Site icon Vistara News

ಹಿಜಾಬ್‌ ಬೇಕೆಂದು ಪಟ್ಟು ಹಿಡಿದ 24 ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ನಿರ್ಬಂಧ

uppinangadi college

ಮಂಗಳೂರು: ಹಿಜಾಬ್‌ ಧರಿಸಲು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಕಾಲೇಜಿನಲ್ಲಿ 24 ವಿದ್ಯಾರ್ಥಿನಿಯರಿಗೆ ಒಂದು ವಾರಗಳ ಕಾಲ ತರಗತಿ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.

ದಕ್ಷಿಣ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಕಾಲೇಜಿನಲ್ಲಿ ಅಹಿತಕರ ಘಟನಾವಳಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಜಂಟಿ ನಿರ್ದೇಶಕಿ ಸೋಮವಾರ ಕಾಲೇಜಿಗೆ ಭೇಟಿ ನೀಡಿ ಹಿಜಾಬ್‌ ಧರಿಸಿದ್ದ ವಿದ್ಯಾರ್ಥಿನಿಯರ ಅಹವಾಲು ಆಲಿಸಿದರು. ಆದರೆ ಅವರು ಪಟ್ಟು ಸಡಿಲಿಸಲಿಲ್ಲ.

ಇದನ್ನೂ ಓದಿ | ವರದಿ ಮಾಡಲು ಹೋದ ಪತ್ರಕರ್ತರ ಮೇಲೆಯೇ ಕೇಸು ದಾಖಲಿಸಿದ ಹಿಜಾಬ್‌ ಹುಡುಗಿಯರು

ಉಪನ್ಯಾಸಕರ ಸಭೆ ಕರೆದ ಪ್ರಾಂಶುಪಾಲರು 24 ವಿದ್ಯಾರ್ಥಿನಿಯರಿಗೆ ಒಂದು ವಾರ ತರಗತಿಗೆ ನಿರ್ಬಂಧ ಹೇರಿ ನಿರ್ಣಯ ಕೈಗೊಂಡಿದ್ದಾರೆ. ಹಿಜಾಬ್‌ ವಿವಾದದ ಬಗ್ಗೆ ವರದಿ ಮಾಡಲು ತೆರಳಿದ್ದ ಪತ್ರಕರ್ತರನ್ನು ವಿದ್ಯಾರ್ಥನಿಯರ ಗುಂಪು ದಿಗ್ಬಂಧನ ವಿಧಿಸಿದ್ದಲ್ಲದೆ ಅವರ ಬಳಿ ಇದ್ದ ವಿಡಿಯೋಗಳನ್ನು ಬಲವಂತವಾಗಿ ಅಳಿಸಿ ಹಾಕಿದ್ದರು. ತಮ್ಮ ಮೇಲೆ ದೌರ್ಜನ್ಯ ಮಾಡಿದ್ದಾರೆ ಎಂದು ಟವಿ ವರದಿಗಾರ ಸೇರಿ ಮೂವರು ಪತ್ರಕರ್ತರ ವಿರುದ್ಧ ವಿದ್ಯಾರ್ಥಿನಿಯರೇ ದೂರು ನೀಡಿದ್ದರು. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ದಕ್ಷಿಣ ಕನ್ನಡದಲ್ಲಿ ಉಪ್ಪಿನಂಗಡಿ ಜತೆಗೆ ಮಂಗಳೂರು ವಿವಿ ಕಾಲೇಜಿನಲ್ಲೂ ಹಿಜಾಬ್‌ ವಿವಾದ ಪ್ರಚಲಿತದಲ್ಲಿದೆ. ಮಂಗಳೂರು ವಿವಿ ಕಾಲೇಜಿನಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ಮಾಡಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾಲೇಜಿನ ಶಿಸ್ತು ಉಲ್ಲಂಘಿಸಿದ್ದಕ್ಕಾಗಿ ಪ್ರಾಂಶುಪಾಲೆ ಡಾ. ಅನಸೂಯ ರೈ ನೋಟಿಸ್‌ ನೀಡಿದ್ದಾರೆ.

ಇದನ್ನೂ ಓದಿ | HIJAB | ಹಿಜಾಬ್‌ ಧರಿಸಲು ಅವಕಾಶ ನೀಡದಿದ್ದರೆ ಪ್ರತಿಭಟನೆ ಎಂದ ವಿದ್ಯಾರ್ಥಿನಿಯರು

Exit mobile version