ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 252 ಕೊರೊನಾ ಪ್ರಕರಣಗಳು (coronavirus News) ಪತ್ತೆಯಾಗಿವೆ. ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಗುಣಮುಖರಾಗಿ 441 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1031ಕ್ಕೆ ಏರಿಕೆಯಾಗಿದೆ.
ರಾಜ್ಯದಾದ್ಯಂತ ಒಟ್ಟು 7359 ಮಂದಿಗೆ COVID 19 ತಪಾಸಣೆ (RTPCR – 6514, RAT – 845) ನಡೆಸಲಾಗಿದ್ದು, ಈ ಪೈಕಿ 252 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 470 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಕೋವಿಡ್ ಪಾಸಿಟಿವಿಟಿ ದರ ಶೇ.3.42 ಇದ್ದು, ಮರಣ ಪ್ರಮಾಣ ದರ ಶೇ. 0.79 ವರದಿಯಾಗಿದೆ.
ಒಟ್ಟು 1031 ಸಕ್ರಿಯ ಪ್ರಕರಣಗಳ ಪೈಕಿ 962 ಮಂದಿ ಹೋಮ್ ಐಸೋಲೇಟ್ ಆಗಿದ್ದು, 69 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸೋಮವಾರ ರಾಜ್ಯದಲ್ಲಿ 279 ಕೋವಿಡ್ ಪ್ರಕರಣ ದಾಖಲಾಗಿತ್ತು. 235 ಮಂದಿ ಡಿಸ್ಚಾರ್ಜ್ ಆಗಿದ್ದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ಕೊರೊನಾ; ಕಾರ್ಯಕ್ರಮ ಕ್ಯಾನ್ಸಲ್
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೆ ಕೋವಿಡ್ 19ರ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಸೋಮವಾರ ರಾಜ್ಯದಲ್ಲಿ 328 ಕೊರೊನಾ ಪ್ರಕರಣಗಳು (Coronavirus News) ಪತ್ತೆಯಾಗಿತ್ತು. ಹೀಗಾಗಿ 1159 ಕೋವಿಡ್ ಕೇಸ್‌ಗಳು ದೃಢಪಟ್ಟಂತೆ ಆಗಿತ್ತು. ಈಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ (Thaawar Chand Gehlot) ಕೊರೊನಾ ಧೃಡಪಟ್ಟಿದೆ.
ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯಪಾಲರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಎಲ್ಲ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ | Hit and Run Case: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರ ಸಾವು
ಶೀಘ್ರ ಗುಣಮುಖರಾಗುವಂತೆ ಆರ್. ಅಶೋಕ್ ಟ್ವೀಟ್
“ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್-19 ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ಕಾರ್ಯೋನ್ಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.