ಬೆಂಗಳೂರು: ಹಿಜಾಬ್, ಹಲಾಲ್ ಕಟ್-ಜಟ್ಕಾ ಕಟ್ ಬಳಿಕ ಇದೀಗ ಅಜಾನ್ ವಿವಾದ ಸದ್ಯ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಧಾರ್ಮಿಕ ಕೇಂದ್ರಗಳು ಸೇರಿದಂತೆ ಶಬ್ದಮಾಲಿನ್ಯ ಮಾಡುವವರ ಮೇಲೆ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಡಿಜಿ-ಐಜಿಪಿ ಪ್ರವೀಣ್ ಸೂದ್ ಅವರು, ಹೈಕೋರ್ಟ್ ಆದೇಶವನ್ನು ಯಥಾವತ್ತಾಗಿ ಪಾಲಿಸುವಂತೆ ಎಲ್ಲಾ ಕಮೀಷನರ್‌ಗಳು, ಐಜಿಪಿಗಳು ಹಾಗೂ ಎಸ್‌ಪಿಗಳಿಗೆ ಸೂಚನೆ ನೀಡಿದ್ದಾರೆ.
ಧಾರ್ಮಿಕ ಕೇಂದ್ರಗಳು, ಪಬ್, ನೈಟ್ ಕ್ಲಬ್, ಕಾರ್ಯಕ್ರಮ ನಡೆಯುವ ಸ್ಥಳಗಳು ಸೇರಿದಂತೆ ಎಲ್ಲಾ ಕಡೆ ನಿಗಾ ಇಡಿ. ಶಬ್ದಮಾಲಿನ್ಯ ಉಂಟು ಮಾಡುತ್ತಿರುವವರ ಮೇಲೆ ʻಮಾಲಿನ್ಯ ನಿಯಂತ್ರಣ ಮಂಡಳಿ ಕಾಯ್ದೆ 2000ʼ ಅಡಿಯಲ್ಲಿ ಕೇಸ್ ದಾಖಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಅವರು ಸೂಚನೆ ನೀಡಿದ್ದಾರೆ.