Site icon Vistara News

ಇಂದು ಮಲೆ ಮಹದೇಶ್ವರರ 108 ಅಡಿ ಎತ್ತರದ ಪ್ರತಿಮೆ ಅನಾವರಣ, ವೇದಿಕೆಯಲ್ಲಿ ಒಂದಾಗ್ತಾರಾ ಬಿಎಸ್‌ವೈ- ಸೋಮಣ್ಣ?

male mahadeshwara

ಚಾಮರಾಜನಗರ: ಏಳುಮಲೆಗಳ ಅಧಿದೈವವಾದ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಇಂದು ಮಲೆ ಮಹದೇಶ್ವರರ 108 ಅಡಿ ಎತ್ತರದ ಪ್ರತಿಮೆ ಅನಾವರಣಗೊಳ್ಳಲಿದೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣವಾಗಿರುವ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣ ಮಾಡಲಿದ್ದಾರೆ. ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರಾದ ವಿ.ಸೋಮಣ್ಣ, ಶಶಿಕಲಾ ಜೊಲ್ಲೆ, ಆರ್.ಅಶೋಕ್, ಸಿ.ಸಿ ಪಾಟೀಲ್‌ರಿಗೆ ಆಹ್ವಾನ ನೀಡಲಾಗಿದೆ.

ಬಿಎಸ್‌ವೈ ಮತ್ತು ಸೋಮಣ್ಣ ಇಂದು ಒಂದೇ ವೇದಿಕೆ ಹಂಚಿಕೊಳ್ಳುತ್ತಾರೆಯೇ ಎಂಬುದು ಕುತೂಹಲಕಾರಿ ಸಂಗತಿಯಾಗಿದೆ. ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಇಬ್ಬರ ಹೆಸರೂ ಇದೆ. ಮಲೆ ಮಹದೇಶ್ವರ ಸಚಿವ ಸೋಮಣ್ಣನವರ ಮನೆ ದೇವರೂ ಆಗಿದ್ದಾರೆ. ಆದರೆ ಇಬ್ಬರ ನಡುವಿನ ಸಂಬಂಧ ಟಿಕೆಟ್‌ ಹಂಚಿಕೆವಿಚಾರದಲ್ಲಿ ಹಳಸಿದೆ. ಹೀಗಾಗಿ ಈ ವೇದಿಕೆಯ ಸಂಗಮ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: BJP Rathayatre: ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಚಾಲನೆ

Exit mobile version