Site icon Vistara News

ಮೈಸೂರಿನ ರಾಜೇಂದ್ರ ವಿಲಾಸ ಅರಮನೆಯ ನವೀಕರಣ: ರಾಜಮಾತೆ ಪ್ರಮೋದಾದೇವಿ ಹೇಳಿದ್ದೇನು..?

Dasara 2022

ಮೈಸೂರು: ಚಾಮುಂಡಿ ಬೆಟ್ಟದ ಮೇಲೆ 120 ಅಡಿ ಎತ್ತರದಲ್ಲಿರುವ ರಾಜೇಂದ್ರ ವಿಲಾಸ ಅರಮಯನೆ ನವೀಕರಣ ಕಾರ್ಯ ನಡೆಯುತ್ತಿದೆ. ಬೆಟ್ಟದ ಮೇಲಿರುವ ಅರಮನೆಯನ್ನು ನೋಡಲು ಬಹಳ ದಿನಗಳಿಂದ ಪ್ರವಾಸಿಗರಿಗೆ ಅವಕಾಶ ಸಿಕ್ಕಿರಲಿಲ್ಲ. ತಜ್ಞರ ಅಭಿಪ್ರಾಯ ಪಡೆದು ರಾಜೇಂದ್ರ ವಿಲಾಸ ಅರಮನೆಯ ನವೀಕರಣ ಕಾಮಗಾರಿ ನಡೆಯುತ್ತಿದೆ.

ರಾಜೇಂದ್ರ ವಿಲಾಸ ಅರಮನೆ ನವೀಕರಣ ಕಾಮಗಾರಿಯ ಚಿತ್ರಗಳನ್ನು ಪ್ರದರ್ಶಿಸಿದ ಬಳಿ ಮೈಸೂರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪುರಾತನ ಪಾರಂಪರಿಕ ಶೈಲಿಯಲ್ಲೇ ಅರಮನೆಯ ನವೀಕರಣ ಮಾಡಲಾಗುತ್ತಿದೆ. ಅದರಲ್ಲೂ ಅರಮನೆಯ ಗೋಪುರದ ನವೀಕರಣ ಮಾಡುವುದು ಬಹಳ ಸವಾಲಿನ ಕೆಲಸವಾಗಿತ್ತು. ಇದೀಗ ಎಲ್ಲವೂ ಒಂದು ಹಂತಕ್ಕೆ ಬಂದು ನಿಂತಿದೆ ಎಂದು ತಿಳಿಸಿದರು.

1975ರಿಂದ ರಾಜೇಂದ್ರ ವಿಲಾಸ ಅರಮನೆ ಹೋಟೆಲ್ ಆಗಿ ನಡೆಯುತ್ತಿತ್ತು. 1995ರಿಂದ ರಾಜೇಂದ್ರ ವಿಲಾಸ ಅರಮನೆ ಮುಚ್ಚಲ್ಪಟ್ಟಿತ್ತು. ಇದಿಗ ಮತ್ತೆ ರಾಜೇಂದ್ರ ವಿಲಾಸ ಅರಮನೆಯನ್ನು ಹೋಟೆಲ್ ಆಗಿ ಮುಂದುವರಿಸುವ ಉದ್ದೇಶವಿದೆ ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮಾಹಿತಿ ನೀಡಿದರು.

Exit mobile version