ಬೆಂಗಳೂರು: ಇತ್ತೀಚಿನ ಭಾರಿ ಮಳೆಗೆ ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಪ್ರಸಿದ್ಧ ಕೆಆರ್‌ಎಸ್ ಅಣೆಕಟ್ಟೆ ಹಾಗೂ ಎಚ್‌ಡಿ ಕೋಟೆ ತಾಲ್ಲೂಕಿನ ಕಬಿನಿ ಅಣೆಕಟ್ಟೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಕಾವೇರಿ ನದಿಗೆ ನಮನ ಸಲ್ಲಿಸಲಿದ್ದಾರೆ.
ಬೊಮ್ಮಾಯಿ ಅವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಒಂದು ವರ್ಷದ ಅವಧಿಯಲ್ಲಿ ಎರಡನೇ ಬಾರಿಗೆ ಈ ಜಲಾಶಯಗಳಿಗೆ ಬಾಗಿನ ಸಲ್ಲಿಸುತ್ತಿದ್ದಾರೆ.
ಜುಲೈ 20 ರಂದು ಸಿಎಂ ಬೊಮ್ಮಾಯಿ ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಜುಲೈ 20ರಂದು ಬೆಳಗ್ಗೆ 10 ಗಂಟೆಗೆ ಮೊದಲು ಚಾಮುಂಡಿ ಬೆಟ್ಟಕ್ಕೆ ಸಿಎಂ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ 11.30ಕ್ಕೆ ಜಿಲ್ಲೆ ಎಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ತೆರಳಿ ಬಾಗಿನ ಸಮರ್ಪಿಸಲಿದ್ದಾರೆ. ಆನಂತರ ಮಧ್ಯಾಹ್ನ 12.10ಕ್ಕೆ ಕೃಷ್ಣರಾಜಸಾಗರ ಜಲಾಶಯಕ್ಕೆ (ಕೆಆರ್‌ಎಸ್) ಬಾಗಿನ ನೀಡಲಿದ್ದಾರೆ. ಬಳಿಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.
ಕೆಆರ್‌ಎಸ್‌ನಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹ
- ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಬುಧವಾರ ಬೆಳಗ್ಗೆ ನೀರಿನ ಮಟ್ಟ 124.80 ಅಡಿ
- ಜಲಾಶಯದ ಗರಿಷ್ಠ ಮಟ್ಟ 124.80 ಅಡಿ
- ಇಂದಿನ ಒಳಹರಿವಿನ ಪ್ರಮಾಣ 59,675 ಕ್ಯೂಸೆಕ್.
- ಇಂದಿನ ಹೊರ ಹರಿವಿನ ಪ್ರಮಾಣ 54,637 ಕ್ಯೂಸೆಕ್.
- ಜಲಾಶಯದ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯ – 49.452 ಟಿಎಂಸಿ.
- ಇಂದಿನ ನೀರು ಸಂಗ್ರಹ – 49.452 ಟಿಎಂಸಿ