ಕೋಲಾರ: ಶ್ರೀನಿವಾಸಪುರದ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಹತ್ಯೆ ಪ್ರಕರಣದ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ನಗರದ ಪೇಟೆಚಾಮನಹಳ್ಳಿ ಬಡಾವಣೆಯ ಸರ್ಕಾರಿ ಶಾಲೆಯ ಆವರಣದಲ್ಲೇ 17 ವರ್ಷದ ಬಾಲಕನ ಬರ್ಬರ ಹತ್ಯೆ (Murder Case) ಮಾಡಿರುವುದು ಕಂಡುಬಂದಿದೆ.
ಕಾರ್ತಿಕ್ ಸಿಂಗ್ (17) ಕೊಲೆಯಾದ ಬಾಲಕ. ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕನನ್ನು ಯುವಕರ ಗುಂಪು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಬಾಲಕನ ಮೈಮೇಲೆ ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿರುವುದು ಕಂಡುಬಂದಿದೆ. ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ | Uttara Kannada News: ಯಲ್ಲಾಪುರ; ಐವರು ಅಂತಾರಾಜ್ಯ ಅರಣ್ಯಗಳ್ಳರ ಬಂಧನ
ಟ್ಯಾಂಕರ್ ಹರಿದು ಯುವಕ ದಾರುಣ ಸಾವು
ಉಡುಪಿ: ಟ್ಯಾಂಕರ್ ಹರಿದು ಯುವಕ ದಾರುಣವಾಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66ರ ಕಂಚಿನಡ್ಕ ಗ್ರಾಮದ ಬಳಿ ನಡೆದಿದೆ. ಬಸ್‌ಗೆ ಡಿಕ್ಕಿ ಹೊಡೆದು ಬೈಕ್‌ನಿಂದ ಯುವಕ ಕೆಳಗೆ ಬಿದ್ದಾಗ ಟ್ಯಾಂಕರ್ ಹರಿದು ದುರ್ಘಟನೆ (Road Accident) ನಡೆದಿದೆ.
ಕಂಚಿನಡ್ಕ ನಿವಾಸಿ ಪ್ರಜ್ವಲ್ ಮೃತ ದುರ್ದೈವಿ. ಮಂಗಳೂರು ಕಡೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ನಿಂತಿದ್ದ ಬಸ್‌ಗೆ ಹಿಂಬದಿಯಿಂದ ಪ್ರಜ್ವಲ್ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ರಸ್ತೆಗೆ ಬಿದ್ದಾಗ, ತಲೆಯ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಮ್ಮೆ ಪುನೀತ್ ಕೆರೆಹಳ್ಳಿ ಬಂಧನ
ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ಹಿಂದು ಕಾರ್ಯಕರ್ತ, ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿಯನ್ನು (Puneet Kerehalli) ಪೊಲೀಸರು ಬಂಧಿಸಿದ್ದಾರೆ. ಗೂಂಡಾ ಕಾಯ್ದೆಯಡಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಇದೀಗ ಮತ್ತೊಂದು ಪ್ರಕರಣದಲ್ಲಿ ಜೈಲು ಸೇರಿದ್ದಾರೆ.
ಜಾತಿ ನಿಂದನೆ ಮಾಡಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಭೈರಪ್ಪ ಹರೀಶ್ ಎಂಬುವರು ನೀಡಿದ ದೂರಿನ ಮೇರೆಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ, ಅವಾಚ್ಯ ಶಬ್ದಗಳ ಬಳಕೆ ಮಾಡಿದ ಆರೋಪದಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಹೀಗಾಗಿ ನ್ಯಾಯಾಲಯದ ಮುಂದೆ ಶನಿವಾರ ಪುನೀತ್ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಪೊಲೀಸರು ಹಾಜರುಪಡಿಸಲಿದ್ದಾರೆ.
ಇದನ್ನೂ ಓದಿ | Cyber Crime : ಸೈಬರ್ ಕ್ರೈಂನಡಿ ಬಂಧನದಿಂದ ಮಾಳವಿಕಾ ಅವಿನಾಶ್ ಪಾರು; ಕೆಜಿಎಫ್‌ನಲ್ಲಿ ನಟಿಸಿದ್ದೇ ವರವಾಯ್ತು!
ಗೂಂಡಾ ಕಾಯ್ದೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಹಳ್ಳಿ ಪರಪ್ಪನ ಅಗ್ರಹಾರ ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾಗಿದ್ದರು. ಮೊಹಮ್ಮದ್ ಇದ್ರೀಸ್ ಪಾಷಾ ಕೊಲೆ ಪ್ರಕರಣ ಸೇರಿ ವಿವಿಧ ಠಾಣೆಗಳಲ್ಲಿ 11 ಪ್ರಕರಣಗಳಿದ್ದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಪೊಲೀಸರು ಬಂಧಿಸಿದ್ದರು. ಆದರೆ, ತನ್ನ ಬಂಧನ ಪ್ರಶ್ನಿಸಿ ಪುನೀತ್ ಕೆರೆಹಳ್ಳಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಇದರ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ಆರೋಪಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಹೀಗಾಗಿ ಅವರನ್ನು ಬಿಡುಗಡೆ ಮಾಡಲಾಗಿತ್ತು.