ಕುಂದಾಪುರ: ಮಧ್ಯ ವಯಸ್ಸು ದಾಟಿದ ಬಳಿಕವಷ್ಟೇ ಕಾಡುತ್ತಿದ್ದ ಹೃದಯಾಘಾತದ ಸಮಸ್ಯೆ ಕಳೆದ ಕೆಲವು ವರ್ಷಗಳಿಂದ ಯುವಜನರನ್ನೂ ಬಲಿ ಪಡೆಯುತ್ತಿದೆ. ಕುಂದಾಪುರ ತಾಲೂಕಿನ ತಲ್ಲೂರಿನಲ್ಲಿ ಕೇವಲ ೧೩ ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಮೂಲಕ ಇದು ಮಕ್ಕಳನ್ನೂ ಬಿಡುತ್ತಿಲ್ಲ ಎಂಬಂತಾಗಿದೆ.
ಹಟ್ಟಿಯಂಗಡಿಯ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯಾಗಿರುವ ಅನುಶ್ರೀ ಹೃದಯಾಘಾತಕ್ಕೆ ಒಳಗಾದವಳು. ಮನೆಯಲ್ಲಿ ಓದುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡ ಅನುಶ್ರೀ ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಕೊನೆಯುಸಿರೆಳೆದಿದ್ದಳು.
ಅನುಶ್ರೀಯ ಕುಂದಾಪುರದ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮತ್ತು ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿಯಾಗಿದ್ದಾಳೆ.
ಅನುಶ್ರೀಯ ಮೃತದೇಹದ ಮರಣೋತ್ತರ ಪರೀಕ್ಷೆ ಮಣಿಪಾಲ ಆಸ್ಪತ್ರೆಯಲ್ಲಿ ನಡೆದಿದೆ. ಅನುಶ್ರೀಯ ಕಣ್ಣುಗಳನ್ನು ದಾನ ಮಾಡಲಾಗಿದೆ.
ಇದನ್ನೂ ಓದಿ | World Heart day | ವಾಲ್ನಟ್ ತಿನ್ನಿ, ಹೃದಯದ ಆರೋಗ್ಯ ಕಾಪಾಡಿಕೊಳ್ಳಿ!