ಕಿತ್ತು ತಿನ್ನುವ ಹೊಟ್ಟೆನೋವು; ಶಾಲೆಗೆ ಹೋಗ್ತೇನೆ ಎಂದು ಹೇಳಿ ಕೆರೆಗೆ ಹಾರಿದ ಬಾಲಕಿ - Vistara News

ಕರ್ನಾಟಕ

ಕಿತ್ತು ತಿನ್ನುವ ಹೊಟ್ಟೆನೋವು; ಶಾಲೆಗೆ ಹೋಗ್ತೇನೆ ಎಂದು ಹೇಳಿ ಕೆರೆಗೆ ಹಾರಿದ ಬಾಲಕಿ

ನಂಜನಗೂಡಿನ ಹುರ ಎಂಬ ಗ್ರಾಮದ ನಿವಾಸಿಯಾಗಿದ್ದ ಬಾಲಕಿ ಗೀತಾಗೆ ಈಗ 12 ವರ್ಷ. ವೆಂಕಟನಾಯಕ ಎಂಬುವರು ಪುತ್ರಿ. ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಓದುತ್ತಿದ್ದಳು.

VISTARANEWS.COM


on

12 year Old Girl died of stomach pain in Mysore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: 7ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಕೆರೆಗೆ ಹಾರಿ ಆತ್ಮಹತ್ಯೆ (Girl Died)ಮಾಡಿಕೊಂಡಿದ್ದಾಳೆ. ಗೀತಾ ಮೃತ ಬಾಲಕಿಯಾಗಿದ್ದು, ಈಕೆ ಹಲವು ದಿನಗಳಿಂದಲೂ ವಿಪರೀತ ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಈ ನೋವಿಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳೀಯ ನುರಿತ ಈಜುಗಾರರು, ಅಗ್ನಿಶಾಮಕದಳದ ಸಿಬ್ಬಂದಿ ಬಾಲಕಿಯ ಶವವನ್ನು ಹೊರಗೆ ತೆಗೆದಿದ್ದಾರೆ.

ನಂಜನಗೂಡಿನ ಹುರ ಎಂಬ ಗ್ರಾಮದ ನಿವಾಸಿಯಾಗಿದ್ದ ಬಾಲಕಿ ಗೀತಾಗೆ ಈಗ 12 ವರ್ಷ. ವೆಂಕಟನಾಯಕ ಎಂಬುವರು ಪುತ್ರಿ. ಆಕೆಗೆ ಪದೇಪದೆ ತೀವ್ರ ಹೊಟ್ಟೆನೋವು ಬರುತ್ತಿತ್ತು. ಆ ನೋವು ಬಂದರೆ ಆಕೆಗೆ ತಡೆದುಕೊಳ್ಳಲು ಆಗುತ್ತಿರಲಿಲ್ಲ. ಇದರಿಂದ ಗೀತಾ ಬಳಲಿದ್ದಳು. ಅಪ್ಪ-ಅಮ್ಮನ ಎದುರೂ ನೋವನ್ನು ಹೇಳಿಕೊಂಡಿದ್ದಳು. ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಓದುತ್ತಿದ್ದ ಈಕೆ, ಸೋಮವಾರ ಶಾಲೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿ ಕೆರೆಗೆ ಹಾರಿದ್ದಾಳೆ. ತಮ್ಮ ಮಗಳು ಹೊಟ್ಟೆನೋವು ತಾಳಲಾರೆದೆಯೇ ಸತ್ತಿದ್ದಾಳೆ ಎಂದು ಪಾಲಕರು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ಕೊಟ್ಟು, ಪರಿಶೀಲನೆ ನಡೆಸಿದ್ದಾರೆ. ಹಾಗೇ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ.

ಇದನ್ನೂ ಓದಿ: Contaminated Water: ಕೊಪ್ಪಳದಲ್ಲಿ ವಾಂತಿ, ಭೇದಿಗೆ ಬಾಲಕಿ ಬಲಿ: ಸಾವಿನ ಸಂಖ್ಯೆ ಮೂರಕ್ಕೇರಿಕೆ, ಹೆಚ್ಚಿದ ಆತಂಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

Bengaluru News: ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆಯ 20ನೇ ವರ್ಷದ ಸಂಭ್ರಮೋತ್ಸವದ ಅಂಗವಾಗಿ ಜುಲೈ 6 ಮತ್ತು 7 ರಂದು ‘ನಾದ ನೃತ್ಯಾನುಭವʼ ವಿಶೇಷ ಗಾಯನ, ವಾದನ ಮತ್ತು ನೃತ್ಯ ಕಾರ್ಯಕ್ರಮ ಆಯೋಜಿಸಿದೆ.

VISTARANEWS.COM


on

natana Tarangini 20th anniversary celebration on July 6 and 7 in Bengaluru
Koo

ಬೆಂಗಳೂರು: ನಗರದ ಕುಮಾರಸ್ವಾಮಿ ಬಡಾವಣೆಯ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆಯ 20ನೇ ವರ್ಷದ ಸಂಭ್ರಮೋತ್ಸವದ ಅಂಗವಾಗಿ ಜುಲೈ 6 ಮತ್ತು 7 ರಂದು ‘ನಾದ ನೃತ್ಯಾನುಭವʼ ವಿಶೇಷ ಗಾಯನ, ವಾದನ ಮತ್ತು ನೃತ್ಯ ಕಾರ್ಯಕ್ರಮ (Bengaluru News) ಆಯೋಜಿಸಿದೆ.

ಬೆಂಗಳೂರಿನ ಜಯನಗರ 8ನೇ ಬಡಾವಣೆಯ ಶ್ರೀ ಜಯರಾಮ ಸೇವಾ ಮಂಡಳಿ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ನಟನ ತರಂಗಿಣಿ ಅಕಾಡೆಮಿಯ 5ನೇ ವಾರ್ಷಿಕೋತ್ಸವವೂ ಸಂಗಮಗೊಂಡಿದೆ. ಜು. 6ರ ಶನಿವಾರ ಮಧ್ಯಾಹ್ನ 2.30ಕ್ಕೆ ನಟನ ತರಂಗಣಿ ವಿದ್ಯಾರ್ಥಿಗಳಿಂದ ಗಾಯನ ಮತ್ತು ವಾದ್ಯ ಸಂಗೀತ ಕಾರ್ಯಕ್ರಮದ ಮೂಲಕ ವಾರ್ಷಿಕೋತ್ಸವ ಆರಂಭವಾಗಲಿದೆ.

ಇದನ್ನೂ ಓದಿ: Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

ಸಂಜೆ 5ಕ್ಕೆ ನಡೆಯುವ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಡುಪಿಯ ರಂಜನಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಪ್ರೊ. ಅರವಿಂದ ಹೆಬ್ಬಾರ್, ಶಿವಮೊಗ್ಗದ ಸಂಗೀತ ಕಾರ್ಯಕ್ರಮಗಳ ಸಂಘಟಕ ಸುಬ್ರಹ್ಮಣ್ಯ ಶಾಸ್ತ್ರಿ, ಚೆನ್ನೈನ ದಾಸಪ್ರಕಾಶ್ ಕುಟುಂಬದ ಕೆ. ಗಂಗಾ ಪ್ರಸಾದ್, ಪುತ್ತೂರಿನ ಕರ್ನಾಟಕ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಶ್ರೀಹರಿ ಭಾಗವಹಿಸಲಿದ್ದಾರೆ.

ಶ್ರೀನಿವಾಸ್‌ಗೆ ನಾದಶ್ರೀ ಪ್ರಶಸ್ತಿ ಪ್ರದಾನ

ಬೆಂಗಳೂರಿನ ಮೃದಂಗ ಮತ್ತು ತಬಲಾ ತಯಾರಕ ವಿದ್ವಾನ್ ಶ್ರೀನಿವಾಸ ಅನಂತ ರಾಮಯ್ಯ ಅವರಿಗೆ ‘ನಾದ ಶ್ರೀʼ ಪ್ರಶಸ್ತಿ ನೀಡಿ, ಸನ್ಮಾನಿಸಲಾಗುವುದು. ಸಂಜೆ 5:30ಕ್ಕೆ ನಟನ ತರಂಗಣಿ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಶೇಷ ನೃತ್ಯ ಪ್ರದರ್ಶನವಿದೆ. ಮೃದಂಗ ಪಕ್ಕವಾದ್ಯದಲ್ಲಿ ವಿದ್ವಾನ್ ಕೆ.ಕೆ. ಭಾನುಪ್ರಕಾಶ್ ಸಹಕಾರ ನೀಡಲಿದ್ದಾರೆ. ಸಂಜೆ 7.30 ಕ್ಕೆ ವಿಶೇಷ ನೃತ್ಯ ಪ್ರಸ್ತುತಿಯಲ್ಲಿ ಚೆನ್ನೈನ ಖ್ಯಾತ ಕಲಾವಿದೆ ವಿದುಷಿ ದಿವ್ಯಾ ವೇಣುಗೋಪಾಲ್ ಭರತನಾಟ್ಯ ಜರುಗಲಿದೆ.

ವಿದ್ಯಾರ್ಥಿಗಳಿಂದ ವಾದ್ಯ ವೈಭವ

ಜುಲೈ 7 ರ ಮಧ್ಯಾಹ್ನ 2 ಗಂಟೆಗೆ ನಟನ ತರಂಗಿಣಿ ಸಂಸ್ಥೆ ವಿದ್ಯಾರ್ಥಿಗಳಿಂದ ಗಾಯನ ಮತ್ತು ವಾದ್ಯ ನೆರವೇರಲಿದೆ. ಸಂಜೆ 6ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಜ್ಯೋತಿಷ್ಯ ಶಾಸ್ತ್ರಜ್ಞ, ಬೇಕಲ್ ಗೋಕುಲಂ ಗೋಶಾಲೆ ಸಂಸ್ಥಾಪಕ ವಿಷ್ಣು ಪ್ರಸಾದ ಹೆಬ್ಬಾರ್ ಮತ್ತು ನಾಗರತ್ನಾ ಹೆಬ್ಬಾರ್, ಬೆಂಗಳೂರಿನ ರಾಮಸೇವಾ ಮಂಡಳಿ ಕಾರ್ಯನಿರ್ವಾಹಕ ಅಭಿಜಿತ್ ವಾದಿರಾಜ್, ಉಡುಪಿಯ ಹಿರಿಯ ಸಂಗೀತ ತಜ್ಞ, ಸಂಯೋಜಕ, ರಂಜನಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಅರವಿಂದ ಹೆಬ್ಬಾರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಟನ ತರಂಗಿಣಿ ಸಂಸ್ಥಾಪಕ ಅಧ್ಯಕ್ಷೆ ಡಾ. ವೈ.ಜಿ. ಪರಿಮಳಾ, ಕಾರ್ಯದರ್ಶಿಗಳಾದ ವಿದ್ವಾನ್ ನಿಕ್ಷಿತ್ ಪುತ್ತೂರು ಮತ್ತು ವಿದುಷಿ ವೈ. ಜಿ. ಶ್ರೀ ಲತಾ ಉಪಸ್ಥಿತರಿರಲಿದ್ದಾರೆ.

ಸುಬ್ರಹ್ಮಣ್ಯ ಶಾಸ್ತ್ರಿಗೆ ಕಲಾಶ್ರಯ ಪ್ರಶಸ್ತಿ

ಶಿವಮೊಗ್ಗದ ಹಿರಿಯ ಸಂಗೀತ ಸಂಘಟಕ, ಕಲಾ ಪ್ರೇಮಿ ಸುಬ್ರಹ್ಮಣ್ಯ ಶಾಸ್ತ್ರಿ ಅವರಿಗೆ ಇದೇ ವೇದಿಕೆಯಲ್ಲಿ ‘ಕಲಾಶ್ರಯʼ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ನಂತರ ನಡೆಯಲಿರುವ ದ್ವಂದ್ವ ಗಾಯನದಲ್ಲಿ ಲತಾಂಗಿ ಸಹೋದರಿಯರು ಎಂದೇ ಖ್ಯಾತರಾದ ಅರ್ಚನಾ ಮತ್ತು ಸಮನ್ವಿ ಕರ್ನಾಟಕ ಶಾಸ್ತ್ರೀಯ ಸಂಗೀತ ಸುಧೆ ಹರಿಸಲಿದ್ದಾರೆ. ಪಕ್ಕವಾದ್ಯದಲ್ಲಿ ವಿದುಷಿ ಸಿ.ವಿ. ಶ್ರುತಿ (ಪಿಟೀಲು), ವಿದ್ವಾನ್ ಆನೂರು ಅನಂತ ಕೃಷ್ಣ ಶರ್ಮ(ಮೃದಂಗ), ವಿದುಷಿ ಸುಕನ್ಯಾ ರಾಮಗೋಪಾಲ್ (ಘಟಂ) ಮತ್ತು ವಿದ್ವಾನ್ ಪಯ್ಯನೂರ್ ಗೋವಿಂದ ಪ್ರಸಾದ್ (ಮೋರ್ಸಿಂಗ್) ಸಾಥ್ ನೀಡಲಿರುವುದು ವಿಶೇಷ. ಕಲಾರಸಿಕರು ಭಾಗವಹಿಸುವಂತೆ ಸಂಗೀತ ಮತ್ತು ನೃತ್ಯ ‘ಉಭಯ ಕಲಾ ವಿದುಷಿʼ ವೈ.ಜಿ. ಶ್ರೀಲತಾ ಕೋರಿದ್ದಾದ್ದಾರೆ.

ಇದನ್ನೂ ಓದಿ: Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

ಸಂಗೀತ ಶಿಕ್ಷಣ ವ್ಯಕ್ತಿತ್ವಕ್ಕೆ ಸಂಸ್ಕಾರ ರೂಢಿಸಿ ಬದುಕನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ. ಮನಸ್ಸಿನ ಕಲಾತ್ಮಕ ಭಾಗವನ್ನು ವ್ಯಕ್ತಪಡಿಸಲು ಅನುವು ಮಾಡಿಕೊಡುತ್ತದೆ. ವ್ಯಕ್ತಿಯ ಭಾವನಾತ್ಮಕ, ಬೌದ್ಧಿಕ ಮತ್ತು ಆಧ್ಯಾತ್ಮಿಕ ಯೋಗಕ್ಷೇಮದ ನಡುವೆ ಸಮತೋಲನವನ್ನು ತರುತ್ತದೆ. ಸಂಗೀತ ಕಲಿಕೆ ಒಂದು ಸೌಹಾರ್ದ ಮತ್ತು ಸುಂದರ ಸಮಾಜದ ಬೆಳವಣಿಗೆಗೆ ಅತ್ಯಗತ್ಯ. ನಾನು ನಟನ ತರಂಗಿಣಿ-ಕಲಾ ಶಾಲೆಯನ್ನು ಪ್ರಾರಂಭಿಸಲು ಇದೇ ಸ್ಫೂರ್ತಿ. 20 ವರ್ಷದಿಂದ ಭಗವಂತನ ಸೇವೆ ಎಂದೇ ಭಾವಿಸಿ ಸಾವಿರಾರು ಮಕ್ಕಳಿಗೆ ಬೋಧನೆ ಮಾಡಿದ್ದೇನೆ. ಈ ಕೈಂಕರ್ಯ ನನಗೆ ಧನ್ಯತೆ ನೀಡಿದೆ.

-ವಿದುಷಿ ವೈ.ಜಿ. ಪರಿಮಳ, ನಟನ ತರಂಗಿಣಿ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆ.

Continue Reading

ಬೆಂಗಳೂರು

HDFC Life: ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್

HDFC Life: ಭಾರತದಲ್ಲಿನ ಪ್ರಮುಖ ಜೀವ ವಿಮಾ ಸಂಸ್ಥೆಯಾಗಿರುವ ಎಚ್‌ಡಿಎಫ್‌ಸಿ ಲೈಫ್, ಗ್ರೇಟ್ ಪ್ಲೇಸ್ ಟು ವರ್ಕ್‌ ಸಂಸ್ಥೆಯಿಂದ 2024ರಲ್ಲಿ ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ ಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟಿದೆ. ಕಂಪನಿಯು ಒಟ್ಟಾರೆಯಾಗಿ 11ನೇ ಸ್ಥಾನವನ್ನು ಪಡೆದಿದೆ ಮತ್ತು ‘ಜೀವ ವಿಮೆಯಲ್ಲಿ ಉದ್ಯಮದಲ್ಲಿಯೇ ಅತ್ಯುತ್ತಮ ಕಂಪನಿ’ ಎಂದು ಗೌರವಿಸಲ್ಪಟ್ಟಿದೆ.

VISTARANEWS.COM


on

HDFC Life certified as one of Indias Best Companies to Work For in 2024
Koo

ಬೆಂಗಳೂರು: ಭಾರತದಲ್ಲಿನ ಪ್ರಮುಖ ಜೀವ ವಿಮಾ ಸಂಸ್ಥೆಯಾಗಿರುವ ಎಚ್‌ಡಿಎಫ್‌ಸಿ ಲೈಫ್ (HDFC Life), ಗ್ರೇಟ್ ಪ್ಲೇಸ್ ಟು ವರ್ಕ್‌ ಸಂಸ್ಥೆಯಿಂದ 2024ರಲ್ಲಿ ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ ಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟಿದೆ. ಕಂಪನಿಯು ಒಟ್ಟಾರೆಯಾಗಿ 11ನೇ ಸ್ಥಾನವನ್ನು ಪಡೆದಿದೆ ಮತ್ತು ‘ಜೀವ ವಿಮೆಯಲ್ಲಿ ಉದ್ಯಮದಲ್ಲಿಯೇ ಅತ್ಯುತ್ತಮ ಕಂಪನಿ’ ಎಂದು ಗೌರವಿಸಲ್ಪಟ್ಟಿದೆ. ಕಂಪನಿಯು ದಶಕದ ಕಾಲ ಮನ್ನಣೆಯನ್ನು ಪಡೆದಿದ್ದು, ಪ್ರತಿಷ್ಠಿತ ಸಂಸ್ಥೆಗಳ ಪಟ್ಟಿಯಲ್ಲಿ ಸೇರಿಕೊಂಡಿದೆ.

ಭಾರತದ ಮೊದಲ ಖಾಸಗಿ ಜೀವ ವಿಮಾದಾರರಲ್ಲಿ ಒಬ್ಬರಾದ ಎಚ್‌ಡಿಎಫ್‌ಸಿ ಲೈಫ್ 32,000 ಉದ್ಯೋಗಿಗಳನ್ನು ಹೊಂದಿದೆ. ಉತ್ಕೃಷ್ಟತೆ, ಜನರ ತೊಡಗಿಸಿಕೊಳ್ಳುವಿಕೆ, ಸಮಗ್ರತೆ, ಗ್ರಾಹಕ ಕೇಂದ್ರಿತತೆ ಮತ್ತು ಸಹಯೋಗದ ಮೌಲ್ಯಗಳ ಮೇಲೆ ಸ್ಥಾಪಿಸಲಾಗಿರುವ ಈ ಸಂಸ್ಥೆಯು ಸಾಂಸ್ಥಿಕ ಸಂಸ್ಕೃತಿಯನ್ನು ಎತ್ತಿಹಿಡಿಯುತ್ತದೆ.

ಇದನ್ನೂ ಓದಿ: Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

ಈ ಪ್ರಮಾಣೀಕರಣವು ಕಂಪನಿಯ ಮೌಲ್ಯಾಧರಿತ ಸಂಸ್ಕೃತಿಯನ್ನು ಮತ್ತು ಎಲ್ಲಾ ಪಾಲುದಾರರಿಗೆ ಮೌಲ್ಯವನ್ನು ತಲುಪಿಸುವ ಕಂಪನಿಯ ಬದ್ಧತೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

ಈ ಕುರಿತು ಎಚ್‌ಡಿಎಫ್‌ಸಿ ಲೈಫ್‌ನ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ವಿಭಾಷ್ ನಾಯಕ್ ಮಾತನಾಡಿ, “2024ರಲ್ಲಿ ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ ಗಳಲ್ಲಿ ಒಂದು ಮತ್ತು ‘ಜೀವ ವಿಮೆಯಲ್ಲಿ ಉದ್ಯಮದಲ್ಲಿಯೇ ಅತ್ಯುತ್ತಮ ಕಂಪನಿ’ ಎಂದು ಗುರುತಿಸಿಕೊಳ್ಳಲು ನಮಗೆ ಹೆಮ್ಮೆ ಇದೆ. ನಮ್ಮ ತಂಡಗಳ ಶ್ರದ್ಧೆ ಮತ್ತು ಬದ್ಧತೆ ನಮ್ಮ ಯಶಸ್ಸಿಗೆ ಕಾರಣವಾಗಿದೆ. ನಾವು ಅವರ ಬೆಳವಣಿಗೆಗೆ ಮತ್ತು ಅವರ ಯೋಗಕ್ಷೇಮ ನೋಡಿಕೊಳ್ಳಲು ಬದ್ಧರಾಗಿದ್ದೇವೆ. ಎಲ್ಲಾ ಭಾರತೀಯರಿಗೆ ಆರ್ಥಿಕ ಭದ್ರತೆ ಒದಗಿಸಲು ನಾವು ಶ್ರಮಿಸುತ್ತಿದ್ದೇವೆ ಮತ್ತು 2047ರ ವೇಳೆಗೆ ‘ಎಲ್ಲರಿಗೂ ವಿಮೆ’ ಎಂಬ ನಮ್ಮ ಗುರಿಯನ್ನು ಸಾಧಿಸುವತ್ತ ಗಮನಹರಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

Continue Reading

ದಾವಣಗೆರೆ

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

Medical negligence: ವೈದ್ಯನೊಬ್ಬನ ನಿರ್ಲಕ್ಷ್ಯಕ್ಕೆ ಶಿಶುವೊಂದು ಕಣ್ಣು ಬಿಡುವ ಮುನ್ನವೇ ಕಣ್ಣು ಮುಚ್ಚಿದೆ. ಸಿಸೇರಿಯನ್ ಮಾಡುವಾಗ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನೇ ವೈದ್ಯ ಕೊಯ್ದಿದ್ದಾನೆ. ಪರಿಣಾಮ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ.

VISTARANEWS.COM


on

By

Medical negligence
ವೈದ್ಯ ನಿಜಾಮುದ್ದೀನ್ ಯಡವಟ್ಟಿಗೆ ಮಗು ಸಾವು
Koo

ದಾವಣಗೆರೆ: ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ (Medical negligence) ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ವೈದ್ಯನ ಭಾರೀ ಯಡವಟ್ಟಿಗೆ ಹುಟ್ಟಿದಾಕ್ಷಣ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ. ವೈದ್ಯನೊಬ್ಬ ಹೆರಿಗೆ ಮಾಡುವಾಗ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನೇ ಕೊಯ್ದಿದ್ದಾನೆ.

ದಾವಣಗೆರೆ ಕೊಂಡಜ್ಜಿ ರಸ್ತೆಯಲ್ಲಿರುವ ಅರ್ಜುನ್ ಎಂಬುವವರ ಪತ್ನಿ ಅಮೃತಾ ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನಾರ್ಮಲ್‌ ಡೆಲಿವರಿ ಆಗದ ಹಿನ್ನೆಲೆಯಲ್ಲಿ ಸಿಸೇರಿಯನ್ ಮಾಡಲು ವೈದ್ಯರು ಮುಂದಾಗಿದ್ದರು. ಅದರಂತೆ ಕಳೆದ ಜೂನ್ 27ರಂದು ಅಮೃತಾಗೆ ಸಿಸೇರಿಯನ್ ಮಾಡಿ ಮಗು ತೆಗೆಯಲಾಗಿತ್ತು.

ಆದರೆ ಸಿಸೇರಿಯನ್‌ ಮಾಡುವಾಗ ವೈದ್ಯ ನಿಜಾಮುದ್ದೀನ್ ಮಗು ತೆಗೆಯುವಾಗ ಮರ್ಮಾಂಗವನ್ನೇ ಕೊಯ್ದಿದ್ದಾರೆ. ನಂತರ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಿಂದ ಬಾಪೂಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶುಕ್ರವಾರ ಮೃತಪಟ್ಟಿದೆ.

ಮಗುವಿನ ಸಾವಿಗೆ ವೈದ್ಯರು ಕಾರಣ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದರು. ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟಿಸಿ, ಮಗುವಿನ ಸಾವಿಗೆ ಕಾರಣನಾದ ವೈದ್ಯನನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.

Medical negligence

ಇದನ್ನೂ ಓದಿ: Medical Ethics : ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ; ಕೇಸ್​ ದಾಖಲಿಸಲು ಕೋರ್ಟ್​ ಸೂಚನೆ

ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

ಮದುವೆಯಾದ ಮೇಲೆ ಗಂಡನ ಮನೆಗೆ ಬರುವ ವಧು ತನ್ನ ಪತಿಯ ಜೊತೆ ಸುಖವಾಗಿ ಸಂಸಾರ ನಡೆಸುವಂತಹ ಹಲವಾರು ಕನಸುಗಳನ್ನು ಹೊತ್ತು ಬರುತ್ತಾಳೆ. ಆದರೆ ಅಂತಹ ವಧುವಿನ ಕನಸು ಕ್ಷಣಮಾತ್ರದಲ್ಲಿ ನುಚ್ಚು ನೂರಾದರೆ ಅವಳಿಗೆ ಆಘಾತವಾಗುವುದು ಖಂಡಿತ. ಅಂತಹದೊಂದು ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಹೊಸದಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು ಮೊದಲ ರಾತ್ರಿಗಾಗಿ ಕೋಣೆಗೆ ಹಾಲು ತೆಗೆದುಕೊಂಡು ಹೋದಾಗ ಅಲ್ಲಿ ವರನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self Harming) ಶರಣಾಗಿದ್ದ.

ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ರತನ್ಪುರ ಗ್ರಾಮದಲ್ಲಿ ಸಂಭ್ರಮದ ಮದುವೆ ಆಚರಣೆಗಳು ಮುಗಿದು ವಧು ಮೊದಲ ರಾತ್ರಿಗೆಂದು ವರನಿಗೆ ಹಾಲು ತೆಗೆದುಕೊಂಡು ಕೋಣೆಗೆ ಹೋದಾಗ ವರನು ಆತ್ಮಹತ್ಯೆ ಮಾಡಿಕೊಂಡಿದ್ದನು. ಇದರಿಂದ ಆ ಕುಟುಂಬದಲ್ಲಿ ಗೋಳಾಟ ಮುಗಿಲುಮುಟ್ಟಿದೆ.

Self Harming

24 ವರ್ಷದ ಸತ್ಯೇಂದ್ರ ಆತ್ಮಹತ್ಯೆ ಮಾಡಿಕೊಂಡ ವರ. ಈತ ಆತನ ವಧು ವಿನಿತಾ ಕುಮಾರಿ ಅವರೊಂದಿಗೆ ಅದ್ಧೂರಿಯಾಗಿ ಮದುವೆಯಾಗಿದ್ದು, ನಂತರ ದಿಬ್ಬಣ ಭರ್ಜರಿ ಮೆರವಣಿಗೆಯೊಂದಿಗೆ ಆತನ ಗ್ರಾಮಕ್ಕೆ ಮರಳಿದೆ. ನವವಿವಾಹಿತ ವಧುವನ್ನು ಮನೆಗೆ ಸಂಭ್ರಮದಿಂದ ಸ್ವಾಗತಿಸಲಾಗಿತ್ತು. ಹಾಗೇ ವಧುವರರ ಮೊದಲ ರಾತ್ರಿಗೆಂದು ಸಿದ್ಧತೆ ನಡೆಯುತ್ತಿದ್ದು, ವಧು ಹಾಲು ಹಿಡಿದುಕೊಂಡು ಪತಿಯ ಕೋಣೆಗೆ ಹೋದಾಗ ಆತ ಮದುವೆಯ ಉಡುಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಇದನ್ನು ಕಂಡು ವಧು ಆಘಾತಕ್ಕೊಳಗಾಗಿದ್ದಾಳೆ. ಈ ಸುದ್ದಿ ಕುಟುಂಬಸ್ಥರು ಮತ್ತು ಅತಿಥಿಗಳಿಗೆ ನಂಬಲು ಅಸಾಧ್ಯವಾಗಿದೆ.

ಈ ಬಗ್ಗೆ ಉಸ್ರಾಹರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಸತೇಂದ್ರ ಅವರ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದರೆ ಸತ್ಯೇಂದ್ರ ಅವರ ಆತ್ಮಹತ್ಯೆಯ ಹಿಂದಿನ ಉದ್ದೇಶ ತಿಳಿದುಬಂದಿಲ್ಲ. ಮೊದಲ ರಾತ್ರಿಯ ಟೆನ್ಶನ್‌ಗೆ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸತ್ಯೇಂದ್ರ ಅವರ ಅಕಾಲಿಕ ಸಾವಿನ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಸಂಭ್ರಮಾಚರಣೆಯಲ್ಲಿ ತೇಲಾಡುತ್ತಿದ್ದ ಕುಟುಂಬವನ್ನು ಈ ಘಟನೆ ಶೋಕಾಚರಣೆಯಲ್ಲಿ ಮುಳುಗುವಂತೆ ಮಾಡಿದೆ. ಇನ್ನೂ ಮದುವೆಯಾಗಿ ಕ್ಷಣಗಳೇ ಕಳೆದಿದ್ದು, ಜೀವನಪರ್ಯಂತ ಒಟ್ಟಿಗೆ ಇರುತ್ತಾನೆ ಎಂದು ಭಾವಿಸಿದ ಪತಿ ಸಾವಿಗೆ ಶರಣಾಗಿದ್ದನ್ನು ಕಂಡು ವಧು ಆಘಾತಕ್ಕೊಳಗಾಗಿದ್ದಾಳೆ. ಅಲ್ಲದೇ ಸಾಲಸೂಲ ಮಾಡಿ ಮಗಳು ಗಂಡನ ಮನೆಯಲ್ಲಿ ಸುಖವಾಗಿರಲಿ ಎಂದು ಬಯಸಿದ ಆಕೆಯ ಪೋಷಕರಿಗೆ ಈ ಘಟನೆ ಆಕಾಶವೇ ಕಳಚಿ ತಲೆಯ ಮೇಲೆ ಬಿದ್ದಂತೆ ಭಾಸವಾಗಿದೆ. ಒಟ್ಟಾರೆ ಈ ಮದುವೆ ಸಂಭ್ರಮ ದುರಂತದ ತಿರುವು ತೆಗೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿಕೆ

Prajwal Revanna Case: ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ನೋಟೀಸ್ ನೀಡಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ನೋಟೀಸ್ ನೀಡಿ, 2 ವಾರಗಳ ಕಾಲ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.

ಸರ್ಕಾರದ ಪರ ಎಸ್‌ಪಿಸಿ ಜಗದೀಶ್ ಹಾಜರಾಗಿದ್ದರು. ಪ್ರಜ್ವಲ್ ರೇವಣ್ಣ ಪರ ವಕೀಲರು, ವಿಚಾರಣೆ ತ್ವರಿತವಾಗಿ ನಡೆಸುವಂತೆ ಜಡ್ಜ್‌ಗೆ ಮನವಿ ಮಾಡಿದರು. ಇದಕ್ಕೆ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ ಎಂದು ಉತ್ತರಿಸಿ, 2 ವಾರಗಳ ಕಾಲ ವಿಚಾರಣೆ ಮುಂದೂಡಿದರು.

ಇದನ್ನೂ ಓದಿ | Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌

Prajwal Revanna Case: ಪ್ರಜ್ವಲ್‌ಗೆ ʼಆʼ ಸಾಮರ್ಥ್ಯ ಇದೆ: ವೈದ್ಯಕೀಯ ವರದಿ ರಿವೀಲ್

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಪುರುಷತ್ವ ಪರೀಕ್ಷೆಯ (virilism test) ವರದಿಯು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಕೈ ಸೇರಿದ್ದು, ಮಹಿಳೆಯರೊಂದಿಗೆ ಲೈಂಗಿಕ ಸಂಪರ್ಕ ಸಾಧಿಸಲು ಅವರು ಸಮರ್ಥರಿದ್ದಾರೆ ಎಂಬ ಅಂಶ ದೃಢಪಟ್ಟಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್‌ ಅವರ ಪುರುಷತ್ವ ಪರೀಕ್ಷಾ ವರದಿ ಎಸ್‌ಐಟಿ ಅಧಿಕಾರಿಗಳಿಗೆ ಲಭಿಸಿದ್ದು, ಅದು ಸಹ ಪ್ರಜ್ವಲ್‌ ವಿರುದ್ಧದ ಸಾಕ್ಷ್ಯವಾಗಲಿದೆ. ಕೆಲವು ದಿನಗಳ ಹಿಂದೆ ಬೌರಿಂಗ್‌ ಆಸ್ಪತ್ರೆಯಲ್ಲಿ ಅವರನ್ನು ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ಪದೇ ಪದೆ ಪುರುಷತ್ವ ಪರೀಕ್ಷೆಗೆ ಒಳಪಡಿಸುತ್ತಿರುವುದರಿಂದ ಮುಜುಗರವಾಗುತ್ತಿದೆ ಎಂದು ಈ ಹಿಂದೆ ನ್ಯಾಯಾಲಯದ ಮುಂದೆ ಪ್ರಜ್ವಲ್‌ ಅಳಲು ತೋಡಿಕೊಂಡಿದ್ದರು. ಧ್ವನಿ ಪರೀಕ್ಷೆ ಹಾಗೂ ಇನ್ನಿತರ ಪರೀಕ್ಷೆಗಳ ವರದಿ ಎಫ್‌ಎಸ್‌ಎಲ್‌ನಿಂದ ಬರಬೇಕಿದೆ. ಈ ವರದಿಗಳು ಪೂರಕವಾಗಿದ್ದರೆ ಅವುಗಳು ಕೂಡ ಪ್ರಜ್ವಲ್‌ ವಿರುದ್ಧದ ಪ್ರಬಲ ಸಾಕ್ಷ್ಯಗಳಾಗಲಿವೆ.

ಪ್ರಜ್ವಲ್‌ ವಿರುದ್ಧ ದಾಖಲಾಗಿರುವ 5 ಪ್ರಕರಣಗಳಲ್ಲಿ ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ದೂರುದಾರ ಮಹಿಳೆಯರ ಕುರಿತು ತನಿಖಾಧಿಕಾರಿಗಳು ಪ್ರಶ್ನಿಸಿದಾಗ ʼನನಗೇನೂ ಗೊತ್ತಿಲ್ಲ’ ಎಂದು ತಿಳಿಸಿದ್ದರು. ಇತ್ತೀಚೆಗೆ ಪ್ರಜ್ವಲ್‌ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆಯ ಬಗ್ಗೆ ವಿಚಾರಿಸಿದಾಗ, ʼನನಗೆ ಅವರು ಯಾರೆಂಬುದೇ ಗೊತ್ತಿಲ್ಲ’ ಎಂದು ಪ್ರಜ್ವಲ್‌ ಹೇಳಿದ್ದಾರೆನ್ನಲಾಗಿದೆ.

ಈ ನಡುವೆ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಪ್ರಜ್ವಲ್‌ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಈ ಸಂಬಂಧ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಹಾಗಾಗಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ದಾಖಲಿಸಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಲಾಗಿದೆ. ಈ ಅರ್ಜಿಗಳ ವಿಚಾರಣೆ ಶುಕ್ರವಾರ ಮಧ್ಯಾಹ್ನ 2.30ಕ್ಕೆ ನಿಗದಿಯಾಗಿದೆ.

ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌

ಪ್ರಜ್ವಲ್ ರೇವಣ್ಣ , (Prajwal Revanna case) ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ (HIV Test) ಮಾಡಿಸಿಕೊಳ್ಳುತ್ತಿದ್ದರು ಎಂಬ ಸಂಗತಿ ಇದೀಗ ಬಯಲಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಸದ್ಯಕ್ಕೆ ಪ್ರಜ್ವಲ್ ಮೇಲೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಅದರಲ್ಲಿ ಈ ಎಚ್‌ಐವಿ ಟೆಸ್ಟ್ ವಿಚಾರವೂ ಒಂದು. ಸಾಕಷ್ಟು ಮಹಿಳೆಯರಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ದೂರು ಪ್ರಜ್ವಲ್ ಮೇಲಿದೆ. ಇದರಿಂದ ಎಚ್‌ಐವಿ ಬರಬಹುದು ಎಂಬ ಆತಂಕದಿಂದಲೇ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

ಹಲವು ಮಹಿಳೆಯರ ಜೊತೆ ಪ್ರಜ್ವಲ್ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಎಂಬ ಆರೋಪಕ್ಕೆ ಈ ಸಂಗತಿ ಪುಷ್ಟಿ ನೀಡಿದ್ದು, ಇದನ್ನು ಪ್ರಜ್ವಲ್‌ಗೆ ವಿರೋಧ ಸಾಕ್ಷ್ಯವಾಗಿ ಬಳಸಿಕೊಳ್ಳಲು ಎಸ್‌ಐಟಿ ಮುಂದಾಗಿದೆ. ಇದು ಪ್ರಜ್ವಲ್ ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿದ್ದಕ್ಕೆ ದಾಖಲೆಗಳಲ್ಲಿ ಒಂದಾಗಲಿದೆ.

Continue Reading
Advertisement
natana Tarangini 20th anniversary celebration on July 6 and 7 in Bengaluru
ಕರ್ನಾಟಕ4 mins ago

Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

HDFC Life certified as one of Indias Best Companies to Work For in 2024
ಬೆಂಗಳೂರು6 mins ago

HDFC Life: ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್

Baby Death
Latest10 mins ago

Baby Death: ಹೋಮ್‌ ವರ್ಕ್‌ ಮಾಡುತ್ತಿದ್ದ ಬಾಲಕಿಗೆ ಸಾವಾಗಿ ಕಾಡಿದ ಪೆನ್‌!

Medical negligence
ದಾವಣಗೆರೆ12 mins ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

Prajwal Revanna Case
ಕರ್ನಾಟಕ18 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿಕೆ

kumble sridhara rao
ಶ್ರದ್ಧಾಂಜಲಿ21 mins ago

Kumble Sridhara Rao: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

Kung Fu Panda 4 OTT Jio cinema july 15th onwards
ಒಟಿಟಿ22 mins ago

Kung Fu Panda 4 OTT: ಪುಟಾಣಿಗಳ ಫೇವರಿಟ್‌ ʻಕುಂಗ್ ಫು ಪಾಂಡಾ 4 ಸಿನಿಮಾʼ ಒಟಿಟಿಗೆ; ಕನ್ನಡ ಭಾಷೆಯಲ್ಲೂ ಲಭ್ಯ!

CM Siddaramaiah
ಕರ್ನಾಟಕ26 mins ago

CM Siddaramaiah: ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು; ಶಾಲೆಗೆ ಭೇಟಿ ನೀಡಿ ವ್ಯಾಕರಣ ಪಾಠ ಮಾಡಿದ ಸಿಎಂ!

Rohit Sharma
ಕ್ರೀಡೆ52 mins ago

Rohit Sharma: ವಿಶ್ವಕಪ್​ ಗೆದ್ದು ಬಂದ ರೋಹಿತ್​ಗೆ ಸರ್​ಪ್ರೈಸ್​ ಕೊಟ್ಟ ಬಾಲ್ಯದ ಗೆಳೆಯರು; ವಿಡಿಯೊ ವೈರಲ್​

Raj Tarun Police complaint filed by live-in partner
ಟಾಲಿವುಡ್52 mins ago

Raj Tarun: ಟಾಲಿವುಡ್‌ ಯುವ ನಟ ʻರಾಜ್ ತರುಣ್ʼ ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ: ದೂರು ದಾಖಲಿಸಿದ ಪ್ರೇಯಸಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ2 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ3 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು5 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು5 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ9 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ23 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ1 day ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌