ಬೆಂಗಳೂರು: ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಗೆ ಅಮಾನ ಮಾಡಿದ್ದಾರೆ ಎಂದು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹಾಗೂ ಲಕ್ಷ್ಮಣ ಅಕಾಶೆ ಕಾರ್ಕಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ದಾಖಲಾಗಿದೆ. ಈ ಕುರಿತು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್ ನೇತೃತ್ವದಲ್ಲಿ ವಕೀಲರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರಿಗೆ ದೂರು ಸಲ್ಲಿಸಿದ್ದಾರೆ.
ನಾಡು ನುಡಿಯ ಹೆಮ್ಮೆ ಕುವೆಂಪು ರಚನೆಯ ನಾಡಗೀತೆ ಬಗ್ಗೆ ಚಕ್ರತೀರ್ಥ ಅವಹೇಳನಕಾರಿಯಾಗಿ ಬರೆದು ಸಾಮಾಜಿಕ ಜಾಲಾತಾಣದಲ್ಲಿ ಹಾಕಿದ್ದಾರೆ. ಲಕ್ಷ್ಮಣ ಆಕಾಶೆ ಕಾರ್ಕಳ ಎಂಬುವವರು ಕುವೆಂಪು ಅವರ ಬಗ್ಗೆ ಕೆಟ್ಟ ಪದಗಳಿಂದ ನಿಂದನೆ ಮಾಡಿದ್ದಾರೆ. ಇದು ಸಮಾಜದ ಸ್ವಾಸ್ತ್ಯ ಕೆಡಿಸುವ ಯತ್ನ. ಈ ಕೂಡಲೇ ಇವರಿಬ್ಬರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಕೀಲರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ | ಸಮಾಜವನ್ನು ಅಧಃಪತನದತ್ತ ತಳ್ಳಲು ಬಿಜೆಪಿ ಯತ್ನ: ಪ್ರಿಯಾಂಕ್ ಖರ್ಗೆ