ಬೆಂಗಳೂರು: 2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 9ರಿಂದ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ (2nd PUC Exam 2023) ಅನುವು ಮಾಡಿಕೊಡಲಾಗಿದೆ.
ಪರೀಕ್ಷೆಯ ದಿನದಂದು ಅಂದರೆ ಮಾರ್ಚ್ 9ರಿಂದ 29ರವರೆಗೂ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಸಬಹುದಾಗಿದೆ. ನಿಗಮದ ನಗರ ಹಾಗೂ ಹೊರವಲಯ ವಿದ್ಯಾರ್ಥಿಗಳು, ಸಾಮಾನ್ಯ ಹಾಗೂ ವೇಗಧೂತ ಬಸ್‌ಗಳಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಈ ಸಂಬಂಧ ನಿಗಮದ ಎಲ್ಲ ಚಾಲಕ/ನಿರ್ವಾಹಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ.
ಇದನ್ನೂ ಓದಿ: International Women’s Day 2023: ಮಾರ್ಚ್ 8 ಮಹಿಳಾ ದಿನಾಚರಣೆ ಪ್ರಯುಕ್ತ ಬಿಎಂಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಬಸ್ ಹೋಗುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು/ ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ಈ ಬಗ್ಗೆ ಎಲ್ಲ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ಡಿಪೋ ಮ್ಯಾನೇಜರ್‌ಗಳಿಗೆ ಸೂಚಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ