Girls Hostel : ರಾತ್ರಿ ಹೊತ್ತು ಬಾಲಕಿಯರ ಹಾಸ್ಟೆಲ್‌ಗೆ ನುಗ್ಗಿದ ಅನಾಮಿಕ ಯುವಕ; ಪಕ್ಕದ ಮನೆಗಳಿಗೆ ಓಡಿಹೋದ ಮಕ್ಕಳು - Vistara News

ಕರ್ನಾಟಕ

Girls Hostel : ರಾತ್ರಿ ಹೊತ್ತು ಬಾಲಕಿಯರ ಹಾಸ್ಟೆಲ್‌ಗೆ ನುಗ್ಗಿದ ಅನಾಮಿಕ ಯುವಕ; ಪಕ್ಕದ ಮನೆಗಳಿಗೆ ಓಡಿಹೋದ ಮಕ್ಕಳು

Girls Hostel : ಬೇತಮಂಗಲದ ಹೆಣ್ಮಕ್ಕಳ ಹಾಸ್ಟೆಲ್‌ಗೆ ರಾತ್ರಿ ಯುವಕನೊಬ್ಬ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ಭಯಕ್ಕೆ ಕಾರಣವಾಗಿದೆ. ಅವನನ್ನು ಸೆರೆ ಹಿಡಿಯಲಾಗಿದ್ದು, ಅವನ ಉದ್ದೇಶದ ಬಗ್ಗೆ ತನಿಖೆ ನಡೆಯುತ್ತಿದೆ.

VISTARANEWS.COM


on

Girls hostel issue
ರಾತ್ರಿ ನಡೆದ ಘಟನಾವಳಿಗಳ ಬಗ್ಗೆ ಬಾಲಕಿಯರು ವಿವರಣೆ ನೀಡುತ್ತಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ರಾಜ್ಯದಲ್ಲಿ ಹೆಣ್ಮಕ್ಕಳ ಹಾಸ್ಟೆಲ್‌ಗಳ (Girls Hostel) ಭದ್ರತಾ ವ್ಯವಸ್ಥೆಯ ಮೇಲೆ (Security Lapse) ಪ್ರಶ್ನಾರ್ಥಕ ಚಿಹ್ನೆಯನ್ನು ಮೂಡಿಸುವ ಭಯಾನಕ ವಿದ್ಯಮಾನವೊಂದು ಕೋಲಾರ ಜಿಲ್ಲೆಯ ಹಾಸ್ಟೆಲ್‌ ಒಂದರಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ಕೋಲಾರ ಜಿಲ್ಲೆಯ (Kolara News) ಕೆಜಿಎಫ್ ತಾಲ್ಲೂಕಿನ ಬೇತಮಂಗಲದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್‌ಗೆ (Premetric girls Hostel Bethamangala) ಸುಮಾರು 25 ವರ್ಷ ಪ್ರಾಯದ ಅನಾಮಿಕ ಯುವಕನೊಬ್ಬ (25 year old Man) ಎಂಟ್ರಿ ಕೊಟ್ಟಿದ್ದು, ಬಾಲಕಿಯರು ಭಯದಿಂದ ನಡುಗುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಸಮಾಜ ಕಲ್ಯಾಣ ಇಲಾಖೆ (Social welfare department) ವ್ಯಾಪ್ತಿಗೆ ಬರುವ ಈ ಹಾಸ್ಟೆಲ್‌ನಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಬರುವ ಹೆಣ್ಣು ಮಕ್ಕಳು ದಾಖಲಾಗಿದ್ದಾರೆ. ಇಲ್ಲಿ 6ರಿಂದ 10ನೇ ತರಗತಿಯಲ್ಲಿ ಓದುತ್ತಿರುವ 60ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿದ್ದಾರೆ.

ಬಡಮಕ್ಕಳೇ ಇರುವ ಹಾಸ್ಟೆಲ್‌ನಲ್ಲಿ ವಾರ್ಡನ್‌, ಅಡುಗೆಯವರು ಸೇರಿದಂತೆ ಇತರ ಸಿಬ್ಬಂದಿಗಳು ಇದ್ದಾರೆ. ಇವರೆಲ್ಲರ ಕಣ್ಣುತಪ್ಪಿಸಿ ಒಬ್ಬ ಯುವಕ ಹಾಸ್ಟೆಲ್‌ ಪ್ರವೇಶ ಮಾಡಿದ್ದಾನೆ. ಹಾಸ್ಟೆಲ್‌ಗೆ ಬಂದಿದ್ದು ಮಾತ್ರವಲ್ಲದೆ, ಹೆಣ್ಮಕ್ಕಳು ವಿಶ್ರಾಂತಿ ಪಡೆಯುವ ಕೋಣೆಯೊಳಗೆ ನೇರ ಪ್ರವೇಶ ಮಾಡಿದ್ದಾನೆ.

ಒಂದು ಕೋಣೆಯೊಳಗೆ ಪ್ರವೇಶ ಮಾಡಿದ ಆತ ಅಲ್ಲಿ ಏನನ್ನೋ ಹುಡುಕುವಂತೆ ನಟಿಸಿದ್ದಾನೆ. ಯಾರು ನೀನು ಎಂದು ಕೇಳಿದ್ದಕ್ಕೆ ಏನನ್ನೂ ಹೇಳದೆ ಅವರನ್ನು ಹೆದರಿಸುವಂತೆ ನೋಡಿ ಹೊರ ಹೋಗಿದ್ದಾನೆ. ಈ ನಡುವೆ, ಒಬ್ಬ ಬಾಲಕಿ ಸ್ನಾನದ ಮನೆಯಲ್ಲಿದ್ದಾಗ ಹೊರಗಿನಿಂದ ಚಿಲಕವನ್ನು ಅತ್ತಿತ್ತ ಮಾಡಿದ್ದಾನೆ ಎಂದು ಹೆಣ್ಮಕ್ಕಳು ಹೇಳಿಕೊಂಡಿದ್ದಾರೆ.

ಭಯದಿಂದ ನಡುಗಿದ ಮಕ್ಕಳಿಗೆ ಪಕ್ಕದ ಮನೆಯಲ್ಲಿ ಆಶ್ರಯ

ಈ ನಡುವೆ, ಘಟನೆ ನಡೆಯುತ್ತಿದ್ದಂತೆಯೇ ಮಕ್ಕಳು ಜೋರಾಗಿ ಕಿರುಚಿಕೊಂಡಿದ್ದರಿಂದ ಪಕ್ಕದ ಮನೆಗಳವರು ಓಡಿ ಬಂದಿದ್ದಾರೆ. ಅವರಲ್ಲಿ ವಿಷಯವನ್ನು ತಿಳಿಸಿದ್ದು, ಅವರೆಲ್ಲ ಆತನಿಗಾಗಿ ಹುಡುಕಾಡಿದ್ದಾರೆ. ಇದಾದ ಬಳಿಕ ಕೆಲವು ಮಕ್ಕಳು ಹಾಸ್ಟೆಲ್‌ನಲ್ಲಿ ಉಳಿಯಲು ಭಯಪಟ್ಟ ಹಿನ್ನೆಲೆಯಲ್ಲಿ ಅವರಿಗೆ ಪಕ್ಕದ ಕೆಲವು ಮನೆಗಳಲ್ಲಿ ಆಶ್ರಯ ನೀಡಲಾಗಿದೆ.

Girls hostel in Bethamangala
ಬೇತಮಂಗಲ ಹಾಸ್ಟೆಲ್‌ ಪರಿಸರ ಹೀಗಿದೆ.

ಬಾಗಿಲುಗಳೇ ಭದ್ರವಿಲ್ಲದ ಹಾಸ್ಟೆಲ್‌!

ನಿಜವೆಂದರೆ, ಇದೊಂದು ಹಳೆ ಕಟ್ಟಡದಲ್ಲಿರುವ ಹಾಸ್ಟೆಲ್‌ ಆಗಿದ್ದು, ಹೆಣ್ಮಕ್ಕಳ ವಸತಿ ನಿಲಯವಾದರೂ ಭದ್ರತೆಯೇ ಇಲ್ಲದಂತಾಗಿದೆ. ಇಲ್ಲಿನ ಬಾಗಿಲುಗಳು ಗಟ್ಟಿ ಇಲ್ಲ, ಸರಿಯಾದ ಭದ್ರತಾ ಸಿಬ್ಬಂದಿಯೂ ಇಲ್ಲ. ಈ ಕಟ್ಟಡಕ್ಕೆ ಅಕ್ಕದ ಪಕ್ಕದ ಕಟ್ಟಡ ಮತ್ತು ಇತರ ಭಾಗಗಳಿಂದ ನುಗ್ಗಬಹುದಾದಷ್ಟು ಮುಕ್ತವಾಗಿದೆ.

Bethamangala Girls Hostel
ಬೇತಮಂಗಲ ಹಾಸ್ಟೆಲ್‌ನ ಒಳಗಿನ ಭಾಗ

ಇನ್ನು ಹಾಸ್ಟೆಲ್‌ ಒಳಭಾಗವೂ ವ್ಯವಸ್ಥಿತವಾಗಿಲ್ಲ. ಯಾರಾದರೂ ಬಂದು ಒಳಗೆ ಸೇರಿಕೊಂಡರೂ ಗೊತ್ತಾಗದಷ್ಟು ಪರಿಸ್ಥಿತಿ ಗಂಭೀರವಾಗಿದೆ. ಇಲ್ಲಿನ ಕೆಲವು ರೂಮ್‌ಗಳಲ್ಲಿ ಮಂಚಗಳನ್ನು, ಟೈಲರಿಂಗ್‌ ಮೆಷಿನ್‌ಗಳನ್ನು ಗುಡ್ಡೆ ಹಾಕಲಾಗಿದೆ. ಇವುಗಳು ಬಳಕೆಯಾಗದೆ ಧೂಳು ಹಿಡಿಯುತ್ತಿವೆ. ಹೀಗಾಗಿ ಅಲ್ಲೊಂದು ಭಯದ ವಾತಾವರಣವಿದೆ.

ಇದನ್ನೂ ಓದಿ: Ragging Cruelty : ಹೈಸ್ಕೂಲ್‌ನಲ್ಲೇ ಭಯಾನಕ ರ‍್ಯಾಗಿಂಗ್‌; ಹೋಮೋ ಸೆಕ್ಸ್‌ಗೆ ಒತ್ತಾಯಿಸಿ ಹಾಸ್ಟೆಲ್‌ ಹುಡುಗರ ಚಿತ್ರಹಿಂಸೆ

ಬೇತಮಂಗಲ ನಿವಾಸಿ ಅರೆಸ್ಟ್‌

ಈ ನಡುವೆ ಹಾಸ್ಟೆಲ್‌ ವಾರ್ಡನ್‌ ನೀಡಿದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬೇತಮಂಗಲ ನಿವಾಸಿ ಮುರಳಿ (25) ಎಂಬಾತನನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಪೋಕ್ಸೋ ಪ್ರಕರಣದಡಿ ಕೇಸು ದಾಖಲಾಗಿದೆ. ಇದೀಗ ಆತನ ಉದ್ದೇಶದ ಬಗ್ಗೆ ತನಿಖೆಯಾಗಬೇಕಾಗಿದೆ. ಹಾಸ್ಟೆಲ್‌ನಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಏರ್ಪಡಿಸದ ಅಧಿಕಾರಿಗಳು ಮತ್ತು ವಾರ್ಡನ್‌ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast : ಉಡುಪಿಯಲ್ಲಿ ಭಾರಿ ಮಳೆಗೆ (Heavy Rain) ಮನೆ ಮುಂದಿದ್ದ ಬಾವಿಯೊಂದು ಕುಸಿದರೆ ಇತ್ತ ಮಂಗಳೂರಿನಲ್ಲಿ ಕಡಲ ಅಬ್ಬರಕ್ಕೆ ಮನೆಯೊಂದು (Karnataka rain) ಸಮುದ್ರಪಾಲಾಗಿದೆ. ಕೊಡಗಿನಲ್ಲಿ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ (Rain Effected) ಹಾನಿಯಾಗಿದೆ.

VISTARANEWS.COM


on

By

karnataka Rain
Koo

ಉಡುಪಿ: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು (Rain News), ನೋಡ ನೋಡುತ್ತಿದ್ದಂತೆ ಮನೆ ಮುಂದಿದ್ದ ಬಾವಿಯೊಂದು ಪಾತಾಳ (well collapsed) ಸೇರಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತಕ್ಕೆ ಮನೆಯ ಬಾವಿ ಧಾರಾಶಾಹಿಯಾಗಿದೆ.

ಬಾವಿಯೊಂದು ಕುಸಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಉಡುಪಿಯ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ಘಟನೆ ನಡೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಭೂಮಿ ಒಳಗೆ ಬಾವಿ ಜಾರಿದೆ. ಬಾವಿ ಪಕ್ಕದಲ್ಲೆ ಮನೆ ಇದ್ದು, ಭೂಕುಸಿತದಿಂದಾಗಿ ಆತಂಕ ಹೆಚ್ಚಾಗಿದೆ.

ಮಂಗಳೂರಿನಲ್ಲಿ ಹೆಚ್ಚಾದ ಕಡಲ ಅಬ್ಬರ

ಮಂಗಳೂರಿನಲ್ಲಿ ಕಡಲ ಅಬ್ಬರ ಹೆಚ್ಚಾಗುತ್ತಿದ್ದು, ನೋಡ ನೋಡುತ್ತಿದ್ದಂತೆ ಮನೆಯೊಂದು ಸಮುದ್ರಕ್ಕುರುಳಿದೆ. ಉಳ್ಳಾಲದ ಬಟ್ಟಪಾಡಿ ಕಡಲ ತೀರದಲ್ಲಿದ್ದ ಮನೆಯು ಅಲೆಗಳ ಹೊಡೆತಕ್ಕೆ ಸಿಲುಕಿ ಬಿದ್ದು ಹೋಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಕಡಲ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆಯವರನ್ನು ಸ್ಥಳಾಂತರ ಮಾಡಿತ್ತು. ಮನೆ ಬೀಳುವ ದೃಶ್ಯ ಮೊಬೈಲ್‌ನಲ್ಲಿ‌ ಸೆರೆಯಾಗಿದೆ.

karnataka rain

ಇದನ್ನೂ ಓದಿ: Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ

ಕೊಡಗು ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಅನಾಹುತವನ್ನೇ ಸೃಷ್ಟಿಸಿದೆ. ಭಾರೀ ಮಳೆಗೆ ಶಾಲಾ ಕಟ್ಟಡದ ಮೇಲೆ ಗುಡ್ಡ ಕುಸಿದಿದೆ. ಕೊಡಗಿನ ಮಡಿಕೇರಿ ತಾಲೂಕಿನ ಕೊಯನಾಡಿನಲ್ಲಿ ಘಟನೆ ನಡೆದಿದೆ. ಕೊಯನಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ ಯಾಗಿದೆ.

ಗುಡ್ಡದ ಮಣ್ಣು ಬಿದ್ದ ರಭಸಕ್ಕೆ ಶಾಲೆಯ ಗೋಡೆ ಧ್ವಂಸವಾಗಿದೆ. ಸುಮಾರು 80ಕ್ಕೂ ಅಧಿಕ ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ನಡೆಯುತ್ತಿದ್ದ ತರಗತಿಗೂ ಹಾನಿಯಾಗಿದೆ. ಮಳೆ ಹೆಚ್ಚಾದರೆ ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು, ಶಾಲೆ ಬಳಿಯ ಗುಡ್ಡದ ಮಣ್ಣು ತೆರವಿಗೆ ಪೋಷಕರು ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Murder case : ಗಾಣಗಾಪುರ ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

Murder case : ಗಾಣಗಾಪುರ ದತ್ತನ ದರ್ಶನಕ್ಕೆ ಬಂದಿದ್ದ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

murder Case in Kalaburagi
Koo

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ (Murder case ) ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ಘಟನೆ ನಡೆದಿದೆ. ಮಹೇಶ್ ಕೊಲಾಟೆ (28) ಬರ್ಬರವಾಗಿ ಕೊಲೆಯಾದವನು.

ಮಹಾರಾಷ್ಟ್ರದ ಪುಣೆಯಿಂದ ಗಾಣಗಾಪುರ ದತ್ತನ ದರ್ಶನಕ್ಕೆ ಮಹೇಶ್‌ ಆಗಮಿಸಿದ್ದ. ಗಾಣಗಾಪುರದ ಸಂಗಮದ ಪಕ್ಕದಲ್ಲಿರುವ ಜಮೀನಿನಲ್ಲಿ ಮಹೇಶ್‌ನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

ಮಹೇಶ್ ಕಳೆದ ಎರಡು ತಿಂಗಳಿಂದ ಊರು ಬಿಟ್ಟು ಬಂದಿದ್ದ ಎನ್ನಲಾಗಿದೆ. ಮನೆಯವರಿಗೂ ಹೇಳದೆ ಮನೆ ಬಿಟ್ಟಿದ್ದ ಮಹೇಶ್‌ ದೇವಸ್ಥಾನಗಳಿಗೆ ಅಲೆದಾಡುತ್ತಿದ್ದ. ಮೊನ್ನೆ ಗಾಣಾಗಪುರಕ್ಕೆ ಬಂದಿರುವುದಾಗಿ ಹೇಳಿದ್ದ ಮಹೇಶ್ ಬಳಿಕ ಕೊಲೆಯಾಗಿ ಹೋಗಿದ್ದ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಹಂತಕರು ಯಾರು? ಯಾಕಾಗಿ ಹತ್ಯೆ ಮಾಡಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ದೇವಲ್ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: Self Harming : ಸಾಲಗಾರರ ಕಾಟ; ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ್ದ ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

ನವದೆಹಲಿ: 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದ ಎಐಎಂಐಎಂ(AIMIM) ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi) ಅವರ ದಿಲ್ಲಿಯಲ್ಲಿರುವ ನಿವಾಸದ ಮೇಲೆ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಕುರಿತು(AIMIM) ಎಕ್ಸ್‌ನಲ್ಲಿ ಈ ವಿಡಿಯೋವನ್ನು ಶೇರ್‌ ಮಾಡಿದೆ.

ಇನ್ನು ಘಟನೆ ಬಗ್ಗೆ ಸ್ವತಃ ಓವೈಸಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, ಕೆಲವು ದುಷ್ಕರ್ಮಿಗಳು ನನ್ನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಅದೂ ಅಲ್ಲದೇ ಮನೆಯ ಗೋಡೆಗಳಿಗೆ ಕಪ್ಪು ಮಸಿ ಬಳಿದಿದ್ದಾರೆ. ಒಬ್ಬ ಸಂಸದನಿಗೇ ರಕ್ಷಣೆ ಇಲ್ಲದಿದ್ದರೆ ಸಾಮಾನ್ಯ ಜನರ ಪರಿಸ್ಥಿತಿ ಹೇಗೆ? ಘಟನೆ ಬಗ್ಗೆ ದಿಲ್ಲಿ ಪೊಲೀಸರನ್ನು ಕೇಳಿದರೆ ಅವರು ಅಸಾಯಕರಂತೆ ನಿಲ್ಲುತ್ತಿದ್ದಾರೆ. ಅಮಿತ್‌ ಶಾ ಅವರೇ ನಿಮ್ಮ ಮೂಗಿನ ಕೆಳಗೇ ಹೀಗೆಲ್ಲಾ ನಡೆಯುತ್ತಿದೆ ಸ್ಪೀಕರ್‌ ಓಂ ಬಿರ್ಲಾ ಅವರೇ ಸಂಸದನಿಗೆ ರಕ್ಷಣೆ ಇದೆಯೋ ಇಲ್ಲವೋ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಸಾವರ್ಕರ್‌ ಮಾದರಿಯ ಹೇಡಿತನ ನಿಲ್ಲಿಸಿ

ಈ ‘ಸಾವರ್ಕರ್ ಮಾದರಿಯ ಹೇಡಿತನದ ವರ್ತನೆ’ ನಾನು ಹೆದರುವುದಿಲ್ಲ ಎಂದೂ ಓವೈಸಿ ಹೇಳಿದ್ದಾರೆ. “ನನ್ನ ಮನೆಯನ್ನು ಗುರಿಯಾಗಿಸುವ ಗೂಂಡಾಗಳ ಬಗ್ಗೆ ಹೆದರಿಕೆಯಿಲ್ಲ. ಈ ಸಾವರ್ಕರ್ ಮಾದರಿಯ ಹೇಡಿತನದ ನಡವಳಿಕೆಯನ್ನು ನಿಲ್ಲಿಸಿ. ಸ್ವಲ್ಪ ಮಸಿ ಎಸೆದ ನಂತರ ಅಥವಾ ಕೆಲವು ಕಲ್ಲುಗಳನ್ನು ಹೊಡೆದು ನಂತರ ಓಡಿ ಹೋಗುವಂತಹ ಹೇಡಿತನ ಬೇಡ ಎಂದು ಅವರು ಹೇಳಿದರು. ಸೇರಿಸಲಾಗಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಿಡಿಗೇಡಿಗಳು ಓವೈಸಿ ನಿವಾಸದ ಎದುರು ಅಳವಡಿಸಿದ್ದ ನೇಮ್‌ಪ್ಲೇಟ್‌ ಮೇಲೆ ಕಪ್ಪು ಮಸಿ ಬಳಿದು ಓದಿ ಹೋಗಿದ್ದಾರೆ. ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಸಾದುದ್ದೀನ್ ಓವೈಸಿ ಪ್ರಮಾಣ ವಚನ ಸ್ವೀಕರಿಸಲು ತೆರಳುತ್ತಿದ್ದಂತೆ ಬಿಜೆಪಿ ಸಂಸದರು ಜೈ ಶ್ರೀರಾಮ್ ಘೋಷಣೆ ಕೂಗಲು ಆರಂಭಿಸಿದ್ದರು. ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಓವೈಸಿ, ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗುವ ಮೂಲಕ ಮುಕ್ತಾಯಗೊಳಿಸಿದರು. 2019 ರಲ್ಲಿ, ಓವೈಸಿ ತಮ್ಮ ಪ್ರಮಾಣವಚನವನ್ನು “ಜೈ ಭೀಮ್, ಅಲ್ಲಾ-ಒ-ಅಕ್ಬರ್ ಮತ್ತು ಜೈ ಹಿಂದ್” ಎಂಬ ಪದಗಳೊಂದಿಗೆ ಮುಕ್ತಾಯಗೊಳಿಸಿದ್ದರು. 2024 ರ ಲೋಕಸಭಾ ಚುನಾವಣೆಯಲ್ಲಿ ಓವೈಸಿ ಹೈದರಾಬಾದ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಹಿಂದೂ ಫೈರ್ ಬ್ರಾಂಡ್​ ಮಾಧವಿ ಲತಾ ವಿರುದ್ಧ ಗೆಲುವು ಸಾಧಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

D. K. Shivakumar: ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಶುಭ ಹಾರೈಸಿದ ಡಿಸಿಎಂ ಶಿವಕುಮಾರ್‌

D. K. Shivakumar: ಸೆಮಿಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್(India vs England Semi Final 2)​ ತಂಡವನ್ನು 68 ರನ್​ಗಳಿಂದ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌(D. K. Shivakumar) ಶುಭ ಹಾರೈಸಿದ್ದಾರೆ.

VISTARANEWS.COM


on

D. K. Shivakumar
Koo

ಬೆಂಗಳೂರು: ಹಾಲಿ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಸೆಮಿಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್(India vs England Semi Final 2)​ ತಂಡವನ್ನು 68 ರನ್​ಗಳಿಂದ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌(D. K. Shivakumar) ಶುಭ ಹಾರೈಸಿದ್ದಾರೆ. ಜತೆಗೆ ಟೀಮ್​ ಇಂಡಿಯಾದ(team india) ಸಾಧನೆಯನ್ನು ಕೊಂಡಾಡಿದ್ದಾರೆ.

“ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಟೀಂ ಇಂಡಿಯಾ ಆಟಗಾರರ ಗಮನಾರ್ಹ ಪ್ರದರ್ಶನಕ್ಕೆ ಅಭಿನಂದನೆಗಳು!. ಟೂರ್ನಿಯುದ್ದಕ್ಕೂ ನೀವು ತೋರಿದ ಸಂಘಟಿತ ಪ್ರದರ್ಶನೇ ಈ ಯಶಸ್ಸಿಗೆ ಕಾರಣ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿಯೂ ಇದೇ ಸ್ಫೂರ್ತಿಯಿಂದ ಆಡುವ ಮೂಲಕ ಚಾಂಪಿಯನ್​ ಪಟ್ಟ ಅಲಂಕರಿಸುವಂತಾಗಲಿ. ಫೈನಲ್‌ ಪಂದ್ಯಕ್ಕೆ ಶುಭ ಹಾರೈಸುತ್ತೇನೆ” ಎಂದು ಭಾರತ ತಂಡ ಫೋಟೊ ಹಂಚಿಕೊಂಡು ಟ್ವೀಟ್​ ಮಾಡಿದ್ದಾರೆ.

ಗುರುವಾರ ತಡರಾತ್ರಿ ಗಯಾನದ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ರೋಹಿತ್​ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 171 ರನ್​ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್​ ನಾಟಕೀಯ ಕುಸಿತ ಕಂಡು 16.4 ಓವರ್​ಗಳಲ್ಲಿ 103 ರನ್​ಗೆ ಸರ್ವಪತನ ಕಂಡಿತು.

ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 2022ರ ಟಿ20 ವಿಶ್ವಕಪ್‌ ಸೆಮಿಫೈನಲ್‌ ಸೋಲಿನ ಸೇಡನ್ನು ತೀರಿಸಿಕೊಂಡಿತು. ಅಂದು ಅಡಿಲೇಡ್‌ ಓವಲ್‌ನಲ್ಲಿ ನಡೆದಿದ್ದ ಸೆಮಿ ಪಂದ್ಯದಲ್ಲಿ ಇಂಗ್ಲೆಂಡ್‌ 10 ವಿಕೆಟ್‌ಗಳಿಂದ ಭರ್ಜರಿಯಾಗಿ ರೋಹಿತ್‌ ಪಡೆಯನ್ನು ಮಗುಚಿ ಫೈನಲ್​ ಪ್ರವೇಶಿಸಿತ್ತು. ಈ ಬಾರಿ ಭಾರತ ತಂಡ ಇಂಗ್ಲೆಂಡ್​ ಮಣಿಸಿ ಫೈನಲ್​ ಪ್ರವೇಶಿಸಿತು. ಅಲ್ಲಿಗೆ ಲೆಕ್ಕ ಚುಕ್ತಾ ಗೊಂಡಿತು. ಶನಿವಾರ ಬಾರ್ಬಡೋಸ್​ನಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಇದನ್ನೂ ಓದಿ IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

ಡಿಕೆಶಿ ಮುಖ್ಯಮಂತ್ರಿ ಮಾಡಿ ಎಂದು ಸಿಎಂಗೆ ಒತ್ತಾಯಿಸಿದ ಚಂದ್ರಶೇಖರ ಸ್ವಾಮೀಜಿ


ಡಿಕೆ ಶಿವಕುಮಾರ್ (DK Shivakumar) ಅವರನ್ನು ಸಿಎಂ ಮಾಡಿ ಎಂದು ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದೆ ವೇದಿಕೆಯ ಮೇಲೆಯೇ ಬೇಡಿಕೆ ಇಟ್ಟ ಪ್ರಸಂಗ ನಿನ್ನೆ(ಗುರುವಾರ) ನಡೆದ ಕೆಂಪೇಗೌಡ ಜಯಂತಿ (Kempegowda Jayanthi) ಕಾರ್ಯಕ್ರಮದಲ್ಲಿ ನಡೆದಿದೆ. ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Chandrashekhara swamiji) ಅವರು ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲೇ ಬಹಿರಂಗವಾಗಿ ಈ ಬೇಡಿಕೆಯನ್ನು ಇಟ್ಟಿದ್ದಾರೆ.

ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಡಿಕೆಶಿ ಸಿಎಂ ಆಗುವ ಕುರಿತು ಮತ್ತು ಹೊಸ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕಾಂಗ್ರೆಸ್‌ ನಾಯಕರೊಳಗೇ ಬಣ ರಾಜಕೀಯ ನಡೆಯುತ್ತಿದೆ. ಹಲವಾರು ಕಾಂಗ್ರೆಸ್‌ ನಾಯಕರು, ಇನ್ನಷ್ಟು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ವಾದ ಮುಂದಿಟ್ಟಿದ್ದಾರೆ. ಇದೀಗ, ಒಕ್ಕಲಿಗರೊಬ್ಬರು ಸಿಎಂ ಆಗಬೇಕು ಎಂದು ಒಕ್ಕಲಿಗ ಸ್ವಾಮೀಜಿಗಳೇ ಹೇಳುವ ಮೂಲಕ ಈ ಬಣ ರಾಜಕೀಯಕ್ಕೆ ಇನ್ನಷ್ಟು ತುಪ್ಪ ಸುರಿದಂತಾಗಿದೆ.

Continue Reading

ಕ್ರೈಂ

Self Harming : ಸಾಲಗಾರರ ಕಾಟ; ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

Self Harming: ಸಾಲದ ಶೂಲಕ್ಕೆ ಬೇಸತ್ತ ಮೆಕ್ಯಾನಿಕ್‌ವೊಬ್ಬರು ಮನೆಯಲ್ಲಿದ್ದ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

By

Self Harming
Koo

ದೊಡ್ಡಬಳ್ಳಾಪುರ: ಸಾಲ ಮಾಡಿ ಬಡ್ಡಿ ಕಟ್ಟಲಾಗದೆ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಪರ್ವೀಜ್ ಪಾಷ (38) ಆತ್ಮಹತ್ಯೆಗೆ ಶರಣಾದವರು.

ದೊಡ್ಡಬಳ್ಳಾಪುರ ನಗರದ ರೋಜಿಪುರ ಬಡಾವಣೆಯ ನಿವಾಸಿಯಾದ ಪರ್ವೀಜ್ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಕ್ಯಾನಿಕ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಪರ್ವೀಜ್‌ ಈ ಹಿಂದೆ ಹಲವು ವ್ಯಕ್ತಿಗಳ ಬಳಿ ಬಡ್ಡಿಗೆ ಸಾಲ ಪಡೆದಿದ್ದ. ಸಾಲಗಾರರ ಕಾಟ ತಡೆಯಲಾರದೇ ಮನನೊಂದಿದ್ದ.

ಸಾಲ ತೀರಿಸಲು ದಿಕ್ಕು ದೋಚದೆ ಮೂರು ದಿನ ಊಟ ಬಿಟ್ಟಿದ್ದ. ನಂತರ ಅಂಗಡಿ ಮುಂದೆ ಸಾಲಗಾರರ ಕಾಟ ಹೆಚ್ಚಾದಾಗ ಕಳೆದ ಭಾನುವಾರ ಮನೆಗೆ ಬಂದವರೇ ಇಲಿ ಪಾಷಣ ಸೇವಿಸಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಪರ್ವೀಜ್‌ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಪರ್ವೀಜ್‌ ಸಾವನ್ನಪ್ಪಿದ್ದಾನೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Self harming

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ರೋಜಿಪುರದಲ್ಲಿ ಈ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Sonu Srinivas Gowda: ದರ್ಶನ್‌ ಬಗ್ಗೆ ಮಾತನಾಡಿಲ್ಲ ಎಂದು ಸೋನು ಶ್ರೀನಿವಾಸ್ ಗೌಡಗೆ ಕಿರುಕುಳ ಕೊಟ್ಟ ದಚ್ಚು ಫ್ಯಾನ್ಸ್‌!

ಕುಸಿದು ಬಿದ್ದ ದಿಲ್ಲಿ ಏರ್‌ಪೋರ್ಟ್‌ ಛಾವಣಿ- ಒಬ್ಬ ಬಲಿ, 5 ಮಂದಿಗೆ ಗಂಭೀರ ಗಾಯ

ಹೊಸದಿಲ್ಲಿ: ಇಷ್ಟು ದಿನ ಬಿಸಿಲ ಬೇಗೆ, ಉಷ್ಣ ಗಾಳಿಯ ತಾಪಕ್ಕೆ ಬೇಸತ್ತಿದ್ದ ರಾಷ್ಟ್ರ ರಾಜಧಾನಿ ದೆಹಲಿ(New Delhi)ಯಲ್ಲಿ ವರಣನ ಅಬ್ಬರ(Delhi Rain) ಜೋರಾಗಿದೆ. ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಗೆ ದಿಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್‌ 1ರ ಮೇಲ್ಛಾವಣಿ ಕಾರುಗಳ ಮೇಲೆ ಕುಸಿದು ಬಿದ್ದಿದ್ದು, ಒಬ್ಬ ದುರ್ಮರಣಕ್ಕೀಡಾಗಿದ್ದಾನೆ. ಘಟನೆಯಲ್ಲಿ 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಟರ್ಮಿನಲ್‌ 1ರ ಎಲ್ಲಾ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಅದೂ ಅಲ್ಲದೇ ಮುಂಜಾಗೃತಾ ಕ್ರಮವಾಗಿ ದಿಲ್ಲಿ ವಿಮಾನ ನಿಲ್ದಾಣ(Delhi International Airport)ದ ಎಲ್ಲಾ ಚೆಕ್-ಇನ್‌ ಕೌಂಟರ್‌ಗಳನ್ನು ಮುಚ್ಚಲಾಗಿದೆ.

ಅಧಿಕೃತ ಮೂಲಗಳ ಪ್ರಕಾರ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಛಾವಣಿ ಶೀಟ್‌ ಮತ್ತು ಬೀಮ್‌ ಕುಸಿದು ಬಿದ್ದಿದ್ದು, ಪಾರ್ಕಿಂಗ್‌ ಏರಿಯಾದಲ್ಲಿದ್ದ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಘಟನೆ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್‌ ಮೋಹನ್‌ ನಾಯ್ಡು ಪ್ರತಿಕ್ರಿಯಿಸಿದ್ದು, ದಿಲ್ಲಿ ವಿಮಾನ ನಿಲ್ದಾಣದಲ್ಲಿ ನಡೆದಿರುವ ಘಟನೆ ಖುದ್ದು ಪರಿಶೀಲನೆ ನಡೆಸಲಾಗುತ್ತಿದೆ. ಗಾಯಾಳುಗಳನ್ನು ದಿಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ರಣಭೀಕರ ಮಳೆಗೆ ದಿಲ್ಲಿ ತತ್ತರ

ಎರಡನೇ ದಿನವೂ ದಿಲ್ಲಿಯ್ಲಿ ಭಾರೀ ಮಳೆಯಾಗುತ್ತಿದೆ. ರಸ್ತೆ, ಮನೆಗಳಿಗೆ ನೀರು ನುಗ್ಗಿದ್ದು, ಜನ ಸಂಚಾರ ಅಸ್ತವ್ಯಸ್ತಗೊಂಡಿದೆ. ದಿಲ್ಲಿಯ ವಿವಿಧ ರಸ್ತೆಗಳಲ್ಲಿ ಟ್ರಾಫಿಕ್‌ ಸಮಸ್ಯೆ ಉಂಟಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Virat Kohli
ಕ್ರಿಕೆಟ್2 mins ago

Virat Kohli: ಕೊಹ್ಲಿ ಕ್ಲಾಸ್ ಪ್ಲೇಯರ್, ಫೈನಲ್​ನಲ್ಲಿ ಆಡುತ್ತಾರೆ ಎಂದು ಬೆಂಬಲ ಸೂಚಿಸಿದ ನಾಯಕ ರೋಹಿತ್​

karnataka Rain
ಮಳೆ3 mins ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Viral Video
Latest4 mins ago

Viral Video: ನಡುರಸ್ತೆಯಲ್ಲಿ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಬಲವಂತವಾಗಿ ಮದುವೆಯಾದ ಯುವಕ!

Viral Video
Latest6 mins ago

Viral Video: ನೋಡುಗರ ಕಣ್ಮನ ಸೆಳೆಯುತ್ತಿದೆ ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಆಮಂತ್ರಣ ಪತ್ರಿಕೆ

Actor Darshan support by singer dr shamitha malnad
ಸ್ಯಾಂಡಲ್ ವುಡ್27 mins ago

Actor Darshan: ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

airtel price hike
ಪ್ರಮುಖ ಸುದ್ದಿ31 mins ago

Airtel Price Hike: ಜಿಯೋ ನಂತರ ಏರ್‌ಟೆಲ್‌ ಡೇಟಾ ಬಳಕೆದಾರರ ಜೇಬಿಗೂ ಕತ್ತರಿ; 21% ದರ ಏರಿಕೆ

murder Case in Kalaburagi
ಕಲಬುರಗಿ34 mins ago

Murder case : ಗಾಣಗಾಪುರ ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

Actor Darshan special appeal to the fans
ಸ್ಯಾಂಡಲ್ ವುಡ್48 mins ago

Actor Darshan: ಪರಪ್ಪನ ಅಗ್ರಹಾರದಿಂದಲೇ ಅಭಿಮಾನಿಗಳ ಬಳಿ ದರ್ಶನ್‌ ವಿಶೇಷ ಮನವಿ; ಏನದು?

D. K. Shivakumar
ಕ್ರೀಡೆ53 mins ago

D. K. Shivakumar: ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಶುಭ ಹಾರೈಸಿದ ಡಿಸಿಎಂ ಶಿವಕುಮಾರ್‌

Self Harming
ಕ್ರೈಂ54 mins ago

Self Harming : ಸಾಲಗಾರರ ಕಾಟ; ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 mins ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ16 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು20 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ23 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌