ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು (ಪಿಯು ಬೋರ್ಡ್) 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ (ಸೆಪ್ಟೆಂಬರ್ 12) ಬೆಳಗ್ಗೆ 11 ಗಂಟೆಗೆ (PU Supplementary Results) ಪ್ರಕಟಿಸಲಿದೆ.
ಕಳೆದ ಆಗಸ್ಟ್ 12ರಿಂದ 25ರ ವರೆಗೆ ನಡೆದಿದ್ದ ಪೂರಕ ಪರೀಕ್ಷೆಯಲ್ಲಿ ಸುಮಾರು 1,85,449 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ರಾಜ್ಯಾದ್ಯಂತ 307 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.
ಫಲಿತಾಂಶ ನೋಡಲು ಹೀಗೆ ಮಾಡಿ
ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಮಂಡಳಿಯ ಅಧಿಕೃತ ವೆಬ್‌ಸೈಟ್ https://karresults.nic.in ಫಲಿತಾಂಶ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೂ ಫಲಿತಾಂಶ ಬರಲಿದೆ. ಇಲಾಖೆ ವೆಬ್‌ಸೈಟ್‌ಗೆ ತೆರಳಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್ ಮತ್ತು ಜನ್ಮದಿನಾಂಕವನ್ನು ದಾಖಲಿಸಿದರೆ ಫಲಿತಾಂಶವನ್ನು ನೋಡಬಹುದಾಗಿದೆ.
ಇದನ್ನೂ ಓದಿ | ಈಗ ಆನ್‌ಲೈನ್ ವ್ಯಾಪ್ತಿಗೆ ಶಿಕ್ಷಕರ ಅಗತ್ಯ ಸೇವೆ: ಶಿಕ್ಷಣ ಇಲಾಖೆಗೆ ಪ್ರಾಥಮಿಕ ಶಿಕ್ಷಕರ ಸಂಘ ಅಭಿನಂದನೆ