ತುಮಕೂರು: ಬೆಂಕಿಯ ಕೆನ್ನಾಲಿಗೆಗೆ 150 ಕುರಿಗಳು, 200 ಕೋಳಿ ಹಾಗೂ 6 ಹಸುಗಳು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಬಳಿಯ ರಾಮಘಟ್ಟ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ ನಡೆದಿದೆ ಎನ್ನಲಾಗಿದೆ.
ರೈತ ಚೇತನ್ ಕುಮಾರ್ ಎಂಬುವರ ಕುರಿ, ಹಸು, ಕೋಳಿಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಹಂದನಕೆರೆ ಪೊಲೀಸರು ಧಾವಿಸಿ ಪರಿಶೀಲಿಸುತ್ತಿದ್ದು, ಗ್ರಾಮಸ್ಥರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ | Assault Case: ಮಹಿಳೆಯನ್ನು ಬೆತ್ತಲೆಗೊಳಿಸಿದ ಕಿರಾತಕರು ಅರೆಸ್ಟ್; ಓಡಿಹೋದ ಪ್ರೇಮಿಗಳಿಗೆ ಸರ್ಚ್!
ಮಾನ್ವಿ ಹಾಸ್ಟೆಲ್‌ನಲ್ಲಿ ಮತ್ತೆ 10 ವಿದ್ಯಾರ್ಥಿನಿಯರು ಅಸ್ವಸ್ಥ
ರಾಯಚೂರು: ಮಾನ್ವಿ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ವಿದ್ಯಾರ್ಥಿಯರ ಸಂಖ್ಯೆ ಹೆಚ್ಚುತ್ತಿದೆ. ಸೋಮವಾರ ಮತ್ತೆ 10 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವುದು ಕಂಡುಬಂದಿದೆ. ಆರೋಗ್ಯದಲ್ಲಿ ಏರುಪೇರು ಆಗಿದ್ದರಿMದ ವಿದ್ಯಾರ್ಥಿನಿಯರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಲೆನೋವು, ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮೆಟ್ರಿಕ್ ಪೂರ್ವ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ವೈದ್ಯರು ಭಾನುವಾರ ಚಿಕಿತ್ಸೆ ನೀಡಿದ್ದರು. ಆದರೆ, ಸೋಮವಾರ ಕೂಡ ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅಂಬಿಕಾ ಎಂಬ ವಿದ್ಯಾರ್ಥಿನಿಯನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಭಾನುವಾರ ಮಧ್ಯಾಹ್ನ ಪಲಾವ್ ಸೇವಿಸಿ 14ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರು. ಇದೀಗ ಮತ್ತೆ 10 ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ