ಬೆಂಗಳೂರು: ರಾಷ್ಟ್ರಪತಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಎರಡು-ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಮಿಲಿಟರಿ ಶಾಲೆ ಹಾಗೂ ಇಸ್ಕಾನ್ ದೇಗುಲ ಕಾರ್ಯಕ್ರಮದಲ್ಲಿ ಭಾಗವಹಿಸಲು ಜೂನ್ 13 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಇದನ್ನೂ ಓದಿ | ಕನ್ನಡಿಗ ಹುತಾತ್ಮ ಯೋಧನ ಶೌರ್ಯ ಪ್ರಶಸ್ತಿ ನೀಡಲು ಸ್ವತಃ ರಾಷ್ಟ್ರಪತಿ ವೇದಿಕೆ ಇಳಿದು ಬಂದರು
ಜೂನ್ 13ರ ಬೆಳಗ್ಗೆ ರಾಜಧಾನಿ ತಲುಪಲಿರುವ ರಾಷ್ಟ್ರಪತಿಯವರು, ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅಂದು ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಜೂನ್ 14ರ ಮಂಗಳವಾರ ಬೆಳಗ್ಗೆ ಬೆಂಗಳೂರಿನ ಕನಕಪುರ ರಸ್ತೆ ಸಮೀಪದ ದೊಡ್ಡಕಲ್ಲಸಂದ್ರದ ವೈಕುಂಠ ಬೆಟ್ಟದಲ್ಲಿ ತಿರುಪತಿ ತಿರುಮಲ ದೇವಾಲಯವನ್ನು ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣಾ ಭಾಗವಹಿಸಲಿದ್ದಾರೆ. ಅದೇ ದಿನ ಮದ್ಯಾಹ್ನ ದೆಹಲಿಗೆ ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ | Explainer: ನೀಟ್ ಪರೀಕ್ಷೆ ತಮಿಳುನಾಡಿಗೆ ಬೇಡವಂತೆ, ರಾಷ್ಟ್ರಪತಿಗಳತ್ತ ವಿಧೇಯಕ