ಬೆಂಗಳೂರು: ಚಾಮುಂಡಿ ವಿಹಾರ್ ಅನ್ನು ರಾಜ್ಯ ಸರ್ಕಾರ ವಶಕ್ಕೆ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ರಾಜಮನೆತನಕ್ಕೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಸರ್ಕಾರದ ಇಲಾಖೆಯನ್ನು ಜಪ್ತಿ ಮಾಡಲಾಗಿದೆ.
ಕೋರ್ಟ್ ಆದೇಶದಂತೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಕಟ್ಟಡದ ಸ್ವತ್ತುಗಳನ್ನು ಕೋರ್ಟ್ ಅಮೀನ್ ಉಪಸ್ಥಿತಿಯಲ್ಲಿ ಜಪ್ತಿ ಮಾಡಲಾಗಿದ್ದು, ಎಲ್ಲ ಪರಿಕರಗಳನ್ನು ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.
ಏನಿದು ಪ್ರಕರಣ?
ಚಾಮುಂಡಿ ವಿಹಾರ್ ಸ್ವತ್ತನ್ನ ವಶಪಡಿಸಿಕೊಂಡಿದ್ದ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಶಕ್ಕೆ ಪಡೆದುಕೊಂಡಿತ್ತು. ರಾಜ್ಯ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮೂವರು ಕೋರ್ಟ್ ಮೆಟ್ಟಿಲೇರಿದ್ದರು. ಇವರಲ್ಲಿ ರಾಜಮನೆತನದ ತ್ರಿಪುರ ಸಂದರ ದೇವಿಯವರು ಸಹ ಒಬ್ಬರಾಗಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಒಟ್ಟು 80 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಆದೇಶ ನೀಡಿತ್ತು. ಇದರಲ್ಲಿ ತ್ರಿಪುರ ಸುಂದರ ದೇವಿ ಅವರಿಗೆ 27 ಕೋಟಿ ರೂಪಾಯಿ ಪರಿಹಾರವನ್ನು ಕೊಡಬೇಕಿತ್ತು.
ಪರಿಹಾರ ಕೊಡದ ಇಲಾಖೆ
ತ್ರಿಪುರ ಸುಂದರ ದೇವಿ ಅವರಿಗೆ ಕೊಡಬೇಕಿದ್ದ 27 ಕೋಟಿ ರೂಪಾಯಿ ಪರಿಹಾರ ಮೊತ್ತವನ್ನು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಪುನಃ ಕೋರ್ಟ್ ಮೆಟ್ಟಿಲೇರಿದ್ದರು. ಪರಿಹಾರವನ್ನು ನೀಡುವಂತೆ ಕೋರ್ಟ್‌ನಿಂದ ೪ ಬಾರಿ ನೋಟಿಸ್ ನೀಡಿದ್ದರೂ ಇಲಾಖೆ ಸ್ಪಂದಿಸದ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಪ್ತಿ ಆದೇಶ ಹೊರಡಿಸಿದೆ.
ಇದನ್ನೂ ಓದಿ | DHFL-Yes Bank case| ಇ.ಡಿಯಿಂದ ಇಬ್ಬರು ಬಿಲ್ಡರ್‌ಗಳ 415 ಕೋಟಿ ರೂ. ಆಸ್ತಿ ಜಪ್ತಿ