ಬೆಂಗಳೂರು: ರಾಜ್ಯದ 15 ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಯುನೈಟೆಡ್ ಕಿಂಗ್‌ಡಮ್‌ನ ಸ್ಕಾಟ್ಲೆಂಡ್ ಪ್ರವಾಸ (Scotland Tour) ಭಾಗ್ಯ ಒದಗಿಬಂದಿದೆ. ಉನ್ನತ ಶಿಕ್ಷಣ ಇಲಾಖೆಯಿಂದ ಆಯೋಜಿಸಿರುವ ಒಂದು ವಾರದ ಪ್ರವಾಸದಲ್ಲಿ ಸ್ಕಾಟ್ಲೆಂಡ್‌ನ ಡುಂಡಿ ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳು ತೆರಳಿ, ಅಲ್ಲಿನ ಶಿಕ್ಷಣ, ತಂತ್ರಜ್ಞಾನದ ಬಗ್ಗೆ ಮಾಹಿತಿ ಪಡೆಯಲು ಅನುಕೂಲವಾಗಲಿದೆ.
ನಗರದಲ್ಲಿ ವಿದೇಶ ಪ್ರವಾಸಕ್ಕೆ ತೆರಳಿದ ವಿದ್ಯಾರ್ಥಿಗಳನ್ನು ಬೀಳ್ಕೊಟ್ಟು ಮಾತನಾಡಿದ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು, ಈ ಬಾರಿ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ವಿದೇಶಿ ಪ್ರವಾಸ ಭಾಗ್ಯ ಕೂಡಿ ಬಂದಿದೆ. ಮೊದಲ ಬಾರಿಗೆ ರಾಜ್ಯದ ವಿದ್ಯಾರ್ಥಿಗಳು, ಯುನೈಟೆಡ್ ಕಿಂಗ್‌ಡಮ್‌ನಲ್ಲಿನ ಸ್ಕಾಟ್ಲೆಂಡ್‌ನ ಡುಂಡಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ಪ್ರಧಾನಕಾರ್ಯದರ್ಶಿ ಉಮಾಶಂಕರ್ ವಿದ್ಯಾರ್ಥಿಗಳ ಜತೆ ಇರಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ | Health News: ನಗರದಲ್ಲೂ ಗ್ರಾಮೀಣ ವೈದ್ಯರ ಸೇವೆ ಬಳಸಿಕೊಳ್ಳಲು ಕಾಯ್ದೆಗೆ ತಿದ್ದುಪಡಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಕರ್ನಾಟಕದ ಸರ್ಕಾರಿ ವಿಶ್ವವಿದ್ಯಾಲಯಗಳ 15 ಮಂದಿ ವಿದ್ಯಾರ್ಥಿಗಳು, ಇದೇ ಮೊದಲ ಬಾರಿಗೆ ಯುಕೆ (United Kingdom Tour)ಗೆ ಪ್ರಯಾಣ ಬೆಳೆಸಿದ್ದಾರೆ. ಈ ವಿದ್ಯಾರ್ಥಿಗಳು ಗುಲ್ಬರ್ಗಾ, ಯುವಿಸಿಇ ಹಾಗೂ ಕೃಷಿ ವಿವಿಗೆ ಸೇರಿದವರಾಗಿದ್ದು, ಬ್ರಿಟಿಷ್ ಕೌನ್ಸಿಲ್ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದಾರೆ. ವಿದ್ಯಾರ್ಥಿಗಳು ಒಂದು ವಿಷಯದ ಬಗ್ಗೆ ಅಧ್ಯಯನ ಮಾಡಿ ಡುಂಡಿ ವಿಶ್ವವಿದ್ಯಾಲಯದಲ್ಲಿ ಮಾತನಾಡಲಿದ್ದಾರೆ ಎಂದು ಹೇಳಿದರು.