ಹಾಸನ: ಜಿಲ್ಲೆಯ ಆಲೂರಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕಲುಷಿತ ಅಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ಭಾನುವಾರ (ಜು.24) ರಾತ್ರಿ ಊಟ ಮಾಡಿದ ಬಳಿಕ ವಿದ್ಯಾರ್ಥಿಗಳು ವಾಂತಿ, ಸುಸ್ತು, ತಲೆ ಸುತ್ತಿನಿಂದ ಬಳಲಿದ್ದರು. ನಂತರ ಮಕ್ಕಳನ್ನು ವಸತಿ ನಿಲಯದ ಸಿಬ್ಬಂದಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದರು.
ಇದನ್ನೂ ಓದಿ | ರಾಯಚೂರು ಜಿಲ್ಲೆಯಲ್ಲಿ ಮುಂದುವರಿದ ಕಲುಷಿತ ನೀರಿನ ಸಮಸ್ಯೆ: ಅಲರ್ಜಿಗೆ ಗ್ರಾಮಸ್ಥರು ಹೈರಾಣ
ಅಸ್ವಸ್ಥಗೊಂಡ ವಿದ್ಯಾರ್ಥಿನಿಯರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಇದೀಗ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಅರೋಗ್ಯ ವಿಚಾರಿಸಿದ್ದಾರೆ.