Site icon Vistara News

ಕನಕಗಿರಿಯಲ್ಲಿ 11 ವರ್ಷದ ಬಾಲಕ ಸಾವು; ಕಲುಷಿತ ನೀರು ಸೇವನೆ ಶಂಕೆ

boy dies in Kanakagiri

#image_title

ಕೊಪ್ಪಳ: ಜಿಲ್ಲೆಯಲ್ಲಿ ಕಲುಷಿತ ನೀರಿಗೆ ಮತ್ತೊಂದು ಬಲಿಯಾಗಿದೆ. ಕಲುಷಿತ ನೀರು ಸೇವಿಸಿ 7 ವರ್ಷದ ಬಾಲಕ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ.

ಕನಕಗಿರಿ ಪಟ್ಟಣದ ನಿವಾಸಿ ಪರಸಪ್ಪ ಪೂಜಾರ ಎಂಬುವವರ ಪುತ್ರ ಕನಕಪ್ಪ (7) ಮೃತ ಬಾಲಕ. ಕಳೆದ ಎರಡು ಮೂರು ದಿನಗಳಿಂದ ವಾಂತಿ ಭೇದಿಯಿಂದ ಬಾಲಕ ಬಳಲುತಿದ್ದ. ಭಾನುವಾರ ಕನಕಗಿರಿ ತಾಲೂಕು ಆಸ್ಪತ್ರೆಯಲ್ಲಿ ಬಾಲಕನಿಗೆ ಫೋಷಕರು ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ದಿದ್ದರು.

ಸೋಮವಾರ ಮತ್ತೆ ವಾಂತಿ ಭೇದಿ ಕಾಣಿಸಿದ್ದರಿಂದ ಬಾಲಕನನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ. ಜ್ವರದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಆಸ್ಪತ್ರೆ ಮುಂದೆ ಪೊಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಕನಕಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Medical Negligence: ಸೊಂಟ ನೋವೆಂದು ಬಂದವಳು ಪ್ಯಾರಾಲಿಸಿಸ್‌ ಇಂಜೆಕ್ಷನ್‌ ಪಡೆದಳು; ಅಲ್ಲೇ ಉಸಿರು ಚೆಲ್ಲಿದಳು!

ಇತ್ತೀಚೆಗೆ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆಯೊಬ್ಬರು ಮೃತಪಟ್ಟು, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು.

ಹೊನ್ನಮ್ಮ ಶಿವಪ್ಪ (65) ಮೃತ ಮಹಿಳೆ. ಬಸರಿಹಾಳ ಗ್ರಾಮದಲ್ಲಿ ವಾಂತಿ- ಭೇದಿಯಿಂದ ಹಲವು ಜನರು ಬಳಲುತ್ತಿದ್ದರು. ಅಸ್ವಸ್ಥಗೊಂಡವರನ್ನು ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಮೃತಪಟ್ಟಿದ್ದರು. ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಲುಷಿತ ನೀರು ಪೂರೈಕೆಯಾಗಿದೆ ಸ್ಥಳೀಯರು ಆರೋಪಿಸಿದ್ದರು.

ಇದೀಗ ಕನಕಗಿರಿಯಲ್ಲಿ ಬಾಲಕನೊಬ್ಬ ವಾಂತಿ ಭೇದಿಯಿಂದ ಅಸ್ವಸ್ಥಗೊಂಡು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಈ ಪ್ರಕರಣಕ್ಕೂ ಕಲುಷಿತ ನೀರು ಸೇವನೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

Exit mobile version