Site icon Vistara News

ಶಿವಕುಮಾರ ಶ್ರೀಗಳ 115ನೇ ಜಯಂತಿ: ಟ್ವಿಟ್ಟರ್‌ನಲ್ಲಿ ʻನಮೋʼ ನಮನ

PMO enters into 40 percent commission case in karnataka

ಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್‌ನಲ್ಲಿ ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಅವರು, ‘ಪೂಜನೀಯರಾದ ಗೌರವಾನ್ವಿತ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ’ ಎಂದು ತಿಳಿಸಿದ್ದಾರೆ.

ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಇಂದು ಶಿವಕುಮಾರ ಸ್ವಾಮೀಜಿಗಳ ಜಯಂತಿ ಆಚರಣೆ ನಡೆಯಲಿದೆ. ಮಠದಲ್ಲಿ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿವೆ. ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಮಠಕ್ಕೆ ರಾಜ್ಯದ ವಿವಿಧೆಡೆಗಳಿಂದ ಭಕ್ತರು ಅಗಮಿಸುತ್ತಿದ್ದು, ಗದ್ದುಗೆ ದರ್ಶನ ಪಡೆಯುತ್ತಿದ್ದಾರೆ.

Exit mobile version