ಬೆಂಗಳೂರು:ಕರ್ನಾಟಕ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಭೀಮನಗೌಡ ಸಂಗನಗೌಡ ಪಾಟೀಲ್ ನೇಮಕವಾಗಿದ್ದಾರೆ.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಾದ ಬಿ.ಎಸ್. ಪಾಟೀಲ್ ಅವರು ಸದ್ಯ ಕರ್ನಾಟಕ ಲೋಕಾಯುಕ್ತದ ಉಪಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ, ಕರ್ನಾಟಕ ವಿಧಾನ ಪರಿಷತ್ ಸಭಾಪತಿ, ವಿಧಾನಸಭೆ ಸ್ಪೀಕರ್ ಅವರೊಂದಿಗೆ ಸಮಾಲೋಚನೆ ನಂತರ ಬಿ.ಎಸ್. ಪಾಟೀಲ್ ಅವರ ಹೆಸರನ್ನು ಸಿಎಂ ಬಸವರಾಜ ಬೊಮ್ಮಾಯಿ ಶಿಫಾರಸು ಮಾಡಿದ್ದರು.
ಬುಧವಾರ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿ.ಎಸ್. ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.