Site icon Vistara News

Christmas 2023: ಕ್ರಿಸ್‌ಮಸ್‌ ಹಬ್ಬಕ್ಕೆ 1000 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ

KSRTC bus

ಬೆಂಗಳೂರು: ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಸಿಹಿಸುದ್ದಿ ನೀಡಿದೆ. ಕ್ರಿಸ್‌ಮಸ್ ಹಬ್ಬಕ್ಕೆ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಕೆಎಸ್‌ಆರ್‌ಟಿಸಿಯಿಂದ ಬರೋಬ್ಬರಿ 1000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಡಿ.22 ರಿಂದ 25ರವೆರೆಗೆ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ಡಿ. 22 ರಿಂದ 24ರವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಅಂತಾರಾಜ್ಯಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಡಿ. 25ರಂದು ರಾಜ್ಯ, ಅಂತಾರಾಜ್ಯಗಳ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸುವ ಸ್ಥಳಗಳು

ಇದನ್ನೂ ಓದಿ | Datta Jayanti : ದತ್ತಪೀಠದ ಅರ್ಚಕರು, ಮುಜಾವರ್‌ ಸಹಿತ ಐವರಿಗೆ ಗನ್‌ ಮ್ಯಾನ್‌ ಸೆಕ್ಯುರಿಟಿ

ಟಿಕೆಟ್‌ ದರದಲ್ಲಿ ಶೇ. 10 ರಿಯಾಯಿತಿ

ಇ-ಟಿಕೇಟ್ ಬುಕಿಂಗ್‌ ಅನ್ನು ಕೆಎಸ್‌ಆರ್‌ಟಿಸಿ ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ಇದನ್ನೂ ಓದಿ | Vistara Explainer: ಏನಿದು ಕೃಷ್ಣ ಜನ್ಮಭೂಮಿ-ಈದ್ಗಾ ಮಸೀದಿ ವಿವಾದ? ಮುಂದೇನು?

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version