Site icon Vistara News

Vachananda Swamiji | ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು, ಸಹಕರಿಸಲು ಯಡಿಯೂರಪ್ಪಗೆ ಮನವಿ

Vachananda Swamiji

ಬೆಂಗಳೂರು: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ವಿಷಯವು ನಿರ್ಣಾಯಕ್ಕೆ ಹಂತಕ್ಕೆ ಬಂದಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸರ್ವ ಪಕ್ಷಗಳ ಸಭೆಯನ್ನು ಕರೆದರೆ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಸಹಕರಿಸುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಳ್ಳಲಾಯಿತು ಎಂದು ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಮಹಾಸ್ವಾಮಿ (Vachananda Swamiji) ತಿಳಿಸಿದ್ದಾರೆ. ಅಲ್ಲದೇ, ಈ ಮನವಿಗೆ ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಹೇಳಿದ್ದಾರೆ.

1994ರಿಂದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘವು ಹೋರಾಟ ಮಾಡುತ್ತಿದೆ. ಹಾಗಾಗಿ, 2009ರಲ್ಲಿ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಪ್ರತ್ಯೇಕ ಉಪಸಮಿತಿಯನ್ನು ರಚಿಸಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಜಾತಿ ಪಟ್ಟಿಯಲ್ಲಿ ಸೇರಿಸಿ ಗೆಜೆಟ್ ನೋಟಿಪಿಕೇಷನ್ ಮಾಡಲಾಗಿತ್ತು. ಸಮುದಾಯವನ್ನು ಸಾಮಾನ್ಯ ವರ್ಗದಿಂದ ಪ್ರವರ್ಗ 3 ಬಿ ವರ್ಗಕ್ಕೆ ಸೇರಿಸಿದರು. ಆವಾಗಲೇ 2ಎ ವರ್ಗಕ್ಕೆ ಸೇರಬೇಕಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರು 2021ರಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಮೀಕ್ಷೆಗೆ ಸೂಚಿಸಿದ್ದರು. ಅದರಂತೆ ಆಯೋಗದ ಅಧ್ಯಕ್ಷರಾದ ಡಾ. ಜಯಪ್ರಕಾಶ್ ಹೆಗ್ಡೆ ಅವರು ಒಂದುವರೆ ವರ್ಷದಿಂದ ಹಲವು ಜಿಲ್ಲೆಗಳಿಗೆ ತೆರಳಿ ಸಮೀಕ್ಷೆಯನ್ನು ಮಾಡಿದ್ದಾರೆ. ಈ ಹೋರಾಟ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಮಂಡಿಸುವ ನಿಟ್ಟಿನಲ್ಲಿ ಕೊನೆಯ ಹಂತದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ | ಪಂಚಮಸಾಲಿ ಸಮುದಾಯಕ್ಕೆ 3ಬಿ ಮೀಸಲಾತಿ ಕೊಟ್ಟಿದ್ದೇ ಬಿಎಸ್‌ವೈ: ವಿಜಯೇಂದ್ರ ಪ್ರತ್ಯುತ್ತರ

Exit mobile version