್ಮ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹ ಧನ ನೀಡಲು 12 ಕೋಟಿ ರೂ. ಅನುದಾನ.
- ಬೈವೋಲ್ಬೀನ್ ರೇಷ್ಮೆಗೂಡುಗಳಿಗೆ ನೀಡುವ ಪ್ರೋತ್ಸಾಹಧನ ಪ್ರತಿ ಕಿಲೋಗೆ 30 ರೂ. ಗೆ ಹೆಚ್ಚಳ.
ಪಶುಸಂಗೋಪನೆ: ಕುರಿಸಾಕಾಣಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆಗೆ ಉತ್ತೇಜನ
- ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಕುರಿ ಸಾಕಾಣಿಕೆ, ಹೈನುಗಾರಿಕೆ, ಹ೦ದಿ ಮತ್ತು ಕೋಳಿ ಸಾಕಾಣಿಕೆಗೆ ಉತ್ತೇಜನ.
- ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಷಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ.
- ದುಸ್ಥಿತಿಯಲ್ಲಿರುವ 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ.
- ವಲಸೆ ಕುರಿಗಾರರ ಅಭ್ಯುದಯಕ್ಕೆ ಕ್ರಮ ಹಾಗೂ ಅವರ ಮೇಲಿನ ಶೋಷಣೆ, ದೌರ್ಜನ್ಯ ತಡೆಯಲು “ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ’ ಜಾರಿ
- ಪುತ್ತೂರು ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ.
ಮೀನುಗಾರಿಕೆಗೆ ಹಲವು ಯೋಜನೆ
- ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳ ಅನುಷ್ಠಾನ
- ಮೀನುಗಾರರ ರಕ್ಷಣೆಗೆ ಸಮುದ್ರ ಅಂಬ್ಯುಲೆನ್ಸ್ ಖರೀದಿಗೆ 7 ಕೋಟಿ ರೂ.
- ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು 3,000 ರೂ.ಗಳಿಗೆ ಹೆಚ್ಚಳ.
- ವಿವಿಧ ವಸತಿ ಯೋಜನೆಗಳಡಿ 10,000 ವಸತಿರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ.
ಸಹಕಾರ: ಡಿಸಿಸಿ, ಪಿಕಾರ್ಡ್ ಬ್ಯಾಂಕ್ಗಳಿಗೆ ಸುಸ್ತಿ ಸಾಲ ಮನ್ನಾ ಅನುದಾನ
- ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ.ಗಳಷ್ಟು ದಾಖಲೆಯ ಬೆಳೆ ಸಾಲ ವಿತರಣೆ ಗುರಿ.
- ಸರ್ಕಾರದ ಹಿಂದಿನ ಅವಧಿಯ ಬೆಳೆಸಾಲ ಮನ್ನಾ ಬಾಬ್ತು ಬಾಕಿ ಇರುವ 132 ಕೋಟ ರೂ. ಮೊತ್ತ ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ
- ಮಧ್ಯಮಾವಧಿ ಮತ್ತು ದೀರ್ಫಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಹಿನ್ನೆಲೆಯಲ್ಲಿ ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳಿಗೆ 450 ಕೋಟಿ ರೂ. ಅನುದಾನ
- ಟಿ.ಎ.ಪಿ.ಸಿ.ಎಂ.ಎಸ್.ಗಳಿಗೆ ಗೋದಾಮು ನಿರ್ಮಾಣಕ್ಕೆ ಶೇ. 6ರ ಬಡ್ಡಿ ಸಹಾಯಧನ
- ರಾಜ್ಯದ ಪ್ರಮುಖ ಬೆಳೆಗಳಾದ ಅಡಿಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಹಾಗೂ ಎಂ.ಎಸ್. ಸ್ವಾಮಿನಾಥನ್ ಸಮಿತಿ ವರದಿ ಅನ್ವಯ ಬೇಸಾಯ ವೆಚ್ಚ ಮತ್ತು ಮಾಧ್ಯಮಿಕ, ಫೆಡರಲ್ ಹಾಗೂ ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಮೀಸಲಾತಿ ತರಲು ಅಧಿನಿಯಮಗಳಿಗೆ ತಿದ್ದುಪಡಿ
ಕೃಷಿ ಉತ್ಪನ್ನ ಸಂಸ್ಕರಣೆ, ಮಾರುಕಟ್ಟೆ ಸಂಪರ್ಕ ಮತ್ತು ಮೌಲ್ಯವರ್ಧನೆಗೆ ಪೂರಕ ಕ್ರಮಗಳು:
- ಒಟ್ಟು 130 ಕೋಟಿ ರೂ. ವೆಚ್ಚದಲ್ಲಿ 7 ಶೀತಲಗೃಹ ನಿರ್ಮಾಣ. ರಾಯಚೂರು ಹಾಗೂ ರಾಣೆಬೆನ್ನೂರಿನಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭ.
- ಮಂಗಳೂರಿನಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆ.
- 10 ಕೋಟಿ ರೂ. ವೆಚ್ಚದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಎಲ್ಲಾ ಕಾರ್ಯ ಚಟುವಟಿಕೆಗಳ ಡಿಜಿಟಲೀಕರಣ.
- ಎ.ಪಿ.ಎಂ.ಸಿ.ಗಳನ್ನು ಬಲಪಡಿಸಲು ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯುವುದು, ಮಾರುಕಟ್ಟೆ ಅಭಿವೃದ್ಧಿ ಸಹಾಯ ನಿಧಿ ಸ್ಥಾಪನೆ ಹಾಗೂ ಬೆಂಬಲ ಬೆಲೆ ಯೋಜನೆ ಜಾರಿಗೆ ಶಾಸನಾತ್ಮಕ ಬೆ೦ಬಲ ನೀಡಲು ಕ್ರಮ.
- ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ತೂಕದಲ್ಲಾಗುವ ಮೋಸ ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಬಾನೆಗಳ ಬಳಿ ಎಪಿಎ೦ಸಿಗಳ ಮೂಲಕWeigh Bridge ಗಳ ನಿರ್ಮಾಣಕ್ಕೆ ಕ್ರಮ.
ಜಲಸಂಪನ್ಮೂಲ: ಮೇಕೆದಾಟು, ಎತ್ತಿನಹೊಳೆ ಯೋಜನೆಗೆ ವೇಗ
- ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ಒಂದು ಪ್ರತ್ಯೇಕ ಯೋಜನಾ ವಿಭಾಗವನ್ನು ಹಾಗೂ 2 ಉಪವಿಭಾಗಗಳ ಸ್ಥಾಪನೆ.
- ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ದೊಡ್ಡನಗರದ ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ವ ಪರೀಕ್ಷಾರ್ಥ ಚಾಲನೆ. ಪ್ರಸಕ್ತ ಸಾಲಿನಲ್ಲಿ ಯೋಜನೆಯ ಎಲ್ಲಾ ಲಿಫ್ಟ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರುತ್ವ ಕಾಲುವೆಗೆ ನೀರು ಹರಿಸಲು ಕ್ರಮ.
- ಕೃಷ್ಣಾ ಮೇಲ್ಬಂಡೆ ಯೋಜನೆ ಹಂತ-3 ಯೋಜನೆಯಡಿಯ ಉಪಯೋಜನೆಗಳನ್ನು ಪೂರ್ಣಗೊಳಿಸಲು ಹಾಗೂ ಇದರಡಿ ಭೂಸ್ವಾಧೀನ, ಪುನರ್ ವಸತಿ ಹಾಗೂ ಪುನರ್ ನಿರ್ಮಾಣಕ್ಕೆ ಆದ್ಯತೆ. ಕೃಷ್ಣಾ ನ್ಯಾಯಾಧಿಕರಣ-2ರ ಅಂತಿಮ ತೀರ್ಪಿನ ಬಾಕಿಯಿರುವ ಗೆಜೆಟ್ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಒತ್ತಾಯಿಸಲು ಕ್ರಮ.
- ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಗುರಿ. ಘೋಷಣೆಯಂತೆ 5300 ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ.
- ಕಳಸಾ ಮತ್ತು ಬಂಡೂರಾ ನಾಲಾ ತಿರುವು ಯೋಜನೆಗಳಡಿ ರಾಷ್ಟೀಯ ವನ್ಯ ಜೀವಿ ಮಂಡಳಿಯಿಂದ ಅರಣ್ಯ ತೀರುವಳಿ ನಿರೀಕ್ಷಿಸಿ ರಾಜ್ಯ ಸರ್ಕಾರವು ಟೆಂಡರ್ ಪ್ರಕ್ರಿಯೆ ಪ್ರಾರಂಭ; ಮಂಡಳಿಯ ಸಭೆಯಲ್ಲಿ ತೀರುವಳಿ ಕುರಿತ ತೀರ್ಮಾನ ಮುಂದೂಡಿಕೆ.
- ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯ 15,600 ಕೋಟಿ ರೂ. ಮೊತ್ತದ ವಿವರವಾದ ಯೋಜನಾ ವರದಿ ಸಿದ್ಧ ಯೋಜನೆಯ ಅನುಷ್ಠಾನ ಸಂಬಂಧ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಾರಂಭ.
- ಕೆ.ಆರ್.ಎಸ್ನ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಣ.
- ಧಾರವಾಡದಲ್ಲಿರುವ ವಾಲ್ಮಿ ಸಂಸ್ಥೆಯನ್ನು Centre of Excellence in Water Management ಆಗಿ ಉನ್ನತೀಕರಿಸಲು ಕ್ರಮ.
- ಪ್ರಗತಿಯಲ್ಲಿರುವ ಏತನೀರಾವರಿ ಯೋಜನೆಗಳಾದ ಬೂದಿಹಾಳ್-ಪೀರಾಪುರ ಹ೦ತ-1 ಶ್ರೀ ವೆಂಕಟೇಶ್ವರ ಹಾಗೂ ಕೆಂಪವಾಡ ಬಸವೇಶ್ವರ ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ಮುಂಡಗೋಡು, ತುಪರೀಹಳ್ಳ, ಸಾಸಿವೆಹಳ್ಳಿ, ದೇವದುರ್ಗ ಮತ್ತು ಗುರುಮಿಠಕಲ್ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮ.
- ಪ್ರಗತಿಯಲ್ಲಿರುವ ಹೇಮಾವತಿ ಯೋಜನೆ ವೈನಾಲೆಯಡಿ 5.45 ಕಿ.ಮೀ ಉದ್ದದ ಹಾಗೂ ತುಮಕೂರು ಶಾಖಾ ನಾಲೆಯಡಿ 166.90 ಕಿ.ಮೀ. ಉದ್ದದ ನಾಲೆಯ ಆಧುನೀಕರಣ ಕಾಮಗಾರಿ ಪೂರ್ಣಗೊಳಿಸಲು ಕ್ರಮ.
- ಕರ್ನಾಟಕ ನೀರಾವರಿ ನಿಗಮದಡಿ 7.280 ಕೋಟಿ ರೂ. ಅಂದಾಜು ಮೊತ್ತದಲ್ಲಿ ವಿವಿಧ ಏತ ನೀರಾವರಿ ಯೋಜನೆಗಳ ಅನುಷ್ಠಾನ; 97,698 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ.
- ಕೃಷ್ಣಾ ಭಾಗ್ಯ ಜಲನಿಗಮದಡಿ 3.779 ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆಗಳ ಅನುಷ್ಠಾನ. 1,09,350 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ.
- ಯಲಬುರ್ಗಾ-ಕುಕನೂರು ತಾಲ್ಲೂಕಿನಲ್ಲಿ 970 ಕೋಟಿ ರೂ. ವೆಚ್ಚದಲ್ಲಿ 38 ಕೆರೆಗಳನ್ನು ತುಂಬಿಸುವ ಯೋಜನೆ ಹಾಗೂ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪ್ರದೇಶಗಳಿಗೆ ಅಂದಾಜು 990 ಕೋಟಿ ರೂ. ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆ ಅನುಷ್ಠಾನ.
- ಕಾವೇರಿ ನೀರಾವರಿ ನಿಗಮದಡಿ 2,000 ಕೋಟಿ ರೂ. ಮೊತ್ತದ ನೀರಾವರಿ, ನಾಲಾ ಹಾಗೂ ಕೆರೆ ತುಂಬಿಸುವ ಯೋಜನೆಗಳ ಜಾರಿ.
- ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ 365 ಕೋಟ ರೂ. ಮೊತ್ತದ ಯೋಜನೆ ಜಾರಿ.
- ಧಾರವಾಡ ಜಿಲ್ಲೆಯಲ್ಲಿ ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ.
ಸಣ್ಣ ನೀರಾವರಿ
- 200 ಕೋಟಿ ರೂ. ವೆಚ್ಚದಲ್ಲಿ 115 ಜಲ ಸಂರಕ್ಷಣಾ ಕಾಮಗಾರಿ ಅನುಷ್ಠಾನ. ಪ್ರಗತಿಯಲ್ಲಿರುವ 455 ಕೋಟಿ ರೂ. ಮೊತ್ತದ ಕೆ.ಸಿ ವ್ಯಾಲಿ-2ನೇ ಹಂತದ ಉದ್ದೇಶಿತ 272 ಕೆರೆ ತುಂಬಿಸುವ ಯೋಜನೆ ಪೂರ್ಣಗೊಳಿಸಲು ಕ್ರಮ.
ಶಿಕ್ಷಣ ಮತ್ತು ಸಾಕ್ಷರತೆ: 2000 ದ್ವಿ ಮಾಧ್ಯಮ ಶಾಲೆ
- ಶಾಲಾ ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದ೦ತಹ ಕಾಮಗಾರಿಗಳಿಗೆ 850 ಕೋಟಿ ರೂ.
- ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ಸಿ.ಎಸ್.ಆರ್. ಅನುದಾನದಡಿ, ಕರ್ನಾಟಕ ಪಜ್ಲಿಕ್ ಶಾಲೆಗಳಾಗಿ ಆಯ್ದ ಶಾಲೆಗಳ ಉನ್ನತೀಕರಣ; 3ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ-ಗಣಕ ಕಾರ್ಯಕ್ರಮ, 10 ಕೋಟ ರೂ. ವೆಚ್ಚದಲ್ಲಿ ಮರು ಸಿ೦ಚನ ಕಾರ್ಯಕ್ರಮ; ಆಯ್ದ ಪ್ರೌಢ ಶಾಲೆಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ಹಾಗೂ ಕಂಪ್ಯೂಟರ್ ಪ್ರಯೋಗಾಲಯ, ಇಂಟರ್ನೆಟ್ ಸೌಲಭ್ಯ.
- ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳ ಪರಿವರ್ತನೆ.
- ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೊಸ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾರಂಭ.
- ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ರಾಜ್ಯದ 74 ಆದರ್ಶ ವಿದ್ಯಾಲಯಗಳ ಉನ್ನತೀಕರಣ.
- 100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಗಣಕ ವಿಜ್ಞಾನ ಸಂಯೋಜನೆ ಪ್ರಾರಂಭ.
- ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಪ್ರಯೋಗಾಲಯಗಳ ಉನ್ನತೀಕರಣ.
- ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 20,000 ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ 10 ಕೋಟ ರೂ. ವೆಚ್ಚದಲ್ಲಿ NEET/ JEE/CET ತರಬೇತಿ ಕಾರ್ಯಕ್ರಮ
ಉನ್ನತ ಶಿಕ್ಷಣ: ಎಂಜಿನಿಯರಿಂಗ್ ಕಾಲೇಜುಗಳ ಅಭಿವೃದ್ಧಿ
- ರಾಜ್ಯದ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಸರ್ಕಾರಿ ಮಹಿಳಾ ಪಾಲಿಟೆಕ್ಸಿಕ್ಗಳ ಉನ್ನತೀಕರಣಕ್ಕಾಗಿ ಒಟ್ಟು 30 ಕೋಟಿ ರೂ. ಅನುದಾನ
- ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಕಾಮಗಾರಿಗಳಿಗೆ 250 ಕೋಟಿ ರೂ. ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳ ಕಾಮಗಾರಿಗಳಿಗೆ 120 ಕೋಟಿ ರೂ. ಅನುದಾನ.
- ಐಐಟಿ ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ಅಭಿವೃದ್ಧಿ.
- 56 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ ಹಾಗೂ 116 ಕೋಟಿ ರೂ. ವೆಚ್ಚದಲ್ಲಿ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಕ್ರಮ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ಏಳು ಜಿಲ್ಲೆಗೆ ಕ್ರಿಟಿಕಲ್ ಕೇರ್ ಬ್ಲಾಕ್
- ಏಳು ಜಿಲ್ಲೆಗಳಲ್ಲಿ 187 ಕೋಟ ರೂ. ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಬ್ಲಾಕ್ ಕಟ್ಟಡ ನಿರ್ಮಾಣ
- 280 ಕೋಟಿ ರೂ. ವೆಚ್ಚದಲ್ಲಿ ಏಳು ತಾಲೂಕುಗಳಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆ ನಿರ್ಮಾಣ.
- ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಅನುದಾನ
- ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳಿಗೆ 150 ಕೋಟಿ ರೂ.
- ಎರಡು ವರ್ಷಗಳಲ್ಲಿ 350 ಕೋಟಿ ರೂ. ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರ ಉನ್ನತೀಕರಣ.
- ಕಲ್ಯಾಣ ಕರ್ನಾಟಕ ಭಾಗದಲ್ಲಿ 221 ಕೋಟಿ ರೂ. ವೆಚ್ಚದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ.
- ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ 199 ಉಪಕೇ೦ದ್ರಗಳನ್ನು ಆರೋಗ್ಯ ಕ್ಷೇಮ ಕೇಂದ್ರಗಳ ಕಟ್ಟಡಕ್ಕಾಗಿ 130 ಕೋಟಿ ರೂ. ಅನುದಾನ.
- 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪನೆ.
- 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆ೦ಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣ ಖರೀದಿಗೆ 21 ಕೋಟಿ ರೂ. ಅನುದಾನ
- 13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ವ್ಯವಸ್ಥೆಯನ್ನು ಒದಗಿಸಲು 6 ಕೋಟ ರೂ. ಅನುದಾನ.
- ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯ ರೋಗ ತಪಾಸಣೆಗಾಗಿ 87 True-Nat Machinesಗಳ ಖರೀದಿಗೆ 6 ಕೋಟ ರೂ. ಅನುದಾನ
- ಉತ್ತರ ಕರ್ನಾಟಕದ ಜಿಲ್ಲೆಗಳ First Referral Unit (FRU) ಗಳಲ್ಲಿ ಎರಡು ವರ್ಷಗಳಲ್ಲಿ 50 ಹೊಸ ರಕ್ತ ಶೇಖರಣಾ ಘಟಕಗಳ ಸ್ಥಾಪನೆ.
- ಮುಂದಿನ 4 ವರ್ಷದಲ್ಲಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL) ಸ್ಥಾಪನೆ.
- ಮುಂದಿನ ಎರಡು ವರ್ಷಗಳಲ್ಲಿ 16 ಜಿಲ್ಲೆಗಳಲ್ಲಿ ಹಾಗೂ ಪ್ರಸಕ್ತ ಸಾಲಿನಲ್ಲಿ ತಾಲ್ಲೂಕು ಮಟ್ಟದ ಪ್ರಯೋಗಾಲಯ ಸ್ಥಾಪನೆ. ಒಟ್ಟಾರೆ 11 ಕೋಟಿ ರೂ. ಅನುದಾನ.
- ಬೆಂಗಳೂರಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ HUB and Spoke ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಹನೆಗೆ 20 ಕೋಟಿ ರೂ. ಅನುದಾನ
ವೈದ್ಯಕೀಯ ಶಿಕ್ಷಣ: ಮೈಸೂರಿಗೆ Nephro-Urology ಆಸ್ಪತ್ರೆ
- ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ.
- 2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ 400 ಕೋಟಿ ರೂ. ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ 130 ಕೋಟಿ ರೂ. ಅನುದಾನ.
- ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಣ.
- ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ.
- ಬೆ೦ಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯ.
- ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Viral Research & Diagnostic Laboratory (VRDL)ಅನ್ನು ಸ್ಥಾಪಿಸಲಾಗುವುದು.
- ಡಿಜಿಟಲ್ ಹೆಲ್ತ್ ಸೊಸೈಟಿಯಡಿ Health Repositoryಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿ ಒಂದೇ ಮೂಲದಿಂದ ಲಭ್ಯವಾಗುವಂತೆ ಮಾಡಲು ಕ್ರಮ.
- ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಶತಮಾನೋತ್ಸವದ ಸವಿನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣಕ್ಕೆ ಕ್ರಮ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ: ಅಂಗನವಾಡಿ ಶಿಕ್ಷಕಿಯರಿಗೆ ಫೋನ್
- ಗೃಹಲಕ್ಷ್ಮಿ ಯೋಜನೆಗೆ 2024-25ನೇ ಸಾಲಿಗೆ 28,608 ಕೋಟಿ ರೂ. ನಿಗದಿ.
- ಅ೦ಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಘೋನ್ ಒದಗಿಸಲು ಕ್ರಮ.
- ರಾಜ್ಯದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 1,000 ಅ೦ಗನವಾಡಿ ನಿರ್ಮಾಣ.
- Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನ
- ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ ಎರಡು ಕೋಟಿ ರೂ. ವೆಚ್ಚದಲ್ಲಿ 4 ಅನುಪಾಲನಾ ಗೃಹಗಳ ಪ್ರಾರಂಭ. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ಪ್ರಸ್ತುತ ನೀಡುತ್ತಿರುವ ಮಾಸಾಶನ 2000 ರೂ. ಗಳಿಗೆ ಹೆಚ್ಚಳ
- ಲಿಂಗತ್ವ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನ 1.200 ರೂ. ಗಳಿಗೆ ಹೆಚ್ಚಳ.
ಸಮಾಜ ಕಲ್ಯಾಣ: ಹಾಸ್ಟೆಲ್ ಅಭಿವೃದ್ಧಿಗೆ 2,710 ಕೋಟಿ ರೂ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿ೦ದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ. ಅನುದಾನ.
- ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಭೋಜನ ಮಾಸಿಕ ಭೋಜನ ವೆಚ್ಚ ತಲಾ 100 ರೂ. ಹೆಚ್ಚಳ.
- ಕ್ರೈಸ್ ಅಡಿಯಲ್ಲಿ 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ.
- 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳ ಪ್ರಾರಂಭ.
- 18 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳ ನಿರ್ಮಾಣ; 31 ಹೊಸ ಮೆಟ್ರಕ್ ನಂತರದ ವಸತಿನಿಲಯ ಮಂಜೂರು ಮಾಡಲು ಕ್ರಮ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 35 ಕೋಟಿ ರೂ.ಗಳ Corpus Fund ಸ್ಥಾಪನೆ.
- ಪದ್ಮಶ್ರೀ ಡಾ. ಸಿದ್ದಲಿಂಗಯ್ಯ ಅವರ ಸರಣಾರ್ಥ ಬೆ೦ಗಳೂರು ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಸ್ಥಾಪನೆ.
ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಹಲವು ಯೋಜನೆ
- ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳಿಗೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಎ೦ದು ಮರುನಾಮಕರಣ ಮಾಡಿ 5 ಹಾಗೂ 7ನೇ ತರಗತಿವರೆಗೆ ಇರುವ ಈ ಶಾಲೆಗಳಲ್ಲಿ ಕ್ರಮವಾಗಿ ಆರನೇ ಹಾಗೂ ಎ೦ಟನೇ ತರಗತಿ ಪ್ರಾರಂಭಿಸಲು ಕ್ರಮ ಹಾಗೂ ಪ್ರತಿ ತರಗತಿಯ ವಿದ್ಯಾರ್ಥಿಗಳ ಸಂಖ್ಯಾಬಲ 25 ರಿಂದ 40ಕ್ಕೆ ಹೆಚ್ಚಳ.
- 7 ಜಿಲ್ಲಾ ಕೇಂದ್ರಗಳಲ್ಲಿ 100 ಸಂಖ್ಯಾಬಲದ ಬಾಲಕ/ಬಾಲಕಿಯರ 14 ವಿದ್ಯಾರ್ಥಿನಿಲಯಗಳ ಪ್ರಾರಂಭ.
- IISC, IIT ಮತ್ತು NIT ಸಂಸ್ಥೆಗಳ ಮೂಲಕ ವೃತ್ತಿಪರ ತರಬೇತಿ ಕೋರ್ಸ್ಗೆ ದಾಖಲಾಗುವ 200 ಇಂಜಿನಿಯರಿಂಗ್ ಪದವೀಧರರಿಗೆ 15,000 ರೂ.ಗಳ ಶಿಷ್ಯವೇತನ ನೀಡಲು ಕ್ರಮ.
- 5,000 ಯುವಕ/ಯುವತಿಯರಿಗೆ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ.
- ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ 25,000 ರೂ.ಗಳ ಶಿಷ್ಯವೇತನ ಸೌಲಭ್ಯ.
- 23 ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಏಕಲವ್ಯ ಮಾದರಿಯ ಪ್ರತಿ ವಸತಿ ಶಾಲೆಯಲ್ಲಿ 20 ಸೀಟು ಮೀಸಲು ಹಾಗೂ ಪಡಿತರ ಚೀಟಿ ಮುಂತಾದ ಸರ್ಕಾರಿ ದಾಖಲೆಗಳನ್ನು ಒದಗಿಸಲು ವಿಶೇಷ ಕೋಶ ಸ್ಥಾಪನೆ.
ಹಿಂದುಳಿದ ವರ್ಗಗಳ ಕಲ್ಯಾಣ: ಹೊಸ ವಸತಿ ನಿಲಯ ಪ್ರಾರಂಭ
- ಹಿಂದುಳಿದ ವರ್ಗಗಳ 150 ಮೆಟ್ರಿಕ್ ನಂತರದ ಹೊಸ ವಸತಿನಿಲಯಗಳ ಪ್ರಾರಂಭ; 174 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 200 ಕೋಟ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಕ್ರಮ.
- 30 ವಿದ್ಯಾರ್ಥಿನಿಲಯಗಳಿಗೆ ನಾಲ್ಕು ಕೋಟ ರೂ.ಗಳ ಘಟಕ ವೆಚ್ಚದಲ್ಲಿ ಕಟ್ಟಡ ನಿರ್ಮಾಣ.
- ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ CLAT, MAT ಮತ್ತು Chartered Accountant ಫೌಂಡೇಷನ್ ಪರೀಕ್ಷಾ ಪೂರ್ವ ತರಬೇತಿ.
- 500 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷಗಳ JEE/NEET ಉಚಿತ ತರಬೇತಿ ನೀಡಲು ಕ್ರಮ.
- ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸ್ಥಿತಿಗತಿ ಅಧ್ಯಯನಕ್ಕಾಗಿ ಅಭಿವೃದ್ಧಿಗಾಗಿ ಕರ್ನಾಟಕ ಅಲೆಮಾರಿ ಆಯೋಗ ರಚನೆ.
- ಅಲ್ಪಸಂಖ್ಯಾತರ ಕಲ್ಯಾಣ
- 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳು, 100 ಹೊಸ ಮೌಲಾನಾ ಆಜಾದ್ ಶಾಲೆಗಳ ಪ್ರಾರಂಭ ಹಾಗೂ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಪ್ರಾರಂಭ.
- ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ 10 ಕೋಟ ರೂ.ವರೆಗಿನ ಸಾಲಕ್ಕೆ ಶೇ.6 ರಷ್ಟು ಬಡ್ಡಿ ಸಹಾಯಧನ ಸೌಲಭ್ಯ.
- ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಅನುದಾನ. ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ದಿಗಾಗಿ 100 ಕೋಟ ರೂ. ಅನುದಾನ
- ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು 20 ಕೋಟ ರೂ. ಅನುದಾನ.
- ಮಂಗಳೂರಿನ ಹಜ್ ಭವನದ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ.
- ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. ಅನುದಾನ.
- ಸಿಖ್ ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಹಾಗೂ ಬೀದರ್ ಗುರುದ್ದಾರ ಅಭಿವೃದ್ಧಿಗೆ 1 ಕೋಟಿ ರೂ.
ವಸತಿ: 2024-25 ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ
- ನಗರ ಪ್ರದೇಶದ ಬಡವರಿಗೆ ವಸತಿ ಸೌಲಭ್ಯಕ್ಕಾಗಿ ಸಂಪನ್ಮೂಲ ಕ್ರೋಡೀಕರಿಸಲು ಪ್ರಸ್ತಾಪಿಸಿದ ಸುಧಾರಣಾ ಕ್ರಮಗಳು: Asset Monetisation, Karnataka Affordable Housing Fund (KAHF) ಸ್ಥಾಪನೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್ ದರ ಪರಿಷ್ಕರಣೆ; ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸ೦ಪನ್ಮೂಲ ಸೃಜನೆಗೆ ಕ್ರಮ.
- ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು
- ಅನ್ನಭಾಗ್ಯ ಯೋಜನೆಯಡಿ ಜನವರಿ 2024ರ ಅಂತ್ಯದವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟ ರೂ. ವರ್ಗಾವಣೆ.
- 80 ವರ್ಷ ದಾಟದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸಲು ಅನ್ನ-ಸುವಿಧಾ ಯೋಜನೆ ಜಾರಿ.
ಕಾರ್ಮಿಕ: ಗಿಗ್ ಕಾರ್ಮಿಕರ ಕಲ್ಯಾಣ
- Platform-Based Gig Workers Fund and Welfare Fee Bill ಎಂಬ ಹೊಸ ವಿಧೇಯಕ ಜಾರಿಯ ಮೂಲಕ ಗಿಗ್ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮ ರೂಪಿಸಲು ಕ್ರಮ.
- ಆಶಾದೀಪ ಯೋಜನೆಯಡಿ ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಸೌಲಭ್ಯ ವಿಸ್ತರಣೆ ಮೂಲಕ ಶಿಷ್ಯ ವೇತನ ಅವಧಿ ಒಂದು ವರ್ಷಕ್ಕೆ ಹೆಚ್ಚಳ, ಕಾಯಂ ನೇಮಕಾತಿ ಮಾಡಿಕೊಂಡಲ್ಲಿ ವೇತನ ಮರುಪಾವತಿ ಅವಧಿ ಎರಡು ವರ್ಷಕ್ಕೆ ಹೆಚ್ಚಳ ಹಾಗೂ ವೇತನದ ಗರಿಷ್ಠ ಮಿತಿ 7,000 ರೂ. ಗಳಿಗೆ ಹೆಚ್ಚಳ.
- ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲು ಆಯ್ದ 10 ಜಿಲ್ಲೆಗಳಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಾಣ.
- ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಸಾರಿಗೆ ವಾಹನಗಳ ಕಾರ್ಮಿಕರಿಗೆ ಭದ್ರತಾ ಮತ್ತು ಕಲ್ಯಾಣ ಕಾರ್ಯಕ್ರಮಗಳ ಜಾರಿ
- ಇ.ಎಸ್.ಐ ಯೋಜನೆಯಡಿ ಒಟ್ಟಾರೆ 311 ಕೋಟಿ ರೂ. ವೆಚ್ಚದಲ್ಲಿ ವಿವಿಧ ಸೇವೆ ಹಾಗೂ ಸೌಲಭ್ಯಗಳ ವಿಸ್ತರಣೆ.
ಕೌಶಲ್ಯಾಭಿವೃದ್ಧಿ: ರಾಜ್ಯ ಕೌಶಲ್ಯ ನೀತಿ ಜಾರಿ
- ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯಮ ಅವಕಾಶಗಳನ್ನು ಒದಗಿಸಲು ರಾಜ್ಯ ಕೌಶಲ್ಯ ನೀತಿ ಜಾರಿ.
- ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ 25,000 ಫಲಾನುಭವಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ.
- ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ.
- ಬಳ್ಳಾರಿ, ಕಲಬುರಗಿ, ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ 350 ಕೋಟಿ ವೆಚ್ಚದಲ್ಲಿ ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ.
- ಬಳ್ಳಾರಿ, ಚಿತ್ರದುರ್ಗ, ರೋಣದಲ್ಲಿ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿಗಳ ಪ್ರಾರಂಭ.
- ಕಲಬುರಗಿಯ ಕೆ.ಜಿ.ಟಿ.ಟಿ.ಐ.ನಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ಸಿ.ಎನ್.ಸಿ (Computer Numerical Control) ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಶ್ರೇಷ್ಟತಾ ಕೇಂದ್ರ ಸ್ಥಾಪನೆ.
- ಐ.ಟಿ.ಐ. ಮತ್ತು ಜಿ.ಟಿ.ಟಿ.ಸಿ 40,000 ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಮತ್ತು ಸಂವಹನ ಕೌಶಲ್ಯ ತರಬೇತಿಗೆ 5 ಕೋಟಿ ರೂ. ವೆಚ್ಚ
- ರಾಜ್ಯದ ಎಲ್ಲಾ ಐ.ಟಿ.ಐಗಳಲ್ಲಿ ಸ್ಥಳೀಯ ಕೈಗಾರಿಕೆಗಳು ಹಾಗೂ ಉದ್ಯಮಗಳ ಸಹಭಾಗಿತ್ವದಲ್ಲಿ Dual System of Training (DST) ವಿಸ್ತರಣೆ.
- ಜಾಗತಿಕ ಬ೦ಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸ್ಕಿಲ್ ಕನೆಕ್ಟ್ ಸಮಿಟ್ (Skill Connect Summit) ಆಯೋಜನೆಗೆ ಕ್ರಮ.
- ಎರಡು ವರ್ಷದಲ್ಲಿ 50,000 ಎಸ್.ಎಚ್.ಜಿ. ಮಹಿಳಾ ಸ್ವಾಮ್ಯದ ಸೂಕ್ಷ್ಮ ಉದ್ಯಮಗಳ ಅಭಿವೃದ್ಧಿಗೆ ಕ್ರಮ.
- ಒಂದು ಲಕ್ಷ ಮಹಿಳಾ ಸ್ವ-ಸಹಾಯ ಗು೦ಪುಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಿರು ಉದ್ದಿಮೆಗಳನ್ನು ಸ್ಥಾಪಿಸಲು ಮತ್ತು ಅವುಗಳಿಗೆ ಸೂಕ್ತ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸಲು ಕ್ರಮ.
- ಐಐಎಂಬಿ ಸಹಭಾಗಿತ್ವದಲ್ಲಿ 10 ಜಿಲ್ಲಾ ಮಟ್ಟದ ಇನ್ಕ್ಯುಬೇಷನ್ ಕೇಂದ್ರಗಳ ಸ್ಥಾಪನೆ.
- ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿ ಎ೦ಬ ಮಹಿಳೆಯರೇ ನಡೆಸುವ ಕ್ಯಾಂಟೀನ್ಗಳ ಸ್ಥಾಪನೆ ಹಾಗೂ 2.500 ಕಾಫಿ ಕಿಯಾಸ್ಕ್ ಸ್ಥಾಪನೆಗೆ ಕ್ರಮ.